ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚಾರು ಗುಣಾನ್ವಿತೆ ಪ ನಾರಾಯಣಹಿಗೆ ಪಾಲಿಸೆ ಮಾತೆ ಅ.ಪ. ಸತ್ಯ ಸುಖಾಸ್ಪದೆ ಭೃತ್ಯರ ಬಿಡದೆ ನಿತ್ಯದಿ ಪೊರೆವುದೆ ಅತಿಶಯ ಬಿರುದೆ 1 ನಿನ್ನ ಕೃಪಾಶ್ರಯ ಪಡೆಯೆ ಮಹಾಶಯ ನಿನ್ನ ನಿರಾಶ್ರಯ ತಾಪತ್ರಿತಯ 2 ಲಕ್ಷುಮಿ ಕಾಂತನ ವಕ್ಷ ನಿವಾಸಿನಿ ಈಕ್ಷಿಸಿ ಕರುಣದಿ ರಕ್ಷಿಸು ಜನನಿ 3
--------------
ಲಕ್ಷ್ಮೀನಾರಯಣರಾಯರು
ಬಿಜಯಂಗೈವುದು ತ್ರಿಜಗನ್ಮಾತೆಯೆ ದ್ವಿಜರಾಜಾನನೆಯೇ ಅಜರಾಜಾತ್ಮಜಸುತನರಸಿಯೇ ಶ್ರೀ ಜಾನಕಿಯೇ ಪ. ಪವನಜ ಗರುಡರ ಬಗೆಯಿಂ ನಿನ್ನಂ ಸೇವಿಸಲಾನರಿಯೆ ಕವಿಕುಲ ಚೂಡಾಮಣಿಯೋಲ್ ನಿನ್ನನು ಭಾವಿಸಲೆನಗಳವೇ 1 ನೆಲದೊಳು ನಿನ್ನೀ ನೆಲೆಯಂ ತಿಳಿಯಲ್ ಬಲುಮೆಯದಾರೊಳು ಪೇಳ್ ಚಲದಿಂ ಪೇಳ್ವರು ಕೆಲವರು ನಿನ್ನಂ ಚಂಚಲೆಯನುವೋಲ್ 2 ಎಂತಾದರು ಸುಸ್ವಾಂತದಿ ನಿನ್ನೀ ಸಂತಾನದೊಳನಿಶಂ ಶಾಂತ್ಯೌದಾರ್ಯ ಗುಣಾನ್ವಿತೆ ನೀ ಮೆರೆ ಸಂತತಮುಂ ನಲವಿಂ3 ಎಣಿಸಲ್ಕರಿಯದ ಋಣತಾಪದೊಳಕಟಾ ಹೆಣಗಾಡುತಲಿರುವೀ ಅಣುಗರ ನೋಡಿ ಕ್ಷಣದೊಳೂ ನಿನ್ನ ಘನತೆ ತೋರಿಸು ದೇವಿ 4 ತಳುವುದಿದೇತಕೆ ನಳಿನÀದಳಂಬಕೆ ಗಳಿಲನೆ ಬಾರೆಂಬೆ ಜಲಜಲೋಚನ ಶೇಷಗಿರೀಶನ ಲಲನಾಮಣಿ ಜಗದಂಬೆ 5
--------------
ನಂಜನಗೂಡು ತಿರುಮಲಾಂಬಾ
ಮಾಯಾ ಜಯಕೃತಿಗೆ ಮಂಗಳಂ ಶಾಂತಿ ಸ್ವರೂಪಳಿಗೆ ಮಂಗಳಂ ಭಕ್ತರ ಕಂಗಳಿಂದಲಿ ನೋಡಿ ರಂಗನ ಪಾದವ ತೋರ್ವಳಿಗೆ ಪ. ಮಂಗಳಂ ಜಯ ಮಂಗಳಂ ಅ.ಪ. ಅಲ್ಲಿ ವೈಕುಂಠದೊಳಗೆ ಇರಲು ಬಲ್ಲಿದ ಭೃಗು ಋಷಿ ತಾ ಬರಲು ವಲ್ಲಭನ ವಕ್ಷಸ್ಥಳ ಒದೆಯಲು ಹರಿ ಸೊಲ್ಲು ಕೇಳದೆ ಓಡಿ ಬಂದಳಿಗೆ 1 ಕೊಲ್ಲಾಪುರದಲಿ ನಿಂದಳಿಗೆ ಎಲ್ಲರಭೀಷ್ಟವ ಸಲಿಪಳಿಗೆ ಖುಲ್ಲರ ಮರ್ಧಿಪ ಹರಿಯ ವಕ್ಷಸ್ಥಳ ದಲ್ಲಿ ಸದಾ ನೆಲಸಿರ್ಪಳಿಗೆ 2 ಶ್ರೀ ಜಯದೇವಿಗೆ ಶ್ರೀ ಲಕ್ಷ್ಮಿಗೆ ಶ್ರೀ ರುಕ್ಮಿಣೀ ಸತ್ಯಭಾಮಳಿಗೆ ಶ್ರೀ ಪದ್ಮಾವತಿ ನಾಮಕ ನಾನಾರೂಪ ಗುಣಾನ್ವಿತೆಗೆ 3 ಮುಕ್ತಾಮುಕ್ತರಿಗೊಡೆಯಳಿಗೆ ಮುಕ್ತಿಯ ಭಕ್ತರಿಗೀವಳಿಗೆ ಮುಕ್ತಳೆನಿಸಿ ಮುಕ್ತಾಶ್ರಯನಿಗೆ ಆ- ಸಕ್ತಿಯಿಂದ ಸೇವೆ ಮಾಳ್ಪಳಿಗೆ 4 ಗೋಪಾಲಕೃಷ್ಣವಿಠ್ಠಲನ ಆಪಾದ ಮೌಳಿಯ ಗುಣಗಳನು ತಾ ಪರಿಪರಿಯಿಂದ ವರ್ಣಿಸುತ್ತಿದ್ದರು ಅಪಾರವಾಗಿಯೆ ಕಾಂಬಳಿಗೆ 5
--------------
ಅಂಬಾಬಾಯಿ