ಕಾಯೊ ಕಾಯೊ ಕರುಣಕಾರ ಗೋವಿಂದ
ಕಾಯೊ ನಮ್ಮ ಕೃಪಾಸಿಂಧು ಹರಿ ಮುಕುಂದ ಧ್ರುವ
ಬೊಮ್ಮನಾ ಪಡೆದ ಪರಾವರ ದೊರಿಯೆ
ಸಮ್ಯಜ್ಞಾನವಿತ್ತು ಕಾಯೊ ಮುರಾರಿಯೆ
ನಿಮ್ಮ ವಿನಾ ಅನ್ಯಪಥವ ನಾನರಿಯೆ
ನಮ್ಮ ದೈವ ನೀನಹುದೊ ನರಹರಿಯೆ 1
ದುರಿತ ಪರಿಹರಿಸೊ
ಭಾವ ಭಕ್ತಿಯೊಳೂ ಮನಪೂರ್ಣವಿರಿಸೊ
ಕಾವಕರುಣನೆ ನಿಮ್ಮ ದಯ ಬೀರಿಸೊ
ದಿವಾರಾತ್ರೆಯಲಿ ನಿಮ್ಮ ಸ್ಮರಣಿಲಿರಿಸೊ 2
ಕಾಯೊ ಕಾಯೊ ಕೊಟ್ಟು ನಿಮ್ಮ ನಿಜಧ್ಯಾನವ
ಕಾಯೊ ಕರುಣಿಸಿ ಎನ್ನ ಜೀವನದ
ಕಾಯೊ ದಯದಿಂದ ಎನ್ನ ಅಭಿಮಾನ
ಕಾಯೊ ನಿಜ ದಾಸ ಮಹಿಪತಿ ಪ್ರಾಣವ 3