ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಷ್ಟ ತನುವಿನಲಿ ಹುಟ್ಟಿ ತೊಳಲುವಂಥಎಷ್ಟೆಂದು ತಾಳುವೆನೊ ಶ್ರೀರಂಗ ಪ ಅಷ್ಟರೊಳೆಂದೆನ್ನ ಅವಗುಣವೆಣಿಸದೆ ಕಷ್ಟ ಪಡಿಸುವುದೇನು ಶ್ರೀರಂಗ ಅ ನರಜನ್ಮವನು ಎತ್ತಿ ನರಕದೊಳಗೆ ಸುತ್ತಿಗುರಿ ಗೊತ್ತು ಕಾಣೆನಯ್ಯ ಶ್ರೀರಂಗಪರಮಪಾತಕನಾಗಿ ಹರಿ ನಿಮ್ಮ ಸ್ಮರಣೆಯನುಮರೆದು ಪಾಮರನಾದೆ ಶ್ರೀರಂಗ1 ಮಂದ ದು-ರ್ಮತಿಗೆ ಮರುಳಾದೆನೊ ಶ್ರೀರಂಗಅತುಳ ಪ್ರಪಂಚಕ್ಕೆ ಹಿತನಾಗಿ ದುಷ್ಟ ಸಂ-ಗತಿಯ ನಾನರಿದಿದ್ದೆನೊ ಶ್ರೀರಂಗ 2 ಮಿತಿಮೀರಿ ಮನ ಹರಿ ಪದವ ನೆನೆಯದೆ ಪರಸತಿಯರಿಗಳುಪಿದೆನೊ ಶ್ರೀರಂಗಕೃತಬುದ್ಧಿಯೊಳು ಉನ್ನತನಾಗಿ ತಾನೆರೆದುಸ್ತುತಿ ಮಾಡಿಕೊಂಡಿದ್ದೆನೈ ಶ್ರೀರಂಗ 3 ಆಶಾಪಾಶಗಳೆಂಬ ದೇಹಕ್ಕೆ ಸಿಲ್ಕಿ ಸ-ದ್ವಾಸನೆಯನು ಬಿಟ್ಟೆನು ಶ್ರೀರಂಗಮೋಸದಿಂದಾತ್ಮಘಾತುಕನಾಗಿ ಅಪರಾಧವೇಸೊಂದು ಮಾಡಿದೆನಯ್ಯ ಶ್ರೀರಂಗ 4 ಈಸಲಾರದೆ ಹೊಳೆಯಲಿ ಕಾಸಲಾರದೆ ಒಲೆಯಲಿಸೋಸುತ್ತ ಕುಳಿತಿಹೆನು ಶ್ರೀರಂಗವಾಸುಕಿ ಶಯನ ನೆಲೆಯಾದಿಕೇಶವ ನಿಮ್ಮಾಶ್ರಿತದಾಸರ ದಾಸನಯ್ಯ ಶ್ರೀರಂಗ 5
--------------
ಕನಕದಾಸ
ಭಗವಂತನ ಸಂಕೀರ್ತನೆ ಅನುದಿನ ನೆನೆಯಲೊ ಹನುಮನಿಗತಿ ಪ್ರಿಯ ಪರಮ ಪಾವನ ರಾಮನಾಮ ಪ ಇನಕುಲ ಭೂಷಣ ಮುನಿಜನ ತೋಷಣ ಜಾನಕಿರಮಣನ ನಾಮ ಅ.ಪ ಗೌತಮ ಸತಿಯೆ ಪುನೀತಳ ಮಾಡಿ ಪ್ರ- ಖ್ಯಾತಿ ಪೊಂದಿದ ದಿವ್ಯನಾಮ ಶೀತಲ ಕಿರಣ ಭೂಷಣನ ಧನುವ ಮುರಿದು ಸೀತೆಯ ಪೊಂದಿದ ನಾಮ 1 ಜನಕನ ವಚನವನುಳಿಸುವ ನೆವದಲಿ ವನವಾಸ ಮಾಡಿದನ ನಾಮ ವನದಲಿ ಖರದೂಷಣ ಮುಖ ದನುಜರ ಹನನ ಮಾಡಿದ ದಿವ್ಯನಾಮ2 ಶರಭಂಗಮುನಿಗೆ ಪರಮ ಪದವನಿತ್ತ ಪರಮ ಪವಿತ್ರನ ನಾಮ ನಾಸಿಕ ಕರ್ಣ ಮುರಿಸಿದವನ ಶುದ್ಧ ನಾಮ 3 ಭೂಮಿಜೆಯನು ಮೋಸದಿಂದ ಅಗಲಿಸಿದ ಮಾರೀಚನ ಕೊಂದ ನಾಮ ಸ್ವಾಮಿಯ ಪ್ರೇಮಕ್ಕೆ ಮಡಿದ ಜಟಾಯುಗೆ ಅಭಯ ಹಸ್ತವನಿತ್ತ ನಾಮ 4 ಆ ಮಹಾ ಹನುಮನ ಕಾಮಿತದಂತೆ ಮಹೇಂದ್ರ ಸುತನ ಕೊಂದ ನಾಮ ಕಮಲ ಸುಹೃದತನಯನಿಗೆ ಸಾಮ್ರಾಜ್ಯವನಿತ್ತ ನಾಮ 5 ಪರಿಪರಿವಾರದಿಂ ಶರಧಿಯೊಳ್ ಸೇತು ಬಂಧನವ ಮಾಡಿದ ರಾಮನಾಮ ದುರುಳ ರಾವಣ ಮುಖ ರಕ್ಕಸರನೆ ಕೊಂದು ಧರಣಿ ಸುತೆಯ ಕಂಡ ನಾಮ6 ಶರಣವ ಪೊಂದಿದ ಭಕುತ ವಿಭೀಷಣಗೆ ತರುಣಿ ಸೀತೆ ಲಕ್ಷ್ಮಣರಿಂದ ಕೂಡಿ ಪು ಷ್ಪಕವನೇರಿದ ಸಾಧು ನಾಮ 7 ಉರುತರ ತಪದಲಿ ನಿರತನಾದ ತಮ್ಮ ಭರತನ ಉಳಿಸಿದ ನಾಮ ದೊರೆತನವೊಂದಿ ಸಕಲ ಸುಜನರುಗಳಿಗೆ ಪರತರ ಸುಖವಿತ್ತ ನಾಮ 8 ತನ್ನ ಭಕುತರೊಳು ಉನ್ನತನೆನಿಸಿದ ಘನ್ನಮಾರುತಿಗೊಲಿದ ನಾಮ ಪ್ರ ಸನ್ನನಾಗಿ ಸಂತತ ಇವನಿಗೆ ತನ್ನ ಸಹ ಭೋಗ ಸುಖವಿತ್ತ ನಾಮ 9
--------------
ವಿದ್ಯಾಪ್ರಸನ್ನತೀರ್ಥರು
ಭಯ ನಿವಾರಣವು ಶ್ರೀ ಹರಿಯ ನಾಮ |ಜಯಪಾಂಡುರಂಗವಿಠಲ ನಿನ್ನ ನಾಮ ಪಧಾರಿಣೀದೇವಿಗಾಧಾರವಾಗಿಹ ನಾಮ |ನಾರದರು ನಲಿನಲಿದು ನೆನೆವ ನಾಮ |ಘೋರಪಾತಕಿ ಅಜಾಮಿಳನ ಸಲಹಿದ ನಾಮ |ತಾರಕವು ಬ್ರಹ್ಮ - ಭವರಿಗೆ ನಿನ್ನ ನಾಮ 1ಮೊರೆಯಲಾಲಿಸಿ ಮುನ್ನ ಗಜವ ಸಲಹಿದ ನಾಮ |ಕರುಣದಿಂ ದ್ರೌಪದಿಯ ಕಾಯ್ದ ನಾಮ |ಮರುಗುತಿಹ ಧ್ರುವನ ಉನ್ನತನ ಮಾಡಿದ ನಾಮ |ಪರತತ್ತ್ವ ಇಹಕಲ್ಲವೇ ನಿನ್ನ ನಾಮ 2ಚರಣದಲಹಲ್ಯೆಯನು ಸೆರೆಯ ಬಿಡಿಸಿದ ನಾಮ |ಕರುಣದಲಿ ಪ್ರಹ್ಲಾದನನು ಕಾಯ್ದ ನಾಮ |ತೊರೆಯಲಕ್ರೂರನಿಗೆ ನಿಜವ ತೋರಿದ ನಾಮ |ಸ್ಮರಿಸ ಜನರಿಗೆ ಸಮಸ್ತವನಿತ್ತ ನಾಮ 3ಚಂದ್ರಶೇಖರ ಗಿರಿಜೆಗೊರೆದ ಸಿರಿಹರಿನಾಮ ||ಬಂದಾ ವಿಭೀಷಣನ ಪಾಲಿಸಿದ ನಾಮ |ಕಂದಮುಚುಕುಂದನಿಗೆ ಕಾಮಿತವನಿತ್ತ ನಾಮ |(ಸಂದ ಪಾಂಡಪಕ್ಷ ಪಾವನವು ನಾಮ ) 4ಅಖಿಳವೇದಪುರಾಣ ಅರಸಿಕಾಣದ ನಾಮ |ಸಕಲಯೋಗಿ - ಜನಕೆ ಸೌಖ್ಯ ನಾಮ ||ಪ್ರಕಟಿಸಲು ಜಗವ ಪಾವನವ ಮಾಡಿದ ನಾಮ |ರುಕುಮಿಣೀಯರಸ ವಿಠಲ ನಿನ್ನ ನಾಮ 5ಭಕ್ತಿಯಲಿ ನೆನೆವರನು ಎತ್ತಿ ಸಲಹುವ ನಾಮ |ಮುಕ್ತಿ ಮಾರ್ಗಕೆ ಯೋಗ್ಯಹರಿ ನಿನ್ನ ನಾಮ |ಎತ್ತರಕೆ ಏರಿಪುದು ಸ್ವಾಮಿ ನಿನ್ನಯ ನಾಮ |ಚಿತ್ತಜನ ಪೆತ್ತ ಶ್ರೀ ಹರಿಯ ನಾಮ 6ವಾರಿಜಾನನೆ ತುಳಸಿಗೊಲಿದ ಹರಿನಾಮ ಕಾ - |ವೇರಿ ಮಧ್ಯದಲಿ ನೆಲಸಿದ ನಿನ್ನ ನಾಮ ||ಕ್ಷೀರಸಾಗರದಲ್ಲಿ ಶಯನವಾಗಿಹ ನಾಮ |ನಾರಾಯಣಾ ಕೃಷ್ಣಹರಿ ನಿನ್ನ ನಾಮ7ಹೊಂದಿದ್ದ ಭಕ್ತವೃಂದವ ಸಲಹಿದಾ ನಾಮ |ತಂದು ಅಮೃತವ ಸುರರಿಗೆರೆದ ನಾಮ ||ಅಂದಂಬರೀಷನನು ಕಾಯ್ದ ಶ್ರೀ ಹರಿನಾಮ |ತಂದೆ ಪುರಂದರವಿಠಲಹರಿ ನಿನ್ನ ನಾಮ8
--------------
ಪುರಂದರದಾಸರು