ಸದ್ಬಾವಮಾಡಿ ಸ್ಥಿರ ಸದ್ಗುರು ತಾನಿದ್ದಲ್ಲಿ ದೂರ ಸಾರ ಸದ್ಗೈಸುವ ಮನೋಹರ ಧ್ರುವ ಕಣ್ಣಿಂದ ಕಡಿಯಲಿಲ್ಲ ಚೆನ್ನಾಗೆಲೆವೆ ನೋಡಿ ಉನ್ನಂಥ ಮಹಿಮ ಪೂರ್ಣ ತಾನೆತಾನಾಗಿಹ್ಯ ಕೂಡಿ ಉನ್ಮನವಾಗಿ ಬ್ಯಾಗ ಘನಸುಖ ಬೆರೆದಾಡಿ ಪುಣ್ಯಕ ಪಾರವಿಲ್ಲ ಖೂನದೋರುದಿದರಡಿ 1 ಸದ್ಬಕ್ತಿಗಿದೇ ಕೀಲ ಸಾಧಿಸುವದೀ ವಿಚಾರ ಸದ್ಗತಿಗಿದೆಮೂಲ ಸಾಧುಜನರ ಸಹಕಾರ ಸಾಧಕರ ಸುಶೀಲ ಬುಧಜನರ ಮಂದಾರ ಸದ್ಫನದ ಕಲ್ಲೋಳ ವಸ್ತುದೋರುವ ವಿವರ 2 ಗುರುದಯದಿಂದ ನೋಡಿ ಇದೆರಿಟ್ಟುವಂತೀ ಖೂನ ಕರುಣಾಳು ಸ್ವಾಮಿ ನಮ್ಮ ತಾನೆದೋರಿದ ಸಾಧನ ತರಣೋಪಾಯಕ ಪೂರ್ಣ ತೋರುದಿದನು ಸಂಧಾನ ತರಳಮಹಿಪತಿಗಿದೆ ಇಹ್ಯ ಪರಕ ನಿಧಾನ 3
ಹಣ್ಣು ಕೊಳ್ಳಿರೋ ಪುಣ್ಯವಂತರು ಹಣ್ಣು ಕೊಳ್ಳಿರೋ ಹಣ್ಣು ಕೊಳ್ಳಿರಯ್ಯಾನ್ನಂತ ಗುಣಮಹಿಮೆಯುಳ್ಳ ಧ್ರುವ ಹಣ್ಣು ಬಂದದೆ ನೋಡ್ಯಾನಂದೋ ಬ್ರಹ್ಮಾಪಾಟಿಯಿಂದ ಕಣ್ದೆರದು ಕೊಂಡವರು ಧನ್ಯ ಧನ್ಯರೊ 1 ಹಣ್ಣಿಗೊಂದು ಹೆಸರು ಇಲ್ಲ ಇನ್ನೊಂದು ಕೊಸರು ಇಲ್ಲ ಚೆನ್ನಾಗಿ ಉನ್ಮನವಾಗಿ ಹಣ್ಣ 2 ಅಣ್ಣಗಳ ಬಂದು ಕಣ್ಣುಗೆಟ್ಟು ಹೋಗಬ್ಯಾಡಿ ಸಣ್ಣ ದೊಡ್ಡರೊಳಗಿಹ್ಯ ಹಣ್ಣ 3 ಉತ್ತುಮರುದ್ದೇಶವಾಗಿ ಮತ್ತೆ ಹತ್ತುಭಾರೆ ತುತ್ತಿಗೊಮ್ಮೆ ಬಾಯಿದೆರೆವ ಹಣ್ಣು 4 ಬಿತ್ತಿಬೆಳೆದ ಫಲವಲ್ಲ ಹೊತ್ತುಮಾರುವದಲ್ಲ ಚಿತ್ತದೊಳಗ್ಹತ್ತಿಲಿಹ ಹಣ್ಣು 5 ನಾಲ್ಕು ಮಂದಿ ತಿಳಿಯದೆ ಹೋಕಹೋದರಾರು ಮಂದಿ ಪುಕ್ಕಸಾಟಿ ದಣಿದರ್ಹದಿನೆಂಟು ಮಂದಿ ಕಾಣಿರೋ 6 ಹಣ್ಣು ಕೊಂಡು ಮಹಿಪತಿಯ ಪುಣ್ಯ ಪೂರ್ವಾಜಿತ ತಾನೆಧನ್ಯ ಧನ್ಯವಾದ ಗುರುಕೃಪೆಯಿಂದ ಕಾಣಿರೋ 7