ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

*ಆರಿಗಾದರು ಪೂರ್ವದ ಕಟ್ಟಳಿಯು ತಪ್ಪುದು ವಿಧಿಬರಹವು ಪ. ಪೊಡವಿಭಾರವ ಪೊತ್ತು ಮೃಡಗೆ ಭೂಷಣನಾಗಿ ಹೆಡೆಯಲ್ಲಿ ಮಾಣಿಕವಯಿಟ್ಟುಕೊಂಡು ಬಿಡದೆ ಶ್ರೀಹರಿಗೆ ಹಾಸಿಗೆ ಆದ ಫಣಿಪಂಗೆ ಅಡವಿಯೊಳಗಣ ಹುತ್ತ ಮನಿಯಾಯಿತೈಯ್ಯಾ 1 ಸುರಪತಿಯಗೆದ್ದು ಸುಧೆಯನೆ ತಂದು ಮತ್ತೆ ಮಾತೆಯ ಸೆರೆಯ ಪರಿಹರಿಸಿ ಬಹುಶಕ್ತನೆನಿಸಿಕೊಂಡ ಹದಿನಾಲ್ಕು ಲೋಕನಾಳುವವನ ಹೊತ್ತು ಇರುವವಗಾಯಿತು ಮನೆಯು ಮರದ ಮೇಲೆ 2 ರಾಮಚಂದ್ರನ ಸೇವೆಮಾಡಿ ಮೆಚ್ಚಿಸಿಕೊಂಡು ರಾವಣನ ಗರ್ವಮುರಿದು ಬಂದೂ ರೋಮರೋಮಕೆ ಕೋಟಿಲಿಂಗಧರಿಸಿದ ಹನುಮಂತಗೆ ಗ್ರಾಮಗಳ ಕಾಯ್ವದಾಯಿತೈಯ್ಯಾ 3 ಮೂರ್ಲೋಕಕಾಧೀಶ ಮುಕ್ಕಣ್ಣ ಶಿವನೆಂದು ಸಾರುತಿದೆ ವೇದ ಸಟೆಯಲ್ಲವಿದು ಪಾರ್ವತಿಗೆ ಪತಿಯಾದ ಕೈಲಾಸವಾಸನಿಗೆ ಊರಹೊರಗಣ ಕಾಡ ಕಾಯ್ವದಾಯಿತೈಯ್ಯಾ 4 ಮೀರಲಳವಲ್ಲಾ ಮುನ್ನಿನಾ ಕರ್ಮವನು ಕಾರಣಕರ್ತನಿಗಲ್ಲದೆ ಮಾರಪಿತ ಹೆಳವನಾಕಟ್ಟೆರಂಗೈಯ್ಯನ ಸೇರದ ಕಾಲವ್ಯರ್ಥವ್ಯಾದಿತೈಯ್ಯಾ 5
--------------
ಹೆಳವನಕಟ್ಟೆ ಗಿರಿಯಮ್ಮ
ತಪಿಸಲಾರೆ ನಾನು ಪರಿಪರಿ ತಾಪದಲಿ ಕೃಪೆಮಡಿ ಸಲಹಿರಿ ಶ್ರೀ ಗುರುಗಳೆ ಪ. ಸುಪಥ ಕಾಣದೆ ನಿಮ್ಮ ಪಾದವನೆ ನಂಬಿದೆನು ಗುಪಿತ ಮಹಿಮರೆ ಇನ್ನು ಭವಪಾಶ ಬಿಡಿಸುತ್ತ ಅ.ಪ. ಬಂಧು ವರ್ಗಗಳನ್ನ ಬದುಕಿಸುವರು ಎಂದು ಬಂಧನದೊಳು ಬಿದ್ದು ಬೆಂದು ನೊಂದೆ ಮುಂದೆ ದಾರಿಯ ಕಾಣೆ ಮುಕ್ತಿ ಮಾರ್ಗವನರಿಯೆ ಬಂಧು ಬಳಗಗಳೆಲ್ಲ ನೀವೆಂದು ನಂಬಿದೆ 1 ಅಶನವಸನಗಳಲ್ಲಿ ಆಸೆಯನು ತೊರೆಯದೆ ವಸುಮತಿಯೊಳು ಜ್ಞಾನ ಹೀನವಾಗಿ ಪಶುವಿನಂದದಿ ತಿರುಗಿ ಕಾಲವ್ಯರ್ಥ ಕಳೆದೆ ಅಸಮ ಮಹಿಮರೆ ಇನ್ನು ಅಜ್ಞಾನ ಪರಿಹರಿಸಿ 2 ಮಮತೆಯನು ತೊರೆಯದೆ ಮಾಯ ಪಾಶಕೆ ಸಿಲುಕಿ ಮಮಕಾರದಿಂದ ನಾ ಮೈಮರೆತೆನು ನಮಿಸುವೆನು ದೈನ್ಯದಲಿ ನಾನೀಗ ನಿಮ್ಮ ಪದಕೆ ರಮೆಯರಸನ ತೋರಿ ಎನ್ನ ಮನ ಮಧ್ಯದಿ 3 ಪಾವನರೂಪರೆ ಪಾಪರಾಹಿತ್ಯರೆ ಪಾವಿನಶಯನಗೆ ಪರಮಪ್ರಿಯರೆ ದೇವತೆಗಳೊಡೆಯರೆ ದೇವಾಂಶ ಸಂಭವರೆ ಪಾವಮಾನಿಗೆ ಪ್ರಿಯರೆ ಪಾವನ್ನಗಾತ್ರರೆ 4 ಆಪತ್ತು ಕಳೆಯುವರೆ ಶ್ರೀಪತಿಯ ತೋರ್ವರೆ ಕೋಪಿಸದೆ ಎನ್ನೊಳು ಕೃಪೆಗೈಯ್ಯರಿ ಗೋಪಾಲಕೃಷ್ಣವಿಠ್ಠಲ ತಾನು ಹೃದಯದಲಿ ತೋರ್ಪುತೆ ಕರುಣಿಸುತ ಈ ಪರಿಯಿಂ ಸಲಹಿರಿ5
--------------
ಅಂಬಾಬಾಯಿ