ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಹಿ ಖಳಜನ ಬಾಧ ಪಾಹಿ ಗೋವಿಂದ ಪ. ಪಾಹಿ ಗೋಪಿಯನಾಥ ಪಾಹಿ ಮನ್ಮಥ ತಾತ ಪಾಹಿ ಲಕ್ಷ್ಮೀಕಾಂತ ಪಾಹಿ ಭೂಕಾಂತ ಅ.ಪ. ಮತ್ಸ್ಯರೂಪಿಲಿ ಬಂದು ಬಲಿದ ದೈತ್ಯನ ಕೊಂದೆ ಬೆಚ್ಚರದೆ ಬಹುಗಿರಿಯ ಬೆನ್ನಲ್ಲಿ ತಾಳ್ದೆ ಬಚ್ಚಿಟ್ಟ ಧರಣಿಯನ್ನು ಬಲುಮೆಯಿಂದಲಿ ತಂದೆ ಅರ್ಚಿಸಿದ ಪ್ರಹ್ಲಾದಗೆ ಒಲಿದೆ ನರಸಿಂಹ 1 ಕುಬ್ಜರೂಪಿಲಿ ನೆಲನ ಬೇಡಿ ಬಲಿಯನು ತುಳಿದೆ ಪಿತನಾಡಿದ ಶಬ್ದವನ್ನು ಕೇಳಿ ಮಾತೆಯ ಶಿರವನಳಿದೆ ಕೊಬ್ಬಿದ್ದ ರಾವಣನ್ನ ಕಂದರವ ಖಂಡಿಸಿದೆ ಅಬ್ಜಮುಖಿ ಜಾನಕಿಯನಾಳಿದೆ ಶ್ರೀರಾಮ 2 ತುರುಹಿಂಡ ಕಾಯ್ದು ತಪವಳಿದು ಪತಿವ್ರತೆಯರ ಭರದಿ ವಾಜಿಯನೇರಿ ಚರಿಸುತ್ತ ಬಂದೆ ಕರುಣಾಳು ಶ್ರೀ ಹೆಳವನಕಟ್ಟೆ ರಂಗಯ್ಯ ಪಿಳ್ಳಂ- ಗಿರಿ ವಾಸ ಶ್ರೀ ವೆಂಕಟೇಶ 3
--------------
ಹೆಳವನಕಟ್ಟೆ ಗಿರಿಯಮ್ಮ