ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಮಾಜ ಚಿಂತನೆ :ನೀತಿಬೋಧನೆ ಅಜ್ಞಾನಿಗಳ ಕೂಡೆ ಅಧಿಕ ಸ್ನೇಹಕ್ಕಿಂತಸುಜ್ಞಾನಿಗಳ ಕೂಡೆ ಜಗಳವೇ ಲೇಸು ಪ ಉಂಬುಡುವುದಕಿಲ್ಲದರಸಿನೋಲಗಕಿಂತತುಂಬಿದೂರೊಳಗೆ ತಿರಿದುಂಬುವುದೆ ಲೇಸುಹಂಬಲಿಸಿ ಹಾಳ್ಹರಟೆ ಹೊಡೆವುದಕಿಂತ - ಹರಿಯೆಂಬ ದಾಸರ ಕೂಡೆ ಸಂಭಾಷಣೆಯೆ ಲೇಸು1 ಒಡನೆ ಹಂಗಿಸುವನೋಗರವನುಂಬುದಕಿಂತಕುಡಿನೀರು ಕುಡಿದುಕೊಂಡಿರುವುದೇ ಲೇಸುಬಿಡದೆ ಬಾಂಧವರೊಡನೆ ಕಡಿದಾಡುವುದಕಿಂತಅಡವಿಯೊಳಗಜ್ಞಾತ ವಾಸವೇ ಲೇಸು2 ಮಸೆಯುತಿಹ ಮತ್ಸರದ ನೆರೆಯೊಳಿರುವುದಕಿಂತಹಸನಿಲ್ಲದ ಹಾಳುಗುಡಿಯೇ ಲೇಸುಬಿಸಜಾಕ್ಷ ಕಾಗಿನೆಲೆಯಾದಿಕೇಶವರಾಯವಸುಮತಿಯೊಳು ನಿನ್ನ ದಾಸತ್ವವೇ ಲೇಸು 3
--------------
ಕನಕದಾಸ
ಅಜ್ಞಾನಿಗಳ ಕೂಡ ಅಧಿಕ ಸ್ನೇಹಕ್ಕಿಂತಸುಜ್ಞಾನಿಗಳ ಕೂಡ ಜಗಳವೇ ಲೇಸು ಪ.ಡಂಭಕರ ಮನೆಯಪಮಾನದೂಟಕ್ಕಿಂತತುಂಬಿದ ಪಟ್ಟಣದಿ ತಿರಿದುಂಬುವುದೆ ಲೇಸು |ಹಂಬಲಿಸಿ ಹಾಳು ಹರಟೆ ಹೊಡೆವುದಕಿಂತನಂಬಿ ಹರಿದಾಸರೊಳಾಡುವುದೆ ಲೇಸು 1ಒಡಲ ಹಂಗಿಸುವರ ಮನೆಯ ಓಗರಕಿಂತಕುಡಿನೀರ ಕುಡಿದುಕೊಂಡಿಹುದೆ ಲೇಸು |ಬಿಡದೆ ಕಡಿದಾಡುವರ ನೆರೆಯಲಿಹುದಕಿಂತಅಡವಿಯೊಳಜ್ಞಾತವಾಸವೇ ಲೇಸು 2ಮಸೆದು ಮತ್ಸರಿಸುವನ ಬಳಿಯಲಿಹುದಕಿಂತಹಸನಾದ ಹಾಳುಗುಡಿಗಳೆ ಲೇಸು |ಬಿಸಜಾಕ್ಷ ಪುರಂದರವಿಠಲನ ನೆನೆನೆನೆದುವಸುಧೆಯೊಳು ಚಿರಕಾಲವಿರುವುದೆ ಲೇಸು 3
--------------
ಪುರಂದರದಾಸರು