ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀನಿವಾಸನೆ ಗಾನಲೋಲನೆ ಸಾನುರಾಗದೊಳೀಕ್ಷಿಸೈ ಜ್ಞಾನಪೂರ್ಣನೆ ಸೂನುವೆಂಬಭಿಮಾನದಿಂ ಪರಿಪಾಲಿಸೈ ಪ. ದೀನಪಾಲಕ ದಾನವಾಂತಕ ದೈನ್ಯದಿಂ ಮೊರೆಹೊಕ್ಕೆನೈ ಜ್ಞಾನಗಮ್ಯನೆ ಭಾನುತೇಜನೆ ನೀನೇ ಗತಿಯೆಂದೆಂಬೆವೈ ಅ.ಪ. ಸಾರಸಾಕ್ಷನೆ ಶ್ರೀರಮೇಶನೆ ಸಾರಿ ಬಾ ಭವದೂರನೇ ಗಾರುಗೊಂಡೆವು ಪಾರುಗಾಣಿಸು ನೀರಜೋದ್ಭವ ಜನಕನೆ ಕಾರ್ಯಕಾರಣ ಕರ್ತೃ ನೀನಹುದಾರಯಲ್ ಜಗದೀಶನೆ ಬೇರೆ ಕಾಣೆವದಾರ ನಿನ್ನನೆÉೀ ಸಾರೆ ಬೇಡುವೆ ದೇವನೆ 1 ಸಾರ ಸಂಗ್ರಹ ಮಾಡುತೆ ಆರ್ಯಕೀರ್ತಿಯ ಸಾರಿಪಾಡುತೆ ವೀರನಾದವ ಗೈಯುತೆ ಭೂರಿ ವೈಭವವೆಲ್ಲವಂ ಧೈರ್ಯದಿಂ ನಲವೇರೆ ಕೀರ್ತಿಸಿ ಕಾರ್ಯಸಿದ್ಧಿಯ ಪೊಂದುವೋಲ್2 ನಿರ್ಗುಣಾತ್ಮನೆ ನಿರ್ವಿಕಲ್ಪನೆ ನಿತ್ಯನಿರ್ಮಲಚರಿತನೆ ಮಾರ್ಗದರ್ಶಕನಾಗಿ ನಮ್ಮೊಳಗಾವಗಂ ಕೃಪೆ ಗೈವನೇ ಸಾರ್ವಭೌಮನೆ ಸರ್ವಶಕ್ತನೆ ಶೇಷಶೈಲ ನಿವಾಸನೇ ಸಾರ್ವಕಾಲದೊಳೋವುದೆಮ್ಮನು ಪಾರ್ವತೀಪತಿ ಮಿತ್ರನೆ 3
--------------
ನಂಜನಗೂಡು ತಿರುಮಲಾಂಬಾ
ಸರೋಜಲೋಚನೆ ಸಾರಿತ್ತ ಬೇಗನೆ ಪ. ನೀಲಕುಂತಲೆ ಬೇಗಬಾರೆ ಕೋಲನಾಡುವ ನೀಲಮೇಘಶ್ಯಾಮ ನಮ್ಮ ಪಾಲಿಸೆನ್ನುವ1 ತಂಗಿ ನಮ್ಮಯ ಅಂಗಳದೊಳು ರಂಗನಮುಂದೆ ಮಂಗಳಂ ಪಾಡುತಾವು ಸಂಗತದಿಂದೆ2 ಆರ್ಯಮಾತೆಗೆ ಭೂರಿಸಂಭ್ರಮ ತೋರಿ ಮೆರೆಯುವಾ ಶಾರದೋತ್ಸವ ಆರ್ಯಕೀರ್ತಿಯ ಸಾರವೆನ್ನುವ 3 ಶೇಷಶೈಲಾವಾಸನೊಲವಿಂ ದೇಶಮಾತೆ ಸಂ ತೋಷವಾಂತು ಬೆಳಗುವೋಲ್ ಜಯಘೋಷಗೈಯುವ4
--------------
ನಂಜನಗೂಡು ತಿರುಮಲಾಂಬಾ