ಒಟ್ಟು 20 ಕಡೆಗಳಲ್ಲಿ , 14 ದಾಸರು , 18 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಭಕುತರ ದರುಶನವು ಅತಿಹರುಷವು ಧ್ರುವ ಹರಿ ನೆನೆವರಾ ನೆರಿಯು ನಿಧಾನದಾ ಕೆರೆಯು ಹರಿ ಸ್ಮರಿಸುವರ ಮರಿಯು ವಜ್ರವರಿಯು ಹರಿ ಭಜಿಸುವರ ಸರಿಯು ನಿಜಘನಾತ್ಮದ ಝರಿಯು ಹರಿ ಮಹಿಪರ ಕರಿಯು ಪರಮಾನಂದದ ತೆರಿಯು 1 ಹರಿಶರಣರ ನುಡಿಯು ಕರುಣದಮೃತಧ್ವನಿಯು ಹರಿಯದಾಸರ ನಡೆಯು ನಿಲಕಡೆಯು ಹರಿಭಕ್ತರಿದ್ದೆಡೆಯು ಪುಣ್ಯಕ್ಷೇತ್ರದ ತಡಿಯು ಹರಿಮಹಿಮರ ಕಡಿಯು ಕ್ಯಾದಿಗ್ಹೊಡಿಯು 2 ಹರಿಭಕ್ತರ ಸಂಗ ಸ್ನಾನಗಂಗ ತುಂಗ ಹರಿಮಹಿಮರ ಅಂಗ ಅಂತರಂಗ ಹರಿಪರಮಾನಂದ ಗುರು ಕರುಣಾಕೃಪಾಂಗ ಭಂಗ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮದ್ದು ಮಾಡಬಾರದೇನೇ ಮುದ್ದು ಮಾಯಾದೇವಿ ? ಪ.ಮುದ್ದು ಬಾಲಕೃಷ್ಣನಲ್ಲಿ ಮನಸು ನಿಲ್ಲುವ ಹಾಗೆ ಅಪಕರಗಳಿಂದ ಹರಿಯ ಮಂ ದಿರದ ಕಸವ ತೆಗೆಯಲಿಕ್ಕೆ |ನಿರುತದಲ್ಲೂ ಬೇಸರಿಯದೆ ಹರುಷವು ಪುಟ್ಟವ ಹಾಗೆ 1ಶ್ರುತಿ - ರಾಮಾಯಣ ಶ್ರೀಭಾಗವತ ಪಂಚರಾತ್ರಾಗಮಾದಿಕಥೆಯ ಕೇಳುವುದಕೆ ಬಹಳ ರತಿಯು ಪುಟ್ಟುವ ಹಾಗೆ 2ದೇಹವು ಅನಿತ್ಯವೆಂದು ನೇಹದಿಂದ ಪೋಷಿಸದಲೆ |ಮಾಹೇಂದ್ರಾವರಜನ ಅಹ ರಹರವು ಭಜಿಸುವ ಹಾಗೆ 3ನರರಸ್ತವನ ಹೇಯವೆಂದು ಅರಗಳಿಗೆಯು ಅಗಲದಲೆ |ನರಹರಿಯ ಭಕ್ತರಿಗೆ ಶರಣುಹೋಗುವ ಹಾಗೆ 4ಮನಸು ವಾಕ್ಕಾಯಗಳಿಂದ ಸದ್ ಗುಣದಿ ಪುರಂದರವಿಠಲನಅನುರಾಗದಿಂ ಬಿಡದೆ ಪಾಡಿ ಕುಣಿದು ಕುಣಿದು ದಣಿವ ಹಾಗೆ 5
--------------
ಪುರಂದರದಾಸರು
ಸಂದಿತಯ್ಯ ಪ್ರಾಯವು |ಸಂದಿತಯ್ಯ ಪ್ರಾಯವು ಪಮೂರು ತಿಂಗಳುಸಂದುಹೋಯಿತು ತಿಳಿಯದೆ ||ಬಂದೆ ತಾಯಿಯ ಜಠರದಲಿ ಮ-|ತ್ತೊಂದು ಬುದ್ಧಿಯನರಿಯದೆ ||ಬೆಂದೆ ನವಮಾಸದಲಿ ಗರ್ಭದಿ |ಒಂದು ದಿವಸವು ತಡೆಯದೆ ||ಕುಂದದೀಪರಿಯೊಂದು ವರುಷವು |ಇಂದಿರೇಶನೆ ಕೇಳು ದುಃಖವ 1ಕತ್ತಲೆಯೊಳಿರಲಾರೆನೆನುತಲಿ |ಹೊತ್ತೆ ಹರಕೆಯ ನಿನ್ನನು ||ಮತ್ತೆ ಜನಿಸಲು ಭೂಮಿಯೊಳು ನಾ |ಅತ್ತುನಿನ್ನನು ಮರೆತೆನು ||ಮತ್ತೆ ಮಲ-ಮೂತ್ರದೊಳು ಬಾಲ್ಯದಿ |ಹೊತ್ತು ದಿನಗಳ ಕಳೆದೆನು ||ಮತ್ತೆ ನರಕದೊಳುರುಳುತುರುಳುತ |ಉತ್ತಮೋತ್ತಮ ನಿನ್ನ ನೆನೆಯದೆ 2ಚಿಕ್ಕತನವನು ಮಕ್ಕಳಾಟದಿ |ಅಕ್ಕರಿಂದಲಿ ಕಳೆದೆನು ||ಸೊಕ್ಕಿ ಹದಿನಾರಲಿ ನಾನತಿ |ಮಿಕ್ಕಿ ನಡೆದೆನು ನಿನ್ನನು ||ಸಿಕ್ಕಿ ಬಹು ಸಂಸಾರ ಮಾಯೆಯ |ಕಕ್ಕುಲಿತೆಯೊಳು ಬಿದ್ದೆನು ||ಹೊಕ್ಕುದಿಲ್ಲವು ನಿನ್ನ ಪಾದವ |ರಕ್ಕಸಾರಿಯೆ ಕೇಳು ದುಃಖವ 3ಸುಳಿದೆ ಮನೆಮನೆ ಕಳೆದೆ ಕಾಲವ |ಉಳಿದ ಯೋಚನೆ ಮಾಡದೆ ||ಬೆಳೆದೆ ತಾಳೆಯ ಮರದ ತೆರದಲಿ ||ಉಳಿವ ಬಗೆಯನು ನೋಡದೆ ||ಎಳೆಯ ಮನದೊಳೆ ಇಳೆಯ ಜನರೊಳು |ಬಳಕೆ ಮಾತುಗಳಾಡಿದೆ ||ಕಳೆದೆ ಈ ಪರಿಯಿಂದ ಕಾಲವ |ನಳಿನನಾಭನೆ ನಿನ್ನ ನೆನೆಯದೆ 4ಎಡೆಬಿಡದೆಅನುದಿನದಿ ಪಾಪದ |ಕಡಲೊಳಗೆ ನಾನಾಳ್ದೆನು ||ದರವ ಕಾಣೆದೆ ಮಧ್ಯದಲಿ ಎ-|ನ್ನೊಡಲೊಳಗೆ ನಾನೊಂದನು ||ದೃಢದಿ ನಿನ್ನಯ ಧ್ಯಾನವೆಂಬಾ |ಹಡಗವೇರಿಸು ಎನ್ನನು ||ಒಡೆಯ ಪುರಂದರವಿಠಲ ಎನ್ನನು |ಬಿಡದೆ ಕಾಯೈ ಬೇಗ ಶ್ರೀಹರಿ5
--------------
ಪುರಂದರದಾಸರು