ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದಿರಾನಂದ ಉದಧಿವರ್ಧನನೆಂದು ಪ ಕಂದರ್ಪಕೋಟಿ ಲಾವಣ್ಯನಿಧಿ ಮನಪೊಂದು ಅ.ಪ ನಾನು ನನ್ನದು ಎಂಬ ಜ್ಞಾನ ಸಂತತಿಯಿಂದ ನಾನಾ ಯಾತನೆ ಭಾವ ಬಲೆಯ ಕಟ್ಟಿ ಹೀನಗೋಜಿಲಿ ಸಿಕ್ಕಿ ಬಲುನೊಂದೆ ಗೋವಿಂದ ನೀನು ನಿನ್ನದು ಎಂಬ ಅಮೃತಗಾನದಿ ನಿಲಿಸು 1 ದರ್ವಿಯಂದದಿ ನಾನು ನೀ ಸರ್ವ ಸ್ವಾತಂತ್ರ ನಿರ್ವಾಹ ನಿನ್ನಿಂದ ಸರ್ವ ಜಗಕೆ ದೂರ್ವ ಏರಿಸೆ ಸಕಲ ದುರಿತವಳಿಸಿ ಮುಕ್ತಿಸುಖ ತೋರ್ವಂಥ ಗುಣನಿಧಿ ಸರ್ವಾತ್ಮ ಹೊರೆ ಹೊರೆಯೊ 2 ನಿನ್ನ ದರುಶನ ಬಿಟ್ಟು ಅನ್ಯತ್ರ ನಿರ್ಭೀತಿ ಎನ್ನಲಿ ಎಂದೆಂದು ವೇದವೇದ್ಯ ನಿನ್ನ ದರುಶನ ಫಲಕೆ ನಿನ್ನ ಮಹಕರುಣ ಇನ್ನು ಕಾರಣದೇವ ಧನ್ಯರಲಿ ಇಡು ಎನ್ನ 3 ಮನೋವಿಕಾರಗಳೆಂಬ ದುಃಖಾರ್ಣದಿ ಬಿದ್ದು ಅನುಮಾನ ಮಾಡಿದೆನೊ ನಿನ್ನ ಅಮೃತ ತನುಧ್ಯಾನ ಮನಕಿಡಿಯದೇನುಗತಿ ಯದುವರ್ಯ ತೃಣಕೆ ಕೈವಲ್ಲೀವ ತ್ರ್ಯಧೀಶಮನಪೊಂದು 4 ಜ್ಞಾನಮನ ಬಿಡದಿರು ದೀನ ಬಾಂಧವ ಕೃಷ್ಣ ಇನ್ನು ಮಾಯವನು ತೆಗೆದೆನ್ನ ಬೆರೆಯೊ ಜ್ಞಾನನಿಧಿ ಜಯೇಶವಿಠಲನೆ ವಿಧಿವಂದ್ಯ ಪ್ರಾಣಾಧಾರಕ ಶುಕನ ಆನಂದನಿಧಿ ಪಾಹಿ 5
--------------
ಜಯೇಶವಿಠಲ
ನಿನಗೇಕೆ ದಯಬಾರದೋ ಪ ನಿನಗಾಗಿ ಕಾದಿರುವೆ ಮನಸಾರೆ ವಂದಿಸುವೆ ವನಜಾಕ್ಷ ಕರುಣಾಳು ನೀನಲ್ಲವೇ ಅ.ಪ ಮನಸಲ್ಲಿ ಕ್ರಿಯೆಯಲ್ಲಿಯಾವಾಗಲೂ ತನುಧ್ಯಾನ ಮನವೆಲ್ಲ ನಿನಗೆ ಅರ್ಪಿತವಯ್ಯ [ಅನುದಿನವು ಕೈಪಿಡಿಯೋ ಮಾಂಗಿರಿರಂಗಯ್ಯ] 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್