ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲ್ಯಾಡಿ ಬಂದ್ಯೋ ಮುದ್ದು ರಂಗಯ್ಯಾ ನೀ - * ನೆಲ್ಯಾಡಿ ಬಂದ್ಯೋ ಎನ್ನ ಕಣ್ಣ ಮುಂದಾಡದೆ ಪ ಆಲಯದೊಳಗೆ ನೀನಾಡದೆ ಬೆಣ್ಣೆ ಪಾಲು ಸಕ್ಕರೆಯನೊಲ್ಲದೆ ಚಿಕ್ಕ ಬಾಲೇಯರೊಳು ನೀನಾಡದೆ ಬಾಲಯ್ಯ ನೀಯೆನ್ನ ಕಣ್ಣ ಮುಂದಾಡದೆ 1 ಬಿಟ್ಟ ಮುತ್ತಿನ ಬೊಗಸೆ ಕಂಗಳು ಫಣಿಯೊಳಿಟ್ಟ ಕಸ್ತೂರಿ ತಿಲಕ ಗಂಧವು ದಿಟ್ಟತನದಿ ಬರುವ ಅಂದವು ಮುದ್ದು ಕೃಷ್ಣ ನೀಯೆನ್ನ ಕಣ್ಣ ಮುಂದಾಡದೆ 2 ಅಷ್ಟದಿಕ್ಕಲಿ ಅರಸಿ ಕಾಣದೆ ಬಾಳ ದೃಷ್ಟಿಗೆಟ್ಟೆನೊ ನಿನ್ನ ನೋಡದೆ - ನ್ನೆಷ್ಟು ಪೇಳಲಿ ಹೇಳಬಾರದೆ ಶ್ರೀದ - ವಿಠಲ ನೀಯೆನ್ನ ಕಣ್ಣ ಮುಂದಾಡದೆ 3
--------------
ಶ್ರೀದವಿಠಲರು
ಎಲ್ಲ್ಯಾಡಿ ಬಂದ್ಯೋ ಎನ್ನ ರಂಗಯ್ಯಾ ನೀಎಲ್ಲ್ಯಾಡಿ ಬಂದ್ಯೋ ಎನ್ನ ಕಣ್ಣಮುಂದಾಡದೆ ಪ ಆಲಯದೊಳಗೆ ನೀನಾಡದೆ ಚಿನಿ-ಪಾಲು ಸಕ್ಕರೆ ನೀನೊಲ್ಲದೆ ಚಿಕ್ಕಬಾಲರೊಡನೆ ಕೂಡ್ಯಾಡದೆ ಮುದ್ದುಬಾಲಯ್ಯ ನೀ ಎನ್ನ ಕಣ್ಣ ಮುಂದಾಡದೆ1 ಬಟ್ಟ್ಟಮುತ್ತಿನ ಬೊಗಸೆ ಕಂಗಳು ಪಣಿಯೊ-ಳಿಟ್ಟ ಕಸ್ತೂರಿ ತಿಲಕದಂದವುದಿಟ್ಟತನದಿ ಕೂಡ್ಯಾಡಲುಪುಟ್ಟ ಕೃಷ್ಣಯ್ಯ ನೀ ಎನ್ನ ಕಣ್ಣ ಮುಂದಾಡದೆ2 ಅಷ್ಟ ದಿಕ್ಕಲಿ ಅರಸಿ ಕಾಣದೆ ಬಹಳದೃಷ್ಟಿಗೆಟ್ಟೆನು ನಿನ್ನ ನೋಡದೆ ಇ-ನ್ನೆಷ್ಟು ಹೇಳಲಿ ಕೇಳಬಾರದೆ ರಂಗ-ವಿಠಲ ನೀ ಎನ್ನ ಕಣ್ಣ ಮುಂದಾಡದೆ3
--------------
ಶ್ರೀಪಾದರಾಜರು
ನಮ್ಮ ರಂಗ ಮಧುರೆಗೆ ನಡೆತರಲು ಪ ಮಥುರೆಗೆ ನಡೆತರಲು ಅತಿ|ಹರುಷದಲಿ ಅಕ್ರೂರನೊಡನೆ| ರಥದಲಿ ಕುಳಿತು ಫಡ ಫಡಫಡಲೆಂದು| ಪಥದಲಿ ನಡಸ್ಯಾಡುತಲಿ 1 ಬಿಲ್ಲಹಬ್ಬದ ನೆವದಲ್ಲಿ|ಫುಲ್ಲಲೋಚನ ಮೋಹನ ಕೃಷ್ಣ| ಇಲ್ಲಿಗೆ ಬಂದನು ಎನುತಲಿ ಕೇಳಲು| ಎಲ್ಲರು ನಡೆದರು ನೋಡಲಾಗಿ 2 ಆಲಯದೊಳಗೆ ನಿಲ್ಲದೇ|ಬಾಲಕಿಯರು ತಮತಮ್ಮ| ಚಾಲವರುತಿಹಾ ತೊಟ್ಟಿಲೊಳಗಿನಾ|ಬಾಲಕರಿಗೆ ಮೊಲೆಗುಡದೆ 3 ಒಬ್ಬಳು ಅರೆಯಣ್ಣೆತಲೆಯಲಿ|ಒಬ್ಬಳು ತಿಗರವ ಹಚ್ಚಿದ ಮೈಯಲಿ ನಡೆದರು ಸಂಭ್ರಮದಿಂದ4 ಅಚ್ಚಮೈಯಲಿ ಕುಳಿತಿರೆ ಒಬ್ಬಳು|ಬಚ್ಚಲೊಳಗೆ ಮಜ್ಜಕನಾಗಿ ಅಚ್ಯುತನಾತುರದಿಂದಲಿ ಒಬ್ಬಳು ಎಚ್ಚರ ದೇಹದ ಬಿಟ್ಟು ನಡೆದಳು 5 ಎಲೆಳುಶಿಶುವೆಂದು ಬಗಲಿಲಿ|ಅಳತೆಯ ಮಾನವನಿರಿಸಿಕೊಂಡು| ನೆಲೆನೊಡದೇ ನಡೆದಳೊಬ್ಬಳು|ಚೆಲುವ ಕೃಷ್ಣನ ನೋಡಲಾಗಿ6 ಕದವನು ಒತ್ತಿಮುಂದಕ|ಒದಗದಿ ಕೆಲವರು ಮಾಳಿಗೆ ಏರಿ| ಸದಮಲಾನಂದಗ ತಲೆಯನು|ಬಾಗಿ ಪದುಮಕರವ ಮುಗಿದು7 ದಣ್ಣನೆ ನೋಡೀ ನೋಡುತಾ|ಕಣ್ಣುಪಾರಣೆ ಮಾಡಿಕೊಂಡು| ಮುನ್ನಿನ ದೋಷವ ಕರಗುವ ಪರಿಯಲಿ| ಪುಣ್ಯ ಸಾಮಗ್ರಿಯ ಮಾಡಿದರಂದು 8 ಕಂಡಾ ಪರಿಯ ರೂಪವಾ| ಧರಿಸಿಕೊಂಡು ಅಂತರಂಗದಲಿ|ತ್ವರಿತದಿಂದಲಿ ಧ್ಯಾಯಿಸುತಾ9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀ ಮಾಯೆಯೊಳಗೊ ನಿನ್ನೊಳು ಮಾಯೆಯೊ ಪ ನೀ ದೇಹದೊಳಗೊ ನಿನ್ನೊಳು ದೇಹವೊ ಹರಿಯೆಅ ಬಯಲೊಳಗೆ ಆಲಯವೊ ಆಲಯದೊಳಗೆ ಬಯಲೊಬಯಲು ಆಲಯವೆರಡು ನಯನದೊಳಗೊನಯನ ಬುದ್ಧಿಯ ಒಳಗೊ ಬುದ್ಧಿ ನಯನದ ಒಳಗೊನಯನ ಬುದ್ಧಿಗಳೆರಡು ನಿನ್ನೊಳಗೊ ಹರಿಯೆ1 ಸವಿಯು ಸಕ್ಕರೆಯೊಳಗೊ ಸಕ್ಕರೆಯು ಸವಿಯೊಳಗೊಸವಿಯು ಸಕ್ಕರೆ ಎರಡು ಜಿಹ್ವೆಯೊಳಗೊಜಿಹ್ವೆ ಮನಸಿನ ಒಳಗೊ ಮನಸು ಜಿಹ್ವೆಯ ಒಳಗೊಜಿಹ್ವೆ ಮನಸುಗಳೆರಡು ನಿನ್ನೊಳಗೊ ಹರಿಯೆ 2 ಕುಸುಮದಲಿ ಗಂಧವೋ ಗಂಧದಲಿ ಕುಸುಮವೋಕುಸುಮ ಗಂಧಗಳೆರಡು ಆಘ್ರಾಣದೊಳಗೊಅಸಮಭವ ಕಾಗಿನೆಲೆಯಾದಿಕೇಶವರಾಯಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೊ ಹರಿಯೆ 3
--------------
ಕನಕದಾಸ