ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

* ಶ್ರೀ ಪರಾತ್ಪರವಿಠಲ ಪಾಲಿಸಿವರ ಪ ಚರಾಚರಾತ್ಮಕದೇವ ಪರಮ ಪ್ರೀತಿಯಿಂದ ಅ.ಪ. ಮೂರ್ತಿ ಭಾಗವತ ಪ್ರಧಾನ ಸಾಗರೋಪಮ ಭಕ್ತಿ ಪ್ರದದೇವ ಬಾಗಿ ಬೇಡುವೆ ವಿಜ್ಞಾನರೂಪದಿ ನಿನ್ನ 1 ಭಾಗವತೋತ್ತಮರ ಪದ್ಧತಿಯಲಿ ಗುಪ್ತಸಾಧನ ಪಾಲಿಸು ಶುಕಾನುಬಂಧದಿ ಶುಕಪ್ರೇಮ ಪಾತ್ರನಾಗಿ ಸುಖಮಯನ ಭಜಿಸುತಿರಲಿ 2 ಆಪ್ತತಮ ಗುಣಸಮುದ್ರ ಶ್ರೀಜಯೇಶ- ವಿಠಲ ಪೂರ್ಣ ಪ್ರೀತಿಯಲಿ ನಿತ್ಯ ಭಾಗವತರ ಸಂಗದಲಿಟ್ಟು ನಿರುಪಮ ಸುಖನೀಡು 3 ಮರುತಾತ್ಮಜನು ನಿರುತದಿ ಭಜಿಪನು ಪರಿಪರಿ ಪಾಡಿ ಸುಖಗೂಡಿ 1 ಪತಿತ ಪಾವನ್ನ ಸತತ ಈ ನಾಮ ಗತಿಯಿಲ್ಲದವರಿಗೆ ಗತಿ ಈವ ನಾಮ ಹತವೆ ಮಾಡುತಲಿದ್ದ ಕಿತವನಿಗೊಲಿದು ಕ್ಷಿತಿಯೊಳು ಮುನಿಪತಿ ಎನ್ನಿಸಿತು ಪಥದಿ ಪಾಷಾಣವ ಪೆಣ್ಣನು ಮಾಡಿದ ಅತುಳ ಮಹಿಮನ ಹಿತನಾಮ 2 ಕುಲಶೀಲಗಳನ್ನು ಎಂದೊ ಎಣಿಸನೊ ಸುಲಭರೊಳಗೆ ಬಲು ಸುಲಭನು ಇವನು ಕಲುಷದಿ ದೂರನು ಶಬರಿಯ ಫಲವನು ಮೆಲ್ಲುತೆ ಮುಕ್ತಿಯನಿತ್ತಿಹನು ಲಲನೆಯ ಕದ್ದೊಯ್ದ ಖಳನ ತಮ್ಮನಿಗೆನೆಲವಿತ್ತ ದಯವಂತ ಶ್ರೀಕಾಂತ 3
--------------
ಜಯೇಶವಿಠಲ
ಮನದಧಿಪ ಮರೆಹೊಕ್ಕೆ ಮಹದೇವ ಪಾಹಿ ಪ ತೃಣ ಮೊದಲು ಘನದಲ್ಲಿ ಬಿಡದೆ ಹರಿಯನು ಭಜಿಪ ಅ.ಪ. ಕರುಣಾಬ್ಧಿ ನೀಡೆನಗೆ ವೈರಾಗ್ಯ ಮಹಭಾಗ್ಯ ಭಾಗವತ ಪದ ನಿನ್ನದಯ್ಯ ಕಮಲ ಮಧು ಮತ್ತ ಷಟ್ಪದ ದೊರೆಯೇ ಸರ್ವತ್ರ ನಿನ್ನಲ್ಲಿ ಹರಿಯ ತೋರಿಸಿ ಸಲಹೊ 1 ಆಪ್ತತಮ ನಿನ್ನಂಘ್ರಿ ಧ್ಯಾನದಲಿ ಇಡು ಎನ್ನ ತೃಪ್ತಿ ಅನ್ಯದಿ ಬ್ಯಾಡ ಸುಪ್ತಿರಹಿತ ಸಪ್ತೆರಡು ಭಕ್ತಿಯಲಿ ಬೆಳೆಸೆನ್ನ ಉದ್ಧರಿಸು ಮೂರ್ತಿ ದರುಶನ ಭೋಗ 2 ಮೂರುತಿಯ ಕೈಗಿತ್ತುದಾರ ಸಾಗರ ಶಂಭು ಘೋರ ಭವಹರ ಹರಿಯ ದಾಸವರ್ಯ ಮಾರಮಣ ಜಯೇಶವಿಠಲನ ಭಜನೆಯಲಿ ಸಾರ ಸುಖ ನೀಡೆನಗೆ 3
--------------
ಜಯೇಶವಿಠಲ
ಶರಣು ಹೋಗುವೆನಯ್ಯ ನಾನು ಪ ಸಿರಿ ಅಜಭವ ಶಕ್ರ ಸುರಸ್ತೋಮಗಳನೆಲ್ಲ ಸರಸದಿಂದ ಆಳ್ವ ಪರಮಪುರುಷ ಹರಿಗೆ ಶಿರಬಾಗಿ ನಮಿಸುತ ಅ.ಪ. ನಿರುತ ಆನಂದದಿ ಮೆರೆದು ಇರುವಂಥ ನಿರಜ ನಿತ್ಯನು ಆದ ಉರಗನ ಮೇಲ್ವರಗುತ ಪರಮ ಪರಾತ್ಪರ ಪರಮವೇದದ ಸಾರ ಪರಮ ಸದ್ಗುಣ ಪೂರ್ಣ ಪುರುಷಸೂಕ್ತ ವಂದ್ಯ ಪರಿಪರಿ ರೂಪದಿ ಸರ್ವತ್ರ ಇರುವಂಥ ನಿರ್ಗುಣ ನಿರಾಕಾರ ನಿರುಪಮ ನಿಸ್ಸೀಮ ನಿರುತ ತೃಪ್ತನು ಆದ ಸರ್ವಸಾರ ಭೋಕ್ತ ಸರ್ವರ ಬಿಂಬನು ಸರ್ವಗುಣ ಪೂರ್ಣ ಸರ್ವರ ಆಧಾರ ಸರ್ವೇಶ ಸ್ವತಂತ್ರ ಸರ್ವಶಬ್ದ ವಾಚ್ಯ ಸರ್ವರಿಂ ಭಿನ್ನನು ಸರಸಸೃಷ್ಟಿಯ ಮಾಳ್ವ ನೀರಜನಾಭಗೆ ಚರಣವ ಪಿಡಿಯುತ್ತ ಉರುಗಾಯನ ದೇವ ಸಲಹು ಸಲಹೆಂದು 1 ವಾರಿಯೊಳಾಡುವ ಭಾರವಹೊರುವ ಕೋರೆಯತೀಡುವ ಕರುಳಾನು ಬಗೆಯುವ ವರವಟು ಆಗುವ ಪರಶುವ ಪಿಡಿಯುವ ನಾರಿಯ ಹುಡುಕುವ ನಾರಿಯ ಕದಿಯುವ ಬರಿಮೈಯ್ಯ ತೋರುವ ತುರುಗವನೇರುವ ನಾರಿಯು ಆದವ ಭಾರತ ಮಾಡುವ ವರ ಸಾಂಖ್ಯ ಹೇಳುವ ಕರಿಯನು ಪೊರೆಯುವ ಪೋರಗೆ ಒಲಿದವ ವರ ಋಷಭನಾದ ಹರಿ ಯಜ್ಞ ನಾದವ ತರಿವ ರೋಗಂಗಳ ವರಹಂಸ ರೂಪನು ತುರುಗ ವೇಷಧಾರಿ ನಾರಾಯಣ ಮುನಿಯೆ ಗುರು ದತ್ತಾತ್ರೇಯನೆ ಪರಿಸರ ಪರಮಾಪ್ತ ಪೊರೆಯೊ ಮಹಿದಾಸನೆಂದು ಕರವೆತ್ತಿ ಮುಗಿಯುತ 2 ಪಾಪಿಯ ಪೊರೆದವಗೆ ತಾಪ ಇಲ್ಲದವಗೆ ಅಪವರ್ಗದಾತಗೆ ವಿಪನ ಏರಿದವಗೆ ಗೋಪತಿಯಾದವಗೆ ತಾಪವ ಮೆದ್ದವಗೆ ಚಾಪವ ಮುರಿದವಗೆ ಚಪಲ ಇಲ್ಲ ದವಗೆ ಕಪಟರ ವೈರಿಗೆ ಗುಪ್ತದಿ ಇರುವಗೆ ವಿಪ್ರನ ಸಖನಿಗೆ ಅಪ್ರಮೇಯನಿಗೆ ಗೋಪೇರ ವಿಟನಿಗೆ ತಾಪಸ ಪ್ರೀಯಗೆ ವಿಪ್ರಶಿಶು ತಂದವಗೆ ಮುಪ್ಪಿಲ್ಲ ದವಗೆ ತ್ರಿಪುರಾರಿ ಸಖಗೆ ಕೃಪಣ ವತ್ಸಲನಿಗೆ ತಪ್ಪು ಮಾಡದವಗೆ ಆಪ್ತತಮನಿಗೆ ಸಪ್ತ ಶಿವವ್ಯಕ್ತನಿಗೆ ಶ್ರೀಪತಿಯಾದವಗೆ ಕಪಟನಾಟಕ ಪ್ರಭು ಗೋಪಾಲಕೃಷ್ಣಗೆ ಒಪ್ಪಿಸಿ ಸರ್ವಸ್ವ ಅಪ್ಪನೆ ಅಪ್ಪನೆ ತಪ್ಪದೆ ಸಲಹೆಂದು 3 ಅನ್ನವು ಆದವಗೆ ಅನ್ನಾದ ನೆಂಬುವಗೆ ಅನ್ನದ ಖ್ಯಾತನಿಗೆ ಚಿನ್ಮಯ ರೂಪಗೆ ಬೆಣ್ಣೆಯ ಕಳ್ಳಗೆ ಅನಾಥನಾದವಗೆ ಕನಕಮಯನಿಗೆ ಅನಂತರೂಪನಿಗೆ ಉಣ್ಣದೆ ಇರುವವಗೆ ಉಣ್ಣುತ ಉಣಿಸುವವಗೆ ಜ್ಞಾನಿಗಮ್ಯನಿಗೆ ಜ್ಞಾನ ದಾಯಕನಿಗೆ ಗುಣತ್ರಯ ದೂರಗೆ ಭಾನುವ ತಡೆದವಗೆ ಆನತ ಬಂಧುವಿಗೆ ಅನುಪಮನಾದವಗೆ ತನುಮನ ಪ್ರೇರಿಪಗೆ ದಾನವ ವೈರಿಗೆ ತನ್ನಲ್ಲೆ ರಮಿಸುವನಿಗೆ ಮನ್ಮಥ ಪಿತನಿಗೆ ಪೆಣ್ಣಿನ ಪೊರೆದವಗೆ ಅಣುವಿಗೆ ಅಣುವಿಹಗೆ ಘನಕೆ ಘನ ತಮನಿಗೆ ಕಣ್ಣಿಲ್ಲದೆ ನೋಳ್ಪ ಉನ್ನತ ಪ್ರಭುವಿಗೆ ಬೆನ್ನು ಬೀಳುವೆ ನಾನು ಇನ್ನು ಕಾಯೋ ಎಂದು 4 ಹೇಯನಾಗದ ಶೃತಿ ಗೇಯನು ಸುಜನರ ಪ್ರೀಯನು ಸರ್ವರ ಕಾಯುವ ಸುಂದರ ಹಯಮುಖ ಸರ್ವದ ಪ್ರಾಯದಿ ಮೆರೆಯುವ ಗಾಯನ ಪ್ರಿಯನಾದ ಮಾಯಾರಮಣ ಭಾವ ಮಾಯೆ ಹರಿಸಿ ಮುಕ್ತಿ ಭಾಗ್ಯ ಭಕ್ತರಿಗೀವ ತೋಯಜಾಂಬಕ ಸುರ ನಾಯಕರಿಗೆ ಭಕ್ತಿ ತೋಯದಿ ಮುಳುಗಿಪ ಶ್ರೀಯರಸಾಭಯ ದಾಯಕ ಗುರು ಮಧ್ವ ರಾಯರ ಪ್ರಿಯನಾದ ಜೇಯ ಜಯಮುನಿ ವಾಯುವಿನ ಅಂತರದಿ ನವನೀತ ಧರಿಸಿರ್ಪ ತಾಂಡವ ಸಿರಿಕೃಷ್ಣ ವಿಠಲ ರಾಯನಿಗೆ ಕಾಯ ವಾಚಮನದಿ ಗೈಯ್ಯುವ ಸಕಲವನು ಈಯುತ ನಮಿಸುತ ಜೀಯನೆ ಜೀಯನೆ ಕಾಯಯ್ಯ ಕಾಯೆಂದು 5
--------------
ಕೃಷ್ಣವಿಠಲದಾಸರು