ಒಟ್ಟು 9 ಕಡೆಗಳಲ್ಲಿ , 6 ದಾಸರು , 9 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದಕು ಸಮ್ಮತನಾಗೆಲೋ ನೀ ನದಕುನು ಸಮ್ಮತನಾಗೆಲೊ ಪ ಇದು ಅದು ಎಂಬುದರ್ವಿಧವ ತಿಳಿದು ನೀ ನೆದಕುನು ಸಮ್ಮತನಾಗೆಲೊ ಅ.ಪ ಕಡುಸಿರಿಯೆಂಬುದು ಮರವೆಕುಣಿ ಬಡತನವೆಂಬುದು ಅರಿವಿನಮನೆ ಒಡೆತನವೆಂಬುದು ಪಾಪದ ಗೋಣು ದುಡಿತವೆಂಬುವುದು ಜ್ಞಾನದ ಖನಿ ದೃಢದಿಂದರಿದು ಹುಡುಕಾಡಿದರೋ ಳ್ಹಿಡಕೋ ನಿನಗೆ ಹಿತವಾವುದು ನೋಡಿ1 ಕೆಟ್ಟ ಸಂಸಾರ ಹೇಯಮೂತ್ರ ಕುಣಿ ನಿಷ್ಠೆ ಭಕ್ತಿ ಆನಂದಾಮೃತ ಖಣಿ ದುಷ್ಟಜನರ ಸಂಗ ನರಕಕುಣಿ ಶಿಷ್ಟ ಸಜ್ಜನಸಂಗ ಮುಕ್ತಿಮನೆ ನಿಷ್ಠೆಯಿಂದರಿತು ಇಷ್ಟರೊಳಗೆ ನೀ ಇಷ್ಟಕೆ ಬಂದದ್ದು ಹಿಡಕೋ ನೋಡಿ 2 ನರರ ಸೇವೆ ಮಹ ದುರಿತಬೇರು ಶರಣರ ಸೇವೆ ಸ್ಥಿರಸುಖದ ತವರು ಬರಿದೆ ಕೆಡದೆ ಹರಿಚರಣ ಕೋರು ಮರುಳು ಗುಣಗಳೆಲ್ಲ ತರಿದು ತೂರು ಧೀರ ಶ್ರೀರಾಮನ ಚಾರುಚರಣ ಸೇರಿ ಪರಮಪದವಿಯೊಳು ಲೋಲ್ಯಾಡು 3
--------------
ರಾಮದಾಸರು
ಎಂಥ ಕೌತುಕವೆ ನಿಮ್ಮಿಬ್ಬರದೆಂಥ ಕೌತುಕವೆಎಂಥ ಕೌತುಕ ಚಿಂತಾಮಣಿಯ ನೋಡಿಸಂತೋಷ ವಾಗದೆ ಕಾಂತೆಯರುಕಾದುವ ಎಂಥ ಕೌತುಕವೆ ಪ. ನಾರಿಯರಿಬ್ಬರ ಬಿಟ್ಟು ನೀರೊಳಡಗಿದಮಾರಿ ತೋರದಲೆ ನೆಲವನೆ ಮಾರಿ ತೋರದಲೆ ನೆಲವನೆ ಬಗಿದುಅತಿ ಕ್ರೂರನಾದರೂ ಬಿಡರೆಲೆ ಸಖಿಯೆ1 ತಿರಕ ತಾಯಿಯಸುದ್ದಿ ಅರಿತವನಲ್ಲದೆದೊರೆತನ ಬಿಟ್ಟು ದನವನೆ ಕಾಯ್ದುದೊರೆತನ ಬಿಟ್ಟು ದನವ ಕಾಯ್ದರುನಿಮ್ಮ ಕರಕರೆ ಒಂದು ಬಿಡರೆಲೆ ಸಖಿಯೆ2 ಬತ್ತಲಾಗಿ ಎನ್ನ ಹತ್ತಿಲೆ ನಿಲ್ಲೆಂದುಎತ್ತ ಓಡಲೆನುತÀ ಕುದುರೆಯಎತ್ತ ಓಡಲೆನುತ ಕುದುರೆ ಜಳಕಿಸಿಬೆನ್ಹತ್ತಿ ಕೊಂಡವನ ಬಿಡರೆಲೆ ಸಖಿಯೆ3 ಕಾಲ ನಳಿನಾಕ್ಷಿ ಆಗ ನೆರವಾದಿನಳಿನಾಕ್ಷಿ ಆಗ ನೆರವಾದಿ ಉಪಕಾರ ಒಲಿದುಶ್ರೀಕೃಷ್ಣ ಮದುವ್ಯಾದ ಸಖಿಯೆ 4 ಕುಂದುಗುಣಗಳೆಲ್ಲ ಮುಂದಕ್ಕೆ ತಾರದೆ ಹಿಂದಿನ ಉಪಕಾರ ಸ್ಮರಿಸುತ ಹಿಂದಿನ ಉಪಕಾರ ಸ್ಮರಿಸುತ ಅವಳು ಮುಂದೆ ಬೇಕೆಂದು ಮನಸೋತ ಸಖಿಯೆ5 ಭಾವೆ ರುಕ್ಮಿಣಿ ನಿಮ್ಮ ಹೀನಗುಣನೋಡದೆಕಾಮನ ಪಿತನು ಕೈ ಹಿಡಿದ ಕಾಮನ ಪಿತನು ಕೈ ಹಿಡಿದ ಕಾರಣಭೂಮಂಡಲವೆಲ್ಲ ನಮಿಸಿತು ಸಖಿಯೆ 6 ಅಷ್ಟು ಜನರೊಳು ಧಿಟ್ಟತನವ ಮಾಡಿಗಟ್ಯಾಗಿ ನೀನು ರಥವೇರಿಗಟ್ಯಾಗಿ ನೀನು ರಥವೇರಿ ಧೈರ್ಯದಿಕೃಷ್ಣನ ಬೆರೆದು ತೆರಳಿದಿ ಸಖಿಯೆ 7 ಮುದ್ದು ರಾಮೇಶಗೆÀ ಕದ್ದು ಓಲೆಯ ಬರಿಯೆಹದ್ದು ವಾಹನನು ಎರಗಿದಹದ್ದು ವಾಹನನು ಎರಗಿದ ಕಾರಣವಿದ್ವಜ್ಜನರೆಲ್ಲ ನಮಿಸಿತು ಸಖಿಯೆ8
--------------
ಗಲಗಲಿಅವ್ವನವರು
ಒಂದೇ ನಾಮದಲಡಗಿದವೊ ಅಡಗಿದವೋ ಆಪ ಅಖಿಳ ವೇದಗಳು ಅ ಪ ಒಂದೇ ನಾಮವೆ ಪ್ರಹಲ್ಲಾದನ್ನ ರಕ್ಷಿಸಿತು ಒಂದೇ ನಾಮವೆ ಅಜಾಮಿಳಗೆ ವೊಲಿದಿತು ತಂದೆ ತಾಯ ಬಿಟ್ಟ ಕಂದ ಧ್ರುವರಾಯಗೆ ಆ ನಂದ ಪದವಿಯಿತ್ತ ಅದ್ಭುತ ಮಹಿಮೆಯು 1 ಮಚ್ಛಾದ್ಯನಂತಾವತಾರಾ ಸ್ವಚ್ಛ ಅಷ್ಟಾದಶ ಪುರಾಣ ಅಮೃತದ ಸಾರಾ ಕಚ್ಛಪ ತ್ರಿಜಗಕೆ ಆಧಾರ ತನ್ನ ಸ್ವೇಚ್ಛೆಯಿಂದಲಿ ತಾ ಮಾಡೋ ವ್ಯಾಪಾರಾ 2 ಒಬ್ಬರಿಂದಲಿ ತನಗಿಲ್ಲ ತಾ ನೊಬ್ಬನೆ ಜೀವರ ರಕ್ಷಿಪನೆಲ್ಲಾ ಕಬ್ಬುಬಿಲ್ಲಿನ ಪಿತ ವಿಜಯವಿಠ್ಠಲರೇಯ- ವೈ ದರ್ಭೆಯ ರಮಣನ ಸುಗುಣಗಳೆಲ್ಲಾ 3
--------------
ವಿಜಯದಾಸ
ಕಷ್ಟಹರಿಸೊ ಪರಮೇಷ್ಟಿಪಿತನೆ ನೀ ಕೈ ಬಿಟ್ಟರೆ ಸೃಷ್ಟಿಯೊಳು ಪಾರುಗಾಣುವುದೆಂತೂ ಪ ಇಷ್ಟದಿಂದಲೋ ಅನಿಷ್ಟದಿಂದಲೋ ನಾನೇ ಹುಟ್ಟಿಬಂದೆನೆ ದೇವ-ನಿನ್ನಿಷ್ಟದಿಂದಲ್ಲವೇ ಅ.ಪ ಬಿಂಬನೆನಿಸಿದೆ ಎನಗೆ ಪ್ರತಿಬಿಂಬ ನಾ ನಿನಗೆ ಬಿಂಬ ಪ್ರತಿಬಿಂಬಕೆ ಉಪಾಧಿಯು ನಿತ್ಯ- ವೆಂಬನ್ವಯಕೆ ಗುಣತ್ರಯಬದ್ಧವೇ ಕಾರಣ- ವೆಂಬ ಗುಣಜೀವಸ್ವರೂಪೋಪಾಧಿಯು ಬೆಂಬಲನೀನಿದ್ದೂ ಗುಣಕಾರ್ಯಕನುವಾಗಿ ಇಂಬುಕೊಡುವೆ ಫಲಭೋಗಿಸಲೀವೇ ಎಂಬನುಡಿ ಶ್ರುತಿಶಾಸ್ತ್ರಸಿದ್ಧವು ನಂಬಿಹುದು ಜಗವೆಲ್ಲ ಸತ್ಯವು ಶಂಬರಾಂತಕ ಪಿತನೆ ಎನ್ನ ಹೃದ- ಯಾಂಬರದಿ ನಿನ್ನ ಬಿಂಬ ತೋರೈ 1 ಕಾಲಕರ್ಮಾದ್ಯಷ್ಟಗುಣಗಳೆಲ್ಲವು ನಿಜ- ವೆಲ್ಲಜಡಗಳು ಮತ್ತು ಅಚೇತನಂಗಳೈ ಶೀಲ ಮೂರುತಿ ನೀ ಪರಮ ಚೇತನನಾಗಿ ಎಲ್ಲ ಕಾಲದಿ ನಿನ್ನ ನಿಯಮನಂಗಳೈ ಕಾಲಕರ್ಮಗುಣಂಗಳೇನಿಹುದೆಲ್ಲ ಫಲಪ್ರದಾನವ ಮಾಡೆ ಶಕ್ತಿ ಜಡಕೆಂತಿಹುದಯ್ಯ ಕಾಲನಾಮಕ ನೀನೆ ಸರ್ವ ಕಾಲದಲಿ ಸ್ವಾತಂತ್ರ್ಯ ನಿನ್ನದೋ ಇಲ್ಲ ಘನ ಸಮರಿಲ್ಲ ಸರ್ವಕರ್ಮ ಫಲವೆಲ್ಲ ನೀನೆ ದಾತೃವೋ 2 ಮರ್ಮವರಿಯೆನೊ ದೇವ ಧರ್ಮಭ್ರಷ್ಟನಾದೆ ಕರ್ಮಫಲಾನುಭವಮಾಡಿ ಬೆಂಡಾದೆನು ಕರ್ಮ ತಾ ಶಿಕ್ಷಿಸಲರಿಯದು ನ್ಯಾಯ ಧರ್ಮಾಧಿಪತಿ ಭೀಕರ ಫಲಕೊಟ್ಟು ಶಿಕ್ಷಿಪಂತೆ ಧರ್ಮಮೂರುತಿ ಶುದ್ಧನಿಷಿದ್ಧಕರ್ಮಂಗಳಿಗೆ ಪೂರ್ಣಫಲವಿತ್ತು ಸಮನೆಂದೆನಿಸಿರುವೆ ಕರ್ಮಮೋಚಕ ನೀನೆ ಸಕಲ ಕರ್ಮಪ್ರದನೆಂದೆನಿಸಿ ಪೂರ್ವ- ಕರ್ಮಫಲ ಭೋಗಿಸಲು ಜನ್ಮವನಿತ್ತು ಕರ್ಮಪ್ರವಹದೊಳಿಡುವೇ 3 ವಿಮುಖನಾಗಿಹೆ ಶ್ರುತಿಸ್ಮøತಿಶಾಸ್ತ್ರಧರ್ಮಕೆ ಪ್ರಮುಖನಾಗಿಹೆ ದುಷ್ಕರ್ಮ ಮಾರ್ಗದಲ್ಲಿ ಕರ್ಮಕಲಾಪದ ಧರ್ಮ ಮರ್ಮವನರಿಯೆ ಹೆಮ್ಮೆಯಿಂದಲಿ ನಾನಾ ಕರ್ಮಕೂಪದಲಿರುವೆ ಪೆರ್ಮೆಗೋಸುಗ ಅಧರ್ಮವೆಷ್ಟೋ ಮಾಡ್ದೆ ಒಮ್ಮೆಗಾದರು ಸದ್ಧರ್ಮಾಚರಿಸಲಿಲ್ಲ ಕರ್ಮ ಅಕರ್ಮ ವಿಕರ್ಮ ಪರಿಚಯವಿಲ್ಲ ಜನ್ಮಕೆ ಧರ್ಮಪುತ್ರನೆ ದ್ವಂದ್ವಕರ್ಮಸಮರ್ಪಿಸಲು ಸನ್ಮತಿಯ ಕೊಟ್ಟಿನ್ನು 4 ಬೆಟ್ಟದೊಡೆಯನೆ ಶ್ರೀ ವೇಂಕಟೇಶ ನೀ ತುಷ್ಟಿಯಾದರೆ ನಿನ್ನಿಷ್ಟದಂತೆ ಫಲವು ಸೃಷ್ಟಿಯೊಳು ಪುಟ್ಟಿಸಿ ದುಷ್ಟಕರ್ಮದ ಪಾಶ ಕಟ್ಟಿನೊಳಿಟ್ಟೆನ್ನ ಕಷ್ಟಪಡಿಸುವರೇ ಸೃಷ್ಟೀಶ ಉರಗಾದ್ರಿವಾಸ ವಿಠಲ ಎನ್ನ ನೀನಿಟ್ಟಿರುವಷ್ಟುಕಾಲ ಧಿಟ್ಟಭಕುತಿಯ ಕೊಟ್ಟು ದಿಟ್ಟ ರಕ್ಷಿಸು ಇಷ್ಟಮೂರುತಿಯೆ ಇಷ್ಟದಾಯಕನೆಂದು ನಾನಿಷ್ಟು ನುಡಿದೆನೋ ನಿನ್ನ ಎನ್ನ ಮನೋಭೀಷ್ಟೆ ಸಲಿಸೆ ನಿನ್ನಿಷ್ಟವಯ್ಯ5
--------------
ಉರಗಾದ್ರಿವಾಸವಿಠಲದಾಸರು
ಧನ್ಯ ಧನ್ಯ ರಾಯ ಮಾನ್ಯ ಮಾನ್ಯವೀತ ಮುನ್ನಾರು ಸರಿಯಿಲ್ಲಮುನ್ನೆಲ್ಲ ಕೆಲದಿ ಕೃಷ್ಣನ ಪ್ರಿಯ ಪ. ಕಾಮ ಕ್ರೋಧಗಳೆಲ್ಲ ಸೀಮೆಯ ದಾಟಿಸಿಭೂಮಿಯನಾಳುವನೆಪ್ರೇಮದಿರಾಯ 1 ಚಲ್ವನರಾಜ್ಯದಿ ಇಲಿಗೆ ಬೆಕ್ಕಿಗೆ ಹಿತ ಹುಲಿಗೆ ಮೊಲಕೆ ಹಿತ ಬಲು ಕೌತುಕವ2 ಅಪ್ಪನ ರಾಜ್ಯದಿ ಸರ್ಪಕಪ್ಪೆಗೆ ಹಿತ ತಪ್ಪು ಗುಣಗಳೆಲ್ಲ ಒಪ್ಪರು ಕೆಲದಿ 3 ಮಾನ್ಯನ ರಾಜ್ಯದಿ ಆನೆ ಸಿಂಹಕೆ ಹಿತ ಏನೆಂಬ ಸವತೆಯರ ಹೀನತೆ ಇಲ್ಲ4 ಮುನ್ನ ಕಲಿಯಕಟ್ಟಿ ಚನ್ನರಾಮೇಶನಅನಂತ ದಯಪಡೆದ ಉನ್ನತಿ ನೋಡ 5
--------------
ಗಲಗಲಿಅವ್ವನವರು
ನಾಗಶಯನನು ನಿನಗಾಗಿಯೆ ಬಂದಿಹೆÉ ಬಾಗಿಲ ತೆಗೆಯೆ ಭಾಮೆ ನೀ ಬಾಗಿಲ ತೆಗೆಯೆ ಭಾಮೆ ಪ. ಕೂಗುವ ನೀನ್ಯಾರೊ ಈಗ ಹೊತ್ತಲ್ಲ ಕೂಗಬೇಡ ಪೋಗೋ ನೀ ಕೂಗಬೇಡ ಪೋಗೋಅ.ಪ. ನಿಗಮ ಚೋರನ ಗೆದ್ದ ನೀರಜಾಕ್ಷನೆ ಭಾಮೆ ನಾ ನೀರಜಾಕ್ಷನೆ ಭಾಮೆ ನಾರುವ ಮೈಯನ್ನು ಎನ್ನಲ್ಲಿ ತೋರದೆ ಸಾರು ಸಾರು ನೀ ದೂರ ರಂಗ ಸಾರು ಸಾರು ನೀ ದೂರ 1 ಮಂದರ ಗಿರಿಯನು ಬೆನ್ನಲಿ ಪೊತ್ತ ಇಂದಿರೆಯರಸನೆ ಭಾಮೆ ನಾ- ನಿಂದಿರೆಯರಸನೆ ಭಾಮೆ ಇಂದು ನಿನಗೆ ತಕ್ಕ ಭಾರಗಳಿಲ್ಲವು ಸಿಂಧುವಿನೊಳು ನೀ ಪೋಗೈ ಕೃಷ್ಣ ಸಿಂಧುವಿನೊಳು ನೀ ಪೋಗೈ 2 ಧರಣಿಗೆ ಸುಖವನು ತೋರಿದ ಸೂಕರ ಪರಮಪುರುಷನೆ ಭಾಮೆ ನಾ ಪರಮ ಪುರುಷನೆ ಭಾಮೆ ವರಾಹರೂಪದ ನಿನ್ನ ಗುರುಗುರು ಶಬ್ದವ ಅರಿವಳಲ್ಲವೊ ನೀ ಪೋಗೈ ರಂಗ ಅರಿವಳಲ್ಲವೊ ನೀ ಪೋಗೈ 3 ಬಾಲನ ತಾಪವ ಕೋಪದಿ ತರಿದ ನಾರಸಿಂಹನೆ ಭಾಮೆ ನಾ ನಾರÀಸಿಂಹನೆ ಭಾಮೆ ಜ್ವಾಲೆಯ ವದನ ಕ್ರೂರ ಕಾರ್ಯಂಗಳ ಕೇಳಿ ಅಂಜುವಳಲ್ಲ ಪೋಗೈ ರಂಗ ಕೇಳಿ ಅಂಜುವಳಲ್ಲ ಪೋಗೈ 4 ವಾಸವನನುಜನೆ ವಾಮನರೂಪನೆ ನಾಶರಹಿತನೆ ಭಾಮೆ ನಾ ನಾಶರಹಿತನೆ ಭಾಮೆ ಕೂಸಿನ ರೂಪದಿ ಮೋಸವ ಮಾಡಿದಗೆ ದಾಸಿ[ಯೊ]ಬ್ಬಳು ಬೇಕೇ ರಂಗ ದಾಸಿ[ಯೊ]ಬ್ಬಳು ಬೇಕೇ 5 ತಾತನ ಮಾತಿಗೆ ತಾಯಿಯನಳಿದ ಖ್ಯಾತ ಭಾರ್ಗವನೆ ಭಾಮೆ ನಾ ಖ್ಯಾತ ಭಾರ್ಗವನೆ ಭಾಮೆ ಮಾತೆಯನಳಿದ ಘಾತಕ ನಿನಗೆ ದೂತಿಯೊಬ್ಬಳು ಬೇಕೇ ರಂಗ ದೂತಿಯೊಬ್ಬಳು ಬೇಕೇ 6 ದಶರಥನಂದನ ದಶಮುಖಭಂಜನ ಪಶುಪತಿವಂದ್ಯನೆ ಭಾಮೆ ನಾ ಪಶುಪತಿ ವಂದ್ಯನೆ ಭಾಮೆ ಹಸನಾದ ಏಕಪತ್ನೀವ್ರತದವಗೆ ಸುದತಿಯೊಬ್ಬಳು ಬೇಕೇ ರಂಗ ಸುದತಿಯೊಬ್ಬಳು ಬೇಕೇ 7 ಹದಿನಾರು ಸಾಸಿರ ನೂರೆಂಟು ಸುದತೇರ ಬದಿಯಲಿಟ್ಟವನೆ ಭಾಮೆ ನಾ ಬದಿಯಲಿಟ್ಟವನೆ ಭಾಮೆ ಹದನಕ್ಕೆ ಬಾರದ ಮಾರ್ಗಂಗಳ್ಯಾತಕ್ಕೆ ವದನ ಮುಚ್ಚಿಕೊಂಡು ಪೋಗೈ 8 ಬೌದ್ಧರಕುಲದಲ್ಲಿ ಹುಟ್ಟಿ ಅವರಂತೆ ಮುಗ್ಧರ ಮಾಡಿದೆ ಭಾಮೆ ನಾ ಮುಗ್ಧರ ಮಾಡಿದೆ ಭಾಮೆ ಶುದ್ಧಗುಣಗಳೆಲ್ಲ ಇದ್ದಲ್ಲಿಗೆಪೇಳೆ ವೃದ್ಧಳು ನಾನಲ್ಲ ಪೋಗೈ ರಂಗ ವೃದ್ಧಳು ನಾನಲ್ಲ ಪೋಗೈ 9 ವರ ತುರಗವನೇರಿ ಧರೆಯೆಲ್ಲ ಚರಿಸಿದ ದೊರೆವರ ನಾನೆ ಭಾಮೆ ಚರಿಸಿದ ದೊರೆವರ ನಾನೆ ತÀುರಗದ ಚಾಕರಿಯೊ[ಳಗಿರುವವನಿಗೆ] ತರುಣಿಯ ಭೋಗವು ಬೇಕೇ ರಂಗ ತರುಣಿಯ ಭೋಗವು ಬೇಕೇ 10 ಸರುವ ಪ್ರಾಣಿಗಳ ಉದರದೊಳಿಂಬಿಟ್ಟು ಶರಧಿಯೊಳ್ಮಲಗಿದವ ಭಾಮೆ ನಾ ಶರಧಿಯೊಳ್ಮಲಗಿದವ ಭಾಮೆ ದೊರೆ ಹಯವದನ ಚರಣಕ್ಕೆರಗುತ ತೆರೆದಳು ಬಾಗಿಲ ಭಾಮೆ ಆಗ ತೆರೆದಳು ಬಾಗಿಲ ಭಾಮೆ 11
--------------
ವಾದಿರಾಜ
ಒಂದೇ ನಾಮದೊಳಡಗಿದುವೊ ಆ -ನಂದದಿಂದುಸುರುವಅಖಿಳ ವೇದಗಳುಪಒಂದೇ ನಾಮವು ಪ್ರಹ್ಲಾದನ ಕಾಯ್ತು - ಮ -ತ್ತೊಂದೆ ನಾಮವೆ ಅಜಮಿಳನ ಸಲಹಿತು ||ತಂದೆ ತಾಯಿಯ ಬಿಟ್ಟ ಕಂದ ಧ್ರುವರಾಯಗಾ -ನಂದಪದವನಿತ್ತ ಅದ್ಭುತಗುಣವೆಲ್ಲ 1ಮಚ್ಛ್ಯಾದ್ಯಾನಂತಾವತಾರ ಅಷ್ಟಾದಶಸ್ವಚ್ಛ ಪುರಾಣಗಳಮೃತದಸಾರ ||ಕಚ್ಛಪನಾಗಿ ತ್ರೈಜಗಕೆ ಆಧಾರ ತ -ನ್ನಿಚ್ಛೆಯಿಂದಲಿ ತಾನು ಮಾಳ್ಪ ವ್ಯಾಪಾರ 2ಒಬ್ಬರೀತಗೆ ಸಮರಿಲ್ಲ ತ -ನ್ನಬ್ಬರದಿಂದಲಿ ಸಲಹುವನೆಲ್ಲ ||ಕಬ್ಬು ಬಿಲ್ಲನ ಪಿತಪುರಂದರ ವಿಠಲ ವೈದರ್ಭಿಯ ರಮಣನ ವರಸುಗುಣಗಳೆಲ್ಲ 3
--------------
ಪುರಂದರದಾಸರು
ರಾಮ ಮಂತ್ರವ ಜಪಿಸೊ - ಏ ಮನುಜಾ ಶ್ರೀರಾಮ ಮಂತ್ರವ ಜಪಿಸೊ ಪಆ ಮಂತ್ರ ಈ ಮಂತ್ರ ನೆಚ್ಚಿ ಕೆಡಲು ಬೇಡಸೋಮಶೇಖರಗಿದು ಭಜಿಸಿ ಬಾಳುವ ಮಂತ್ರ ಅಪಕುಲಹೀನನಾದರೂ ಕೂಗಿ ಜಪಿಸುವ ಮಂತ್ರಛಲದಿ ಬೀದಿಯೊಳು ಉಚ್ಚರಿಪ ಮಂತ್ರ ||ಹಲವು ಪಾತಕಗಳ ಹಸನಗೆಡಿಸುವ ಮಂತ್ರಸುಲಭದಿಂದಲಿ ಸ್ವರ್ಗ ಸೂರೆಗೊಂಬುವ ಮಂತ್ರ 1ಸನುಮುನಿಗಳಿಗೆಲ್ಲ ಸುಲುಗೆಯಾಗಿಹ ಮಂತ್ರಮನುಮುನಿಗಳಿಗೆಲ್ಲ ಮೌನ ಮಂತ್ರ ||ಹೀನಗುಣಗಳೆಲ್ಲ ಹಿಂಗಿ ಹೋಗುವ ಮಂತ್ರಏನೆಂಬೆ ಧ್ರುವನಿಗೆ ಪಟ್ಟಗಟ್ಟಿದ ಮಂತ್ರ 2ಸಕಲ ವೇದಗಳಿಗೆ ಸಾರವಾಗಿಹ ಮಂತ್ರಮುಕುತಿ ಪಢಕೆ ಇದು ಮೂಲ ಮಂತ್ರ ||ಶಕುತ ಪರಕೆ ಇದು ಬಟ್ಟೆದೋರುವ ಮಂತ್ರಸುಖನಿಧಿ ಪುರಂದರವಿಠಲ ಮಹಾಮಂತ್ರ 3
--------------
ಪುರಂದರದಾಸರು
ವಿಧಾತೃದೇವತೆಗಳೂ ವಿಷ್ಣುವಿನ ಹಿಂದೆ |ಇದಕೆ ತಪ್ಪಿದರೆ ಫಣಿಫಣವ ಪಿಡಿವೆ ಪ.ಸಕಲ ತೀರ್ಥಗಳೆಲ್ಲ ಸಾಲಗ್ರಾಮದ ಹಿಂದೆ |ಪ್ರಕಟಗ್ರಂಥಗಳೆಲ್ಲ ಭಾರತದ ಹಿಂದೆ ||ಸಕಲ ವೃಕ್ಷಗಳೆಲ್ಲ ಶ್ರೀ ತುಳಸಿಯ ಹಿಂದೆ |ಸಕಲ ಪರ್ವತಗಳು ಮೇರುವಿನ ಹಿಂದೆ 1ಮತಗಳೆಲ್ಲವು ಮಧ್ವಮತದ ಸಾರದ ಹಿಂದೆ |ಇತರ ವರ್ಣಗಳೆಲ್ಲ ವಿಪ್ರರ ಹಿಂದೆ ||ವ್ರತಗಳೆಲ್ಲವು ಹರಿಯ ದಿನದ ವ್ರತದ ಹಿಂದೆ |ಅತಿಶಯದ ದಾನಗಳು ಅನ್ನದಾನದ ಹಿಂದೆ 2ಉತ್ತಮಗುಣಗಳೆಲ್ಲ ಉದಾರತ್ವದ ಹಿಂದೆ |ಮತ್ತೆ ಕರ್ಮಗಳು ಮಜ್ಜನದ ಹಿಂದೆ ||ಪೃಥ್ವಿಯೊಳಗೆ ನಮ್ಮ ಪುರಂದರವಿಠಲನ |ಭಕ್ತವತ್ಸಲನೆಂಬ ನಾಮವೇ ಮುಂದೆ 3
--------------
ಪುರಂದರದಾಸರು