ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವ ಕುಲವೊ ರಂಗ ಅರಿಯಬಾರದು ಪ. ಆವ ಕುಲವೆಂದರಿಯಬಾರದು ಗೋವುಕಾವ ಗೊಲ್ಲನಂತೆಪಾರಿಜಾತದ ವೃಕ್ಷÀವ ಸತ್ಯಭಾಮೆಗೆ ತಂದಿತ್ತನಂತೆ ಅ.ಪ. ಗೋಕುಲದಲ್ಲಿ ಪುಟ್ಟಿದನಂತೆ ಗೋವಳರೊಡನೆ ಆಡಿದನಂತೆತಾ ಕೊಳಲನೂದಿ ಮೃಗಪಕ್ಷ್ಷಿಗಳ ಮರುಳುಮಾಡಿದ ದೇವನಂತೆ 1 ಕಾಲಲ್ಲಿ ಶಕಟನ ಒದ್ದನಂತೆ ಗೂಳಿಯ ಕೊಂಬ ಕಿತ್ತನಂತೆಕಾಳಿಂಗನ ಹೆಡೆಯ ತುಳಿದು ಬಾಲೇರಿಗೊಲಿದ ದೇವನಂತೆ2 ಗೊಲ್ಲತೇರ ಮನೆಗಳಲ್ಲಿ ಕಳ್ಳತನವ ಮಾಡಿದನಂತೆಮೆಲ್ಲನೆ ಪೂತನಿ ಅಸುವ ಹೀರಿ ಬಲ್ಲಿದ ಕಂಸನ ಕೊಂದನಂತೆ 3 ಸರ್ಪ ತನ್ನ ಹಾಸಿಗೆಯಂತೆ ಪಕ್ಷಿ ತನ್ನ ವಾಹನವಂತೆÀರ್ಪಭೂಷಣ ಮೊಮ್ಮಗನಂತೆ ಮುದ್ದುಮುಖದ ದೇವನಂತೆ4 ತರಳತನದಿ ಒರಳನೆಳೆದು ಮರನ ಕೆಡಹಿ ಮತ್ತವರ ಸಲಹಿದುರುಳ ರಕ್ಕಸರನು ಕೊಂದ ಚೆಲುವ ಹಯವದನನಂತೆ 5
--------------
ವಾದಿರಾಜ
ದೋರನು ಬ್ರಹ್ಮಾದಿಕರಿಗೆ ಪ ದುಷ್ಟತನವ ಮಾಡಲು ಮನಿಮನಿ ಪೊಕ್ಕು| ಸಿಟ್ಟಿಲೆ ಕಣ್ಣಿಲೆ ಚರಣವನು| ಕಟ್ಟಲು ಒರಳನೆಳೆದುಕೊಂಡು ಹೋಗಿ| ನೆಟ್ಟನೆರಡಮರಕೆಡಹಿದ ಕೃಷ್ಣಾ 1 ಮಣ್ಣವನುಂಗಲು ಮುಳಿಯಲು ಗೋಪಿ| ಚಿಣ್ಣರ ಕೇಳೆ ನಾನಿಲ್ಲೆನುತ| ಸಣ್ಣ ಚೆಲುವಾ ಬಾಯಾ ನೋಡೆಂದು ತೆರೆದು ತಾ| ಉನ್ನಂತ ಬ್ರಹ್ಮಾಂಡ ದೋರಿದಾ ಕೃಷ್ಣಾ2 ನೋಡು ಬಾಲಕ ರೂಪ ತಾನಾಗಿಹಾ| ಪ್ರೌಢತನದಿ ಕೊಳಲನೂದಿ| ರೂಢಿಲಿ ಗೋಪಿಕ ಮನಸೆಳೆದು ನಲಿ| ದಾಡುವ ಮಹಿಪತಿ ಸುತಪ್ರಿಯ ಕೃಷ್ಣಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರನಲ್ಲೆ ಸಖಿ ಪರಿಪೂರ್ಣ ಕಾಮನು ಪ ತೋರನಲ್ಲೆ ಅವನ ಚರಣ ಕಮಲವನ್ನು ಅ.ಪ ಪತಿಸುತರ ಬಿಟ್ಟು ಕೃಷ್ಣನೆ ಗತಿಯೆಂದು ನಂಬಿದ ಸತಿಯರ ದಣಿಸುವುದು ಲಕ್ಷ್ಮೀಪತಿಗೆ ಸರಿಯೆ ನಲ್ಲೆ 1 ಸರಸಿಜಾಕ್ಷಿಯರ ಕೂಡ ಅವನೂ ಸರಸವಾಡುವ ತುರುಗಳಲ್ಲಿ ಗುಡುಗ್ಯಾಡಿ ಕರುಗಳನು ಬಿಚ್ಚುವ2 ಒರಳನೆಳೆದು ಮರವನ್ನು ಮುರಿದು ನಿಲ್ಲುವ ಅರಿಯದಬಲೆಯರ ಸೀರೆ ಮರಕೆ ಕಟ್ಟಿ ಪೋಗುವ 3 ವÀ್ರಜದ ನಾರೇರ ಬಿಟ್ಟು ಕುಬುಜೆ ಗಂಧವ ಬೇಡುವ ಭುಜಬಲವನ್ನು ತೋರಿ ನಿಜ ವೈರಿಯರ ಕೊಲ್ಲುವ 4 ಏಸು ಕಾಲದಿಂದ ಅವನ ಬಯಸಿ ನಾ ಬೇಡುವೆ ವಾಸುದೇವ ವಿಜಯ ರಾಮಚಂದ್ರವಿಠಲನ 5
--------------
ವಿಜಯ ರಾಮಚಂದ್ರವಿಠಲ