ಒಟ್ಟು 24 ಕಡೆಗಳಲ್ಲಿ , 18 ದಾಸರು , 20 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂಗಳಂ ಶ್ರೀ ರಂಗನಿಗೆ ಗಂಗೆಯ ಜನಕಗೆ ಪ ಶರಧಿ ಪೊಕ್ಕವನಿಗೆ ಗಿರಿಯ ಪೊತ್ತವನಿಗೆ ಧರೆಯ ನೆಗಹಿದವಗೆ ನರಹರಿ ರೂಪಗೆ 1 ಬಲಿಯನು ತುಳಿದಗೆ ಕಲಿಭೃಗು ತನುಜಗೆ ಶಿಲೆಯ ಪೆಣ್ಮಾಡಿದವಗೇ ಹಲಧರನನುಜಗೆ 2 ಚಾರು ಬೌದ್ಧನಿಗೆ ವೀರರಾಹುತನಿಗೆ ಕಾರುಣ್ಯ ಸಾಗರಗೆ ಶ್ರೀ ರಂಗೇಶವಿಠಲಗೆ 3
--------------
ರಂಗೇಶವಿಠಲದಾಸರು
ಮಂಗಳಂ ಶ್ರೀ ರಘುಪುಂಗವನಿಗೆ ಜಯ ಶುಭ 1 ಶಿಷ್ಟ ಜನಗಳಿಗೆ ಇಷ್ಟಾರ್ಥಗಳೀವ ವೃಷ್ಟಿವರೇಣ್ಯ ಶ್ರೀ ಕೃಷ್ಣ ಮೂರುತಿಗೆ 2 ಸಚ್ಚಿದಾನಂದ ಸ್ವರೂಪಗೆ ಮಂಗಳಂ ಸತ್ಯವತಿ ಸುಕುಮಾರಗೆ ಮಂಗಳಂ3 ಹೇಮಕಶಿಪುವಿನ ತನಯನಿಗೊಲಿದ ನಾಮಗಿರೀಶ ಶ್ರೀ ಸ್ವಾಮಿನೃಸಿಂಹಗೆ 4 ತನ್ನ ಭಕುತರಿಗೆ ಹೊನ್ನು ಮಳೆಗರೆವ ಪನ್ನಗಶಯನ ಪ್ರಸನ್ನವಿಠಲಗೆ 5
--------------
ವಿದ್ಯಾಪ್ರಸನ್ನತೀರ್ಥರು
ಮಂಗಳಂ ಶ್ರೀರಾಮಚಂದ್ರಗೆ ಮಂಗಳಾಂಗಗೆ ಪ ಭೃಂಗವೇಣಿ ಜನಕಜಾಂತರಂಗ ಲೋಲಗೆಅ.ಪ. ರಾವಣಾದಿ ದನುಜಮಥನ ಕಾಲರೂಪಗೆ ಪಾವಮಾನಿ ಹೃದಯ ಕಾಮುದ ಪೂರ್ಣ ಚಂದ್ರಗೆ 1 ದೇವತಾಳಿ ಗೀಯಮಾನ ದಿವ್ಯ ಚರಿತೆಗೆ ಭೂ ವಧೂ ಪರಿಪಾಲನೈಕ ದರ್ಮನಿರತಗೆ2 ಕಮಲ ಹಂಸ ರೂಪಗೆ ಧೇನುನಗರ ನಾಥ ವೇಂಕಟೇಶ ರೂಪಗೆ 3
--------------
ಬೇಟೆರಾಯ ದೀಕ್ಷಿತರು
ಶರಣು ಹೋಗುವೆನಯ್ಯ ನಾನು ಪ ಸಿರಿ ಅಜಭವ ಶಕ್ರ ಸುರಸ್ತೋಮಗಳನೆಲ್ಲ ಸರಸದಿಂದ ಆಳ್ವ ಪರಮಪುರುಷ ಹರಿಗೆ ಶಿರಬಾಗಿ ನಮಿಸುತ ಅ.ಪ. ನಿರುತ ಆನಂದದಿ ಮೆರೆದು ಇರುವಂಥ ನಿರಜ ನಿತ್ಯನು ಆದ ಉರಗನ ಮೇಲ್ವರಗುತ ಪರಮ ಪರಾತ್ಪರ ಪರಮವೇದದ ಸಾರ ಪರಮ ಸದ್ಗುಣ ಪೂರ್ಣ ಪುರುಷಸೂಕ್ತ ವಂದ್ಯ ಪರಿಪರಿ ರೂಪದಿ ಸರ್ವತ್ರ ಇರುವಂಥ ನಿರ್ಗುಣ ನಿರಾಕಾರ ನಿರುಪಮ ನಿಸ್ಸೀಮ ನಿರುತ ತೃಪ್ತನು ಆದ ಸರ್ವಸಾರ ಭೋಕ್ತ ಸರ್ವರ ಬಿಂಬನು ಸರ್ವಗುಣ ಪೂರ್ಣ ಸರ್ವರ ಆಧಾರ ಸರ್ವೇಶ ಸ್ವತಂತ್ರ ಸರ್ವಶಬ್ದ ವಾಚ್ಯ ಸರ್ವರಿಂ ಭಿನ್ನನು ಸರಸಸೃಷ್ಟಿಯ ಮಾಳ್ವ ನೀರಜನಾಭಗೆ ಚರಣವ ಪಿಡಿಯುತ್ತ ಉರುಗಾಯನ ದೇವ ಸಲಹು ಸಲಹೆಂದು 1 ವಾರಿಯೊಳಾಡುವ ಭಾರವಹೊರುವ ಕೋರೆಯತೀಡುವ ಕರುಳಾನು ಬಗೆಯುವ ವರವಟು ಆಗುವ ಪರಶುವ ಪಿಡಿಯುವ ನಾರಿಯ ಹುಡುಕುವ ನಾರಿಯ ಕದಿಯುವ ಬರಿಮೈಯ್ಯ ತೋರುವ ತುರುಗವನೇರುವ ನಾರಿಯು ಆದವ ಭಾರತ ಮಾಡುವ ವರ ಸಾಂಖ್ಯ ಹೇಳುವ ಕರಿಯನು ಪೊರೆಯುವ ಪೋರಗೆ ಒಲಿದವ ವರ ಋಷಭನಾದ ಹರಿ ಯಜ್ಞ ನಾದವ ತರಿವ ರೋಗಂಗಳ ವರಹಂಸ ರೂಪನು ತುರುಗ ವೇಷಧಾರಿ ನಾರಾಯಣ ಮುನಿಯೆ ಗುರು ದತ್ತಾತ್ರೇಯನೆ ಪರಿಸರ ಪರಮಾಪ್ತ ಪೊರೆಯೊ ಮಹಿದಾಸನೆಂದು ಕರವೆತ್ತಿ ಮುಗಿಯುತ 2 ಪಾಪಿಯ ಪೊರೆದವಗೆ ತಾಪ ಇಲ್ಲದವಗೆ ಅಪವರ್ಗದಾತಗೆ ವಿಪನ ಏರಿದವಗೆ ಗೋಪತಿಯಾದವಗೆ ತಾಪವ ಮೆದ್ದವಗೆ ಚಾಪವ ಮುರಿದವಗೆ ಚಪಲ ಇಲ್ಲ ದವಗೆ ಕಪಟರ ವೈರಿಗೆ ಗುಪ್ತದಿ ಇರುವಗೆ ವಿಪ್ರನ ಸಖನಿಗೆ ಅಪ್ರಮೇಯನಿಗೆ ಗೋಪೇರ ವಿಟನಿಗೆ ತಾಪಸ ಪ್ರೀಯಗೆ ವಿಪ್ರಶಿಶು ತಂದವಗೆ ಮುಪ್ಪಿಲ್ಲ ದವಗೆ ತ್ರಿಪುರಾರಿ ಸಖಗೆ ಕೃಪಣ ವತ್ಸಲನಿಗೆ ತಪ್ಪು ಮಾಡದವಗೆ ಆಪ್ತತಮನಿಗೆ ಸಪ್ತ ಶಿವವ್ಯಕ್ತನಿಗೆ ಶ್ರೀಪತಿಯಾದವಗೆ ಕಪಟನಾಟಕ ಪ್ರಭು ಗೋಪಾಲಕೃಷ್ಣಗೆ ಒಪ್ಪಿಸಿ ಸರ್ವಸ್ವ ಅಪ್ಪನೆ ಅಪ್ಪನೆ ತಪ್ಪದೆ ಸಲಹೆಂದು 3 ಅನ್ನವು ಆದವಗೆ ಅನ್ನಾದ ನೆಂಬುವಗೆ ಅನ್ನದ ಖ್ಯಾತನಿಗೆ ಚಿನ್ಮಯ ರೂಪಗೆ ಬೆಣ್ಣೆಯ ಕಳ್ಳಗೆ ಅನಾಥನಾದವಗೆ ಕನಕಮಯನಿಗೆ ಅನಂತರೂಪನಿಗೆ ಉಣ್ಣದೆ ಇರುವವಗೆ ಉಣ್ಣುತ ಉಣಿಸುವವಗೆ ಜ್ಞಾನಿಗಮ್ಯನಿಗೆ ಜ್ಞಾನ ದಾಯಕನಿಗೆ ಗುಣತ್ರಯ ದೂರಗೆ ಭಾನುವ ತಡೆದವಗೆ ಆನತ ಬಂಧುವಿಗೆ ಅನುಪಮನಾದವಗೆ ತನುಮನ ಪ್ರೇರಿಪಗೆ ದಾನವ ವೈರಿಗೆ ತನ್ನಲ್ಲೆ ರಮಿಸುವನಿಗೆ ಮನ್ಮಥ ಪಿತನಿಗೆ ಪೆಣ್ಣಿನ ಪೊರೆದವಗೆ ಅಣುವಿಗೆ ಅಣುವಿಹಗೆ ಘನಕೆ ಘನ ತಮನಿಗೆ ಕಣ್ಣಿಲ್ಲದೆ ನೋಳ್ಪ ಉನ್ನತ ಪ್ರಭುವಿಗೆ ಬೆನ್ನು ಬೀಳುವೆ ನಾನು ಇನ್ನು ಕಾಯೋ ಎಂದು 4 ಹೇಯನಾಗದ ಶೃತಿ ಗೇಯನು ಸುಜನರ ಪ್ರೀಯನು ಸರ್ವರ ಕಾಯುವ ಸುಂದರ ಹಯಮುಖ ಸರ್ವದ ಪ್ರಾಯದಿ ಮೆರೆಯುವ ಗಾಯನ ಪ್ರಿಯನಾದ ಮಾಯಾರಮಣ ಭಾವ ಮಾಯೆ ಹರಿಸಿ ಮುಕ್ತಿ ಭಾಗ್ಯ ಭಕ್ತರಿಗೀವ ತೋಯಜಾಂಬಕ ಸುರ ನಾಯಕರಿಗೆ ಭಕ್ತಿ ತೋಯದಿ ಮುಳುಗಿಪ ಶ್ರೀಯರಸಾಭಯ ದಾಯಕ ಗುರು ಮಧ್ವ ರಾಯರ ಪ್ರಿಯನಾದ ಜೇಯ ಜಯಮುನಿ ವಾಯುವಿನ ಅಂತರದಿ ನವನೀತ ಧರಿಸಿರ್ಪ ತಾಂಡವ ಸಿರಿಕೃಷ್ಣ ವಿಠಲ ರಾಯನಿಗೆ ಕಾಯ ವಾಚಮನದಿ ಗೈಯ್ಯುವ ಸಕಲವನು ಈಯುತ ನಮಿಸುತ ಜೀಯನೆ ಜೀಯನೆ ಕಾಯಯ್ಯ ಕಾಯೆಂದು 5
--------------
ಕೃಷ್ಣವಿಠಲದಾಸರು
ಶೋಭಾನವೆನ್ನಿರೆ ಸಕಲ ಗುಣನಿಧಿಗೆ ಶೋಭಾನವೆನ್ನಿ ಸಮೀರ ಪಿತನಿಗೆ ಶೋಭಾನವೆನ್ನಿ ಸರೋಜಸದನ ಮನೋಭಿರಾಮನಿಗೆ ಶೋಭಾನವೆನ್ನಿ ಪ ಕಪಟ ಕಮಠಗೆ ತಪ ನಿಯಾಂಬಕನಸುಪರಿಹರಿಸಿದಗೆ ಕೃಪಣ ಪ್ರಹ್ಲಾದನ ವಿಪತ್ತು ಕಳೆದವಗೆ ಚಪಲಾಕ್ಷಿಯರಾರುತಿ ಬೆಳಗಿರೆ 1 ಕೊಡಲಿ ಕೋದಂಡವ ಪಿಡಿವ ಪಂಡಿತಗೆ ಕಡಲ ಕಟ್ಟಿಸಿ ಖಳರೊಡಲ ಬಗೆದಗೆ ಫಣಿ ಮೃಡನ ಗೆಲಿಸಿ ಕೀರ್ತಿ ಒಡನೆ ತಂದಿತ್ತಗೆ ಮಡದೇರಾರುತಿಯ ಬೆಳಗೀರೆ 2 ಹರಿಗಿ ಸುರಿಗಿ ಪಿಡಿದರವಿಂದಾಂಬಕಗೆ ಶರಧಿಯೊಳಾಡ್ದಗೆ ಗಿರಿಮಹಿಧರಗೆ ನರಹರಿ ರೂಪಗೆ ಧರಣಿಯಾಳ್ದಗೆ ಧುರದೊಳು ರಾಯರ ತರಿದ ಸಮರ್ಥಗೆ ಗರತೇರಾರುತಿಯ ಬೆಳಗೀರೆ3 ದಶರಥ ತನಯಗೆ ವಸುದೇವ ಸುತಗೆ ಕೂರ್ಮ ರೂಪಗೆ ವಸುಧಿ ವಾಹಕಗೆ ಮಿಸುನಿ ಕಶ್ಯಪಗೆ ಹೆಬ್ಬಸಿರ ಬಗೆದವಗೆ ಶಶಿಮುಖಿಯರಾರುತಿ ಬೆಳಗೀರೆ 4 ವಟು ಭೃಗುರಾಮಗೆ ಜಟಲ ಮಸ್ತಕಗೆ ಕಠಿಣ ಕಂಸನ ತಳ ಪಟವ ಮಾಡಿದಗೆ ಕಪಟ ಭೀಕರಗೆ ವಟಪತ್ರಶಯನ ನಿಷ್ಕುಟಿಲ ಜಗನ್ನಾಥ ವಿಠಲಗಾರುತಿಯ ಬೆಳಗೀರೆ 5
--------------
ಜಗನ್ನಾಥದಾಸರು