ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉಗಾಭೋಗ ಭಕ್ತಿದಾಯಕ ಕೇಳೊ ನಿನ್ನನು ಒಲಿಸಲು ಶಕ್ತಿ ಎನಗೆ ಇಲ್ಲ ಸರ್ವೇಶ್ವರ ಭಕ್ತಿಪಾಶದಿ ನಿನ್ನನುಕ್ತಿಯಿಂದಲಿ ಬಿಗಿವೆ ಮುಕ್ತಿಗೊಡೆಯ ಹೃದಯ ಮಧ್ಯದಿ ಬಂಧಿಸುವೆ ಶಕ್ತಿ ನಿನಗಿಲ್ಲ ಬಿಡಿಸಿಕೊಳ್ಳಲು ಇನ್ನು ಯುಕ್ತಾಯುಕ್ತ ತಿಳಿಸಿ ಉದ್ಧರಿಸಬೇಕಿನ್ನು ಶಕ್ತನಿಲ್ಲವೊ ನಿನಗೆ ಸರಿ ಜಗದೊಳು ಮಹ ಸಿರಿ ಗೋಪಾಲಕೃಷ್ಣವಿಠ್ಠಲಾ
--------------
ಅಂಬಾಬಾಯಿ
ನಿಂದು ದರ್ಶನ ನೀಡೊ ಅರವಿಂದ ಮಧ್ಯದಲಿ ಕಂದರ್ಪಜನಕ ದೇವ ಪ. ನಂದಕಂದನೆ ನಿನ್ನ ಮಂದಮತಿ ನಾನೆಂತು ವಂದಿಸಿ ಸ್ತುತಿಪೆನಯ್ಯ | ಜೀಯ ಅ.ಪ. ಸತ್ವಗುಣವಾರಿಧಿಯೆ ತತ್ವಗಳ ತಿಳಿಸೆನಗೆ ಉತ್ತಮ ಪಥವ ತೋರೋ ನಿತ್ಯ ಸಂಸಾರದಲ್ಲಿ ಸುತ್ತಿಸದೆ ನಿನ್ನಪದ ಭೃತ್ಯಸಂಗದಲಾಡಿಸೊ | ಸತತ 1 ವಿಶ್ವತೈಜಸಪ್ರಾಜ್ಞತುರಿಯ ರೂಪಗಳಿಂದ ವಿಶ್ವೇಶ ದೇಹದೊಳಗೆ ವಿಶ್ವವ್ಯಾಪಕ ಹರಿಯೆ ಸ್ವಪ್ನ ಜಾಗ್ರತೆ ಸುಷುಪ್ತಿ ವಿಶ್ವಮಯ ಜೀವಕೀವೆ | ಕಾವೆ 2 ತತ್ವಾಧಿಪತಿಗಳೊಳು ವ್ಯಾಪ್ತನಾಗಿರುತ ನೀ ಮತ್ತೆಲ್ಲ ಕಾರ್ಯ ಮಾಳ್ಪೆ ಚಿತ್ತಾಭಿಮಾನಿ ಶ್ರೀ ಮಾರುತಾಂತರ್ಯಾಮಿ ವ್ಯಾಪ್ತನಾಗಿರುವೆ ಜಗದಿ | ಮುದದಿ 3 ಮಧ್ಯನಾಡೀ ಹೃದಯ ಮಧ್ಯಪದ್ಮದ ಮಧ್ಯೆ ಇದ್ದೆನೆಗೆ ರೂಪ ತೋರೋ ಒದ್ದಾಡುವೆನೊ ಭವದಿ ಉದ್ಧರಿಸಬೇಕಿನ್ನು ಒದ್ದು ತಾಪತ್ರಯವನು | ನೀನು 4 ಶ್ರೀನಿವಾಸನೆ ನಿನ್ನ ಧ್ಯಾನ ಅನವರತದಲಿ ಮಾನಸದಲೆನಗೆ ನೀಡೋ ಶ್ರೀನಿಧೇ ಗೋಪಾಲಕೃಷ್ಣವಿಠ್ಠಲ ಎನ್ನ ಸಾನುರಾಗದಲಿ ಸಲಹೋ ಎಲವೋ 5
--------------
ಅಂಬಾಬಾಯಿ