ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರೇನು ಮಾಡುವರು ಅವನಿಯೊಳಗೆ | ಕರ್ಮ ಫಣಿಯಲ್ಲಿ ಬರೆದುದಕೆ ಪ ಮಾಡಿದಡಿಗಿಯು ಕೆಡಲು ಮನಿಯ ಗಂಡನು ಬಿಡಲು | ಸತಿ ತನ್ನ ಕುಣಿಸ್ಯಾಡಲು ನಿಜದಿ || ಗೋಡೆಗೆ ಬರೆದ ಹುಲಿ ಘಡಘಡನೆ ತಿನಬರಲು | ಆಡಿದ ಮತುಗಳು ಅಖಿಳಿರು ನಿಜವೆನಲು 1 ಹೊಲ ಬೇಲಿ ಮೆಯ್ದರೆ ಮೊಲ ಇರಿಯ ಬಂದರೆ | ತಲೆಗೆ ತನ್ನ ಕೈ ಪೆಟ್ಟು ತಾಕಿದರೆ || ಹೆರಳು ಹಾವಾದರೆ ಗೆಳೆಯ ರಿಪುವಾದರೆ | ಕಲಿಸಿದ ಅವಲಕ್ಕಿ ಕಲಪರಟಿ ನುಂಗಿದರೆ 2 ಹೆತ್ತ ತಾಯಿ ಹಿಡಿದು ಮಕ್ಕಳಿಗೆ ವಿಷ ಹಾಕಿದರೆ | ಪೆತ್ತ ತಂದೆಯು ಹೊರಗೆ ಮಾಡಿದರೆ || ತೊತ್ತು ಅರಸಿಗೆ ಪ್ರತ್ಯುತ್ತರವನಾಡಿದರೆ | ಕತ್ತಲೆ ಬೆನ್ನಟ್ಟಿ ಕರಡ್ಯಾಗಿ ಬಂದರೆ 3 ಕಣ್ಣವೊಳಗಿನ ಗೊಂಬಿ ಕಾದ ಬಂದರೆ | ಹೆಣ್ಣಿನ ಹರಟೆ ಹೆಚ್ಚಾದರೆ | ಅನ್ನವನು ಉಣ್ಣಲು ಅಜೀರ್ಣವಾದರೆ | ಪುಣ್ಯಕ್ಷೇತ್ರಗಳಲ್ಲಿ ಪಾಪ ಅಟ್ಟಿಸಿದರೆ 4 ಏರಿ ಕುಳಿತ ಕುಂಬಿ ಎರಡಾಗಿ ಮುರಿದರೆ | ವಾರಿಧಿಗಳು ಮೇರೆ ಮೀರಿದರೆ || ಆರಿದ ಇದ್ದಲಿಗಳು ಅಗ್ನಿಯಾದರೆ | ನಮ್ಮ ವಿಜಯವಿಠ್ಠಲನಿರುವ ತನಕ 5
--------------
ವಿಜಯದಾಸ
ಪಾಪಾತ್ಮ ನಾನಲ್ಲ ಪಾಪವೆನದಿನಿತಿಲ್ಲ ಪ ಶ್ರೀಪತಿಯೆ ನಿನಗೆ ನೀನೇ ಮಾಡಿಕೊಂಡೆ ಅ ವರದನು ಕರದಲಿ ಉಷ್ಣಜಲ ಮೃತ್ತಿಕೆಯತರಲು ಕೈ ಸುಟ್ಟಾಗ ಪಣೆಯ ಠೊಣೆದು ಬೈದೆಮರಳಿ ನಾಚಿಕೆ ಇರದೆ ಚರಣಕೆ ಪಾವುಗೆ ತಂ-ದಿರಿಸಿದಪರಾಧ ಎನ್ನದೊ ನಿನ್ನದೊ ದೇವ 1 ಬಂದ ಭೃಗು ಮುನಿ ಎದೆಯನೊದೆಯೆ ಆತಗೆ ಪಾಪಅಂದು ಮೂದಲಿಸಿ ಬೈದವರಿಗೆ ದೋಷನಿಂದುದೇ ಹಣೆಯೊಳಗೆಸೆಯೆ ಭೀಷ್ಮಂಗಘವುಹೊಂದಿದಾ ಪಾಂಡವರಿಗೆ ಕುಂದು ಬಂದಿತೆ ದೇವ2 ಕುರುಡನಿಗೆ ದಾರಿಯನು ತೋರದೆ ಆತಗೆ ಮುನಿದುದರಿಗೆ ನೂಕಿದಡೆ ಅವನು ಏನು ಮಾಡುವನುಶಿರಕೆ ತಪ್ಪಾಗಿ ಗುರಿಯಿಡಲದು ಸರಳ ತಪ್ಪೆಅರಸನಾಳ ಕೊಂದಡೆ ಆರೇನು ಮಾಡುವರು 3 ಕುಣಿಸಿದರೆ ಆಡುವುದು ಬೊಂಬೆ ಸೂತ್ರಮುಖದಿಇನಿತುಂಟೆ ಕಪಟನಾಟಕ ಸೂತ್ರಧಾರಿಇನಿತಾಡಿಸಿದರಾಡುವೆ ಪಾಪ ಪುಣ್ಯಂಗಳಿಂದಎಣಿಕೆಗಾನಲ್ಲ ನೀನಲ್ಲದಿಲ್ಲ 4 ತಂದೆತಾಯಿಗಳು ತಮ್ಮ ಕಂದಗೆ ಸರ್ಪಮುಖದಿಂದ ಕಚ್ಚಿಸಲು ಆ ತಪ್ಪು ಕಂದನದೆಮುಂದರಿಯದಜ್ಞಾನಿಯೆಂದು ಕ್ಷಮಿಸೆಲ್ಲವನು ತಂದೆ ವೇಲಾಪುರದ ಆದಿಕೇಶವನೆ5
--------------
ಕನಕದಾಸ
ಯಮದೂತರಿನ್ನೇನು ಮಾಡುವರು ಪೇಳೊರಮೆಯರಸ ರಘುನಾಥ ನಿನ್ನರಿಕೆಯುಳ್ಳವರಿಗೆ ಪ ಮಂಡಲದೊಳಗೊಬ್ಬ ಜಾರಸ್ತ್ರೀಯಳು ತನ್ನಗಂಡನರಿಕೆಯಿಂದ ವ್ಯಭಿಚಾರಗೈಯೆಮಂಡಲ ಪತಿಯು ಶೋಧಿಸಿ ಹಿಡಿದೆಳೆ ತಂದುಭಂಡು ಮಾಡಲು ಬೆದರುವಳೆ ಕೇಳೆಲೊ ಹರಿ1 ಕಳವಿನ ಒಡವೆಯ ಒಡೆಯಗೆ ಪಾಲೀವಕಳಬಂಟ ಕನ್ನವ ಕೊರೆಯುತಿರೆಕಳವು ಮಾಡಿದನೆಂದು ಹಿಡಿದೆಳೆತಂದರೆತಳವಾರನೇನು ಮಾಡುವನು ಕೇಳೆಲೊ ಹರಿ 2 ಮನವಚನದಲಿ ಮಾಡಿದ ಪುಣ್ಯ ಪಾಪಗಳನಿನಗರ್ಪಿಸುವೆ ಕಾಲಕಾಲದಲಿಘನ ಕೃಪಾಂಬುಧಿ ಕಾಗಿನೆಲೆಯಾದಿಕೇಶವಎನಗೆ ಆರೇನು ಮಾಡುವರು ಕೇಳೆಲೊ ಹರಿ 3
--------------
ಕನಕದಾಸ