ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಭಿಮಾನವ್ಯಾಕೊ ಮಾನವಾ ಪ ಸಭಯ ದುಃಖದೊಳಗಿರುವಾ ದುರಭಿಅ.ಪ ನೀರ ಮೇಲಿನ ಗುಳ್ಳೆಯಂದದಿ ತೋರ್ಪ ಶ- ರೀರ ಭೋಗಾಪೇಕ್ಷಿಸಿ | ನಾನು ನನ್ನದೆಂದು 1 ತನ್ನನೇನು ತಾ ಬಲ್ಲದೆ | ನಾನು ನನ್ನದೆಂದು 2 ಪೈಣ ದಾರಿಗೆ ದಾರಿಯಾವುದು | ನಾನು ನನ್ನದೆಂದು3 ಇಭದಂತೆ ಮದವೇರುತಾ | ನಾನು ನನ್ನದೆಂದು4 ಇದು ಸ್ಥಿರವಿಲ್ಲ ಇನ್ನೊಂದು ತಪ್ಪುವುದದಲ್ಲ ಪದರದೆ ನೀ ಕೇಳೀಸೊಲ್ಲ | ನಾನು ನನ್ನದೆಂದು 5 ವೇದಶಾಸ್ತ್ರ ಪುರಾಣವ್ಯಾರ ಪೊಗಳುವುದು ಶೋಧನೆ ಮಾಡಿ ತಿಳಿಯದೆ | ನಾನು ನನ್ನದೆಂದು6 ಗುರುರಾಮವಿಠಲನು ಗುರುತಾಗಿರುವ ನೆಲೆ ಅರಿತುಕೊಂಡವ ಧನ್ಯ | ನಾನು ನನ್ನದೆಂದು 7
--------------
ಗುರುರಾಮವಿಠಲ
ಛೀ ಹಳಿ ಥೂ ಖೋಡಿ ಪಾಪಿ ಮನವೆ, ನಿನ್ನ ಪ ಕುಹಕ ಬುದ್ಧಿಗಳೆಲ್ಲ ಬಿಡು ಕಂಡ್ಯ ಮನವೆಅ.ಪ ಬಣ್ಣದ ಬೀಸಣೆಗ್ಯಂತೆ ಹೆಣ್ಣು ತಿರುಗೋದ ಕಂಡು ಕಣ್ಣು ಸನ್ನೆಯಮಾಡಿ ಕೈ ಹೊನ್ನು ತೋರಿ ತಣ್ಣೀರು ಹೊಯಿದ ಹೊಸ ಸುಣ್ಣದಂತೆ ಕುದಿದು ನಿನ್ನ ಕಣ್ಣಿಗೆ ಮಣ್ಣು ಚೆಲ್ಲಿಕೊಂಬರೆ ಮನವೆ 1 ನೆರೆಹೊರೆ ಮನೆಗಳಲಿ ಪ್ರಸ್ಥವನ್ನು ಮಾಡಿದರೆ ಕರೆಯದೆಲೆ ಮೊದಲ್ಹೋಗಿ ಹಾಳು ಹರಟೆ ಬಡಿಗಂಟು ಸುದ್ದಿ ನೂರಾರು ಹೇಳಿ ಅವರ ಹಿರಿಯ ಮಗನಂತೆ ಉದರವ ಪೊರೆವೆ ಮನವೆ 2 ಉತ್ತಮಾನ್ನವ ನೀಡೆ ಮುಸುರೆ ಬಯಸುವಂತೆ ಚಿತ್ತದೊಲ್ಲಭನ ಸಂಗಡದಿ ನಲಿದು ಮತ್ತೆ ಉಪರತಿಗೆ ಪರಪುರುಷನ ಬಯಸುವ ತೊತ್ತು ಬುದ್ಧಿಯನೆಲ್ಲ ಬಿಡು ಕಂಡ್ಯ ಮನವೆ 3 ಪಗಡೆ ಚದುರಂಗ ಕವಡೆಯನಾಡÀ ಕರೆದರೆ ನಿಗುರುವುವು ಕರ್ಣಗಳು ಮೊಚ್ಚೆಯಂತೆ ಜಗದೀಶನ ದಿನದಿ ಜಾಗರಕೆ ಕರೆದರೆ ಮುಗಿಲ್ಹರಿದು ಬಿದ್ದಂತೆ ಧರೆಗಿಳಿವೆ ಮನವೆ 4 ವಾಸುದೇವನ ಪೂಜೆಯೊಮ್ಮೆ ಮಾಡೆಂದರೆ ಬೇಸತ್ತು ತಲೆಯ ಚಿಟ್ಟಿಕ್ಕಿ ಕುಳಿತೆ ಆ ಸಮಯದೊಳಗೊಬ್ಬ ಕಾಸು ಕೊಟ್ಟೇನೆನಲು ದಾಸಿ ಮಗನಂತೆ ಬೆನ್ನಟ್ಟಿ ಪೋದೆ ಮನವೆ 5 ಕುಳ್ಳಿರುವ ಸ್ಥಳವೆಷ್ಟು ಕೂಳು ತಿಂಬುವುದೆಷ್ಟು ಉಳ್ಳನಕ ಕೀರ್ತಿಯಪಕೀರ್ತಿಯೆಷ್ಟು ಗುಳ್ಳೆಯಂದದ ದೇಹನೆಚ್ಚಿ ನೀ ಕೆಡಬೇಡ ಉಳ್ಳಿಪÀರೆ ಸುಲಿದರೆ ಹುರುಳಿಲ್ಲ ಮನವೆ 6 ಬಿಂದು ಮಾತ್ರವೊ ಸುಖವು ದು:ಖ ಪರ್ವತದಷ್ಟು ಸಂದೇಹವಿಲ್ಲವಿದು ಶಾಸ್ತ್ರಸಿದ್ಧ ಎಂದೆಂದು ಸಿರಿಯರಸ ವಿಜಯವಿಠ್ಠಲನಂಘ್ರಿ ಕುಂದದೆ ಹೃದಯದೊಳು ನೆನೆಕಂಡ್ಯ ಮನವೆ 7
--------------
ವಿಜಯದಾಸ