ಒಟ್ಟು 151 ಕಡೆಗಳಲ್ಲಿ , 47 ದಾಸರು , 137 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಿಕ್ಕಿದೆಯೋ ಎಲೆ ಜೀವ-ನಿನ್ನ-ಕುಕ್ಕಿ ಕೊಲ್ಲದೆ ಬಿಡರು ಪಸೊಕ್ಕಿದ ಹೆಣ್ಣಿಗೆ ನೀ ಮರುಳಾದೆ |ಉಕ್ಕಿನ ಕಂಬಕೆ ನೀ ಗುರಿಯಾದೆ ಅ.ಪಹಾಳೂರ ಕೋಳಕೆ-ಕಾಲು ಚಾಚಿದ ಹಾಗೆ |ಮೂಳ ಸಂಸಾರಕೆ ನೀ ಗುರಿಯಾಗಿ ||ತೇಲುತ ಮುಳುಗುತ ಇಲ್ಲಿಗೆ ಬಂದೆ 1ಸತಿ-ಸುತರೆಂಬುವರೆ - ಹಿತರೆಂದು ನಂಬಿದೆಯೊ |ಯತಿಗಳ ತಿಥಿಗಳು ಬಂದರೆ ಮನೆಗೆ-||ಗತಿಯಿಲ್ಲವೆಂದು ಖತಿಗೊಂಡೆಯಲ್ಲೊ 2ಶುನಕನಂದದಿ ನೀನು ಮನೆಮನೆಯನು ತಿರುಗಿ |ಘನಘನವಾದ ಕೂಳನೆ ತಿಂದು ||ತನುವ ತಗ್ಗಿಸಿ ಇಲ್ಲಿಗೆ ಬಂದೆ 3ಕಂಡವರ ಒಡವೆಯ-ಖಂಡುಗ ಧನವನು |ಮಿಂಡೆಯರ ಒಡವೆಯ ಭಂಡತನದಲಿ ||ಕಂಡುಕಾಣದೆ ನೀ ತಿಂದೆಯಲ್ಲೊ 4ಗೋಪಾಲಕೃಷ್ಣಯ್ಯ-ತಾಪತ್ರಯವ ಕಳೆವ |ಆಪತ್ತೆಲ್ಲ ಪರಿಹಾರ ಮಾಡುವ ||ಶ್ರೀಪತಿ ಪುರಂದರವಿಠಲನ ನೆನೆಯದೆ 5
--------------
ಪುರಂದರದಾಸರು
ಹಣ್ಣು ತಾ ಬೆಣ್ಣೆ ತಾರೆ - ಗೋಪಮ್ಮ-|ಹಣ್ಣು ತಾ ಬೆಣ್ಣೆ ತಾರೆ ಪಅಡವಿಯೊಳಗೆ ಅಸುರನ ಕೊಂದ ಕೈಗೆ |ಮಡುವಿನೊಳಗೆ ಮಕರನ ಸೀಳ್ದ ಕೈಗೆ ||ಪೊಡಿವಿಯೊಳಗೆ ಚೆಂಡನಾಡಿದ ಕೈಗೆ |ಸಡಗರದಲಿ ಭೂಮಿ ಬೇಡಿದ ಕೈಗೆ 1ಶಂಖ ಚಕ್ರಗಳ ಪಿಡಿದಂಥ ಕೈಗೆ |ಶಂಕೆಯಿಲ್ಲದೆ ಮಾವನ ಕೊಂದ ಕೈಗೆ ||ಬಿಂಕದಿಂದಲಿ ಕೊಳಲೂದುವ ಕೈಗೆ |ಪಂಕಜಮುಖಿಯರ ಕುಣಿಸುವ ಕೈಗೆ 2ದಿಟ್ಟತನದಲಿಬೆಟ್ಟವೆತ್ತಿದ ಕೈಗೆ|ಸೃಷ್ಟಿಯ ದಾನವ ಬೇಡಿದ ಕೈಗೆ ||ದುಷ್ಟಭೂಪರನೆಲ್ಲ ಮಡುಹಿದ ಕೈಗೆ |ಕೆಟ್ಟ ದಾನವರನು ಸದೆಬಡಿದ ಕೈಗೆ 3ಕಾಳಿಯ ಮಡುವನು ಕಲಕಿದ ಕೈಗೆ |ಸೋಳಸಾಸಿರ ಗೋಪಿಯರಾಳಿದ ಕೈಗೆ ||ಮೇಳದ ಭಕ್ತರುದ್ಧರಿಸುವ ಕೈಗೆ |ಏಳು ಗೂಳಿಯ ಗೆದ್ದ ಯದುಪನ ಕೈಗೆ 4ಬಿಲ್ಲು - ಬಾಣಗಳನು ಪಿಡಿದಂಥ ಕೈಗೆ |ಮಲ್ಲಸಾಧನೆಯನು ಮಾಡಿದ ಕೈಗೆ ||ಎಲ್ಲ ದೇವರದೇವ ರಂಗನ ಕೈಗೆ |ಬಲ್ಲಿದಪುರಂದರವಿಠಲನ ಕೈಗೆ5
--------------
ಪುರಂದರದಾಸರು