ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರತಿಯನೆತ್ತಿರಿ ಅಚ್ಯುತನಿಗೆ ಅನಂತನಿಗೆ ಗೋವಿಂದನಿಗೆ ಪ ಕಾಲ ನಿಯಾಮಕ ಕಾಲೋತ್ಪಾದಕ ಕಾಲಾತ್ಮನಿಗೆ1 ನೊಂದು ಕೌಂಡಿಣ್ಯನು ಮುಂದೋರದಲಿರೆ ಕರವ ಪಿಡಿದಾನಂದವಿತ್ತಗೆ 2 ಸಂತತ ನಡೆಯುವರಂತರ ಬಿಡಿಸುವ- ನಂತ ಮಹಿಮ ಜಯವಂತ ಶ್ರೀಕಾಂತಗೆ 3
--------------
ಲಕ್ಷ್ಮೀನಾರಯಣರಾಯರು
ಬ್ಯಾಡೋ ಒಬ್ಬರ ಮನೆಗೆ ನೀ ಪೋಗ ಬ್ಯಾಡೋ ಒಬ್ಬರ ಮನೆಗೆ ಪ ಗಾಡಿಕಾರನೆ ಕೃಷ್ಣ ಚಾಡಿ ಮಾತನು ಕೇಳಿ ಗಾಡನೆ ಕಿವಿಮುಚ್ಚಿ ಓಡಿಸಿದೆ ಗೋಪಿಯರ ಅ.ಪ ಕಟ್ಟಿದ್ದ ತುರುಕರುಗಳ ಬಿಚ್ಚಿ ಪೋಗುವದಿದು ನಿಶ್ಚಯವೆಂದು ಪೇಳ್ವರೊ ಸ್ವಚ್ಛ ಕರುಗಳ ಕಣ್ಣುಮುಚ್ಚಿ ಪಾಲೆಲ್ಲ ಕುಡಿದ ಅಚ್ಯುತನಿಗೆ ಬುದ್ಧಿ ಮತ್ತೆ ನೀ ಪೇಳೆಂಬರು 1 ಮಕ್ಕಳೆಲ್ಲರು ಕಯ್ಯೊಳು ಬಟ್ಲಲಿ ಅವ- ಲಕ್ಕಿಯ ತಿನ್ನುತಿರಲು ಘಕ್ಕನೆ ಬಡಿಯೆ ದಿಕ್ಕು ದಿಕ್ಕಿಗೆ ಚಲ್ಲೆ ಬಿಕ್ಕಿ ಬಿಕ್ಕಿ ಅಳುತಾರೆ ಗೋಪಕ್ಕ ನೀನೋಡೆಂಬರು 2 ವಾಸುದೇವಗೆ ಹರಕೆಯ ಮಾಡಿ ನವ- ನೀತ ಮೀಸಲು ಮಾಡಿರೆ ಮೀಸಲಳಿದು ಕೋತಿ ಮಾರ್ಜಾಲಗಳಿಗುಣಿಸಿ ನೀತಿ ಪೇಳುವ ಶ್ರೀನಾಥ ನೋಡೆಂಬರು 3 ಗೊಲ್ಲ ಬಾಲಕಿಯರೆಲ್ಲ ಪಾಲ್ಮೊಸರು ಮಾರೆ ಮೆಲ್ಲನೆ ಪೋಗುತಿರಲು ಗುಲ್ಲು ಮಾಡದೆ ಕವಣೆ ಕಲ್ಲಿಂದ ಕುಂಭ ಒಡೆಯೆ ಚಲ್ಲಿ ಪಾಲ್ಮೊಸರು ಸೂರೆ ನಲ್ಲೆ ನೀ ನೋಡೆಂಬರು4 ಮತ್ತೆ ಕೇಳಮ್ಮ ಯಶೋದೆ ನಾವೆಲ್ಲ ಆಣಿ ಮುತ್ತು ಪೋಣಿಸುತಿರಲು ಸುತ್ತ ಮುತ್ತಲು ನೋಡಿ ಮುತ್ತು ಸೂರೆ ಮಾಡಿದ ಕರ್ತೃ ಶ್ರೀ ಕಮಲನಾಭ ವಿಠ್ಠಲನ ನೋಡೆಂಬರು5
--------------
ನಿಡಗುರುಕಿ ಜೀವೂಬಾಯಿ
ಮಾರುತೀ ಕೊಡು ಭಕುತಿ ನುಡಿಸು ಕೀರ್ತಿ ಪ ತೋರೊ ನಿನ್ನೊಳು ಇಹ ನಿರ್ಮಲ ಮೂರುತಿಯಅ.ಪ ಶ್ರವಣಮಾಡಲು ಭಕುತಿ ಆವಕಾಲಕು ಇತ್ತು ತವಪದದಾಸರ ದಾಸ್ಯ ಕೊಡಿಸೋ ದೇವ 1 ಕೀರ್ತನದೊಳು ಹರಿಕೀರ್ತಿ ಕೊಂಡಾಡೆ ಸಂ ಕೀರ್ತನ ಭಕುತಿಗೆ ಕರ್ತದಾತ ನೀನೆ2 ಸ್ಮರಣೆಯು ಹರಿಯಲ್ಲಿ ನಿರುತವು ನಿನ್ನಲ್ಲಿ ಕರುಣಿಸಿ ಪೊರೆಯೊ ಗುರುವರ ಸುಂದರ 3 ಪಾದ ಸೇವೆಯ ಕೊಡು ಸಾದರದಿಂದಲಿ ಶ್ರೀಧರನಾ ಕೃಪಾಪಾತ್ರನೆಂದೆನಿಸಯ್ಯ 4 ಅಚ್ಯುತನಿಗೆ ನೀನಚ್ಚುಮೆಚ್ಚಾಗಿಹೆ ನಿಚ್ಚದಿ ಹರಿಪಾದರ್ಚನೆ ಮಾಡಿಸಯ್ಯ 5 ವಂದನಾಭಕುತಿ ಎನ್ನಿಂದ ನೀ ಮಾಡಿಸಿ ನಂದನಂದನಗಾನಂದಪಡಿಸೊ ದೇವ 6 ದಾಸಭಕುತಿ ಭಾಗ್ಯ ಆಶಿಸುವೆನು ನಿನ್ನ ವಾಸುದೇವನ ನಿಜದಾಸನೆ ಸರ್ವದಾ 7 ಸಖ್ಯಭಕುತಿ ಕೊಡೋ ಮುಖ್ಯಪ್ರಾಣೇಶನೆ ಮುಖ್ಯಕಾರಣ ಹರಿಯ ಮುಖ್ಯ ಪ್ರೇಮಪಾತ್ರ 8 ಆತ್ಮನಿವೇದನ ಭಕುತಿಯನ್ನು ಪರ ಮಾತ್ಮನಲ್ಲಿತ್ತು ನಿರ್ಮಲಾತ್ಮನೆಂದೆನಿಸೊ 9 ನವವಿಧ ಭಕುತಿಯ ಕೊಟ್ಟು ಸಲಹೋ ದೇವ ಅವಕಾಲಕು ಪವಮಾನ ನೀನೆ ಗತಿ 10 ಸಂಕಟ ಹರಿಪ ಶ್ರೀ ವೇಂಕಟೇಶನ ದೂತ ಭಂಟನೆಂದೆನಿಸೆನ್ನ ಸಂಕಟ ಹರಿಸಯ್ಯ11
--------------
ಉರಗಾದ್ರಿವಾಸವಿಠಲದಾಸರು