ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯೋ ಪ್ರಾಣೇಶ ಕೀಶಕುಲೇಶ ವಾಯುಸುತನೆಂದು ಮೆರೆವ ಜೀವೇಶ ಪ ಅಂಜನಾದೇವಿಯೊಳ್ ಜನಿಸಿಕೊಂಡಿರುವಿ ಅಂಜದೆ ಲಂಕೆಗೆ ಬೆಂಕಿ ಹಚ್ಚಿರುವಿ ಸಂಜೀವನವ ತಂದು ಕಪಿಗಳನುಳಿಸಿದಿ ಕಂಜಾಕ್ಷಿ ಸೀತೆಗುಂಗುರವ ತಂದಿತ್ತೆ 1 ಕುಂತಿದೇವಿಯ ಗರ್ಭದೊಳಗುದ್ಭವಿಸಿದಿ ಪಾರ್ಥರೊಳ್ನೀನಗ್ರಗಣ್ಯನೆಂದೆನಿಸಿ ಪಂಥದಿ ಮಗದಾಧಿಪತಿಯ ಸಂಹರಿಸಿ ಕಾಂತೆಯ ತಲೆಯ ಕೂದಲನೆ ಕಟ್ಟಿಸಿದಿ2 ಪಾಜಕ ಕ್ಷೇತ್ರದೊಳ್ ನೀನವತರಿಸಿ ರಾಜತಾಸನದಿ ಶ್ರೀಕೃಷ್ಣನನಿರಿಸಿ ರಾಜೇಶ ಹಯಮುಖ ಕಿಂಕರನೆನಿಸೀ ಮೂಜಗದಲಿ ಶ್ರೇಷ್ಠಗುರು ನೀನೆಂದೆನಿಸಿ 3
--------------
ವಿಶ್ವೇಂದ್ರತೀರ್ಥ
ರಾಯ ಕಳುಹಿದ ರಂಗ ರಾಯ ಕಳುಹಿದ ಪ್ರಿಯಭಾವೆ ರುಕ್ಮಿಣಿಯರಪ್ರೇಮಭಾಳೆ ನಿಮ್ಮ ಮ್ಯಾಲೆ ಪ. ಕೇಳೋರಾಯ ನಿಮ್ಮ ಮ್ಯಾಲಿ ಬಹಳ ಪ್ರೇಮಕೃಷ್ಣರಾಯ ಹೇಳಲ್ಪಶವೆಮುಯ್ಯ ತಂದು ಏಳು ದ್ವಾರ ದಾಟಿ ಬಂದು1 ಚಂಚಲಾಕ್ಷಿ ಅರಸಿಯರು ನಿಮಗೆ ಪಂಚಪ್ರಾಣ ಕೃಷ್ಣರಾಯ ಕೆಂಚಿ ರುಕ್ಮಿಣಿಮುಯ್ಯ ತಂದುಮುಂಚಿ ಬಾಗಿಲಮನೆಯೊಳು ಇಳಿದರು 2 ಕುಂತಿದೇವಿಯರ ಅರಮನೆಗೆ ಚಿಂತಾಮಣಿಯ ತಾನೆ ಬಂದ ಎಂಥ ಸುಕೃತರಾಯ ನಿಮ್ಮಇಂಥ ಭಾಗ್ಯ ಎಲ್ಲಿ ಕಾಣೆ 3 ಸುದ್ದಿ ಕೇಳಿ ಧರ್ಮರಾಯ ಗದ್ಗದಿ ನುಡಿಯನೆ ನುಡಿದಾನಮುದ್ದು ಮುಖವ ನೋಡಿಪಾದಕೆ ಬಿದ್ದು ಧನ್ಯರಾದೆವಮ್ಮ 4 ಅಂದ ಮಾತು ಕೇಳಿರಾಯ ನಂದ ಬಟ್ಟು ನಂದ ಭಾಷ್ಪಬಿಂದು ಉದುರಿ ಬಿಗಿದು ಕಂಠಛಂದದಿ ರೋಮಗಳು ಉಬ್ಬಿ 5 ಇಂದು ಭದ್ರೆ ದ್ರೌಪತಿಗೆ ತಂದರಮ್ಮ ರುಕ್ಮಿಣಿ ಮುಯ್ಯಆನಂದದಿಂದ ಭಾವೆ ಕೃಷ್ಣಇಂದು ನಿಮ್ಮ ಅರಮನೆಗೆ 6 ಎಷ್ಟು ಸುಕೃತರಾಯ ನಿಮ್ಮ ಧಿಟ್ಟ ರಾಮೇಶತಾನೆ ಬಂದ ಅಷ್ಟ ಸೌಭಾಗ್ಯದ ಮುಯ್ಯ ಶ್ರೇಷ್ಠ ತೋರೋದಮ್ಮ ಸಭೆಯು 7
--------------
ಗಲಗಲಿಅವ್ವನವರು