ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಕ್ಷಿಸೋಯನ್ನ ರಕ್ಷಿಸೋ ರಕ್ಷಿಸೋ ಬೇಗ ಉಪೇಕ್ಷಿಸದಲೆ ಜಲ ಜಾಕ್ಷ ಯನ್ನ ಮೊರೆ ಪಕ್ಷಿವಾಹನ ದೊರೆ ಪ ವಾರಿಧಿ ಮತ್ಸ್ಯಾವತಾರದಿ ಧರಿಸಿ ಪೊಕ್ಕು ಘೋರದೈತ್ಯನ ಕೊಂದು ಇನ್ನು ಚಾರು ಚರಿತ ವಿಸ್ತಾರ ಶೃತಿಗಳನು ವಾರಿಜಾಸನಗಿತ್ತ ವರದ ಜಗನ್ನಾಥ 1 ವರಕೂರ್ಮನಾಗಿ ಮಂದರಗಿರಿ ಪೊತ್ತು ನಿರ್ಜರರಿಗೆ ಸುಧೆಯನುಣಿಸಿ ಹರುಷದಲಿ ಕರುಣಿಸೋಯಂದರೆ ಕಠಿಣತ್ವ ವಹಿಸುವರೇ ಪರಮ ಪುರುಷ ನೀನು ಭಜಕರ ಕಾಮಧೇನು 2 ಧರೆಯ ಕದ್ದು ಒಯ್ದವನ ಕೋಪದಿ ಘನತರ ಕೋರೆಯಲಿ ಸೆಳದೆ ದನುಜಹರ ವರಾಹನಾದ ಶ್ರೀ ವತ್ಸಲಾಂಛನ ದೇವ ಶರಣಜನ ಮಂದಾರ ಶರನಿಧಿ ಗಂಭೀರ 3 ಗರುಡಗಮನ ಶ್ರೀ ಹರಿ ಸರ್ವೋತ್ತಮನೆಂಬ ತರುಳನ ತಂದೆಯ ತಾಮಸದಿ ಪರಿಪರಿಹಿಂಸೆಯ ಪಡಿಸುತಿರಲು ನರಹರಿ ರೂಪತೋರಿ ಪ್ರಹ್ಲಾದಗೊಲಿದ ಧೊರೆ 4 ಬಲಿಯದಾನವು ಬೇಡಿ ಬ್ರಹ್ಮಾಂಡ ಭಾಂಡವು ಅಳೆದು ಮೂರು ಪಾದದೊಳಗೆ ಮಾಡಿ ತುಳಿದವನ ಪಾತಾಳಕಿಳಿಯಲು ವಾಮನ ಬಲಭೇದಿ ಸನ್ನತ ಪಾಲಿಸೋ ಪ್ರಖ್ಯಾತ 5 ಪರಶುರಾಮ ಬಾಹು ಬಲದಿ ಸಕಲ ರಾಜರನೆಲ್ಲ ಗೆದ್ದು ಸುಸ್ಥಿರ ಮೂರ್ತಿ ಧುರದಿಂದ ಭೂಮಿ ಭೂಸುರರಿಗೇ ಧಾರೆಯ ನೆರೆದ ಶ್ರೀಮದನಂತ ನಿರತದಿ ಭಗವಂತ 6 ಅನಿಮಿಷರೊಡೆಯ ಶರಣು ಶರಣೆನುತ ರಾವಣನನು ಜನು ವಿಭೀಷಣನು ಬರಲು ಘನದಿ ಪಂಕ್ತಿ ಕಂಧರನ ಜಯಿಸಿ ಲಂ- ಇನಕುಲ ಪಾವನ 7 ಬಲದು:ಶಾಸನ ಸೀರಿಸೆಳಿಯೇ ದ್ರೌಪದಿ ಮನದಲಿ ಕಾಮಿತಾರ್ಥ ಫಲದಾಯಕ ಮಾನವ ರಕ್ಷಿಸೆಂದು ಸ್ತುತಿಸಲು ಪೊರೆದೆ ಹಲಧರಾನುಜ ಮುದದಿ 8 ಅಂಗಜ ಪಿತ ತ್ರಿಪುರಾಂಗನೆಯರ ವ್ರತ ಭಂಗಮಾಡಿದೆ ಹಿಂಗದಲೇ ಮಂಗಳಮಹಿಮ ಕೃಪಾಂಗ ಗಂಗೆಯನು ಪಾದ 9 ಚಲುವ ಕುದುರೆಯನೇರಿ ಕಲ್ಕಿಕಯ್ಯೊಳು ಖಂಡೆಯ ಪಿಡಿದು ಝಳಪಿಸುತ ಕಲುಷಾತ್ಮರೆಲ್ಲರ ಖಂಡಿಸಿ ಧರ್ಮವು ಪರಿಪಾಲನೆಮಾಳ್ಪ ಶ್ರೀ ಭೂದುರ್ಗಾಧಿಪಾ 10 ಪಾವನಚರಿತ ಕೃಪಾವನ ರಾಶಿ ಶ್ರೀ ದೇವಕೀಸುತ `ಹೆನ್ನೆಪುರೀಶ’ ದೀನ ದೇವೋತ್ತಮ ದೀನ ಬಾಂಧವ ವೃಂದಾವನ ನಿಲಯಾನಂದ ಸುಂದರಕಾಯಾ 11
--------------
ಹೆನ್ನೆರಂಗದಾಸರು