ಮೃತ್ಯುಂಜಯನೇ
ಶರಣು ಶಂಕರನೆ ಶರಣು ಶರಣು ಪ
ವಾಸವೇ ಕೈಲಾಸ ವಸನವೇ ದಿಕ್ಕುಗಳು
ಪೂಸಿಹುದು ಸರ್ವಾಂಗವೆಲ್ಲ ಭಸ್ಮ
ನೇಸರಿನ ತೇಜ ಶಶಿಜೂಟ ಗಂಗಾಧರನ
ಪಾಸಟಿಯು ನಿನಗೊಬ್ಬರಿಲ್ಲ ಗೌರೀಶ 1
ಪಂಚ ವಿಂಶತಿ ತತ್ವದೂರ ವಿಶ್ವಾಧಾರ
ಪಂಚ ಶರಹರ ವಿರಂಚ್ಯಾದಿ ಸಂಸ್ತುತಾ
ನಿತ್ಯ ಪ್ರ
ಪಂಚ ಮಯನಾದ ಗಿರಿಜೇಶ ವಿಶ್ವೇಶ 2
ಪರಮ ಪುರುಷ ಪರೇಶ ಪರಮ ಗುಣಗಣ ನಿಲಯ
ಶರಣ ಜನ ಸುರಧೇನು ವಿಶ್ವವಂದ್ಯಾ
ಭವ ಪೂಜ್ಯಸೂರ್ಯ ಕೋಟಿಪ್ರಕಾಶ
ಉರಗ ಭೂಷಣ ವೃಷಭಾರೂಢ ಗೌರೀಶ 3
ಭೂತಪತಿ ಭುವನೇಶ ಪ್ರೇತ ನಿಲಯ ನಿವಾಸ
ನೂತನದ ಗಜಚರ್ಮ ನಿನಗೆ ವಿಖ್ಯಾತ
ಗೀತ ನೃತ್ಯ ವಿಲಾಸ ಮಾತುಳಾಧ್ವರನಾಶ
ಭಾತಿ ಕಂಠದಿ ವಿಷವು ಗೌರೀಶ 4
ಧರೆಯೊಳಧಿಕತರ ವರದ ಮೂಲನಿವಾಸ
ಕರಿವದನ ನಂದೀಶ ಶಕ್ತಿ ಉಮೆ ಸಹಿತ
ಭರದಿಂದ ನೆಲಸಿ ಸೊಪ್ಪಿನ ಸುಬ್ಬಗೆವರವಿತ್ತೆ ದುರಿತವನು ಪರಿಹರಿಸೋ ಶಂಭುಲಿಂಗೇಶ 5