ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರೆ ಗೌರಿ ಪೂಜಿಸುವೆನು ಸಾರಸಾಂಬಕಿ ಸಾರುವೆ ಸಂಸಾರದಿ ಸುಖದೋರೆ ವಿಧುಮುಖಿ ಪ ಕುಸುಮ ಗಂಧ ಪರಿಮಳ ಚಂದದಿ ಸಮರ್ಪಿಸುವೆನು ಪುಷ್ಪಫಲಗಳ1 ಮಂಗಳೆಂದು ಪಾಡುತ ಬೆಳಗುವೆನು ಆರುತಿ ಮಂಗಳಗೌರಿಯೆ ಕೊಡು ಸೌಭಾಗ್ಯ ಸಂತತಿ2 ಮಂಗಳ ಪ್ರದಾತೆ ಗಿರಿಸಂಭೂತೆ ಸುರನುತೆ ಮಂಗಳಾಂಗಿ ಕುರು ಕರುಣಾಮಯಿ ನಮೋಸ್ತುತೆ 3 ನಿತ್ಯ ಮಾಡಿಸೆ ಪುತ್ರ ಪೌತ್ರಾದಿ ಸಂಪದವಿತ್ತು ರಕ್ಷಿಸೆ 4 ರತಿಯ ಪತಿಯ ಪಿತಗೆ ಸದಾಪ್ರತಿಮೆಯೆನಿಸುವ ಅತಿಥಿಗಳನು ಸೇವಿಸುವ ಸುಮತಿಯ ಕೊಡು ಜವ5 ಸಡಗರದಿ ನಿಮ್ಮಡಿಯ ಶೇವೆ ಬಿಡುದೆ ಮಾಡುವೆ ಮೃಡನ ರಾಣಿ ಕೊಡುವರಗಳ ಗಡನೆ ಬೇಡುವೆ 6 ಶರಣು ಜನರ ಪೊರೆವ ಕಾರ್ಪರ ನಾರಸಿಂಹನ ಚರಣ ಕಮಲಯುಗದಿ ಭಕುತಿ ಇರಲಿ ಅನುದಿನಾ 7
--------------
ಕಾರ್ಪರ ನರಹರಿದಾಸರು