ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಮಧೇನುಗರವುತಲ್ಯದೆ ನಮ್ಮ ಮನಿಯಲಿ ನೋಡಿ ಬ್ರಹ್ಮಾನಂದದೋರುತದೆ ಪರಮಾಮೃತ ಸೂರ್ಯಾಡಿಧ್ರುವ ಭೋರ್ಗರೆವುತಲ್ಯದೆ ಇರುಳ ಹಗಲಿ ತಾ ಕರಕೊಳ್ಳಲಿ ವಶವಲ್ಲ ಅಮೃತ ದುರುಳರಿಗಿದು ಅರಿಕಿಲ್ಲ ಸುರಿ ಸುರಿದು ಸಾರಾಯ ಚಪ್ಪರಿದನುಭವ ನಿಜಸುಖ ತಾ ಬಲ್ಲ ಸುರಮುನಿಜನರಾನಂದದಿ ಸೇವಿಸಿ ಅರಹುತರಾದರು ಎಲ್ಲ 1 ಕಾಸಿ ಕಡಿಯದೇ ಭಾಸುತಲ್ಯದೆ ಲೇಸಾಗಿ ನವನೀತ ಮೋಸಹೋಗದನುಸರಿಸಿಕೊಂಬುದು ವಸುಧಿಯೊಳಗೆ ತ್ವರಿತ ಋಷಿಮುನಿಗಳು ಸ್ವಹಿತ ತುಸುಕೊರತಿಲ್ಲದೆ ಪಸರಿಸಿ ತುಂಬೆದ ವಿಶ್ವದೊಳಗೆ ಸನ್ಮತ2 ಅನುದಿನ ಮಹಿಪತಿಗಿದು ನಿಜ ನೋಡಿ ಮಹಾಮಹಿಮೆಯ ಸವಿಗೂಡಿ ಶಿರದಲಭಯವ ನೀಡಿ ಇಹಪರದೊಳು ಗುರುನಾಮವೆ ಕಾಮಧೇನುವಿದೆ ಕೊಂಡಾಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೀ ಬಲು ಒಳಗೆ ಒಳಗೆ | ಇಲ್ಲವು ಜಗದೊಳು ನಿನ್ನಂಥಾಕಿ ಎಂಥಾಕಿ ಎಂಥಾಕಿ ಪ ಕಣ್ಣಿನೊಳಗೆ ನೀ ಬರುವೆ |ಕಣ್ಣ ತೆರೆದರೆ ಕಾಣಿಸದಿರುವೆ 1 ನಿನ್ನಯ ರೂಪವು ಮುಚ್ಚಿ |ಎಲ್ಲಾ ರೂಪಕೆ ತಗಲಿತು ಮಚ್ಚಿ 2 ಭವತಾರಕ ಭಜಕರಿಗೊಲಿವೆ |ಭಾವಿಕ ಜನರಾನಂದದಿ ನಿಲುವೆ 3
--------------
ಭಾವತರಕರು
ಹರಿಸ್ಮರಣೆ ಪೂರಣ ಕರತನ್ನಿ ಧ್ರುವ ಕರತನ್ನಿರೊ ವರಗುರು ಕೃಪೆಯಿಂದ ಗುರುವರ ಮೂರುತಿ ಕರುಣಾನಂದ 1 ಕರುಣಿಸಿ ನೋಡಲು ಬಾಹುದು ಪುಣ್ಯ ಶರಣ ಜನರಿಗಿದು ತಾರ್ಕಣ್ಯ 2 ತಾರ್ಕಣ್ಯಂಬುದು ತರ್ಕರಹಿತ ಸರ್ಕನೆ ತಿಳಿವದು ತನ್ನೊಳು ಗುರುತ 3 ಗುರ್ತವಾಗಲು ನಿಜ ಹಿತಾರ್ಥ ಅರ್ತವಗಿದು ಸ್ವಸುಖ ಪರಮಾರ್ಥ 4 ಪರಮಾರ್ಥವು ಪರಗತಿ ಸಾಧನ ಪರಲೋಕಕೆ ಐದುವ ಸೊಪಾನ 5 ಸೋಪಾನವೆ ಸುಲ್ಲಭ ಸುಪಥ ಉಪಾಯದಲಿ ತಿಳಿಯಲು ಸ್ವಹಿತ 6 ಸ್ವಹಿತ ಮಾರಿಕೊಂಬುದೇ ಸುಖ ಸಾಹ್ಯ ಮಾಡುವ ಶ್ರೀ ಗುರುಕುಲತಿಲಕಾ 7 ಶ್ರೀಗುರು ಸೇವೆಯ ಮಾಡಿರೊ ಬ್ಯಾಗ ಜಗದೊಳಗಿದು ಮಹಾ ಪುಣ್ಯದ ಯೋಗ 8 ಯೋಗವೆ ಮಹಾ ನಿಜ ಭಕ್ತರ ಪ್ರಾಣ ಸುಗಮ ಸುಪಥ ಸದ್ಗತಿ ಸಾಧನ 9 ಸಾಧನ ಪಡೆವದು ಗುರುದಯ ಕರುಣ ಸದಮಲ ಸುಖ ಸುಜ್ಞಾನದ ಸ್ಪುರಣ10 ಸ್ಪುರಣ ಸುಫಲಿತ ಸುಜನರ ಹೃದಯ ಸುರ ಮುನಿ ಜನರಾನಂದದ ಉದಯ 11 ಉದಯವಾಯಿತು ಮಹಿಪತಿ ಮನದೊಳಗೆ ಸದೋದಿತವಾಯಿತು ಗುರುಕೃಪೆಲೆನಗೆ 12 ಎನ್ನೊಳು ದೋರಿತಾನಂದದಲಹರಿ ತನ್ನಿಂದಲಿ ತಾನೊಲಿದ ಶ್ರೀ ಹರಿ 13
--------------
ಕಾಖಂಡಕಿ ಶ್ರೀ ಮಹಿಪತಿರಾಯರು