ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಖುಲ್ಲ ಮಾತುಗಳು ನಿಲ್ಲದಾಯುಷ್ಕೀರ್ತಿ ಎಲ್ಲರೊಳು ಕೇಳಿ ಪ ಅರಸು ಸಣ್ಣವನೆಂದು ಸರಸವಾಡಲು ಸಲ್ಲ ಕರೆಸಿ ಕೇಳದ ಮಾತು ಆಡಸಲ್ಲ ಪರಸಖರ ಮನೆಯೊಳಗೆ ಇರಿಸಿಕೊಂಡಿರ ಸಲ್ಲ ಬೆರೆಸಿ ಬಹ ಪಾತಕರ ಅರಸುವರೆ ಸಲ್ಲ 1 ಹಗಲು ಕಳ್ಳನ ಕೈಯ ಜಗಳವಾಡಲು ಸಲ್ಲ ಹಗೆಯೊಡನೆ ಸ್ನೇಹವನು ಮಾಡಸಲ್ಲ ಜಗಳಗಂಟಿಕ್ಕುವನ ಮೊಗದೊಳಗೆ ನಗೆಯಿಲ್ಲ ಅಗಲಿ ಪೋಗುವೆನೆಂಬ ಮಗ(ನು) ಸೊಗ(ಸ)ಲ್ಲ 2 ಒಡೆಯನಿಲ್ಲದ ಊರು ಬಡವರಿಗೆ ಅಳವಲ್ಲ ಕಡು ಚೆಲ್ವೆ ಕುರುಡನಿಗೆ ಮಡದಿಯಹ ಸಲ್ಲ ನುಡಿಯ ತಿಳಿಯದೆ ಇಹನ ಸಾಕ್ಷಿಯನು ಇಡ ಸಲ್ಲ ದೃಢವಾದ ಮೂರ್ಖನೊಳು ಕದನ ಮಾತಿಲ್ಲ 3 ಹರಿದಾಸರೆನಿಸಿದರೆ ಪರಗತಿಯೊಳೆರವಿಲ್ಲ ಗುರುಹಿರಿಯರಾದವರ ಜರೆಯ ಸಲ್ಲ ಕರಕರೆಯ ಬದುಕಿನೊಳು ಬರುವ ಉಡುಗೊರೆಯಿಲ್ಲ ಪರಿ ಸಲ್ಲ 4 ಹರಿಯು ಮುನಿದರೆ ಮರೆಯೊಳಿರಿಸಿ ಕೊಂಬುವರಿಲ್ಲ ಹರಿಯೊಲಿದ ನರನೊಳಗೆ ಗೆಲುವ ಪರಿಯಿಲ್ಲ ವರಾಹ ತಿಮ್ಮಪ್ಪನಿರಲು ಬಲ್ಲ ನರನು ಹರಿದೂಷಕರ ಸರಿಯೊಳಗೆ ನಿಲ್ಲ 5
--------------
ವರಹತಿಮ್ಮಪ್ಪ
ಲೋಕಕ್ಕೆ ನೀ ತಾಯಿ ಲೋಕಕ್ಕೆ ನೀ ತಂದೆ ಸಾಕುವಾಕೆಯೆ ನೀನು ಲೋಕಕ್ಕೆ ನೀ ತಾಯಿ ಪ ಬೇಸರಿಸಿ ಧರಿಸಿದಳು ಜನನಿ ಎನ್ನನÀು ದಶ- ಮಾಸ ಗರ್ಭದೊಳಿದ್ದು ಬಹಳ ಬಳಲಿದೆನು ಹೇಸಿಕೆಯ ವಿಣ್ಮೂತ್ರ ರಾಶಿಯೊಳುಗುದಿಸಿದರೆ ಆಸುರದಿ ಕೈಯೆತ್ತಿ ಪಿಡಿದು ರಕ್ಷಿಸಿದೆ1 ಮಲ ಮೂತ್ರ ಮೈಲಿಗೆಯ ಮೈಯೊಳಗೆ ಧರಿಸಿದರು ತಿಲ ಮಾತ್ರ ಹೇಸಿದೆಯ ಎನ್ನೊಳಗೆ ನೀನು ಜಲಜಮುಖಿ ಎನ್ ತಾಯಿ ಎಲೆಯ ಓಗರವಿಟ್ಟು ತೊಳೆದ ಹಸ್ತದಿ ಎನಗೆ ಕೊಳೆಯನಿಕ್ಕಿದಳು 2 ಮಗುವೆಂದು ಯೋಚಿಸದೆ ಉಗುಳುತ್ತ ಎಂಜಲನು ಒಗೆದು ಬೀಸಾಡಿದಳು ಎಡದ ಹಸ್ತದಲಿ ಜಗಳವಾಡಲು ಪಿತನು ಮಗನ ಮೋಹದ ಮೇಲೆ ತೆಗೆಯಬಾರದೆ ಮಲವನೆಂದು ಜರೆÀದಪಳು3 ಪಡೆದ ತಾಯ್ತಂದೆಗಳು ಅಡಗಿ ಹೋದರು ಎನ್ನ ಬಿಡದೆ ಸಲಹಿದೆ ನೀನು ಪೊಡವಿ ದೇವತೆಯೆ ಕಡೆಗಾಲದೊಳು ಕೈಯ ಪಿಡಿದು ರಕ್ಷಿಸದೆನ್ನ ಒಡಲ ದುಃಖವ ನೋಡಿ ನುಡಿಯದಿರಬಹುದೆ 4 ಬಲವಾಗಿ ಕೈವಿಡಿದೆ ವರಾಹತಿಮ್ಮಪ್ಪನಿಗೆ ಗೆಲವಿಂದ ಭೂರಮಣನೆನಿಸಿ ಮೆರೆವ ಜಲಜನಾಭನೆ ಎನ್ನ ಪಿತನು ಮಾತೆಯು ನೀನು ಸುಲಭದೊಳು ಮೈದೋರು ಫಲಿತವಹ ಪದವ 5
--------------
ವರಹತಿಮ್ಮಪ್ಪ