ಎಸೆವ ಸಮುದ್ರವ ಮಥನ ಮಾಡಿತಯ್ಯಾ ನಿನ್ನ ನಾಮ ಹರಿ ಶಶಿಧರ ಶಿವನಿಗೆ ಶಾಂತಿಮಂತ್ರಾಯ್ತಯ್ಯಾ ನಿನ್ನ ನಾಮ ಪ ಚೋರನೆನಿಸಿವನ ಸೇರಿಕೊಂಡವನಿಗೆ ನಿನ್ನ ನಾಮಾ ಪಾರ ಜ್ಞಾನವಿತ್ತು ಮುಂದಕ್ಹಾಕಿತಯ್ಯಾ ನಿನ್ನ ನಾಮ1 ಮೀರಿದ ನಿನ್ನ ಮಾಯೆಗೆ ಸಿಲ್ಕಿದ್ಯೆತಿವರಗೆ ನಿನ್ನ ನಾಮ ಭೂರಿಕರುಣದಿನೆರಗಿ ರಕ್ಷಿಸಿತಯ್ಯಾ ನಿನ್ನ ನಾಮ 2 ಅಮೃತ ಮಾಡುಣಿಸಿ ಪಾಲಿಸಿತಯ್ಯಾ ನಿನ್ನ ನಾಮ 3 ಕಡುರೋಷದೆಸೆದ ವಜ್ರಾಯುಧದೆಚ್ಚೆ ನಿನ್ನ ನಾಮ ಸಿಡಿ ಮುಳ್ಳಿಗಿಂತ ಕಡೆಮಾಡಿಬಿಟ್ಟಿತಯ್ಯಾ ನಿನ್ನ ನಾಮ 4 ನೂರುಯೋಜನದ ವಿಸ್ತೀರ್ಣದ್ವಾರಿಧಿಯ ನಿನ್ನ ನಾಮ ತೋರಿಸಿತೊಂದು ಕಿರಿ ಸರೋವರ ಸಮಮಾಡಿ ನಿನ್ನ ನಾಮ 5 ಮೀರಿದ ದೈತ್ಯರಪಾರಂಗರುವಮಂ ನಿನ್ನ ನಾಮ ಹೀರಿ ಕ್ಷಣದಿ ಸುರಲೋಕ ಸೇರಿಸಿತಯ್ಯಾ ನಿನ್ನ ನಾಮ 6 ತ್ರಿಣಯರ್ಹೊಗಳಲು ಶಕ್ತಿ ಸಾಲದ ಪಟ್ಟಣ ನಿನ್ನ ನಾಮ ಅಣುಗಿಂತ ಅಣುಮಾಡಿ ತೋರಿಸಿತ್ಹನುಮಂಗೆ ನಿನ್ನ ನಾಮ 7 ಅಸಮಪರಾಕ್ರಮ ಅಸುರಕುಲಾಳಿಯಂ ನಿನ್ನ ನಾಮ ನಶಿಸೆ ಶಿವಪುರ ಭಸ್ಮಮಾಡಿತಯ್ಯಾ ನಿನ್ನ ನಾಮ 8 ಪಕ್ಷಿಗಮನ ಪಾಂಡುಪಕ್ಷನೆನಿಸಿತಯ್ಯಾ ನಿನ್ನ ನಾಮ ಅಕ್ಷಯಾಂಬರವಿತ್ತು ಸತಿಯ ರಕ್ಷಿಸಿತಯ್ಯಾ ನಿನ್ನ ನಾಮ 9 ಕಾದು ದಳ್ಳುರಿಹತ್ತಿದೆಣ್ಣೆ ಕೊಪ್ಪರಿಗೆಯ ನಿನ್ನ ನಾಮ ಸುಧನ್ವಂಗನುಪಮ ಶೀತಲವೆನಿಸಿತು ನಿನ್ನ ನಾಮ 10 ಅರಿತು ಭಜಿಪರ ಭವರೋಗಕ್ವೈದ್ಯೆನಿಸಿತು ನಿನ್ನ ನಾಮ ಅರಿದು ಭಜಿಪೆ ನಿನ್ನವರ ಮುಕ್ತಿ ಕರುಣಿಸೋ ಸಿರಿರಾಮ 11
ಏನು ಇಲ್ಲದ ಎರಡು ದಿನದ ಸಂಸಾರಜ್ಞಾನದಲಿ ದಾನಧರ್ಮವ ಮಾಡಿರಯ್ಯ ಪ ಹಸಿದು ಬಂದವರಿಗೆ ಅಶನವೀಯಲು ಬೇಕುಶಿಶುವಿಗೆ ಪಾಲ್ಬೆಣ್ಣೆಯನುಣಿಸಬೇಕುಹಸನಾದ ಭೂಮಿಯನು ಧಾರೆಯೆರೆಯಲು ಬೇಕುಪುಸಿಯಾಡದಲೆ ಭಾಷೆ ನಡೆಸಲೇ ಬೇಕು1 ಹೊರೆಯಲು ಬೇಡಕುಳ್ಳಿರ್ದ ಸಭೆಯೊಳಗೆ ಕುತ್ಸಿತವು ಬೇಡಒಳ್ಳೆಯವ ನಾನೆಂದು ಬಲು ಹೆಮ್ಮೆಪಡಬೇಡಬಾಳ್ವೆ ಸ್ಥಿರವೆಂದು ನೀ ನಂಬಿ ಕೆಡಬೇಡ 2 ದೊರೆತನವು ಬಂದಾಗ ಕೆಟ್ಟುದ ನುಡಿಯಬೇಡಸಿರಿ ಬಂದ ಕಾಲಕ್ಕೆ ಬಲು ಮೆರೆಯಬೇಡಸಿರಿವಂತ ಶ್ರೀ ಕಾಗಿನೆಲೆಯಾದಿಕೇಶವನಚರಣ ಕಮಲವ ಸೇರಿ ಸುಖಿಯಾಗು ಮನುಜ 3 * ಕೀರ್ತನೆ ಪುರಂದರದಾಸರ ಅಂಕಿತದಲ್ಲೂ ದೊರೆತಿದೆ.
ಏನು ಪೇಳಲಿ ನಿನ್ನ ತನಯನ ಚರ್ಯವ ಮಾನಿನಿಮಣಿಯೆ ಯಶೋದೆಯ ಕೇಳೆ 1 ವಾರಿಧಿಯೊಳು ಪೊಕ್ಕು ವಿಹರಿಸುವನೆ ಮತ್ತು ಭಾರಿಯಾದ ಕ್ಷಿತಿಧರೆಯನೆ ಹೊರುವನೆ 2 ಕುಂಭಿಣಿಯನೆ ಅತಿ ಸಂಭ್ರಮದಲ್ಲಿ ತಂದು ಸ್ತಂಭವ ಭೇದಿಸಿ ಸಂಭವಿಸಿದನಲ್ಲಿ 3 ಮೂರು ಹೆಜ್ಜೆಯ ಭೂಮಿ ಬೇಡಿದನೇ ಏಳು ಮೂರು ಬಾರಿ ನೃಪತಿಗಳ ಭೇದಿಸಿದನು 4 ವಾನರರನು ಸೇರಿ ಜಾನಕಿಯನೆ ತಂದೆ ಮಾನವ ಕುಲಕೆ ಸನ್ಮಾನವ ತಂದನೆ 5 ಘೋರ ಪೂತನಿ ಪ್ರಾಣ ಹಾರ ಮಾಡಿದ ಜಾರ ಚೋರತನದಿ ಶೂರನಾದನೆ ನೋಡೆ 6 ಬತ್ತಲೆ ನಿಂತನೆ ಸಸ್ತಿಯನೇರಿದ ಮತ್ತು ನಾಮಗಿರಿ ನರಹರಿ ಇವನೆ 7