ಒಟ್ಟು 21 ಕಡೆಗಳಲ್ಲಿ , 12 ದಾಸರು , 19 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೈ ಮುಗಿದು ಬೇಡುವೆನು ಕೈಲಾಸವಾಸಾ ||ವಹಿಲದಲಿ ಸಲಹೆನ್ನ ಈಶ ಗಿರಿಜೇಶಾ ಪಅಷ್ಟ ಭಾಗ್ಯವು ನೀನೆ | ಇಷ್ಟಮಿತ್ರನು ನೀನೆ |ಹುಟ್ಟಿಸಿದ ತಾಯ್ತಂದೆ |ವಿದ್ಯೆಗುರುನೀನೆ |ಸೃಷ್ಟಿ ಮೂರಕೆ ನೀನೆ ಅಧ್ಯಕ್ಷನೆನಿಸಿರುವೆ |ರಕ್ಷಿಸೆನ್ನನು ಜಟಾಜೂಟ ನಿಟಿಲಾಕ್ಷ 1ಮಾಯಾಪಾಶದಿ ಸಿಕ್ಕಿ |ಕಾಯಸುಖವನು ಬಯಸಿ |ಆಯತಪ್ಪಿದೆ ಮುಂದುಪಾಯವೇನಿದಕೆ |ಜೀಯನೀನೆಂದೆಂಬ | ನ್ಯಾಯವರಿಯದೆ ಕೆಟ್ಟೆ |ಕಾಯೊ ದಯದಲಿ ಮೃತ್ಯು | ಬಾಯಿಗೊಪ್ಪಿಸದೆ 2ಘೋರತರ ಸಂಸಾರ ಸಾಗರದಿ ಮುಳುಮುಳುಗಿ |ಕ್ರೂರ ನಕ್ರನ ಬಾಯಿಗಾಹಾರವಾದೆ |ದಾರಿಕಾಣದೆ ಬಳಲಿ ಮಾರಹರ ನಿನ್ನಂಘ್ರಿ |ಸೇರಿದೆನು ಗೋವಿಂದದಾಸನನು ಸಲಹೋ 3
--------------
ಗೋವಿಂದದಾಸ
ತಲ್ಲಣಿಸದಿರು ಕಂಡ್ಯ ತಾಳು ಮನವೆ ಸ್ವಾಮಿನಿಲ್ಲದಲೆ ರಕ್ಷಿಸುವಸಂದೇಹಬೇಡಪಬೆಟ್ಟದ ತುದಿಯಲ್ಲಿ ಬೆಳೆದ ವೃಕ್ಷಂಗಳಿಗೆಕಟ್ಟೆ ಕಟ್ಟುತ ನೀರ ಹೊಯ್ವರಾರುಹುಟ್ಟಿಸಿದ ಸ್ವಾಮಿ ತಾ ಹೊಣೆಗಾರನಾದ ಮೇಲೆಕೊಟ್ಟು ರಕ್ಷಿಸುವನು ಇದಕೆಸಂದೇಹಬೇಡ1ಅಡವಿಯೊಳಗಾಡುವ ಮೃಗಜಾತಿ ಪಕ್ಷಿಗಳಿಗೆಅಡಿಗಡಿಗೆ ಆಹಾರವಿತ್ತವರದಾರುಪಡೆದ ಜನಿನಿಯಂತೆ ಸಾರಥಿಯಾಗಿ ತಾಬಿಡದೆ ರಕ್ಷಿಸುವನು ಇದಕೆ ಸಂದೇಹಬೇಡ 2ಕಲ್ಲೊಳಗೆ ಪುಟ್ಟಿ ಕೂಗುವ ಮಂಡೂಕಂಗಳಿಗೆಅಲ್ಲಿ ಹೋಗಿ ಆಹಾರವಿತ್ತವರದಾರುಬಲ್ಲಿದನು ಪುರಂದರವಿಠಲರಾಯನಿಲ್ಲದೇ ರಕ್ಷಿಪನು ಇದಕೆ ಸಂದೇಹಬೇಡ 3
--------------
ಪುರಂದರದಾಸರು
ನಂಬಬೇಡ ನಾರಿಯರನುಹಂಬಲಿಸಿ ಹಾರಯಿಸಬೇಡಅಂಬುಜಾಕ್ಷಿಯರೊಲುಮೆ ಬಯಲುಡಂಬಕವೆಂದು ತಿಳಿಯಿರೊ ಪ.ನೋಟವೆಲ್ಲ ಪುಸಿಯು - ಸತಿಯರಾಟವೆಲ್ಲ ಸಂಚು - ಸನ್ನೆಕೂಟವೆಲ್ಲ ಗನ್ನ - ಘಾತುಕನೋಟವೆಲ್ಲ ವಂಚನೆವಾತಬದ್ಧ ಹೆಂಗಳಲ್ಲಿಕೋಟಲೆಗೊಂಡು ತಿರುಗಬೇಡಮಾಟಗಾತಿಯರೊಲುಮೆ ಬಯಲುಬೂಟಕವೆಂದು ತಿಳಿಯಿರೊ 1ಸೋತನೆಂದು ವಿಟಗೆ ದೈನ್ಯಮಾತನಾಡಿ ಮರುಳಗೊಳಸಿಕಾತರವ ಹುಟ್ಟಿಸಿ ಆವನಮಾತೆ - ಪಿತರ ತೊಲಗಿಸಿಪ್ರೀತಿ ಬಡಿಸಿ ಹಣವ ಸೆಳೆದುರೀತಿಗೆಡಿಸಿ ಕಡೆಯಲವನಕೋತಿಯಂತೆ ಮಾಡಿ ಬಿಡುವಚಾತಿಕಾರ್ತಿ ಹೆಂಗಳೆಯರ 2ಧರೆಯ ಜನರ ಮೋಹಕೆಳಸಿಭರದಿ ನೆಟ್ಟು ಕೆಡಲುಬೇಡಎರೆಳೆಂಗಳ ಹೆಂಗಳೊಲುಮೆಗುರುಳೆ ನೀರ ಮೇಲಿನಮರೆಯಬೇಡ ಗುರುಮಂತ್ರವಸ್ಥಿರವಿಲ್ಲದ ಜನ್ಮದಲ್ಲಿಕರುಣನಿಧಿ ಪುರಂದರವಿಠಲನಚರಣಸ್ಮರಣೆ ಮಾಡಿರೊ3
--------------
ಪುರಂದರದಾಸರು
ವನಜನಾಭನ ಧಾಳಿ ಘನವಾಯಿತಿಂದಿಲಿಂದಮನೆಯೊಳು ನಿಲ್ಲಲಾರೆವಮ್ಮ ಪಚಿನ್ನನ ಸುದ್ದಿನಿತ್ಯಹೇಳುವರು ಹತ್ತರಗೂಡಾ |ಹನ್ನೊಂದೆನ್ನ ಬೇಡವಮ್ಮ ||ಅನ್ಯಾಯದ ಮಾತುಹುಸಿಹುಟ್ಟಿಸಿಯಾಡಿದರೆ ನಮ್ಮ |ಸಣ್ಣವರಾಣೆ ಗೋಪೆಮ್ಮ 1ಪೋರರಾಟಿಕೆಯಾದರೆ ಜನನೋಡೆ ನಿರ್ಭಯದಿ |ಕ್ಷೀರವ ಕುಡಿಯಬೇಕಮ್ಮ ||ಆರೂ ಮನೆಯೊಳಿಲ್ಲದ ಸಮಯದಲ್ಲಿ ಪಾಲು |ಸೋರೆ ಕದ್ದೊಯ್ಯುತಿದ್ದನಮ್ಮ2ಚಿಕ್ಕವರನ್ನು ರಂಬಿಸಿ ಸಕ್ಕರೆ ಕೊಟ್ಟು ಕದ್ದು |ರೊಕ್ಕವ ತನ್ನಿರೆಂಬುವನಮ್ಮ ||ಮಕ್ಕಳಾಟಿಕೆ ಆದರಾಯಿತೆ ನಿನ್ನ ಕಂದ |ರೊಕ್ಕವನೇನು ಮಾಡ್ಯಾನಮ್ಮ 3ಏಕಾಂತ ಮನೆಯೊಳು ಸರು ಹೊತ್ತಿನಲ್ಲಿ ಬಂದು |ಶ್ರೀಕಾಂತನಡಗಿದ್ದನಮ್ಮ ||ಹೇ ಕಾಂತೆ ನಿನ್ನ ಸಲಿಗಿಲ್ಲದೆಂತು ಬಂದನೆಂದು |ಆ ಕಾಂತ ಸಂಗ ಬಿಟ್ಟನಮ್ಮ 4ನೀರೊಳು ನೆರಳೆಂದು ತಿಳಿಯದ ಮಗುವಿಗೆ |ಪೋರನೆಳೆದು ತಾಯಂಬೊನಮ್ಮ ||ಹಾರುತಿರಲು ಸ್ವಾಮಿಯ ದಯೆಯಿಂದ ಕಂಡು ಒಬ್ಬ |ನಾರಿ ಕರಕೊಂಡು ಬಂದಳಮ್ಮ 5ತರಳರಿಗೆಲ್ಲ ಇದರಂತೆ ಹತ್ತಿರೆಂದು ಹೇಳಿ |ಹರಿವಂದು ಹತ್ತಿಕೊಂಬೊನಮ್ಮ ||ಕರುಗಳೆಲ್ಲವು ಹೀಗೆ ಹತವಾಗಿ ಪೋಪವು |ತುರುಗಳ ಗಡಹವಮ್ಮ6ಬಾಲನ ಮನೆಯೊಳಗಿರ ಹೇಳಿ ಉದಕವ |ವಾಲಯಕೆ ತರಹೋದೆನಮ್ಮ ||ಮೂಲೇಶ ಹುಡುಗನ ಕೈಯಕಟ್ಟಿಮನೆಯೆಲ್ಲ |ಹಾಳು ಮಾಡಿಯೇನೋ ತಂದನಮ್ಮ 7ಹುಡುಗರ ಅಂಬೆಯಾಗಿಯೇರಿಸಿಕೊಂಡಾಡಿಸಿ |ಕೆಡಹಿ ಕೈಕಾಲು ಮುರಿದನಮ್ಮ ||ಬಡವರೆಂದರೆ ಪುನಃ ಬಿಡದಲೆ ತಾ ಹತ್ತಿ |ನಡುವ ನೋಯಿಸೀಹ ನೋಡಮ್ಮ 8ಬಾಲೆ ಅದೇನು ಕಾರಣವೋ ತಿಳಿಯದು ನಮ್ಮ |ಮೂಲೆಯಲಡಗಿದ್ದನಮ್ಮ ||ಛೀ ಲಕುಮೀಶ ನಡೆಯೆಂದೆ ಕೈ ಸಂಧಿಸದಾಕಳ |ಮೊಲೆ ಉಂಡಿದ್ದನಮ್ಮ 9ಗಂಡಅತ್ತೆಯ ಮನೆಘೋಗಿ ನಡುವ ಹೆಣ್ಣಾ |ಪುಂಡ ಬಂದಪ್ಪಿಕೊಂಡನಮ್ಮ ||ಕಂಡು ನಾನಿದು ತರವೇನೆಲೆ ರಂಗಾಯೆನ್ನಲು |ಭಂಡು ಮಾಡಿದನು ನೋಡಮ್ಮ 10ಭ್ರಷ್ಟ ಮಾತಲ್ಲವೆ ಬಾಣಂತಿ ಮಂಚದಡಿ ಕೆಂಡ- |ವಿಟ್ಟರೆ ಕಾಸಿಕೊಂಡನಮ್ಮ ||ಥಟ್ಟನೆ ಕಂಡಂಜಿ ಪ್ರಾಣಾಂತಿಕ ಆಯಿತು ಪ್ರಾಣೇಶ |ವಿಠಲನಿಂಥವ ಕಾಣಿರಮ್ಮ 11
--------------
ಪ್ರಾಣೇಶದಾಸರು