ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾಮತ್ರಯ ನೆನೆಯಿರೊ ಕಾಮಕ್ರೋಧವು ಹರಿದು ಬೈಲಾಗಿ ಪೋಗುವುದು ಪ ಅಚ್ಯುತಾ ಅಚ್ಯುತಾ ಎಂದು ಸ್ಮರಣೆಯನು ಮಾಡಿದರೆ ದುಶ್ಚರಿತವೆಂಬ ಮಹ ಕಾನನಕ್ಕೆ ಕಿಚ್ಚಾಗಿ ದಹಿಸುವುದು ನಿಮಿಷದೊಳಗೆ ಶುದ್ಧ ನಿಚ್ಚಳವಾಗಿದ್ದ ಸುಜ್ಞಾನ ಪಾಲಿಪದು1 ಅನಂತ ಅನಂತ ಎಂದು ಮನದಲ್ಲಿ ನೆನೆಯೆ ನಾನಾ ಭವಬಂಧ ದುಷ್ಕರ್ಮದಿ ಹೀನಾಯವನು ಕಳೆದು ಹಿತದಿಂದಲಿ ವೊಲಿದು ಆನಂದ ಆನಂದವಾದ ಫಲ ಕೊಡುವುದು. 2 ಗೋವಿಂದ ಗೋವಿಂದ ಎಂದು ಧ್ಯಾನವ ಮಾಡೆ ಗೋವಿಂದ ಕಡೆಹಾಕಿ ಸಾಕುವದು ದೇವೇಶ ಶಿರಪತಿ ವಿಜಯವಿಠ್ಠಲೇಶನ ಸೇವೆ ಸತ್ಕಾರ್ಯದಲಿ ಪರಿಪೂರ್ಣವಾಗಿಹುದು 3
--------------
ವಿಜಯದಾಸ
ನೀನ್ಯಾಕೊ ನಿನ್ನ ಗೊಡಿವ್ಯಾಕೊ ಹನುಮೇಶ ಪ ಅನ್ಯಮತಿ ಪೊಂದಿ ಮಿಥ್ಯಾಜ್ಞಾನಿಯಾಗದೆ ಪಾದ ಪೊಂದಿದ್ದರೆ ಸಾಕೊ ಅ.ಪ ಜೀವೋತ್ತಮರ ಭಾವವನನುಸರಿಸಿ ನೋವಾಗುವ ಮಾರ್ಗವ ಜರಿದು ಭಾವಜನಯ್ಯ ನಿನ್ನ ಭಾವವ ಕಂಡು ಆವಾಗಲು ಸುಖಿಪರ ಗೃಹ ಕಾವನಾದರೆ ಸಾಕು 1 ದೇಹಸ್ಥಿರವಲ್ಲ ದಹನಶೀಲಭವ ಇಹಸುಖ ಹೇಯವೆಂದು ಮೋಹಪಾಶಕೆ ಸಿಗಿಸದೆ ನಿನ್ನನುಪಮ ಮಹಿಮೆಗಳ ಕೇಳುತ ಆನಂದವಾದರೆ ಸಾಕು 2 ಮೋದತೀರ್ಥರೆ ಸದ್ಗುರು ಭೇದ ಜ್ಞಾನವೆ ಗತಿಪ್ರದ ವೇದ ಸಚ್ಛಾಸ್ತ್ರಂಗಳೆ ಸತ್ಯ ತಿಳಿದು ಆದಿ ವಿಜಯ ರಾಮಚಂದ್ರವಿಠಲನೆ ಅಗಾಧಮಹಿಮ ಮಮ ಪ್ರೀಯನೆಂಬ ಭಕ್ತಿ ಇತ್ತರೆ ಸಾಕೊ3
--------------
ವಿಜಯ ರಾಮಚಂದ್ರವಿಠಲ