ಒಟ್ಟು 4 ಕಡೆಗಳಲ್ಲಿ , 3 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಮದ್ರಾಸಿನ ತಿರ್ವಳಕೇಣಿ ಪಾರ್ಥಸಾರಥಿ) ಏನು ಮಾಡಲಿನ್ನು ನೀನಲ್ಲದೆ ಯಾದಾರ ಬೇಡಲಿನ್ನು ಪ. ಮಾನಿನಿ ದ್ರೌಪದಿ ಮೊರೆಯಿಡುವುದ ಕೇಳಿ ಸಾರಥಿ ದೇವ ಅ.ಪ. ನೀನಿತ್ತ ಸೌಭಾಗ್ಯದ ಗರ್ವದಿ ಎನ್ನ ಧ್ಯಾನಾದಿಗಳ ಮಾಡದೆ ನಾನಾ ವಿಧದ ದುರ್ಮಾನುವಾದುದರಿಂದ ನೀನೆ ಸದ್ಗತಿಯೆಂದು ಧ್ಯಾನಿಸಿಲ್ಲಿಗೆ ಬಂದೆ 1 ಬಡತನದಿಂದಿರಲು ಸಕಲ ಸುರ- ರೊಡೆಯ ನೀ ಕೈ ಪಿಡಿದು ರೂಢಿ ಮದದಿ ನಿನ್ನನು ಬಿಟ್ಟು ಕಡೆಗೆ ನಿನ್ನಯ ಪಾದದೆಡೆಗೆ ಬಂದೆನು ದೇವ 2 ಪಶ್ಚಿಮ ವಾರಿಧಿಯ ತೀರದಲಾದ ದುಶ್ಚರಿತ್ರೆಯ ತಾಳದೆ ಆಶ್ಚರ್ಯತಮವಾದ ಸಚ್ಚರಿತ್ರನೆ ನಿನ್ನ ನೆಚ್ಚಿ ಬಂದಿಹೆನೊ ವಿಪಶ್ಚಿತರೊಡೆಯನೆ 3 ನಕ್ಷತ್ರಗಳಂದಿಂದಲು ಯೆನ್ನಪರಾಧ- ವಕ್ಷಯವಾಗಿರಲು ಅಕ್ಷರಿ ವಂದ್ಯ ನೀ ಲಕ್ಷ ಬಿಡುವುದೆ ಕ- ಟಾಕ್ಷದಿಂದಲಿ ನೋಡಿ ರಕ್ಷಿಸು ಕರುಣದಿ 4 ಎಷ್ಟು ಕರ್ಮಿಯಾದರು ನಿನ್ನಲಿ ಮನ- ವಿಟ್ಟು ಬಂದಿರುವೆನಲ್ಲ ದುಷ್ಟಮರ್ದನ ಶಿಷ್ಟರಕ್ಷಣ ಭಾಜಕ ಜ- ನೇಷ್ಟದಾಯಕ ಸೃಷ್ಟ್ಯಾದೃಷ್ಟಕರ್ತ 5 ನಟನ ಮಾಡುವ ಬೊಂಬೆಯ ಪೋಲುವ ಯೆನ್ನ ಹಟದಿಂದ ದಣಿಸುವುದೆ ವಟಪತ್ರ ಶಾಯಿ ಧೂರ್ಜಟಿ ವಂದ್ಯ ಅಂಜಲಿ ಪುಟನಾಗಿ ಬೇಡುವೆ ಘಟಿಸೊಭಿಲಷಿತವ 6 ಎಂದಿಗಾದರು ನಿನ್ನಯ ಪಾದಯುಗಾರ- ವಿಂದ ದರ್ಶನವಾಗಲು ಭವ ಸಿಂಧುವ ದಾಟುವೆ- ನೆಂದು ಬಂದಿರುವೆ ಸನಂದನಾದಿ ವಂದ್ಯ 7 ಕೂರ್ಮ ವರಾಹ ನಾರಸಿಂಹ ವಾಮನ ಶ್ರೀ ಭಾರ್ಗವ ರಾಮಕೃಷ್ಣ ಬೌದ್ಧ ಕಲ್ಕಿಯಂಬ ದಿವ್ಯ ನಾಮಗಳನು ಬಿಟ್ಟು ಕಾಮಲಾಲಸನಾಗಿ 8 ಒಂದು ನಿಮಿಷವಾದರು ತತ್ವಾಧಾರ ವಿಂದ ದರ್ಶನ ಮಾಡಲು ಹೊಂದಿದಘಗಳೆಲ್ಲ ಬೆಂದು ಹೋಗುವುದೆಂದಾ- ನಂದತೀರ್ಥಚಾರ್ಯರೆಂದ ನುಡಿಯ ನಂಬಿ 9 ದ್ವೇಷಿ ಮಾನವರ ಮುಂದೆ ನಾನಾ ವಿಧ ಕ್ಲೇಶವ ತಾಳ್ದೆ ಹಿಂದೆ ಘಾಸಿಯಾಗಿ ನಾನಾ ದೇಶ ದಾಟಿ ಬಂದೆ ಮೀಸಲಾದೆ ನಿನ್ನ ದಾಸ ದಾಸ್ಯನೆಂದೆ 10 ಜನರೊಳು ಪ್ರಮಿತನಾಗಿ ಬಾಳಿದ ಮಾನ- ವನು ಮಾನಹೀನನಾಗಿ ತನುವ ಪೊರೆದನತಿ ಘನಕ್ಲೇಶವೆನುತ ಅ- ರ್ಜುನನಿಗೆ ಉಪದೇಶವನು ಪೇಳಿದವ ನೀನೆ 11 ಯುಕ್ತಿ ಒಂದನು ಕಾಣೆನು ದೇಹದಿ ದೃಢ ಶಕ್ತಿಯಿಲ್ಲದವ ನಾನು ಮುಕ್ತಾಶ್ರಯ ಸರ್ವ ಶಕ್ತಿ ನೀನಿಹ ಪರ- ಭುಕ್ತಿ ಮುಕ್ತಿದನೆಂಬ ವಿರಕ್ತಿಯಿಂದಲಿ ಬಂದೆ 12 ಕಾಸೆಲ್ಲ ವ್ಯಯವಾಯಿತು ಎನಗೆ ಪರದೇಶವಾಸವಾಯಿತು ಆಸೆ ಬಿಡದುದರ ಘೋಷಣೆಗಿನ್ನವ- ಕಾಶವೊಂದನು ಕಾಣೆ ಶ್ರೀಶ ನೀನರಿಯೆಯ 13 ನಿಲ್ಲಲಾಶ್ರಯವನು ಕಾಣೆ ಪೋಗುವೆನೆಂದ- ರೆಲ್ಯು ಮಾರ್ಗವನು ಕಾಣೆ ಬಲ್ಲಿದ ವೈರಿಗಳಲ್ಲಿ ತುಂಬಿಹರರಿ- ದಲ್ಲಣ ನೀ ಎನ್ನ ಸೊಲ್ಲ ಲಾಲಿಸು ಕೃಷ್ಣ 14 ಅಶನವಸನ ಕಾಣದೆ ದೇಶವ ಸುತ್ತಿ ಬಸಿದು ಬೆಂಡಾಗಿಹೆನು ಉಶನಾಂiÀರ್i ಶಿಷ್ಯನ ವಶದಿಂದೆತ್ತಿ ಪೃಥ್ವಿಯ ದಶನಾಯಕರಿಗಿತ್ತ ಅಸಮಸಾಹಸ ದೇವ 15 ಮಾಡಿದಪರಾಧಕೆ ಮಾನಹಾನಿ ಮಾಡಿದುದು ಸಾಲದೆ ಬೇಡುವೆ ದೈನ್ಯದಿ ಪಾಡುವೆ ಮಹಿಮೆಯ ರೂಢಿಯೊಳಗೆ ದಯಮಾಡು ಇನ್ನಾದರು 16 ಇನ್ನಾದರೂ ಮನದಿ ಪಶ್ಚಾತ್ತಾಪ ವನ್ನು ತಾಳೊ ದಯದಿ ಕಣ್ಣ ಕಟ್ಟಿ ಕಾಡಿನೊಳು ಬಿಟ್ಟ ತೆರದೊಳಿಂ- ತೆನ್ನನು ಬಳಲಿಪದನ್ಯಾಯವಲ್ಲವೆ 17 ನಷ್ಟವೇನಹುಣನು ಎನ್ನಲಿ ಕ್ರೋಧ ಬಿಟ್ಟು ಬಾಧಿಸುತ್ತಿರಲು ಕೃಷ್ಣ ನೀ ಕರುಣದಿ ಕಷ್ಟ ಬಿಡಿಸಿ ಕಡೆ ಗಿಷ್ಟು ತಾತ್ಸಾರದಿಂದ ಕಷ್ಟಗೊಳಿಸಿದೆ 18 ಇಂದ್ರಾದಿ ಸುರರುಗಳು ಕೆಲವು ಕಾಲ ನೊಂದು ಭಾಗ್ಯವ ಪಡದು ಇಂದಿರೇಶ ನಿನ್ನ ಬಂಧಕ ಶಕ್ತಿಯಾ ನಂದ ತಿಳಿದಂತೆ ಮಂದನಾನರಿವೆನೆ 19 ಆನೆಯ ಭಾರವನು ಹೊರಲು ಸಣ್ಣ ಶ್ವಾನ ಸಹಿಸಲಾಪದೆ ದೀನ ಮಾನವನೆಂದು ಧ್ಯಾನಿಸಿ ಮನದಲಿ ಘನ್ನ ದುಖ್ಖವ ಕಳೆಯಾನಂಥ ಮೂರುತಿ20 ನೀನಿತ್ತ ಮಾನವನು ನೀ ಕಳದುದ ಕಾನು ಮಾಡುವದೇನಯ್ಯ ದಾನವಾರಿ ಸುರಧೇನು ನಿನ್ಡಿಗಳ ಧ್ಯಾನ ಮಾಡುತಲಿ ಸುಮ್ಮಾನದಿಂದಿರುವೆನು 21 ಸಾಕು ಸಾಕು ಮಾಡಿದೆ ಎನ್ನನು ಬಹು ನೀಕರಿಸುತ ದೂಡಿದೆ ಬೇಕಾದರೆ ಭಕ್ತ ನೀ ಕಪಾಲನ ಪ- ರಾಕೆಂಬ ಬಿರುದಿಂದ ಸಾಕುವದುಚಿತವೆ 22 ಅಂಬರೀಷವರದ ಸ್ವಭಕ್ತ ಕು- ಟುಂಬಿಯಂಬ ಬಿರುದ ನಂಬಿದ ಮೇಲೆನಗಿಂಬುದೋರದೆ ವೃಥಾ ಡಂಬರವ್ಯಾಕಿನ್ನು ಶಂಬರಾರಿಯ ಪಿತ 23 ಹಂಸವಾಹನ ಜನಕ ದಾಸಮದ- ಭ್ರಂಶಕನೆಂದನ- ಕ ಸಂಶಯವಿಲ್ಲದೆ ತಿಳಿದೆನು ಮಾತುಳ ಕಂಸ ಮರ್ದನ ವಿಪಾಂಸ ಶೋಭಿತ ದೇವ 24 ತರಳ ಪ್ರಹ್ಲಾದ ಧ್ರುವಾದಿಗಳನೆಲ್ಲ ಪೊರೆದನೆಂಬ ಕಥೆಯ ಹಿರಿಯರು ಪೇಳ್ವರು ಭರವಸೆ ಎನಗಿಲ್ಲ ಸಿರಿನಲ್ಲ ನೀಯೆನ್ನ ಬರಿದೆ ಬಿಟ್ಟದ ಕಂಡು25 ವಿಜಯಸಾರಥಿ ನಿನ್ನಯ ಮೂರ್ತಿಯ ಕಂಡು ಭಜಿಸಿದ ಮೇಲೆನ್ನನು ವಿಜಯ ಪೊಂದಿಸದಿರೆ ತ್ರಿಜಗವು ನಗದೇನೊ ಭುಜಗ ಭೂಷಣ ವಂದ್ಯ ದ್ವಿಜರಾಜ ಗಮನನೆ 26 ಕುಂದಣ ವರ್ಣವಾದ ಕೇತಕಿಯನು ಗಂಧಕೆ ಮರುಳನಾಗಿ ಬಂದು ಕುಸುಮಧೂಳಿಯಿಂದ ಲಂಡನಾದ ತುಂದಿಲೋದರ ಮಿಳಿಂದನಂದದಿ ಸಿಕ್ಕಿ 27 ಬೇಡುವದೇನೆಂದರೆ ನಿನ್ನನು ಧ್ಯಾನ ಮಾಡಿ ಪಾಡುವ ಭಾಗ್ಯವ ನೀಡು ನೀಚರನೆಂದು ಬೇಡದಂದದಿ ಮಾಡು ರೂಢಿಯೊಳಗೆ ದಯಮಾಡು ನೀ ನಿರುಪದಿ 28 ಇನ್ನು ತಾ ತಾಳಲಾರೆ ಕ್ಷಣೆ ಕ್ಷಣೆ ನಿನ್ನ ಪೊಗಳಲಾರೆ ಪನ್ನಗಾಚಲವಾಸ ಪರಮ ಪುರುಷ ಪ್ರ- ಸನ್ನ ವೆಂಕಟೇಶ ಪಾಲಿಸು ಕೃಪೆಯಿಂದ 29
--------------
ತುಪಾಕಿ ವೆಂಕಟರಮಣಾಚಾರ್ಯ
ಎನ್ನಲ್ಲಿ ಅವಗುಣ ಶತಸಾವಿರವಿರೆ | ಅನ್ಯರ ಕರೆದಾನು ನಡತೆ ಇದೇನೆಂಬೆ ಪ ವೇದವನೋದಿದೆ ಪರರಿ | ಗಾದÀರಿಸಿ ಮುಕುತಿಗೆ | ಹಾದರಹಳು ನಾರಿ | ಮಾದಿಗÀನ ಪೋದಂತೆ 1 ಧನದಾಸೆಯಿಂದ ಸಾಧನವಾಗದೆಂದು | ಜನರಿಗೆ ಉಪದೇಶವನು ಮಾಡುವೆ | ತೃಣ ಹತ್ತದಿದ್ದ | ವಧನರಾಶಿ ಕದ್ದಂತೆ2 ರಸನೇಂದ್ರಿಯಗಳ ಬಂ | ಧಿಸಬೇಕೆಂದು ನಾನು | ಉಸುರುವೆ ಅಲ್ಲಲ್ಲಿ ಕುಶಲನಾಗಿ | ಅಮೃತ | ರಸವಲ್ಲೆನೆಂದಾವ ಮುಸುರಿಯ ಮೆದ್ದಂತೆ 3 ಒಡಿವೆ ವಸ್ತುಗಳು ಸಂಗಡ ಬಾರವು ಮಮತೆ | ಬಿಡು ಸಂಸಾರವಿದು ಕಡಿಗೆ ಭವದ | ಮಡವು ಸಿದ್ಧವೆಂದು ನುಡಿವೆನೊ ಪರರಿಗೆ | ಯಡಹಿಯೊ ಎಂದಾವ ಗಿಡನೇರಿ ಬಿದ್ದಂತೆ 4 ಭಕುತಿ ಕೂಡಿದ ವಿರಕುತಿ ಲೇಶವಿಲ್ಲಾ | ಯುಕುತಿ ಬಾಯಲಿ ನಾರಕಕೆ ಸಾಧನಾ | ಲಕುಮಿವಲ್ಲಭ ನಮ್ಮ ವಿಜಯವಿಠ್ಠಲ ನಿನ್ನ ಅ | ರ್ಚಕನಾಗಿ ಬದುಕತಕ್ಕದ್ದು ಮಾರ್ಗವ ತೋರೊ 5
--------------
ವಿಜಯದಾಸ
ನರ್ತನಗೋಪ ಕೃಷ್ಣ | ವಿಠಲ ಪೊರೆ ಇವನಾ ಪ ಅರ್ತು ನಿನ್ನಂಘ್ರಿಯಲಿ | ದಾಸ್ಯ ಕಾಂಕ್ಷಿಪನಾ ಅ.ಪ. ಪತಿ ಸುಪ್ರೀಯ | ಮಧ್ವಾಂತರಾತ್ಮಸದ್ಧರ್ಮರತಿಯಿತ್ತು | ತಿದ್ದಿ ಸಂಸ್ಕತಿಗಳನುಶ್ರದ್ಧಾಳು ವೆಂದಿನಿಸು | ಸಿದ್ಧಾಂತ ಸಥದೀ 1 ಬೋಧ ಓದಗಿಸಿಕಾಯೋ | ಬಾದರಾಯಣದೇವಮೋದದಿಂ ಪ್ರಾರ್ಥಿಸುವೆ | ಹೇ ದಯಾಪೂರ್ಣ 2 ಧ್ಯಾನುಪಾಸನವಿತ್ತು | ಶ್ರೀನಿವಾಸನಮನದಿಕಾಣುವ ಸುವಿಜ್ಞಾನ | ನಿನಾಗಿ ಕೊಡುತಾಮೌನಿಕುಲ ಸನ್ಮಾನ್ಯ | ಜ್ಞಾನದಾಯಕ ಹರಿಯೆದೀನಜನ ಮಂದಾರ | ನೀನಾಗಿ ಪೊರೆಯೊ 3 ಪಿತೃ ಮಾತೃ ಪರಿವಾರ | ವ್ಯಾಪ್ತ ಹರಿಮೂರ್ತಿಯನುಅರ್ಥಿಯಿಂದಲಿ ಭಜಿಪ | ಮತಿಯ ಪಾಲಿಸುತಾಕರ್ತೃತ್ವ ಭ್ರಾಂತಿಯನು | ಹತಮಾಡಿ ಶ್ರೀಹರಿಯೆಕೀರ್ತಿವಂತನ ಗೈಯ್ಯೋ | ಆರ್ತರುದ್ಧರಣಾ 4 ಮುನ್ನವೇ ತ್ಯೆಜಸನು | ನನ್ನೆಯಿಂ ಸೂಚಿಸಿಹಚೆನ್ನ ಅಂಕಿತವನ್ನೆ | ಇನ್ನು ಸ್ಥಿರಪಡಿಸೀಘನ್ನ ಉಪದೇಶವನು | ಚಿತ್ಗಾನಿಗೆ ಇತ್ತಿಹೆನೋಮನ್ನಿಸೀಕೃತ್ಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಭೂತ ರಾಜನುತ ವಿಠಲ | ಕಾಪಾಡೊ ಇವನಾ ಪ ದಾತ ನೀನಲ್ಲದಲೆ | ಕಾವರಾರಿಹರೋ ಅ.ಪ. ಗುರು ರೂಪಿ ತೈಜಸನು | ನೆರವಾಗಿ ಸ್ವಾಪದಲಿವರಸು ಉಪದೇಶವನು | ಇತ್ತು ಪೊರೆದಿಹನೋ |ಮರಳಿ ಇವ ಲಾತವ್ಯ | ಗುರುರಾಜ ಭಕ್ತನಿಹಪೊರೆಯ ಬೇಕಿವನೆನುತ | ಪ್ರಾರ್ಥಿಸುವೆ ಹರಿಯೇ 1 ನಿಷ್ಕಾಮ ಭಕ್ತನನ | ಮಾಡಿ ನೀ ಸಲಹಯ್ಯಸತ್ಕಾಮಗಳ ಗರೆದು | ಸಾಧನೆಯ ಗೈಸೀದುಷ್ಕಾಮಗಳಿಗೆಡೆಯ | ನೀ ಕೊಡದೆ ಪೊರೆಯಯ್ಯಸತ್ಕರ್ಮ ಸತ್ಸಂಗ | ಸರ್ವದಾ ಕೊಡುತಾ 2 ಸತಿಸುತರು ಹಿತರಲ್ಲಿ | ದುರ್ಮಮತೆ ಕಳೆಯುತ್ತಮತಿಮತಾಂ ವರರಂಘ್ರಿ | ಶತ ಪತ್ರರತನಾಹಿತದಿಂದ ನೀ ಸಲಹಿ | ಗತಿ ಪ್ರದನು ಆಗಯ್ಯಕೃತಿ ರಮಣ ಪ್ರದ್ಯುಮ್ನ | ಪ್ರತಿ ರಹಿತ ದೇವಾ 3 ಮಧ್ವಮತ ಪದ್ಧತ್ಯಭಿ | ವೃದ್ಧಿಗೈಸುತಲಿವಗೆಸಿದ್ಧಾಂತ ಜ್ಞಾನದಲಿ | ಸಿದ್ಧ ನೆನಿಸಯ್ಯಾವೃದ್ಧಿಯಾಗಲಿ ಜ್ಞಾನ | ವೈರಾಗ್ಯ ಭಕ್ತಿಗಳುಮಧ್ವರಮಣನೆ ದೇವ | ಬುದ್ಧಿ ಬೋದಕನೇ 4 ಬದಿಗ ನೀನಾಗಿದ್ದು | ಹೃದಯದವಕಾಶದಲಿಮುದದಿಂದ ತವರೂಪ | ತೋರಿ ಸಲಹಯ್ಯಾ |ಇದಕನ್ಯ ನಾ ಬೇಡೆ | ಯದು ವರೇಣ್ಯನೆ ಕೃಷ್ಣಸದಯ ಗುರು ಗೋವಿಂದ | ವಿಠಲ ಪ್ರಾರ್ಥಿಸುವೇ 5
--------------
ಗುರುಗೋವಿಂದವಿಠಲರು