ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾಧುಸಂಗ ಶೀಘ್ರಕೂಡಿಸೊ ಪ ಎಷ್ಟು ದಿನ ಕಷ್ಟಪಡುವದೋಈ ಭವದೊಳು ಈಸಲಾರೆನಯ್ಯ ಹರಿಯೇ ಇಷ್ಟು ದಿನ ಇದ್ದಂತೆ ಇರಲಾರೆನೆಂದು ಕರವ ಮುಟ್ಟಿ ಮುಗಿದು ಬೇಡಿಕೊಂಬೆ ಮುರಾರಿ ಕೃಷ್ಣ ನೀನೇ ಕಾಯೋ 1 ಹರಿಹರರು ಸಮಾನರೆನ್ನದಾ ಈ ಸಜ್ಜನರಾ- ಸಂಗದಿಂದ ಹೀನಾ ನಾನಾದೆ ಇನ್ನುಮ್ಯಾಲೆ ಇಲ್ಲವಯ್ಯ ಸೃಷ್ಟಿಗಧಿಕ ಶ್ರೀನಿವಾಸಾ ಇನ್ನು ನಿನ್ನ ಸ್ಮರಣೆಯಿಂದ ಇರುವೆನಯ್ಯ ಮುಕುಂದ 2 ಪೃಥ್ವಿಯಲ್ಲಿ ಪುಟ್ಟಿದಾ ಮೊದಲು ನಿನ್ನಾ ವೃತ್ತಾಂತ ಒಂದು ದಿನ ಮಾಡಲಿಲ್ಲವೋ ಎಂದು ಎನ್ನ ಮ್ಯಾಲೆ ಕ್ರೂರದೃಷ್ಟಿಯಿಂದಾ ನೋಡಾದೀರು ವಾಸುದೇವ ವೈಕುಂಠವಾಸ ಲಕ್ಷುಮಿ ರಮಣ3 ನಿತ್ಯದಲ್ಲಿ ವಿಪ್ರರಾ ವೃಂದಾದೊಳಗೆ ನಾ ಆ- ಸಕ್ತನಾಗಿ ಇರುವೆ ಮುಕುಂದಾ ಎಂಥ ಪಾಪಿ ಎಂದು ಉದಾಸೀನಮಾಡಿ ನೋಡಬೇಡ ನಿನ್ನ ಕಂದಾನೆಂದು ತಿಳಿದು ಪಾಲಿಸಯ್ಯ ನಾರಾಯಣ 4 ಹನುಮ ಭೀಮ ಮಧ್ವೇಶಾರಿಂದಾ ಸೇವಿತ ಪ್ರಿಯಾ ಶಾಂತಮೂರ್ತಿ ಶಾಮವರ್ಣನೇ ಶ್ರೀದವಿಠಲೇಶಾ ನಿನ್ನಾ ದಾಸನೆಂದು ಪಾಲಿಸೆನ್ನ ಸಾರಿ ಬೇಡಿಕೊಂಬೆನಯ್ಯ ರಾಮಚಂದ್ರ ರಾವಣಾಚಾರಿ5
--------------
ಶ್ರೀದವಿಠಲರು