ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪೋಗದಿರಲೊ ರಂಗ-ಬಾಗಿಲಿಂದಾಚೆಗೆ |ಭಾಗವತರು ಕಂಡರೆತ್ತಿಕೊಂಡೊಯ್ವರೊ ಪಸುರಮುನಿಗಳು ತಮ್ಮ ಹೃದಯಗಹ್ವರದಲಿ |ಪರಮಾತ್ಮ ನಿನ್ನ ಕಾಣದರಸುವರೊ ||ದೊರಕದ ವಸ್ತುವು ದೊರೆಕಿತು ತಮಗೆಂದು |ಹರುಷದಿಂದ ನಿನ್ನ ಕೆರೆದೆತ್ತಿಕೊಂಬರೊ 1ಅಗಣಿತಗುಣ ನಿನ್ನ ಜಗದ ನಾರಿಯರೆಲ್ಲ |ಹಗರಣಮಾಳ್ಪರೊ ಗೋಪಾಲನೆ ||ಮಗುಗಳ ಮಾಣಿಕ್ಯ ತಗುಲಿತು ಕರೆತಂದು |ಮಿಗಿಲು ವೇಗದಿ ಬಂದು ಬಿಗಿದಪ್ಪಿಕೊಂಬರೊ 2ದಿಟ್ಟ ನಾರಿಯರು ತಮ್ಮಿಷ್ಟವ ಸಲಿಸೆಂದು |ಅಟ್ಟಟ್ಟಿ ಬೆಂಬತ್ತಿ ತಿರುಗುವರೊ ||ಸೃಷ್ಟೀಶ ಪುರಂದರವಿಠಲ ರಾಯನೆ |ಇಷ್ಟಿಷ್ಟು ಬೆಣ್ಣೆಯ ಕೊಡುವೆನೊ ರಂಗಯ್ಯ 3
--------------
ಪುರಂದರದಾಸರು
ವೈರಾಗ್ಯದಾವಾಗ್ನಿ ಉರಿಯು ಛಟಿಛಟಿಸಿತುಸರ್ವಪ್ರಪಂಚವೆಲ್ಲವ ಅಟ್ಟಟ್ಟಿ ಸುಟ್ಟಿತುಪಸತಿಸುತರು ಎಂಬ ಹೆಮ್ಮರವೀಗ ಸುಟ್ಟವುಪಿತೃ ಮಾತೃವೆಂಬ ಪಲ್ಲವ ಕರಿಕಿಟ್ಟಿತುಹಿತವೆಂಬ ಬಳ್ಳಿಗಳು ಅನಿಲ ಪುಟ್ಟವಿಟ್ಟವುಅತಿಭಾಗ್ಯವೆಂದೆಂಬ ಸಿಂಗಾರ ಹೊಗೆಯಿಟ್ಟವು1ಏಸೋ ಬಂಧುಗಳೆಂಬ ಧ್ರುಮವು ಶಿಖಿಸೋಂಕಿದವುಕ್ಲೇಶವೆಂದೆಂಬ ಕರಡವು ಭುಗಿ ಭುಗಿ ಲೆಂದವುವಾಸಗಳೆಂದೆಂಬಕುಡಿಕಿಡಿಯಾಗಿ ಉದುರಿದವುಆಸೆ ಎಂಬ ಫಲ ವಹ್ನಿಗಾಹಾರವಾದವು2ಘನಭ್ರಾಂತಿ ಎಂಬ ಪಕ್ಷಿಗಳು ಹಾರಿಹೋದವುಮನೆಯೆಂಬ ಗೂಡುಗಳು ನಿಗಿನಿಗಿಯಾದವುಬಿನುಗುಚಿಂತೆ ಎಂಬ ಹರಿಣ ಮುಗ್ಗರಿಸಿದವುಮನಸಿಜನ ಕ್ರೋಧವೆಂಬ ಕಳ್ಳರು ಸತ್ತಿಹರು3ಅಷ್ಟಮದದಾನೆ ಎಂಬುವು ಅಡವಿಯ ಹಿಡಿದವುತುಚ್ಛವಿಷಯಗಳೆಂಬ ನರಿಗಳೋಡಿದವುದುಷ್ಟಗುಣವೆಂದೆಂಬ ದುರ್ಜನ ಮೃಗವು ಚಲ್ಲಿದವುಕಷ್ಟ ತಾಪತ್ರಯದ ಕತ್ತಲು ಹರಿಯಿತು4ಇಂತು ಪ್ರಪಂಚವೆಂಬೀ ವೈರಾಗ್ಯದಾವಾಗ್ನಿಯಂತೆ ಧಗಧಗನೆ ಝಗಝಗನೆ ಸುಡುತಲಿಚಿಂತಯಕ ಚಿದಾನಂದ ಉರಿಯು ಅಖಂಡವಾಗಿಶಾಂತರೆಂಬರ ಮುಕ್ತರುಗಳ ಮಾಡಿತ್ತು5
--------------
ಚಿದಾನಂದ ಅವಧೂತರು