ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೇಳು ಕೋಪಿಸಬೇಡ ಹೇಳಲಿಕಂಜುವೆಬಾಳು ಬಡತನವ ನಾನು ಪ.ತಲೆಗೊಯ್ಕ ಹಿರಿಯ ಮಗ ಇಳೆಗೆ ಪೂಜಿತನಲ್ಲಬಲು ಭಂಡ ನಿನ್ನಯ ಕಿರಿಯ ಮಗ ||ಲಲನೆಯು ಸೇರಿದಳು ಬಲು ಲೋಭಿಗಳ ಮನೆಯಹೊಲಕುಲವರಿಯಳು ನಿನ್ನ ಸೊಸೆಯು ರಂಗ 1ಮಗಳ ಮಾರ್ಗವುಡೊಂಕು | ಮೈದುನ ಗುರುದ್ರೋಹಿಮಗನ ಮಗನು ಚಾಡಿಗಾರಹಗರಣಕೆ ನೀಚರ ಹಣ್ಣು ಮೆದ್ದೆಂಜಲಜಗದೊಡೆಯನೆನಿಸಿಕೊಂಡೆ - ನೀನುಂಡೆ 2ಲಕ್ಷ್ಮೀಪತಿಯು ಎನಿಸಿಭಿಕ್ಷೆ ಬೇಡಲು ಪೋದೆಪಕ್ಷಿಯ ಪೆಗಲೇರಿ ರಾಜನೆನಿಸಿದೆ ||ಸಾಕ್ಷಾತು ಪುರಂದರವಿಠಲನೆ ನಿನ್ನಗುಣಲಕ್ಷಣ ಪೇಳಲಳವೆ - ಕಳೆವೆ 3
--------------
ಪುರಂದರದಾಸರು
ಸ್ವಾಮಿತ್ವದವರಿಗೆ ಅಯುಕ್ತವೇ ಯುಕ್ತ |ಶ್ರೀಮನೋರಮನೆ ಪೇಳುವೆ ಕೇಳು ಶಕ್ತ ಪಮಾವನಿಗೇ ಮಾವನಾದೆಯಲೊ ಜನ್ಮಾರಭ್ಯ |ನೀವೊಡಲ ಹೊರದೆ ಚೋರತನ ಮಾಡಿ ||ಕೋವಿದಂಗತಿ ಮೆಚ್ಚು ಜಾರತನ ಮಾಡಿದುದು |ಆ ವನಿತೆ ಮೆದ್ದ ಫಲ ಮೆದ್ದಿ ನಿರ್ದೋಷಿ 1ನರಸೇವೆಯ ಮಾಡಿ ಪೆಸರಾದಿ ಮಾತೆಯ ಕೊಂದೆ |ಧರೆಯೊಳಗೆ ಮಾತುಲನ ಕೊಲ್ಲಬಹುದೇ ||ತಿರುಕಿ ಬೇಡಿಸುವಳರಸರನ ನಿನ್ನಯ ರಾಣಿ |ಪರಿಮಿತಿಯಿಲ್ಲದ ದುರಾಚಾರಿ ನಿನ್ನಯ ಮಗನು 2ಮೈದುನನು ಗುರುದ್ರೋಹಿ ಮೊಮ್ಮಗನು ಬಹು ಚಾಡಿ |ಮೇದಿನಿಯೊಳಗೆ ಹೇಳುತಲೆ ತಿರುಗುವ ||ಶ್ರೀದ ಪ್ರಾಣೇಶ ವಿಠ್ಠಲನೇ ನೀನೇ ದೊರೆ |ಯಾದ ಕಾರಣ ದಕ್ಕಿತಿದು ಇಲ್ಲದರೆ ಸಲ್ಲ 3
--------------
ಪ್ರಾಣೇಶದಾಸರು