ಒಟ್ಟು 7 ಕಡೆಗಳಲ್ಲಿ , 5 ದಾಸರು , 7 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರು ಪೇಳಿದರೊ ಜೀವಾ ನಿನಗಾರು ಪೇಳಿದರೋ ಪ ಆರು ಪೇಳಿದರೋ ಈ ಸೋರುವ ಮನೆಯೊಳು ಇರುವುದು ಒಳಿತಲ್ಲಾ ತೆರಳುವುದುಚಿತನೇ ಅ.ಪ. ದುಷ್ಟರಿರುವರೋ ಈ ಗ್ರಹದೊಳು ಕಟ್ಟಿ ಸುಲಿಯುವರೋ ಇಟ್ಟಿದ್ದ ಅನ್ನದಿ ಕೆಟ್ಟ ಕ್ರಿಮಿಗಳುಂಟು ಮುಟ್ಟಿ ಬಳಸುವರಿಲ್ಲ ಹೊಟ್ಟೆ ತುಂಬಿದೋ ಅಲ್ಲಿ 1 ಛಾಯಾವೂ ಇಲ್ಲಾ ಈ ಮನೆಯೊಳು ದಾಯಾವೂ ಇಲ್ಲಾ ಬಾಯ ಬಿಡಿಸುವರೋ ಅನ್ಯಾಯ ಮಾಡುವರೋ ಉಪಾಯದಿಂದಲಿ ಬಿಟ್ಟು ಹಯವದನನ ಶೇರೋ 2 ತರುಣರಿರುವರೋ ಈ ಮನೆಯೊಳು ಮರುಳು ಮಾಡುವರೋ ಪರುಮ ಹರುಷ ನಮ್ಮ ಹನುಮೇಶ ವಿಠಲನ ನೆರೆ ನಂಬಿ ಸ್ಮರಿಸುವ ಸ್ಥಿರ ಪದವನು ಸೇರೊ 3
--------------
ಹನುಮೇಶವಿಠಲ
ಕಾಲ ಮೃತ್ಯುವು ಸ್ತ್ರೀಯಲ್ಲದಲೆ ಕಾಯುವವಳು ತಾನಲ್ಲಣ್ಣ ಕಾಳಕವೀಶ್ವರ ಬಲ್ಲನು ತಾನೇನ ಕಾಳ ಕಿಚ್ಚಿನ ಕುಂಡವಣ್ಣ ಪ ಮಲ ಮೂತ್ರವು ಮಜ್ಜೆಯು ಮೇದಸ್ಸು ಮೇಲೆ ಚರ್ಮ ಹೊದ್ದಿಹೆವಣ್ಣಎಲುಬುಗಳಡಕಲಿ ನರಗಳ ಬಿಗಿವು ಎಡದೆರ ಅಪಿಲ್ಲದೆ ಇಹುದಣ್ಣ ಬಲು ಹೊಲಸಿನ ಮಡುವದು ಮತ್ತೆ ಬಗೆಬಗೆಯ ಕ್ರಿಮಿಗಳು ಮನೆಯೊಳಣ್ಣ ಹೊಲೆಮಯವಿರುವ ಸ್ತ್ರೀಯ ವರ್ಣಿಪೆನು ಹೇವ ಮಾರಿಯು ಕಾಣಣ್ಣ 1 ಕಳಸ ಕುಚವು ಎದೆಎಂಬನ ಬಾಯಲಿ ಕರಿಯ ಮಣ್ಣನೆ ಹಾಕಣ್ಣ ಹೊಳೆವ ಕಂಗಳು ಎಂಬನ ಮೋರೆಗೆ ಹುಡಿಯನೀಗಲೆ ಚೆಲ್ಲಣ್ಣಬಳಕು ನಡೆಯಂತೆಂದು ಬೊಗಳುವನ ನಿಲಿಸದೆ ಅಲ್ಲಿಂದಟ್ಟಣ್ಣಚೆಲುವಿನ ಸುಂದರ ಚೇಷ್ಟೆಗೆ ನಲಿವನ ಚಪ್ಪಲಿಯಿಂದಲಿ ಕುಟ್ಟಣ್ಣ 2 ಬ್ರಹ್ಮಧ್ಯಾನವ ಮಾಡುವುದಕ್ಕೆ ಬ್ರಹ್ಮರಾಕ್ಷಸವು ಇದು ಅಣ್ಣಹಮ್ಮಳಿದು ಯೋಗಾಭ್ಯಾಸದಲಿರೆ ಹೃದಯದಲಿ ಹರಿದಾಡುವುದಣ್ಣಬ್ರಹ್ಮೇತಿಯು ತಾನಿವನ ಸಂಗದಿ ಭವಭವತಿರುಗುವುದ ಬಿಡದಣ್ಣಸಮ್ಮತದಲಿ ಚಿದಾನಂದ ಹೊಂದಿಯೆ ಸೀಮಂತಿನಿಯ ಬಿಡಬೇಕಣ್ಣ 3
--------------
ಚಿದಾನಂದ ಅವಧೂತರು
ತನುವಿದು ನಿತ್ಯವಲ್ಲ ಮನವು ನಿಶ್ಚಲ ಅಲ್ಲ ಪ ಕನಸಿನಂತೆ ಜೀವಿತವೆಲ್ಲ ಇನಿತು ಶಾಂತಿಯ ತಾಣ ಅಲ್ಲ ಅ.ಪ ಜಲಚರಂಗಳು ವನಚರಂಗಳು ಅಲೆವ ಪಕ್ಷಿಕೀಟಕ್ರಿಮಿಗಳು ಕಲುಷ ವಿಮಲವೆಂಬುದನರಿಯವು ಮಾನವ ಜನ್ಮಕೆ 1 ಜನುಮಗಳೊಳು ಹಿರಿಯದೆನಿಪ ಮನುಜ ಜನ್ಮವನಾಂತ ಮೇಲೆ ವಿನಯ ನಯ ವಿಧೇಯತೆಯಿಂದ ವನಜನಾಭನ ನೆನೆಯದಿರ್ದೊಡೆ 2 ಭಜಿಪ ಭಕ್ತರ ಕೂಗಿಗೊಲಿದು ಗಜವ ಪಾಲಿಸಿದಂತೆ ಬಂದು ನಿಜಪದಂಗಳ ತೋರ್ಪ ಮಾಂಗಿರಿ ವಿಜಯರಂಗನ ಸನ್ನುತಿ ಗೈಯದ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಾರ್ಗವೇ ಕಾಣಿಸದು ವೈಕುಂಠಕೆ ಪೇರ್ಗಿರಿಗಳ ದಾಂಟಲಾರ್ಗಳವೋ ಕಾಣೆ ಪ ಭೋರ್ಗರೆವುದು ಬಲಮಾರ್ಗದಿ ಜಲನಿಧಿ ಕಾರ್ಗಡಲು ಎಡ ಮಾರ್ಗದಿ ಕಗ್ಗತ್ತಲೆ ಅ.ಪ ಹಿಂದೆ ಮೃಗಂಗಳ ಸಂದಣಿಯಾರ್ಭಟ ದಿಂದ ಮನದ ದೈರ್ಯಕುಂದಿದುದಕಟ ಮ ಹಾಂಧಕೂಪದೊಳೆನ್ನ ಎದೆ ಕುಸಿದು ಬಂಧಿಸಿತೆನ್ನ ಕಾವ ಬಂಧುಗಳಿಲ್ಲ 1 ಕೂಪದಿ ಕ್ರಿಮಿಗಳು ಕೋಪಿಸಿ ತನುವನು ಈ ಪರಿಯೆಲ್ಲವು ತಾಪತ್ರಯಂಗಳ ಧೂಪ ದೀಪಗಳ ಪಾಪದ ಫಲವೋ 2 ದಡವನು ಕಾಣದೆ ತಡಬಡಿಸುವೆನೋ ಮೃಡನು ತಾ ಮಾಂಗಿರಿಯೊಡೆಯ ಶ್ರೀರಂಗ ಕಡುಪಾತಕಿಯ ಕೈಹಿಡಿದೆತ್ತಿ ಕೃಪೆಯಿಂದ ತಡಿಗೆ ಸೇರಿಸಿ ನಿನ್ನ ಅಡಿಯಪಿಡಿಸೋ ದೇವಾ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಯಾರು ಇಕ್ಕುವರೆಂದು ಹಾರೈಸುವೈ ಆತ್ಮ ಸೋರುತಿದೆ ಮನೆಯೆಲ್ಲ ನಾರುತಿದೆ ಸ್ಥಳವು ಪ ಒಲೆಯೊಳಗೆ ಉರಿಯಿಲ್ಲ ಜಲವಿಲ್ಲ ಬಾವಿಯೊಳು ಕಲಹ ಮಾಳ್ಪಳು ತನ್ನ ಕುಲವನಿತೆಯು ಹೊಲುಬುದಪ್ಪಿಯೆ ಇಲ್ಲಿ ಬರಬಹುದೆ ನೀನೀಗ ಫಲವುಳ್ಳ ಮನೆಗಳನು ಸೇರೆಲವೊ ಆತ್ಮ 1 ಬಾಗಿಲಿಲ್ಲದ ಮನೆಯು ಬಹಳ ಕಗ್ಗತ್ತಲೆಯು ಕೂಗುವುದು ಹುಲಿ ಕರಡಿ ಇದಿರಿನೊಳಗೆ ಬೇಗದೊಳು ಇಲ್ಲಿಂದ ಸಾಗುವುದೆ ಸೌಖ್ಯಗಳು ನಾಗಶಯನನ ಗುಡಿಯ ಸೇರೆಲವೊ ಆತ್ಮ 2 ಒಟ್ಟೆಗಡಿಗೆಯ ಒಳಗೆ ಇಟ್ಟಿರ್ದ ಬುತ್ತಿಗಳು ಕೆಟ್ಟ ಕ್ರಿಮಿಗಳು ಬಂದು ಬಹಳ ಹಳಸಿದವು ಬಟ್ಟಲಿಡುವವರಿಲ್ಲ ಮುಟ್ಟಿ ಬಳಸುವರಿಲ್ಲ ಹೊಟ್ಟೆ ತುಂಬುವುದುಂಟೆ ದುಷ್ಟರೊಳು ಆತ್ಮ 3 ಹಾಳು ಮನೆಯನು ನಿನಗೆ ತೋರಿಕೊಟ್ಟವರಾರು ಬೀಳುವುದು ಮೇಲೆ ಹದಿನಾರು ಭಿತ್ತಿಗಳು ಏಳು ಇಲ್ಲಿರಬೇಡ ಕಾಳಸರ್ಪನು ಬಂದು ಕಾಲ ಕಚ್ಚ್ಚುವನಲ್ಲೊ ಎಲೆ ದುಷ್ಟ ಆತ್ಮ 4 ಮೂರು ಮಾತನು ಮೇಲೆ ಯಾರ ಕೂಡಾಡಿದೆಯೊ ಆರು ಪಥದಲಿ ನೀನು ಮೀರಿ ನಡೆದೆ ಕೇರಿಯಾಗಿರ್ದ ಹದಿನೆಂಟು ಅಂಗಡಿಯೊಳಗೆ ಆರ ವ್ಯಾಪಾರವನು ಕೇಳಿದೈ ಆತ್ಮ 5 ಹತ್ತು ತಾಸಿನ ಮೇಲೆ ತುತ್ತು ಕೊಡುವವರಾರು ಬತ್ತುವುದು ಕೈಕಾಲು ಬಳಲಿಕೆಯೊಳು ಮತ್ತೇಳು ಮಂದಿ ತಾವತ್ತತ್ತ ಸಾರುವರು ಕರ್ತುಗಳ ನಾ ಕಾಣೆ ನೀ ಕೇಳೊ ಆತ್ಮ 6 ಎಂಟು ಮಂದಿಯು ತನಗೆ ನೆಂಟರೆಂಬಾಶೆಯೊಳು ಗಂಟ ಕಟ್ಟಿಯೆ ಮನದಿ ಮರುಗುತಿರಲು ಗಂಟಲೊಣಗಿಯೆ ವಾಯು ಕಂಠದೊಳು ಪೋಪಾಗ ನಂಟರನು ನಾ ಕಾಣೆ ಆಲಿಸೈ ಆತ್ಮ 7 ಆಯವಿಲ್ಲದ ಮನೆಯು ಛಾಯೆ ಇಲ್ಲದ ಮಡದಿ ದಾಯವಿಲ್ಲದ ಊರು ಕರಕಷ್ಟವು ಬಾಯ ಹೊಯ್ಯೆಂಬರೊಳು ನ್ಯಾಯ ಸೇರುವುದೆ ಉ- ಪಾಯದಲಿ ಸಾರೆಲೆವೊ ಸಾರಿದೆನು ಆತ್ಮ 8 ಮೂಡಗಿರಿವಾಸನೊಳು ಬೇಡಿಕೊಂಡರೆ ನಿನಗೆ ನೀಡುವನು ಧರ್ಮವನು ಧೈರ್ಯನಾಗಿ ಬೀಡುಬಿಟ್ಟಲ್ಲಿಂದ ಓಡುವುದು ಸುಖದೊಳಗೆ ಕೂಡುವುದು ವರಾಹತಿಮ್ಮಪ್ಪನೊಳು ಆತ್ಮ 9
--------------
ವರಹತಿಮ್ಮಪ್ಪ
ಗೋವಿಂದ ಎನ್ನಿರೊ -ಹರಿ ಗೋವಿಂದ ಎನ್ನಿರೊ ||<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಗೋವಿಂದನ ನಾಮವ ಮರೆಯೆದಿರಿರೊ ಪ.ತುಂಬಿರುವ ಪಟ್ಟಣಕೆ ಒಂಬತ್ತು ಬಾಗಿಲು |ಸಂಭ್ರಮದರಸುಗಳೈದು ಮಂದಿ ||ಡಂಭಕತನದಿಂದ ಕಾಯುವ ಜೀವವ |ನಂಬಿ ನಚ್ಚಿ ಕೆಡಬೇಡಿ ಕಾಣಿರೊ 1ನೆಲೆಯು ಇಲ್ಲದಕಾಯ ಎಲವಿನ ಹಂದರವು |ಬಲಿದು ಸುತ್ತಿದ ಚರ್ಮದ ಹೊದಿಕೆ ||ಮಲಮೂತ್ರಂಗಳು ಕೀವುಗಳು ಕ್ರಿಮಿಗಳು |ಚೆಲುವ ತೊಗಲನು ಮೆಚ್ಚಿ ಕೆಡಬೇಡಿರಯ್ಯ 2ಹರ ಬ್ರಹ್ಮ ಸುರರಿಂದೆ ವಂದಿತನಾಗಿಪ್ಪ |ಹರಿಯೇ ಸರ್ವೋತ್ತಮನೆಂದೆನ್ನಿರೊ ||ಪುರಂದವಿಠಲನ ಸ್ಮರಣೆಯ ಮಾಡಲು |ದುರಿತಭಯಂಗಳ ಪರಿಹರಿಸುವುದು3
--------------
ಪುರಂದರದಾಸರು
ಹರಿದಿನದಲಿ ಉಂಡ ನರರಿಗೆ -ಘೋರ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ನರಕ ತಪ್ಪದು ಎಂದುಶ್ರುತಿಸಾರುತಲಿದೆಪ.ಗೋವ ಕೊಂದ ಪಾಪ, ಸಾವಿರ ವಿಪ್ರರ |ಜೀವಹತ್ಯದ ಮಾಡಿದ ಪಾಪವು ||ಭಾವಜನಯ್ಯನ ದಿನದಲುಂಡವರಿಗೆ |ಕೀವಿನೊಳಗೆ ಹಾಕಿ ಕುದಿಸುವ ಯಮನು 1ಒಂದೊಂದು ಅಗಳಿಗೆ ಕೋಟಿ ಕೋಟಿ ಕ್ರಿಮಿಗಳು |ಅಂದಿನ ಅನ್ನವು ನಾಯ ಮಾಂಸ ||ಮಂದರಧರನ ದಿನದಲುಂಡವರನು |ಹಂದಿಯ ಸುಡುವಂತೆ ಸುಡುವನು ಯಮನು 2ಅನ್ನ -ಉದಕ ತಾಂಬೂಲ - ದರ್ಪಣಗಳು |ಚೆನ್ನವಸ್ತ್ರಗಳೆಲ್ಲ ವರ್ಜಿತವು ||ತನ್ನ ಸತಿಯ ಸಂಗ ಮಾಡುವ ಮನುಜನ |ಬೆನ್ನಲಿ ಕರುಳ ಉಚ್ಚಿಸುವನು ಯಮನು 3ಜಾವದಜಾಗರಕ್ರತು ನಾಲ್ಕು ಸಾವಿರ |ಜಾವ ನಾಲ್ಕರ ಫಲಕೆ ಮಿತಿಯಿಲ್ಲವು ||ದೇವದೇವನ ದಿನದಿ ನಿದ್ರೆಗೈದರೆ ಹುರಿ - |ಗಾವಿಲಿಯೊಳು ಹಾಕಿ ಹುರಿಯುವ ಯಮನು 4ಇಂತು ಏಕಾದಶಿ ಉಪವಾಸಜಾಗರ |ಸಂತತ ಕ್ಷೀರಾಬ್ಧಿಶಯನನ ಪೂಜೆ ||ಸಂತೋಷದಿಂದಲಿ ಮಾಡಿದ ಜನರಿಗ - |ನಂತ ಫಲವನೀವ ಪುರಂದರವಿಠಲ 5
--------------
ಪುರಂದರದಾಸರು