ಒಟ್ಟು 6252 ಕಡೆಗಳಲ್ಲಿ , 125 ದಾಸರು , 4339 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೇಮದ ತೊಟ್ಟಿಲ ಭಾಮೆಯರ್ಹೂಡಿಕೋಮಲ ಕಾಂಚನಧಾಮವ ಮಾಡಿಕಾಮಜನಕನೊಳು ಕಾಮಿತ ಬೇಡಿಪ್ರೇಮದಿ ತೂಗಿದರ್ನಾಮದಿ ಪಾಡಿ ಜೋ ಜೋ 1ಚೆನ್ನಿಗರರಸ ಮೋಹನ್ನ ಸುಶೀಲಕನ್ನಡಿ ಕದಪಿನಕಮನೀಯಬಾಲಪುಣ್ಯವೃಕ್ಷಗ ಫಲ ಪೂರ್ಣೇಂದು ಲೀಲನಿನ್ನ ರಕ್ಷಿಸಲಿ ಪ್ರಸನ್ನ ಗೋಪಾಲ ಜೋ ಜೋ 2ಕೆಂದಾವರೆಯಂತೆ ಚೆಂದುಳ್ಳಚರಣಚಂದಿರವದನ ಗೋವಿಂದನ ಶರಣಮುಂದಿನ್ನು ಸೌಭಾಗ್ಯ ಹೊಂದೆನ್ನ ತರುಣಕಂದ ಕಂದರ್ಪನ ಸುಂದರಾಭರಣ ಜೊ ಜೋ 3ಶ್ರೇಯಾರೋಗ್ಯ ದೀರ್ಘಾಯು ಸಂಪೂರ್ಣನ್ಯಾಯ ನೀತಿ ಸದುಪಾಯ ಸಂಪನ್ನಪ್ರೀಯನೆ ಕರ್ಣಾಂತಾಯತನಯನಕಾಯಲಿ ಲಕ್ಷ್ಮೀನಾರಾಯಣ ನಿನ್ನ ಜೋ ಜೋ 4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಹೇಮಾಂಬರವನುಟ್ಟು ತತ್ವವ ಕೇಳುತ ಕೈಮುಗಿದಿಹಳವಳಾರೆಭೂಮಿಗೆ ಕರ್ತಾ ಬ್ರಹ್ಮಾಂಡ ಕೋಟಿಗೆ ತಾಯಿಯಾದ ಬಗಳೆ ವೀರೆಪಹರಡಿಯ ತಿರುವುತ ಹೂಗಳ ಬೀರುತಹರಿದಾಡುತಿಹಳವಳಾರೆಪರಮಬಗಳೆ ಚಿದಾನಂದ ಗುರುವ ಕಾಯ್ದುಇರುಳು ಹಗಲು ಇಹವೀರೆ1ಮುಸಿ ಮುಸಿ ನಗುತಲಿ ಕರುಣೆಯ ತೋರುತಹೊಸಬಳು ಇಹಳವಳಾರೇಶಶಿಜೂಟೆ ಬಗಳ ಚಿದಾನಂದ ನೆಡಬಲಅಸಿಯ ಹಿಡಿದುಕಾವವೀರೆ2ಘುಲು ಘುಲು ನಡೆಯುತ ಢಾಲು ಕತ್ತಿಯ ಹಿಡಿದುಗಾಳಿ ಹಾಕುತಳಿಹಳವಳಾರೆಖಳನಾಶ ಬಗಳೆ ಚಿದಾನಂದನಲಿಬಳಿಕ ಮನ್ನಣೆ ಪಡೆದ ವೀರೆ3
--------------
ಚಿದಾನಂದ ಅವಧೂತರು
ಹೇಳಬಾರದೆ ಬುದ್ಧಿಯ - ಮಗನ ಊರ-|ಗೂಳಿಯ ಮಾಡಿದೆನೆ ? ಪಮೇಳದಿ ಓರಗೆಯವರ ಕೂಡಿಕೊಂಡು |ಹಾಳು ಮಾಡುತಾನೆ ಗೋವಳಗೇರಿಯ ಅ.ಪಅಟ್ಟದ ಮೇಲಿಟ್ಟಹ - ಚೆಟ್ಟಿಗೆ ಹಾಲು |ಬಟ್ಟನಿಕ್ಕಿ ಚೀಪುವ ||ದುಷ್ಟತನವ ಮಾಡಬೇಡ ಅಯ್ಯಾ ಎನೆ |ಕಷ್ಟವೇನೆಂಬೆ ಮುದ್ದಿಟ್ಟು ಓಡಿ ಪೋದ 1ಮೊಸರ ಮಥಿಸುತಿರಲು - ಬಂದು ಕುಳಿತ |ಹಸುಗೂಸು ಎನುತಿದ್ದೆನೆ ||ಕುಸುಮನಾಭನು ತನ್ನ ವಶವಾಗು ಎನುತಲಿ |ವಸನೆತೆಗೆದು ಮೊಲೆ ಪಿಡಿದು ಹೋದ ಮೇಲೆ 2ಬೆಣ್ಣೆಯ ಕಂಡರಂತೂ - ಅದರರೂಪ |ಕಣ್ಣಿಗೆ ತೋರನಲೆ ||ಸಣ್ಣವನೆಂದು ಬಗೆದು ನಾ ಕರೆದರೆ |ಬಣ್ಣದ ಮಾತಾಡಿ ಬಾ ಎಂದು ಕರೆವನು 3ಉಡುವ ಸೀರೆಯ ಕಳೆದು - ತಡಿಯಲಿಟ್ಟು |ಮಡುವಿನೊಳ್ ಮೈದೊಳೆಯೆ ||ದಡದಡ ಬಂದೊಯ್ದು ಕಡಹದ ಮರವೇರಿ |ಕೊಡು ಕೃಷ್ಣ ಎನುತಿರೆ ಪಿಡಿ ಜೋಡು ಕೈಯೆಂಬ 4ಎಷ್ಟು ಹೇಳಲಿ ನಿನಗೆ - ಯಶೋದೆ ಒಂ-|ದಿಷ್ಟು ಕರುಣವಿಲ್ಲವೆ |ಸೃಷ್ಟಿಗೊಡೆಯ ನಮ್ಮಪುರಂದರವಿಠಲ-------------------------- 5
--------------
ಪುರಂದರದಾಸರು
ಹೊಯ್ಯಾಲೊ ಡಂಗುರವ - ಜಗ - |ದಯ್ಯನಯ್ಯ ಶ್ರೀಹರಿ ಅಲ್ಲದಿಲ್ಲವೆಂದುಪ.ಅಷ್ಟೈಶ್ವರ್ಯದ ಲಕುಮಿಯ ಅರಸೆಂದು |ಸೃಷ್ಟಿ - ಸ್ಥಿತಿ - ಲಯಕರ್ತನೆಂದು ||ಗಟ್ಟಿಯಾಗಿ ತಿಳಿದುಹರಿ ಎನ್ನದವರೆಲ್ಲ |ಭ್ರಷ್ಟರಾದರು ಇಹ - ಪರಕೆ ಬಾಹ್ಯರು ಎಂದು 1ಹರಿಯೆಂಬ ಬಾಲನ ಹರಹರ ಎನ್ನೆಂದು |ಕರುಣವಿಲ್ಲದೆ ಪಿತ ಬಾಧಿಸಲು ||ತರಳನ ಮೊರೆಕೇಳಿ ನರಮೃಗರೂಪದಿ |ಹರಿಯ ನಿಂದಕನ ಸಂಹರಿಸಿದ ಮಹಿಮೆಯ 2ಕರಿ ಆದಿಮೂಲನೆ ಕಾಯೆಂದು ಮೊರೆಯಿಡೆ |ಸುರರನು ಕರೆಯಲು ಬಲ್ಲದಿರೆ ||ಗರುಡನನೇರದೆ ಬಂದು ಮಕರಿಯ ಸೀಳ್ದು |ಕರಿರಾಜನ ಕಾಯ್ದ ಪರದೈವ ಹರಿಯೆಂದು 3ಸುರಪಗೊಲಿದು ಬಲಿಯ ಶಿರವನೊದ್ದಾಗಲೇ |ಸುರಸವು ಉದಿಸೆ ಶ್ರೀ ಹರಿಪಾದದಿ ||ಪರಮೇಷ್ಟಿ ತೊಳೆಯಲು ಪವಿತ್ರೋದಕವೆಂದು |ಹರ ತನ್ನ ಶಿರದಲ್ಲಿ ಧರಿಸಿದ ಮಹಿಮೆಯ 4ಮಾನಸಲಿಂಗಪೂಜೆಗೆ ಮೆಚ್ಚಿ ಶಿವ ಬಂದು |ಬಾಣನ ಬಾಗಿಲ ಕಾಯ್ದಿರಲು |ದಾನವಾಂತಕ ಸಾಸಿರ ತೋಳ ಕಡಿವಾಗ |ಮೌನದಿಂದೊಪ್ಪಿಸಿಕೊಟ್ಟ ಶಿವನು ಎಂದು 5ಭಕ್ತಗೊಲಿದು ಭಸ್ಮಾಸುರಗೆ ಶಿವ ವರವಿತ್ತು |ಭಕ್ತನ ಭಯದಿಂದ ಓಡುತಿರೆ ||ಯುಕ್ತಿಯಿಂದಸುರನ ಸುಟ್ಟು ಶಿವನ ಕಾಯ್ದ |ಶಕನು ಶ್ರೀಹರಿ ಅಲ್ಲದಿಲ್ಲವೆಂದು 6ಗರಳಜ್ವಾಲೆಗೆ ಸಿರಿರಾಮ - ರಾಮನೆಂದು |ಸ್ಮರಿಸುತಿರಲು ಉಮೆಯರಸನಾಗ ||ಕೊರಳು ಶೀತಲವಾಗೆ ಸಿತಿಕಂಠ ತನ್ನಯ |ಗಿರಿಜೆಗೆ - ರಾಮಮಂತ್ರವ ಕೊಟ್ಟ ಮಹಿಮೆಯ 7ಹರಬ್ರಹ್ಮ ಮೊದಲಾದ ಸುರರನುದಶಶಿರ |ಸೆರೆಹಿಡಿದು ಸೇವೆಯ ಕೊಳುತಿರಲು ||ಶರಧಿಯ ದಾಟಿ ರಾವಣನ ಸಂಹರಿಸಿದ |ಸುರರ ಲಜ್ಜೆಯ ಕಾಯ್ದ ಪರದೈವ ಹರಿಯೆಂದು 8ಜಗದುದ್ಧಾರನು ಜಗವ ಪೊರೆವನೀತ |ಜಗ ಬ್ರಹ್ಮಪ್ರಳಯದಿ ಮುಳುಗಲಾಗಿ ||ಮಗುವಾಗಿ ಜಗವನುದ್ಧರಿಸಿ ಪವಡಿಸಿ ಮತ್ತೆ |ಜಗದ ಜನಕಪುರಂದರವಿಠಲನೆಂದು9
--------------
ಪುರಂದರದಾಸರು