ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಯೆ ಮೂಜಗದ ದೊರೆಯೆ ನಿನಗಿದು ಸರಿಯೆ ಪ. ಹರಿಯೆ ಮೂಜಗದ ದೊರೆಯೆ ನಿನ್ನನೆ ಮರೆಯಪೊಕ್ಕವರಲ್ಲಿ ಈ ಪರಿ ಬರಿಯ ಪಂಥದಿ ಮರುಗದಿರ್ಪುದು ಸರಿಯೆ ನಿನಗದು ಸರಸವಲ್ಲದುಅ.ಪ. ಉಕ್ಕಿನ ಕಂಬದಿಂದ ಉದಿಸಿ ಬಂದು ರಕ್ಕಸನುರವ ಸೀಳಿ ಕರುಳನು ಬಗೆದು ಉಕ್ಕುವ ಕೋಪದಿಂದ ರಕುತವು ಸುರಿಯೆ ಭಕ್ತ ಪ್ರಹ್ಲಾದನಾದರದಿ ಕಾಯ್ದು ಭಕ್ತ ವತ್ಸಲನೆನಿಸಲಹುದು ಶಕ್ತಿಹೀನತೆಯಿಂದ ಮರೆಹೊಕ್ಕ ಎನ್ನನು [ಕಾಯು]ವುದು 1 ಒಪ್ಪಿಡಿಯವಲಕ್ಕಿಯ ಒಪ್ಪಿಸಿನಿಂದ ವಿಪ್ರನ ನಲವಿಂದ ನೋಡುತಲಂತು ವಿಪುಲಸಂಪದವನ್ನು ಕರುಣಿಸಿದಂಥ ಅಪ್ರತಿಮ ಸಾಹಸಿಯೆನುತೆ ನಿನ್ನೊಳು ತಪಿಸಿ ಬೇಡುವ ಎನ್ನೊಳೀಪರಿ ಒಪ್ಪದೊಪ್ಪದೆನ್ನಪ್ಪ ಕೇಳಿದು ಸರಿಯೇ ಶ್ರೀನರಹರಿಯೇ 2 ಮಾನಿತÀಧ್ರುವ ಬಾಲನಂ ಮನ್ನಿಸಿ ಪೊರೆದೆ ಮಾನಿನಿ ಪಾಂಚಾಲಿಯ ಮಾನದಿ ಕಾಯ್ದೆ ಸಾನುರಾಗದಿಂ ಗಜನಂ ಉದ್ಧರಿಸಿದೆ ಕ್ಷೋಣಿಯೊಳಗತಿ ದೀನರಾದರ ಸಾನುರಾಗದಿ ಪೊರೆವ ಶ್ರೀಧರ ದಾನವಾಂತಕ ಶೇಷಗಿರೀಶನೆ ಸೂನುವೆಂಬಭಿಮಾನ ನಿನಗಿರೆ [ಮಾಣದೆನ್ನನು ಕಾಯೊ] ಹರಿಯೇ ಶ್ರೀನರಹರಿಯೇ3
--------------
ನಂಜನಗೂಡು ತಿರುಮಲಾಂಬಾ
ನಾನೇನ ಮಾಡಿದೆನೊ-ರಂಗಯ್ಯ ರಂಗನೀನೆನ್ನ ಕಾಯಬೇಕೋ ಪಮಾನಾಭಿಮಾನವು ನಿನ್ನದು ಎನಗೇನುದೀನ ರಕ್ಷಕ ತಿರುಪತಿ ವೆಂಕಟರಮಣ ಅ.¥ರಕ್ಕಸತನುಜನಲ್ಲೇ - ಪ್ರಹ್ಲಾದನುಚಿಕ್ಕ ಪ್ರಾಯದ ಧ್ರುವನು ||ಸೊಕ್ಕಿನ ಪಾಪ ಮಾಡಿದಜಮಿಳನು ನಿನ್ನಅಕ್ಕನ ಮಗನು ಮಗನು ಏನೋ -ರಂಗಯ್ಯ 1ಕರಿರಾಜ ಕರಿಸಿದನೇ - ದ್ರೌಪದಿದೇವಿಬರದೋಲೆ ಕಳುಹಿದಳೇ ||ಕರುಣದಿಂದಲಿ ಋಷಿಪತ್ನಿಯ ಶಾಪವಪರಿಹರಿಸಿದೆಯಲ್ಲವೋ -ರಂಗಯ್ಯಒಪ್ಪಿಡಿಯವಲಕ್ಕಿಯ -ನಿನಗೆ ತಂದುಒಪ್ಪಿಸಿದವಗೊಲಿದೆ ||ಒಪ್ಪುವೆ ನಿನಗೆ ಶ್ರೀಪುರಂದರವಿಠಲವರಪ್ಪಂತೆ ಎನ್ನ ಕಾಯೋ -ರಂಗಯ್ಯ 3
--------------
ಪುರಂದರದಾಸರು