ಸ್ವಾಮಿ ನಿಮ್ಮ ಕರುಣ ನಮ್ಮ ಸರ್ವಾಭರಣ
ಸ್ವಾಮಿ ನಿಮ್ಮ ಚರಣ ನಮ್ಮ ಜನ್ಮೋದ್ಧಾರಣ ಧ್ರುವ
ಸ್ವಾಮಿ ನಿಮ್ಮ ದಯ ನಮ್ಮ ಹಿತೋಪಾಯ
ಸ್ವಾಮಿ ನಿಮ್ಮ ಭಯ ನಮ್ಮ ಪುಣ್ಯೋದಯ 1
ಸ್ವಾಮಿ ನಿಮ್ಮ ಖೂನ ನಿಜಸ್ಥಾನ
ಸ್ವಾಮಿ ನಿಮ್ಮ ಙÁ್ಞನ ನಿಜಧ್ಯಾನ 2
ಸ್ವಾಮಿ ನಿಮ್ಮ ನೋಟ ನಮ್ಮ ಮನದೂಟ
ಸ್ವಾಮಿ ನಿಮ್ಮ ಮಾಟ ನಮ್ಮ ಸುಖದಾಟ 3
ಸ್ವಾಮಿ ನಿಮ್ಮ ನಾಮ ನಮ್ಮ ಅತಿಪ್ರೇಮ
ಸ್ವಾಮಿ ನಿಮ್ಮ ನೇಮ ನಮ್ಮ ನಿಜಾಶ್ರಮ 4
ಸ್ವಾಮಿ ನಿಮ್ಮ ಸೋಹ್ಯ ನಮ್ಮ ನಿಜಾಶ್ರಯ
ಸ್ವಾಮಿ ನಿಮ್ಮ ಸಾಹ್ಯ ಮಹಿಪತಿ ಮನೋತ್ರಾಹ್ಯ 5