ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗೊಲ್ಲತಿಯರ ಕಣ್ಣದೃಷ್ಟಿ ಮಗಗಾಯಿತಮ್ಮ ಬಹು ನಲ್ಲೆಯರು ಬಂದು ಮೆಚ್ಚುಮದ್ದು ಮಾಡಿ ಹೋದರಮ್ಮ ಪ. ಅಂಗಕೆ ಒಳಿತಿಲ್ಲವಮ್ಮ ಕಂಗಳು ಮುಚ್ಚಲೊಲ್ಲನಮ್ಮ ಹೆಂಗಳ ನೋಡುತಲೆ ಚಟ್ಟಿಕ್ಕಿದನಮ್ಮ ತಂಗಿ ನೀರು ಎರೆದೆವಮ್ಮ ತುಂಗಗಾತ್ರ ಎದ್ದು ನಮ್ಮ ಭಂಗಪಡಿಸುತ ಬಾಯ ತೆರೆದನಮ್ಮ 1 ನೀನು ಮೈಯ ನೋಡಮ್ಮ ತನುವು ಕಿರಿದಾಯಿತಮ್ಮ ಮೊಲೆಯಾನ ಕೊಡಲಿ ತಾಯ ನೋಡನಲ್ಲಮ್ಮ ಅನ್ನವ ಕೊಳಲೊಲ್ಲನಮ್ಮ ಅತಿಭೀತನಾದ ದೈತ್ಯ ಕನ್ನೆ ಮೊಲೆಹಾಲನುಂಡು ಬೆಳೆದನಲ್ಲಮ್ಮ 2 ನಮ್ಮ ಮಾತು ಕೇಳನಮ್ಮ ಒಮ್ಮೆಗೆ ಮೈಹೊದಿಯ ನಮ್ಮ ಸುಮ್ಮನೆ ಘೊರಸುತಾನೆ ಮಲಗನಲ್ಲಮ್ಮ ಬೊಮ್ಮಜೆಟ್ಟಿಗೆ ಮಾಡಿದೆವಮ್ಮ ಒಮ್ಮೆಗಿಷ್ಟೆಲ್ಲವಾಯಿತಮ್ಮ ನಮ್ಮ ಹಯವದನಗಿನ್ನು ಅಂಜಿಕಿಲ್ಲಮ್ಮ 3
--------------
ವಾದಿರಾಜ
ಹೇಗೆ ಕಳೆಯಬೇಕೋ ಹೊತ್ತು ಹೇಗೆ ಕಳೆಯಬೇಕೋ ಪ ಹೇಗೆ ಕಳಿಲಿ ಭವಸಾಗರದಲಿ ಮನ ನೀಗದು ಚಂಚಲ ಸಾಗರನಿಲಯ ಅ.ಪ ಹುಟ್ಟಬಾರದಿತ್ತು ಇಹ್ಯದಿ ಹುಟ್ಟಿದ್ದೇ ತಪ್ಪಾಯಿತು ನಿಷ್ಠೆಲಿರಗೊಡದೆನ್ನ ದುಷ್ಟಮನಸು ಘಳಿ ಗಿಷ್ಟೆಲ್ಲ ಎಲ್ಲಿತ್ತು ಹುಟ್ಟದಿದ್ದರೆ ನಾನು 1 ಕ್ಷಣಕ್ಷಣಕೊಂದು ರೀತಿ ಮನಸಿನ ಗಣನೆಯಿಲ್ಲದ ಭ್ರಾಂತಿ ಜನಿಸಿದಂದಿನಿಂದ ಘನತರ ಕುಣಿಸ್ಯಾಡಿ ಜನರ ಸೇವೆಯೊಳು ದಣಿಸಿತು ಪಾಪಿ 2 ಅನುಗಾಲವು ಚಿಂತೆ ಜೀವಕೆ ಇನಿತು ಇಲ್ಲ ಸ್ವಸ್ಥ ತನುಮನಧನ ನಿನಗರ್ಪಿಸಿ ಬೇಡುವೆ ಘನ ಬೇಸತ್ತೆ ಪೊರೆ ಚಿನುಮಯ ಶ್ರೀರಾಮ 3
--------------
ರಾಮದಾಸರು