ಒಟ್ಟು 8 ಕಡೆಗಳಲ್ಲಿ , 6 ದಾಸರು , 8 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಕ್ಷಿಸೊ ಎನ್ನ ರಕ್ಷಿಸೋ ಪ ರಕ್ಷಿಸು ಎನ್ನನು ಅಕ್ಷಯಗುಣಪೂರ್ಣ ಲಕ್ಷುಮಿರಮಣನೆ ಪಕ್ಷಿವಾಹನನೇ ಅ.ಪ ಪಾದವಿಲ್ಲದೆ ಜಲದೊಳು ಮುಳುಗಾಡಿ ವೇದಚೋರಕನನ್ನು ಸೀಳಿ ಬೀಸಾಡಿ ವೇದಾಚಲದೊಳು ನಿಂತು ಕೈ ನೀಡಿ ಸಾಧು ಸಜ್ಜನಪಾಲ ನೀ ದಯಮಾಡಿ 1 ವಾರಿಧಿ ಮಥನದಿ ಸುರರಿಗೆ ಒಲಿದು ಮೇರು ಮಂದರವನ್ನು ನೀ ಹೊತ್ತೆ ಒಲಿದು ವಾರಿಜಾಕ್ಷನೆ ವೈಕುಂಠದಿಂದಿಳಿದು ಊರಿದೆ ಚರಣವ ಗಿರಿಯೊಳು ನಲಿದು 2 ಧರಣಿಯ ಒಯ್ದ ದಾನವಗಾಗಿ ನೀನು ಹರಣದ ಸೂಕರನಂತಾದುದೇನು ಚರಣ ಸೇವಕರಿಗೆ ನೀ ಕಾಮಧೇನು ಕರುಣದಿ ಸಲಹೆನ್ನ ನಂಬಿದೆ ನಾನು 3 ತರಳನು ಕರೆಯೆ ಕಂಬದೊಳುದಿಸಿದೆಯೊ ದುರುಳ ದಾನವರ ಪ್ರಾಣವ ವಧಿಸಿದೆಯೊ ಕರಳಮಾಲೆಯ ಕೊರಳೊಳು ಧರಿಸಿದೆಯೊ ಮರಳಿ ಬಂದವ ಫಣಿಗಿರಿಯನೇರಿದೆಯೊ 4 ಕೋಮಲ ರೂಪದಿ ಭೂಮಿಯನಳೆದೆ ಆ ಮಹಾಬಲಿಯ ಪಾತಾಳಕ್ಕೆ ತುಳಿದೆ ಸ್ವಾಮಿ ಪುಷ್ಕರಣಿಯ ತೀರದಿ ಬೆಳೆದೆ ಪ್ರೇಮದಿ ಭಕ್ತರ ಕಾಮಿಸಿ ಪೊರೆದೆ 5 ತಾತನಪ್ಪಣೆಯಿಂದ ಮಾತೆಗೆ ಮುನಿದೆ ಜಾತಿಕ್ಷತ್ರಿಯರ ವಿಘಾತಿಸಿ ತರಿದೆ ನೂತನವಾಗಿಹ ನಾಮದಿ ಮೆರೆದೆ ಧಾತುಗೆಟ್ಟೆನು ಸ್ವಧೈರ್ಯಗಳಿರದೆ 6 ದಶರಥನುದರದಿ ಶಿಶುವಾಗಿ ಬಂದೆ ವಸುಮತಿ ತನುಜೆಯ ಕುಶಲದಿ ತಂದೆ ಅಸುರರ ಹೆಸರನುಳಿಸದೆ ನೀ ಕೊಂದೆ ಕುಸುಮನಾಭನೆ ಶೇಷಗಿರಿಯಲ್ಲಿ ನಿಂದೆ 7 ಮಧುರೆಯೊಳುದಿಸಿ ಗೋಕುಲದಲ್ಲಿ ಬೆಳೆದೆ ಉದಧಿಯ ಮಧ್ಯದಿ ದುರ್ಗವ ಬಲಿದೆ ಹದಿನಾರು ಸಾವಿರ ಸತಿಯರ ನೆರೆದೆ ಉದಯವಾದೆಯೊ ವೇದಗಿರಿಯೊಳು ನಲಿದೆ 8 ಶಶಿಮುಖಿಯರನು ಮೋಹಿಸುವಂಥ ಬಗೆಗೆ ವ್ಯಸನವ ಬಿಡುವುದುಚಿತವೇನೊ ನಿನಗೆ ವಸುಧೆಗುತ್ತಮವಾಗಿ ಎಸೆವಂಥ ಗಿರಿಯೊಳು ಹಸನಾಗಿ ನಿಂತಿಹ ಚರಣ ಸನ್ನಿಧಿಯೊಳು 9 ವಾಜಿಯನೇರಿಯೆ ನೇಜಿಯ ಪಿಡಿದೆ ಮಾಜುವ ಕಲಿಯನ್ನು ಕಡೆಯೊಳು ಕಡಿದೆ ಮೂಜಗದೊಡೆಯನ ಮನದೊಳು ಇಡುವೆ ಮಾಜ ಬೇಡೆಲೊ ವೇಂಕಟೇಶ ಎನ್ನೊಡವೆ 10 ಹತ್ತವತಾರದ ವಿಸ್ತಾರದಿಂದ ಕರ್ತು ವರಾಹತಿಮ್ಮಪ್ಪನು ನಿಂದ ಭೃತ್ಯವತ್ಸಲನಾಗಿ ಭೂಮಿಗೆ ಬಂದ ಅರ್ಥಿಯೋಳ್ಭಕ್ತರ ಸಲಹುವೆನೆಂದ 11
--------------
ವರಹತಿಮ್ಮಪ್ಪ
ಇಂದು ಕಂಡೆ ಕಣ್ಣಾರೆ ನನ್ನ ಸ್ವಾಮಿಯ ಬಂದ ಜನ್ಮಸಾಫಲ್ಯವಾಯಿತೀಗ ಧ್ರುವ ಮುಂಬಿಗಾಗ್ಯಾವೆನ್ನೊಳು ಸುಉಲ್ಹಾಸ ಅಂಬುಜಾಕ್ಷನ ಕಂಡೆ ಸುಪ್ರಕಾಶ ತುಂಬಿತುಳುಕುತಲ್ಯದ ಬಲುಹರುಷ ಇಂಬುಸಾಲದು ಬ್ರಹ್ಮಾಂಡ ಆಕಾಶ 1 ಎನ್ನಹೃದಯ ಮಂದಿರದೊಳು ನೋಡಿ ತನ್ನಿಂದ ತಾಂ ಬಂದನು ದಯಮಾಡಿ ಕಣ್ಣುಪಾರಣೆಗೈಸಿದೆನ್ನ ಕೂಡಿ ಇನ್ನು ದಣಿಯದೆನ್ನಮನ ಕೊಂಡಾಡಿ 2 ಘನ ಸುಖದೋರುತದೆ ಎನಗಿಂದು ಭಾನುಕೋಟಿ ಉದಯವಾದನೆಂದು ದೀನ ಮಹಿಪತಿಸ್ವಾ,ಮಿ ಕೃಪಾಸಿಂಧು ಮನೋಹರ ಮಾಡಿದ ತಾನೆ ಬಂದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎನ್ನ ಮನದ ಡೊಂಕ ತಿದ್ದಯ್ಯಾ ಗೋಪಾಲಕೃಷ್ಣ ಪ ಎನ್ನ ಮನದ ಡೊಂಕ ತಿದ್ದಿ ಮುನ್ನ ಮನ್ನಿಸದಿ[ರೆ]ತಿದ್ದಿಬನ್ನ ಪಡಲಾರೆ ಭವಾಬ್ಧಿಯನ್ನೆ ದಾಟಿಸೊ ಅಪಾರಮಹಿಮ ಅ.ಪ. ಉದಯವಾದರೆ ಊಟದ ಚಿಂತೆ ಉಂಡಮೇಲೆ ಭೋಗದ ಚಿಂತೆದರಮೇಲೆ ಹದಿನಾಲ್ಕು ಲೋಕಂಗಳನೆ ಆಳ್ವ ಚಿಂತೆ 1 ಸುಖವು ಬಂದರೆ ನಾನೆ ಸಮರ್ಥ ದುಃಖವು ಬಂದರೆ ಹರಿಯುಮಾಡ್ದರೊಕ್ಕ ಬಂದರೆ ನಾನೆ ಧನಿಕ ಸಿಕ್ಕಿಬಿದ್ದರೆ ಹರಿಯ ವ್ಯಾಪಾರ 2 ತಿಳಿದು ತಿಳಿದು ಪತಂಗದ್ಹುಳವು ಕಿಚ್ಚಿನಲ್ಲಿ ಬೀಳೋಹಾಂಗೆಕಾಲಕಳೆದೆ ಮೂಕನಂತೆ ಮುದ್ದು ಹಯವದನನೆ 3
--------------
ವಾದಿರಾಜ
ಏಳಯ್ಯಾ ಏಳು ಕಂದಾ | ಏಳು ಪರಮಾನಂದಾ | ಏಳು ಈರೇಳು ಜಗದೊಡೆಯ ಶ್ರೀಮುಕುಂದಾ ಪ ಮೊರೆವದೊಂದೇಗಾಲಿ | ಪರಿವಹರಿವೇಗಮಂ | ಜರಿದು ಯೇಳು ಕುದುರೆಂಗಳದರಾ | ಪೋರವರುಣನಿಂದ ಭೋರ್ಗರೆವ ಸ್ಯಂದನದೊಳಗ | ಮೆರೆವ ದಿನಕರ ಉದಯವಾದ ಪೂರ್ವಾದ್ರಿಯಲಿ 1 ಬಿರಿಯೆ ಕಮಲದ ಮೋಗ್ಗೆ ಕರಿಯೆ ಗೋವತ್ಸಗಳು | ಪರಿಯೆ ನಕ್ಷತ್ರಗಳು ಗಗನದೊಳಗ || ಸರಿಯೆ ಚೋರ್ವಿರಹಿಗಳು ವರಿಯದಂತಾಲಯಕೆ | ದೆರಿಯ ಕಣ್ಣೆವಿಯಗಳು ನಿದ್ರೆಗೈದಿದ ಜನರು 2 ಓಡುತಿದೆ ಕತ್ತಲೆಯು ಬಾಡುತಿದೆ ಕುಮುದ ಮುಖ | ಕೂಡುತಿವೆ ಚಕ್ರವಾಕಂಗಳೀಗ | ಆಡುತೆಳೆದುಂಬಿ ಚಲ್ಯಾಡುತಿದೆ ಮಧುರನವ | ಪಾಡುತಿದೆ ಮಹೀಪತಿ ಸುತನಾಮ ಕೀರ್ತಿಯನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರೇಯ ಸುಖ ಬೀರುತ ಸದೋದಿತ ಮೂಡಿ ಧ್ರುವ ಪೂರ್ವ ಪುಣ್ಯಾಚಲದಿ ಉದಯವಾದ ತೋರ್ವ ಭವಬಂಧವೆಂಬ ಕಗ್ಗತ್ತಲೆ ಹರಿಸಿದ 1 ಹೃದಯ ಕಮಲವಾಯಿತು ಸುವಿಕಾಸ ದ್ವ್ವಿಧಾ ಭಾವೆಂಬ ಚಕ್ರವಾ ಕೊಂದಾಯಿತು ಹರುಷ 2 ಸಂಚಿತ ಪ್ರಾಲಬ್ಧ ಕ್ರಿಯಮಾಣ ವಂಚನಿಲ್ಲದಾಯಿತು ಸಮರ್ಪಣ ಆಘ್ರ್ಯದಾನ 3 ಮಹಿಪತಿಗಾಯಿತು ಆನಂದೋದಯ ಸ್ವಹಿತದೋರಲು ಬಂದೆನಗೆ ತತ್ವೋಪಾಯ 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಯಂ ಭಾನು ಉದಯವಾದ ನೋಡಿ ದಯಕರುಣಾನಂದದ ಕೃಪೆಮಾಡಿ ಧ್ರುವ ರವಿಕೋಟಿತೇಜನೆ ಬಂದ ಮೂಡಿ ಭವಭ್ರಮದ ಕತ್ತಲ್ಹೋಯಿತೋಡಿ ದೇವದೇವೋತ್ತಮನ ಪ್ರಭೆ ಕೂಡಿ ದಿವಾರಾತ್ರಿಲ್ಲದಾಯಿತು ನೋಡಿ 1 ಜ್ಞಾನ ಗಮ್ಯವಾಗಿದ್ದ ಸುವಸ್ತ ಕಾಣಬಾವ್ಹಾಯಿತು ಮನಸ್ವಸ್ತ ಮನದಿಂದೆವೆ ಆಯಿತು ಮನಸ್ವಸ್ತ ಘನಮಯವೆ ತೋರಿತು ಸಮಸ್ತ 2 ತಾನೆ ತನ್ನಿಂದುದಯವಾದ ಪೂರ್ಣ ನಾನಾವೆಂಬುದ್ಹೋಯಿತನುಮಾನ ಆನೇಕಲಿದೋರಿತು ಇದೆ ಖೂನ ದೀನ ಮಹಿಪತಿ ಸ್ವಹಿತ ಸುಧನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎನ್ನ ಮನದ ಡೊಂಕ ತಿದ್ದಿ-ಚರಣದಲ್ಲಿ ಸೇರಿಸೋ |ನಿನ್ನ ಸೇವಕನಾದ ಮೇಲೆಇನ್ನು ಸಂಶಯವೇಕೆ ಕೃಷ್ಣ ಪಉದಯವಾದರೆ ಊಟದ ಚಿಂತೆ ಅದರ ಮೇಲೆ ಭೋಗದ ಚಿಂತೆ |ಹದಿನಾಲ್ಕು ಲೋಕಂಗಳನಾಳಬೇಕೆಂಬ ಚಿಂತೆ ||ಇದು ಪುಣ್ಯ ಪಾಪವೆಂದು ಹೃದಯದಲಿ ಭಯವಿಲ್ಲದಲೆ |ಮದ ಮೋಹಿತನಾದೆ ನಿನ್ನ ಪದವ ನಂಬದೆ-ದಯಾಳೊ 1ನೆರೆಮನೆಗಳ ಭಾಗ್ಯವ ನೋಡಿ-ತರಹರಿಸುತ ಅಸೊಯೆಯಿಂದ |ಹರಿಯ ಸ್ಮರಣೆಗೆ ವಿಮುಖನಾದೆ - ನರರಸ್ತುತಿಯ ನಾ ಮಾಡಿದೆ ||ಪರರ ಸತಿಗೆ ಪರರನ್ನಕೆ ತಿರುಗಿ ತಿರುಗಿ ಚಪಲನು ಆದೆ |ಗುರುಹಿರಿಯರ ದೂಷಿಸುತಲಿ ಮರುಳನಾದೆ ದೀನಶರಣ್ಯ 2ಅಗಣಿತಸುಖ ಬಂದರೆ ನಾನು -ಅಗಣಿತದುಃಖಕೆ ಹರಿಯೆನ್ನುವೆನು |ಜಗದೊಳಾವ ಲಾಭವು ಬಂದರು ಧನಿಯು ನಾನೆ ಎಂಬೆ ||ಮಿಗೆ ಹಾನಿಗೆ ಹರಿಯನು ದೂಷಿಸಿನೆಗೆದು ಪತಂಗವು ಕಿಚ್ಚಲಿ ಬೀಳುವ |ಬಗೆ ನಾನಾದೆನುಪುರಂದರವಿಠಲನಖಗರಾಜಸುವಾಹನ ಶ್ರೀ ಕೃಷ್ಣ 3
--------------
ಪುರಂದರದಾಸರು
ಕರತಾರೆ ಕರತಾರೆ ಶ್ರೀನಿವಾಸನಸುರರರಸ ಸ್ವಾಮಿ ಶ್ರೀ ವೆಂಕಟೇಶನ ಪ.ಬರಹೇಳೆ ಬರಹೇಳೆ ಬೇಗ ಕರಿಗಮನೆ ರಂಗಗೆಸಿರಿರಾಣಿರಮಣ ಘನಾಂಗಗೆಅರಘಳಿಗೆ ಸರಸವಲ್ಲ ಅರಸನಿಲ್ಲದವಳೆ ಸಲ್ಲಸ್ಮರನೆಂಬೊ ಸಿರಿಕಳ್ಳ ಕರುಣ್ಯಿಲ್ಲ 1ಸುಂದರ ಸುಂದರ ಶುಭಮಂದಿರನ್ನ ದಯಾರಸಸುಂದರನ್ನ ವರಕಂಬುಕಂದರನ್ನಚೆಂದಾವರೆಗಣ್ಣವನಸಿಂಧೂರವರದನ್ನ ದೇವೇಂದ್ರಜಿತ ಪಾರಿಜಾತ ತಂದನ್ನ 2ಹೋಯಿತೆ ಹೋಯಿತೆ ಹೊನ್ನಪ್ರಾಯ ಯದುರಾಯ ಬಾರದಾಯಿತೀ ಅವಸ್ಥೆ ಹುಟ್ಟು ಹೊಂದಿಕಾಯಬೇಕೆಂದೊಮ್ಮಿಗೆ ಉದಯವಾದ ಪ್ರಸನ್ವೆಂಕಟರಾಯ ಬಂದ ಫಲಿಸಿತಾನಂದ 3
--------------
ಪ್ರಸನ್ನವೆಂಕಟದಾಸರು