ಒಟ್ಟು 20 ಕಡೆಗಳಲ್ಲಿ , 18 ದಾಸರು , 20 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಅನಂತಶಯನನ ಸ್ತೋತ್ರ (ಬೆಳಗಾವಿಯ ಶಹಪೂರ ಪೇಟೆಯ ಅನಂತಶಯನನು ಸ್ತುತಿಸುತ್ತ ಅಲ್ಲಿಯ ಕಟ್ಟಿಯ ಆಚಾರ್ಯರನ್ನು ರಕ್ಷಿಸಬೇಕೆಂದು ಪ್ರಾರ್ಥಿಸಿದ್ದು) ನೋಡಿ ನಾನು ಧನ್ಯನಾದೆನು ಅನಂತಶಯನನ |ನೋಡಿ ನಾನು ಧನ್ಯನಾದೆನು ಪ ನೋಡಿ ನಾನು ಧನ್ಯನಾದೆ |ರೂಢಿಯೊಳಗೆ ಮರುತಮಂದಿರ |ರೂಢಿ ಬೆಳಗಾವಿಯೊಳು ನಿಂದು |ಈಡು ಇಲ್ಲದೆ ಮೆರೆವ ದೇವನ ಅ.ಪ. ಮೂಲರೂಪನು ವೈಕುಂಠ ಬಿಟ್ಟು |ಪಾಲ ಸಾಗರ ಶಾಯಿ ಶ್ರೀಲೋಲ |ಕಾಲಕಾಲದಿ ಭಕ್ತರ ಮೌಳಿ |ಪೊರಿಯಬೇಕೆಂದು ನಿಂದನ 1 ಸಂತಾನ ಸಂಪತ್ತು ಜ್ಞಾನ ಸುಬುದ್ಧಿಯ |ನಂತ ಶಯನ ಇವರಿಗಾ |ನೆಂತು ಸುಖವ ನೀವೆನೆಂದು |ಸ್ವಾಂತದೊಳಗೆ ಬಂದು ನಿಂದನ 2 ಶ್ರೀಶ ಪ್ರಾಣೇಶ ವಿಠಲರೇಯ |ಶ್ರೀ ಸಹಿತವಾಸ ವಾಗಿಲ್ಲ |ಭೂಸುರೋತ್ತಮ ಕಟ್ಟಿಯವರನ್ನ |ಪೋಷಿಸಬೇಕೆಂದು ನಿಂದನ 3
--------------
ಶ್ರೀಶಪ್ರಾಣೇಶವಿಠಲರು
ಶ್ರೀಮದಕ್ಷೋಭ್ಯ ತೀರ್ಥರ ದಿವ್ಯ ಚರಿತಂ ಕಾಮಿತ ಪ್ರದವಹುದು ಶೃಣ್ವತಾಂ ಸತತಂ ಪ ಈ ಮಹಿಯೊಳವತರಿಸಿ ಭೂಮಿಜಾಸಹಿತ ಶ್ರೀ ರಾಮನಂಘ್ರಿದ್ವಯವ ಪೂಜಿಸುತಲಿ ನಿರ್ಜರ ಜನಸ್ತೋಮ ವಂದಿತರಾಗಿ ವ್ಯೋಮ ಕೇಶಾಂಶರೆಂದೆನಿಸಿ ಮೆರೆವಂಥ 1 ಮೋದತೀರ್ಥರ ಮತ ಮಹೋದಧಿಗೆ ಪೂರ್ಣಹಿಮ ದೀದಿತಿಯರೆಂದೆನಿಸಿ ದಿಗ್ವಲಯದಿ ಭೇದ ಬೋಧಕ ಸೂತ್ರವಾದದಿಂದಲಿ ಮಹಾ ವಾದಿ ವಿದ್ಯಾರಣ್ಯ ಯತಿವರನ ಜಯಿಸಿದ 2 ವಿಟ್ಠಲನ ಪದಪದುಮ ಷಟ್ಟದರೆಂದೆನಿಸಿ ಸ್ವಪ್ನಸೂಚಿತ ಚಂದ್ರಭಾಗತಟದಿ ಶ್ರೇಷ್ಠ ಕುದುರೆಯನೇರಿ ನದಿಯ ಜಲಕುಡಿದವರ ಇಷ್ಟರೆನ್ನುತ ಕರೆದು ಕೊಟ್ಟರಾಶ್ರಮವ 3 ಸೃಷ್ಟಿಯೊಳು ಮಧ್ವಮತ ಪುಷ್ಠಿಗೈಸುವರೆಂಬ ದೃಷ್ಟಿಯಿಂದಿವರಿಗೆ ಸುಮುಹೂರ್ತದಿ ಪಟ್ಟಗಟ್ಟಿದರು ಜಯತೀರ್ಥ ನಾಮವನಿಡುತ ಕೊಟ್ಟರಾಜ್ಞೆಯನು ದಿಗ್ವಿಜಯ ಮಾಡಿರಿ ಎಂದು 4 ದೇಶದೇಶದಿ ಬರುವ ಭೂಸುರೋತ್ತಮರ ಅಭಿ ಲಾಷೆಗಳನೆಲ್ಲ ಪೂರೈಸಿ ಪೊರೆವ ಶ್ರೀಶಕಾರ್ಪರ ಕ್ಷೇತ್ರವಾಸ ಅಶ್ವತ್ಥನರ ಕೇಸರಿಯ ನೊಲಿಸಿದ ಯತೀಶರಿವರೆಂದು 5
--------------
ಕಾರ್ಪರ ನರಹರಿದಾಸರು
ಸ್ಮರಿಸೆನ್ನ ಮನವೇ ಯಾದವ ರಾಯನಾ| ಸರಸಿಜೊವನುತ ಭಕುತರ ಪ್ರೀಯನಾ ಪ ವರನಿಗ ಮೋಯಿದವನಾ ಶೀಳಿ ಎಳಹಿದವನಾ| ಶರಧಿ ಮಥನ ಗೋಸುಗನ ಪೊತ್ತನಾ ಧರಣಿಯಾ ತನ್ನ ಕೋರೆ ದಾಡಿಲಿರಿಸಿದಿಹನಾ| ಶರಣ ಪ್ರಲ್ಹಾದನ ಸುಸ್ಮರಣೆ ಗೊಲಿದನಾ1 ಭೂಸುರೋತ್ತಮನಾಗಿ ದಾನವ ಬೇಡಿದನಾ| ಹೇಸದೇ ಕ್ಷತ್ರಿಯರ ಕುಲ ಕೊಂದನಾ| ವಾಸು-ಕ್ಯಾ ಭರಣನ ಧನುವ ಮುರಿದವನಾ| ವಾಸವಾತ್ಮಜ ಮಿತ್ರ ದೇವಕಿ ಕಂದನಾ2 ಪತಿವೃತೆ ನಾರಿಯರ ವೃತಭಂಗ ಮಾಡಿದನಾ| ಸಿತ ಹಯವೇರಿದ ಶ್ರೀ ಜಗದೀಶನಾ| ಪತಿತ ಪಾವನನಾದಾ ಅನಂತಾವತಾರನ| ನುತ ಗುರು ಮಹಿಪತಿ ನಂದನ ಪ್ರೀನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗಂಗಾಪಿತ ವೆಂಕಟ ಪರ್ವತನಿಲಯಕೌಸಲ್ಯತನಯಾ |ಮಂಗಳವಲ್ಲಭಭವಕರಕರೆಯ ಪರಿಹರಿಪುದು ತ್ವರಿಯಾ |ಅಂಗಜಜನಕನೆ ಸಂಗರಹಿತ ಸತ್ಸಂಗ ಕೃಪಾಬ್ಧಿ ವಿಹಂಗವಾಹನನೇ ಪಸ್ವಾಮಿಲಾಲಿಸುಯನ್ನಯ ಮನದುಸರ ನೀನಲ್ಲದಿತರರ |ಭೂಮಿಯೊಳ್ಕಾಣೆನೋ ಉದ್ಧರಿಸುವರನವನೀತಚೋರ |ಸಾಮಜದ್ರೌಪದಿ ಆ ಮುಚುಕುಂದ ಸುಧಾಮರ ಪೊರೆದ ತ್ರಿಧಾಮ ಮಹಾತ್ಮ 1ವಾಸುಕೀ ಶಯನ ದಯಾ ಸಂಪನ್ನ ನಾರಾಯಣ ನಿನ್ನ |ದಾಸರೊಳಗಾಡಿಸೊ ಸದ್ಗುಣ ಪೂರ್ಣ ಸಾರ್ವರಿಗೆ ಪ್ರಸನ್ನ |ಈಸಲಾರೆ ಈ ಸಂಸಾರಶರಧಿಕೈ ಸೋತಿತೆಲೋ ಪರಾಶರ ತನಯ 2ನಿತ್ಯಾನಂದ ನಿಗಮೋದ್ಧಾರ ಪೂತನೀ ಸಂಹಾರ |ಮೃತ್ಯುಂಜಯಸಖರವಿದರ ಗದಾಧರ ಸುಖಪಾರಾವಾರ|ಭೃತ್ಯವತ್ಸಲ ಸುರೋತ್ತಮ ಪಾರ್ಥನ ತೊತ್ತಿಗನಾದಿ ಸುಸತ್ಯ ಸಂಕಲ್ಪ ಗಂಗಾ3ಮಂದರಾಚಲ ಧರಿಸಿದ ಗೋವಿಂದ ಶ್ರೀ ಯಶೋದಾನಂದ |ನಂದನ ಶ್ರೀ ಕೇಶವ ಮುಕುಂದ ವಾಮನ ಸುಖಸಾಂದ್ರ |ತಂದೆ ಸಲಹೊ ನಿನ್ನ ಬಂಧಕ ಶಕುತಿಯಲಿಂದ ದಣಿಸದೆ ಅರಿಂದಮ ಪ್ರಭುವೇ 4ಅಂತರಂಗವ ಬಲ್ಲ ಮಧುದ್ವೇಷಿ ಯನ್ನಯ ಮನದಾಸೀ |ಅಂತು ಪೂರ್ತಿಸಿ ದುಷ್ಕರ್ಮದ ರಾಶಿ ಉಳಿಸದೆ ಪರಿಹರಿಸಿ |ಸಂತತ ಹೃದಯದಿ ನಿಂತು ಪೊಳೆವುದೋ ಅನಂತ ಮುರಾಂತಕ ಚಿಂತಾರಹಿತನೆ 5ಶಕ್ರವರಪೂಜಿತ ಬಲವಂತ ರುಕ್ಮಣೀಪತಿ ದಂತ |ವಕ್ತ್ರಾರಿ ಬಾಧಿಸದಂತೆಕೃತಾಂತಮಾಳ್ಪುದು ಕೆಡದಂಥ |ಸುಕೃತಪೀಡಿಸೋ ತ್ರಿವಿಕ್ರಮ ಮೂರುತಿ ಶುಕ್ರ ಯುಕ್ತಿ ಹರ ಅಕ್ರೂರ ವರದ 6ಕಂಕಾನುಜ ಮಂದಿರ ಪ್ರಾಣೇಶ ವಿಠಲ ಗೋಕುಲ ಗೋಪಾಲ |ಪಂಕಜಾಸನ ಜನಕ ಶಕಟಕಾಲಜಾಂಬವತೀಲೋಲ|ಶಂಕರಾದ್ಯಮರರ ಕಳಂಕೆಣಿಸದ ಗರುಡಾಂಕಉರಗಪರ್ಯಂಕ ಸುಖಾತ್ಮ 7
--------------
ಪ್ರಾಣೇಶದಾಸರು
ಪರಾತ್ಪರಪರಮಪಾವನನೆಪರಾಕುಫಣಿಶಯನ ಪಾಪಘ್ನಪ.ಸುರಾಸುರಾರ್ಚಿತ ಪುರಾಣಪುರುಷೇ-ಷ್ಟರ ನಿರಾಮಯ ಮುರಾರಿ ಶ್ರೀಹರಿ ಅ.ಪ.ನಯವೀತಭಯ ಪಾರ್ಥಪ್ರಿಯ ಸರ್ವನಿಯಾಮಕ ಚಿನ್ಮಯದಯಾವಂತ ಜಯಾಕಾಂತಹಯಾಸ್ಯಪಯೋಬ್ಧಿಶಯನ ವಿಯಾನ1ರಮಾರಮಣ ನಮಸ್ತೇ ನಿರುಪಮ ಮಹಿಮಸುಮೇಧ ಸುರೋತ್ತಮಮಮಾಪರಾಧ ಕ್ಷಮಾ ಕುರು ವಿ-ರಾಮ ನಿಯಮ ಪದುಮದಳನಯನ 2ಗುಣಾರ್ಣವ ಶರಣಾಗತಭರಣ ನಿ-ರ್ಗುಣ ಶ್ರೀ ಲಕ್ಷ್ಮೀನಾರಾಯಣಪ್ರಾಣಸುತ್ರಾಣದೇವಗಣಾಗ್ರಣಿಯಾನಂದ ಗೋವಿಂದ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ