ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಗದಂತರ್ಯಾಮಿಯೆಂದೆನುತ ನಿನ್ನನಿಗಮ ಸಾರುವ ಮಾತು ಪುಸಿಯೆ ರಂಗ ಪ ಸಿರಿ ಸಂಪತ್ತುಗಳನೀವಶ್ರೀದೇವಿ ನಿನ್ನ ಹಿರಿಯರಸಿಯೋ ದೇವ 1 ಎಂಬತ್ತುನಾಲ್ಕು ಲಕ್ಷ ಜೀವರಾಶಿಗಳನ್ನುಬೊಂಬೆಗಳ ಮಾಡಿ ಭವರಂಗದಲಿತುಂಬಿ ಕಲೆಗಳನೊತ್ತಿ ನೊಸಲ ಬರೆಹವ ಬರೆವಅಂಬುಜೋದ್ಭವ ನಿನ್ನ ಹೆಮ್ಮಗನು ದೇವ 2 ಸಕಲ ಜೀವರಾಶಿಗಳನು ಕಲ್ಪಿಸುವ ಬೀಜಸುಖದಿಂದ ಮಾಯಾಂಗನೆಯರೊಡಲೊಳುಅಕ್ಕರದಿ ಪಿಂಡಾಂಡಗಳ ಕಟ್ಟಿ ಬಲಿಸುವಮಕರಾಂಕ ನಿನ್ನ ಕಿರಿಮಗ ದೇವ 3 ರಾಮನಾಮವ ಜಪಿಸಿ ಪರಮ ವೈಷ್ಣವನಾಗಿಹೇಮಗಿರಿ ಸನಿಹ ಸಾಹಸ್ರನಾಮಪ್ರೇಮದಲಿ ಜಪಿಸುತ್ತ ವೈರಾಗ್ಯನಿಧಿಯಾದಸೋಮಶೇಖರನು ನಿನ್ನ ಮೊಮ್ಮಗನು 4 ಜಂಗಮ ಸ್ಥಾವರಕಾಧಾರವಾಗಿಹಳುಭಂಗಪಡುವ ಜನರ ಕರ್ಮವ ಕಳೆವಳುಹಿಂಗದೆ ಜಗವ ಪಾವನವ ಮಾಡುವ ಪುಣ್ಯಗಂಗೆಯೆಂಬಾಕೆ ನಿಮ್ಮಯ ಮಗಳು ದೇವ 5 ಶುದ್ಧ ಬುದ್ಧಿಯನುಳ್ಳ ಪ್ರದ್ಯುಮ್ನನಾ ಮಗಳುಶ್ರದ್ಧೆಯೆನಿಸಿಕೊಂಡು ಸೂತ್ರಗೆ ಸತಿಯಾಗಿಸದ್ಯೋಜಾತನ ಪಡೆದು ಪ್ರಸಿದ್ಧವಹ ದೇವಿ ಈ ಧರೆಯೊಳು ಪುಟ್ಟಿ ನಿನ್ನ ದಾಸಿಯಾದಳು 6 ಇಂತು ಅಣುರೇಣು ತೃಣ ಕಾಷ್ಠದೊಳಗೆಲ್ಲಸಂತೋಷವಾಗಿಹುದು ನಿನ್ನ ಸ್ಮರಣೆಯಂತ್ರವಾಹಕನೆಂಬ ಬಿರುದು ಸಲುವುದು ನಿನಗೆಕಂತುಪಿತ ಕಾಗಿನೆಲೆಯಾದಿಕೇಶವನೆ 7
--------------
ಕನಕದಾಸ
ಮಾಯೆಎನ್ನ ಕಾಯವನ್ನುಪಾಯದಿಂದ ಮೋಹಿಸಿ |ಬಾಯ ಮುಚ್ಚಿ ಕೊಲ್ಲುತಿಹಳು ಕಾಯೊ ಲಕ್ಷ್ಮೀರಮಣನೆ ಪಮಾತೆ-ಪಿತರ ವಿಷಯದಿಂದ ಶ್ವೇತಬಿಂದು ಬೀಳಲಾಗಿ |ಕೀತ ತತ್ತಿ ಬಲಿದು ಮಾಸಚೀಲದೊಳಗೆ ಬೆಳೆದೆನು ||ರಕ್ತಗೂಡಿ ಬಸಿರೊಳೊಂಬತ್ತು ತಿಂಗಳಿದ್ದೆ ನಾನು |ಸತ್ತು ಮತ್ತೆ ಹುಟ್ಟ ಹೋಗಲಾರೆ ಲಕ್ಷ್ಮೀರಮಣನೆ 1ಎಲವು ಕಂಬಮಾಡಿ ನರದ ಬಳ್ಳಿಯಲ್ಲಿ ಬಿಗಿದು ಬಿಗಿದು |ಒಳಗೆ ರಕ್ತದಿಂದ ಮೆತ್ತಿ ಹೊಸೆ ಪಾಪದಿಂದ ನಿಂದೆ ||ನೆಲೆಯ ಮನೆಯ ಮಾಡಿ ಚರ್ಮಹೊಲಿzಯ ಹೊದಿಕೆ ಹೊದಿಸಿದಂಥ |ಹೊಲೆಯ ಗೂಡಿನಲ್ಲಿ ಜನಿಸಲಾರೆ ಲಕ್ಷ್ಮೀರಮಣನೆ 2ಎನ್ನ ಸತಿಯು ಎನ್ನ ಸುತರು ಎನ್ನ ಬಂಧು - ಬಳಗವು |ಎನ್ನ ಸಾಕಿ ಸಲಹು ಎಂದು ಹರಿದು ತಿಂಬರು ||ಎನ್ನ ತನುವ ಜವನು ಬಂದು ಎಳೆದುಕೊಂಡು ಒಯ್ಯುವಾಗ |ಬೆನ್ನಬಪ್ಪರಾರ ಕಾಣೆ ಚೆನ್ನ ಲಕ್ಷ್ಮೀರಮಣನೇ 3ಇರುವೆ ಮೊದಲು ಆನೆ ಕಡೆಯು ಬಸಿರೊಳು ಬಂದೆ ನಾ |ಹರಿದು ಪಾಪಕರ್ಮದಿಂದೆ ತೊಪಳಲಿಬಳಲಿ ನೊಂದೆ ನಾ ||ಬಿರುಗಾಳಿಗೆ ಸಿಕ್ಕ ಮರದ ತರಗೆಲೆಯಂತುದುರಿ ನಾ |ಮರಳಿ ಮರಳಿ ಸತ್ತು ಹುಟ್ಟಲಾರೆ ಲಕ್ಷ್ಮೀರಮಣನೆ 4ಲಕ್ಷ ಜೀವರಾಶಿಗಳನು ಕುಕ್ಷಿಯೊಳಗೆ ಇರಿಸಿ ನಿನ್ನ |ಅಕ್ಷಯ- ಅನಂತ ನನ್ನನೇಕೆ ಹೊರಗೆ ಮಾಡಿದೆ ||ಈಕ್ಷಿಸುತಿರು ಎನ್ನ ನೀನು ಕುಕ್ಷಿಯೊಳಗೆ ಇಂಬನಿತ್ತು |ರಕ್ಷಿಸಯ್ಯ ಲಕ್ಷೀಪತಿಪುರಂದರವಿಠಲನೆ5
--------------
ಪುರಂದರದಾಸರು