ಒಟ್ಟು 119 ಕಡೆಗಳಲ್ಲಿ , 8 ದಾಸರು , 112 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾಕು ಜನ್ಮದ ಸುಖವು ಸಾಕಿನ್ನು ಹರಿಯೇ ಪ ಅನೇಕ ಜನ್ಮದ ಸುಖ ಬೇಡ ಹರಿಯೇ ಅ.ಪ ಹದಿನೆಂಟು ಸಾಸಿರ ವಿಧವಿಧ ಜನ್ಮವ ಮೊದಲು ಕಳೆಯುತಲೀಗ ನರನಾಗಿ ಜನಿಸೀ ಕ್ರೋಧ ಲೋಭಗಳಿಂದ ಮದ ಮಾತ್ಸರ್ಯಗಳಿಂದ ಅಧಿಕ ಮೋಹಿತನಾದೆ ಪದುಮಾಕ್ಷ ಪರಂಧಾಮಾ 1 ನರಜನ್ಮ ಹಿರಿದೆಂದು ಅರಿತವÀರು ಪೇಳ್ವರು ಹರಿ ನಿನ್ನ ನುತಿಸಿ ಪಾಡುವ ಭಕ್ತ ಜನಕೆ ಪರಮಪಾತಕ ಗೈದು ನರಕಕೆ ಪೋಪೆನ್ನ ಮರಳಿ ಕಳುಹಲಿಬೇಡ ಧರಣಿಗೆ ದೇವ ದೇವ 2 ನರಕದೆ ಸುಖವುಂಟು ಧರೆಯಲ್ಲಿ ಸುಖವಿಲ್ಲ ಕರುಣಾಕರ ದೇವ ಸಿರಿಕಾಂತನೇ ಧರೆಯೊಳು ನಾನಿಹೆ ಅರೆಘಳಿಗೇ ನಿನ್ನ ಪರಮನಾಮಾವಳಿಯ ಸ್ಮರಣೆಯ ಕೊಡುಸಾಕು 3 ಗಂಗೆಯ ಜನಕನೆ ಮಂಗಳ ಮೂರುತಿ ಮಾಂಗಿರಿವರವಾಸ ಶ್ರೀಶ್ರೀನಿವಾಸ ಅಂಗಜಾತನ ತಾತ ಶೃಂಗಾರ ಪೂರಿತ ಭಂಗ ಮಾಡಿಸಬೇಡ ರಂಗೇಶ ಭವಬೇಡ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸಿರಿ ಚರಣದಲ- ಪಾರ ಭಕುತಿಯನೀಯೋ ತವ ಸೇವಕನೆನಿಸಿ ಕೀರುತಿಯನು ಪಡೆಯೋ ಭವಕ್ಲೇಶ ಕಳೆಯೊ ಪ ಸೂರಿ ಸುಬ್ಬಣಾಚಾರ್ಯಕರಸ- ರೋರು ಹಗಲಲಿ ಪೂಜೆಗೊಳುತಲಿ ಚಾರುತರ ಶ್ರೀ ಜಯಮಂಗಳಿಯ ತೀರದೊಳಿರುವ ವೀರ ಮಾರುತಿ ಅ.ಪ. ಪ್ರತಿ ವರುಷ ಮಾಘಸಿತ | ನವಮಿ ದಿನದೊಳು ನೀ- ನತಿವಿಭವದೊಳು ನಗುತ | ಭಕುತರಿಷ್ಟವ ಸಲಿಸೆ ರಥದೊಳಗೆ ಕುಳ್ಳಿರುತ | ವಿಧ ವಿಧ ವಾದ್ಯಗಳ ತತಿಯನಾಲೈಸುತ | ಅತಿ ಮೋದಬಡುತ ಪರಿ ಸಂ- ಸ್ತುತಿಸೆ ಹಿಗ್ಗುತಲವರ ಸ್ವಮನೋ- ರಥಗಳ ನೀ ಸಲಿಸುವೆನೆನುತಲಿ ಅತುಳ ವಿಕ್ರಮದಭಯ ಹಸ್ತದಿ ಕೃತಿರಮಣ ಸಿರಿವರ ಹರಿಯನನು ಮತವ ಪಡೆಯುತ ರಥವ ನಡೆಸಿ ಚತುರ ದಿಕ್ಕಲಿ ಬಿಜಯ ಮಾಡುತ ಸತತ ಹರುಷವಗರೆವ ದೇವ 1 ರಕ್ಕಸಕುಲ ತಮ ಭಾನು | ತಾಮಸರ ಧ್ಯಾನಕೆ ಸಿಕ್ಕುವನಲ್ಲ ನೀನು | ಸುಜನರ ಹೃದಯದೊಳು ಅರ್ಕನೊಲು ಪೊಳೆವನು | ಹರಿಸಿರಿಗಾಳುಳಿದು ಬಕ್ಕ ದಿವಿಜರಿಗಿನ್ನು | ಗುರುಬಲ್ಲೆ ನಾನು ಚಿಕ್ಕ ರೂಪವಗೊಂಡು ಲಂಕೆಯ ಪೊಕ್ಕು ರಾಮನ ಸತಿಯ ಕಂಡು ತುಕ್ಕಿ ವನವನು ಸೂರೆ ಮಾಡಿ ಉಕ್ಕಿನ ಧ್ವಜಸ್ತಂಭದಿಂದ ಸೊಕ್ಕಿ ಬಂದ ದನುಜವ್ರಾತವ ಕುಕ್ಕಿ ಕೆಡಹಿ ಪುರವನುರಹಿ ಅಕ್ಕರದ ಮಣಿಸಹಿತ ಬಂದು ಪಕ್ಕಿದೇರನಿಗೆರಗಿ ನಿಂದೆ 2 ತುತಿಸ ಬಲ್ಲೆನೆ ನಾನು | ನಿನ್ನಯ ಸುಗುಣಗಳ ತತಿಗಳೆಲ್ಲವನು | ತ್ರಿಪುರ ಸುಂದರಿ ಪಾ- ರ್ವತಿ ಪತಿಯ ಪಡೆದವನು | ರಂಗೇಶವಿಠಲಗೆ ಅತಿಪ್ರೀತಿಸುತ ನೀನು | ನಿಷ್ಕಾಮಯುತನು ಪತಿತರನುದ್ಧರಿಸಲು ನೀ ಸಿರಿ ಪತಿಯ ಮತದೊಳು ಹನುಮ ಭೀಮ ಯತಿಯ ರೂಪವ ತಾಳಿ ಹರುಷದಿ ಕ್ಷಿತಿಯ ಭಾರವ ಹರಸಿ ಸಲಹಿದೆ ಅತುಳ ಮಹಿಮ ನಿನ್ನಪರಿಮಿತ ಶ ಕುತಿಗೆ ನಮೊ ನಮೊ ವಾಯುತನಯನೆ ಸತತ ಮುದದೊಳು ನಿನ್ನ ಸ್ಮರಿಸುವ ಮತಿಯ ಪಾಲಿಸು ಪತಿತ ಪಾವನ 3
--------------
ರಂಗೇಶವಿಠಲದಾಸರು
ಸುಖವನು ಸರ್ವದ ಬಯಸಲದೇನೆಂದು ನೀ ತಿಳಿದಿಹೆಯಣ್ಣಾ ಪ ಸುಖ ಬೇಕಾದರದರ ಗೂಢದ ನೆಲೆಯ ನೀ ಕಂಡ್ಹಿಡಿಯಣ್ಣಾ ಅ.ಪ. ಸಕ್ಕರೆ ತುಪ್ಪ ಹಾಲ್ಮೊಸರಿನೂಟವು ಸುಖವಹುದೇನಣ್ಣ ಬೊಕ್ಕಸ ಬರಿದಾಗದಲೆ ಸದಾ ರೊಕ್ಕ ತುಂಬಿಹುದೇನಣ್ಣ ಅಕ್ಕಪಕ್ಕದ ರೂಪವತಿಯರ ಕಣ್ಣೋಟದೊಳೇನಿದೆಯಣ್ಣ ಚಿಕ್ಕತನದ ಚಲ್ಲಾಟಗಳೋ ನಿರತನಾಗಿಹುದೇನಣ್ಣ 1 ಚರ ಸ್ಥಿರ ಸ್ವತ್ತುಗಳ ನೀ ಗಳಿಸಿ ಧನಿಕನೆನಿಸುವುದೇನಣ್ಣ ದೊರೆತನ ಬಯಸಿ ನೀ ದರ್ಪವ ತೋರುತ ಬಾಳುವುದೇನಣ್ಣ ಪರಿಪರಿ ಬಣ್ಣದ ಪಾವುಡ ಧರಿಸಿ ನೀ ಮೆರೆಯುವುದೇನಣ್ಣ ಕರಿ ತುರಗ ರಥ ಪಲ್ಲಕ್ಕಿಯಲಿ ಕುಳಿತು ಚರಿಸುವುದೇನಣ್ಣ 2 ಪರಿ ಸುಖಗಳೆಲ್ಲವು ತಪ್ಪಲು ನೀನಳುವಿಯೇತಕ್ಕಣ್ಣ ತಾಪತ್ರಯಂಗಳಂಕುರಿಸಲಿಕವೆಲ್ಲವು ಬೀಜಗಳೆ ಅಣ್ಣ ಪಾಪ ರಾಸಿ ಬೆಳೆಯಲಿವೆ ಮೂಲ ಕಾರಣವೆಂದರಿಯಣ್ಣ ಆಪತ್ತುಗಳು ಬಿಡದೆ ಬಂದಡರಿ ಬಹುತಾಪಗೊಳಿಪವಣ್ಣ3 ಈ ಸುಖಗಳೆಲ್ಲವು ಬಹುಕಾಲವಿರವು ಶಾಶ್ವತವಲ್ಲಣ್ಣ ಆಸೆಯ ತೋರಿಸಿ ನಿನ್ನನು ಬಹುಮೋಸಗೊಳಿಪವು ಕೇಳಣ್ಣ ಹೇಸಿಕೆಗಿಂತವು ಕಡೆಯಾಗಿಹವೆಂದು ದೃಢದಿ ನಂಬಿರಣ್ಣ ಸಾಸಿರ ನಾಮದ ರಮೇಶನ ಸ್ಮರಿಸಲು ಬೇಸರ ಬೇಡಣ್ಣ 4 ಕಟ್ಟಿಕೊಂಡ್ಹೋದ ಬುತ್ತಿಯು ತಾನೆಷ್ಟು ದಿನವಿದ್ದೀತಣ್ಣ ಎಷ್ಟು ಹೇಳಿದರೇನಿ ಫಲವು ನಿನ್ನಲಿ ನೀನೆ ತಿಳಿಯಣ್ಣ ಗುಟ್ಟಿನಲಿ ಮನಮುಟ್ಟಿ ಯೋಚಿಸಲದುವೆ ಬಯಲಾಗುವುದಣ್ಣ ದಿಟ್ಟ ರಂಗೇಶವಿಠಲನ ನಾಮವೊಂದೇ ನಿಜ ಸುಖವಣ್ಣ 5
--------------
ರಂಗೇಶವಿಠಲದಾಸರು
ಹಟವ ಮಾಡದಿರು ಕೇಳೆಲೊ ಮೂಢ ಪ ಕುಟಿಲವ ಬಿಡು ನೀ ಗಾಢ ಅ.ಪ. ಹರಿ ಸರ್ವೋತ್ತಮ ವಾಯು ಜೀವೋತ್ತಮ ಹರ ವೈಷ್ಣವೋತ್ತಮನೆನ್ನೊ 1 ಮಧ್ವ ಸಿದ್ಧಾಂತದ ಪದ್ಧತಿ ಬಿಡದಲೆ ಶುದ್ಧ ವೈಷ್ಣವರೊಳಾಡೊ 2 ಹರಿ ಶರಣರ ಚರಣ ಕಮಲಂಗಳಿಗೆ ಗರುವಪಡದೆ ನೀ ಬೀಳೊ 3 ಸಂತತದಲಿ ಶ್ರೀಕಾಂತನ ಗುಣಗಳ ಚಿಂತನೆ ಮಾಡುತ ಬಾಳೊ 4 ಮಂಗಳಾಂಗ ತ್ರಿಜಗಂಗಳ ಪೊರೆವವ ರಂಗೇಶವಿಠಲನೆನ್ನೊ 5 ನೆಲವಿತ್ತ ದಯವಂತ ಶ್ರೀಕಾಂತ 3
--------------
ರಂಗೇಶವಿಠಲದಾಸರು
ಹರಿ ನಿನ್ನ ದಾಸರ ಸೇವೆಯ ಕರುಣಿಸೆನಗೆ ಸುರಪತಿಯ ನಾನೊಲ್ಲೆನೈ ಪ ಸ್ಮರನ ಹಾವಳಿ ಬಿಡಿಸಿ ಗುರುಭಕ್ತಿಯನು ಕೊಟ್ಟು ನಿರುತವು ನಿನ್ನ ನಾ ಸ್ಮರಿಸುವಂದದಿ ಮಾಡು ಅ.ಪ ಎಷ್ಟು ಸ್ಥಿರ ಮಾಡಿದಾಗ್ಯು ಎನ್ನ ಮನ ಬಟ್ಟ ಕುಚೆಯರ ಬಲೆಗೆ ಸಿಲುಕುತಲಿ ಬಿಟ್ಟು ನಿನ್ನಯ ಧ್ಯಾನ ಕೆಟ್ಟುಪೋಗುತಲಿದೆ ದಿಟ್ಟ ನಿನ್ನ ಮಗನ ಬಲುಹಿನ್ನೆಷ್ಟೆಂದು ಪೇಳಲೊ 1 ಕುಸುಮಗಂಧಿಯರ ಓರೆನೋಟವೆಂಬ ಮಸೆದ ಕಣೆಯ ತಾನು ಪೂಡುತಲಿ ಎಸೆ ಮೋಹತಿಗೆ ನಾ ಸೈರಿಸಲಾರೆನೋ ಬಿಸಜನಾಭನೆ ನಿನ್ನ ಸುತಗೆ ಪೇಳೋ ಬುದ್ಧಿ 2 ಅಂಗನೆಯರ ಸವಿ ನುಡಿಗಳಿಗೆ ನಾ ಮರುಗಿ ಭೃಂಗದಂತವರ ಬಲೆಗೆ ಬೀಳದಂತೆ ಸಂಗ ಸುಜನರಲ್ಲಿ ಇತ್ತು ಕಾಯೊ ದೇವ ಅಂಗಜಪಿತ ಶ್ರೀ ರಂಗೇಶವಿಠಲನೇ 3
--------------
ರಂಗೇಶವಿಠಲದಾಸರು
ಹರಿಯೇ ಪೊರೆಯದಿಹುದು ಸರಿಯೆ | ಎನ್ನ ಮರೆತೆ ಯಾತಕೊ ನಾನರಿಯೆ ಪ ಸೂಕರ ಯೋನಿಯಲಿ ಬಂದು | ನಾನು ಮನುಜನಾಗಿ ನಿಂದಿಹೆನಿಂದು ನಿನ ಬೇಡಿಕೊಂಬೆ ದಯಸಿಂಧು | ಎನ್ನ ಪುನಹ ಪುಟ್ಟಿಸಬೇಡವೆಂದು 1 ಮನಸು ವಚನ ಕಾಯಗಳಿಂದ | ನಿನ್ನ ಅನುಚರನಾಗಿಹೆ ಮುದದಿಂದ ದನುಜಾರಿ ಬಿಡಿಸೆನ್ನ ಬಂಧ | ಭವ- ಜನಿತವಾಗಿಹ ಜಾಲದಿಂದ 2 ಹಲವು ಮಾತೇಕೊ ಮಾಲೋಲ | ಮೌನಿ ಅಲವ ಬೋಧಾರ್ಚಿತ ಗೋಪಾಲ ಕಲುಷ ರಾಸಿಗಳನೆಲ್ಲ ಕಳೆದು ಸಲಹೈಯ್ಯಾ ರಂಗೇಶವಿಠಲ 3
--------------
ರಂಗೇಶವಿಠಲದಾಸರು
ಶ್ರೀಮಾಧವ ದಾಮೋದರ ನಾಮಾರ್ಚಿತಕಾಮಾಸೋಮಾನನದಾಮಾ ರಿಪುಭೀಮಾ ಎಚ್ಚರಿಕೆ ಪಬೃಂದಾರಕಬೃಂದಾರ್ಚಿತ ವಂದಿತ ಮುಚುಕುಂದಸುಂದರ ರಥ ವಂದಿತ ನವಕುಂದಾ ಎಚ್ಚರಿಕೆ 1ಗಂಗಾಪದರಂಗೇಶ ಭುಜಂಗಾರಿತುರಂಗಶೃಂಗಾರ ಶುಭಾಂಗ ಭವಭಂಗ ಎಚ್ಚರಿಕೆ 2ಮಾರಾರಿಸಮಾಧಿತವಾರಾಸಿಗಭೀರಸೂರ ಸುಕುಮಾರಾ ರಣಧೀರಾ ಎಚ್ಚರಿಕೆ 3ಶೇಷಾಚಲ ಭೂಷಾಹತದೋಷಾ ಮೃದುಭಾಷಾಭಾಷಾಪತಿಪೋಷಾ ದಶವೇಶಾ ಎಚ್ಚರಿಕೆ 4ಶ್ರೀಮದಖಿಲಾಂಡಕೋಟಿ ಬ್ರಹ್ಮಾಂಡನಾಯಕಆದಿಮಧ್ಯಾಂತರಹಿತ ಘನಸಾರವಿಲಸನ್ಭ್ರೂಮಧ್ಯಕಸ್ತೂರಿ ತಿಲಕೋಜ್ವಲಾ ದಿವ್ಯ ಪೀತಾಂಬರಧಾರೀಶ್ರೀಯಲಮೇಲ್‍ಮಂಗಾ ಮನೋಹರಶ್ರೀಭಾರ್ಗವಾಸರ ಭಜನೋಲ್ಲಾಸಾಶ್ರೀಚಾಮರಾಟ್ಪಾಲಿತ ಸತ್ಸಂಪ್ರದಾಯ ಸುಜ್ಞಾನಬೋಧಿನೀ ಸಮಾಜೋದ್ಧಾರಕಾ ಎಚ್ಚರಿಕೆ 5
--------------
ತುಳಸೀರಾಮದಾಸರು