ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಲ ಮೃತ್ಯುವು ಸ್ತ್ರೀಯಲ್ಲದಲೆ ಕಾಯುವವಳು ತಾನಲ್ಲಣ್ಣ ಕಾಳಕವೀಶ್ವರ ಬಲ್ಲನು ತಾನೇನ ಕಾಳ ಕಿಚ್ಚಿನ ಕುಂಡವಣ್ಣ ಪ ಮಲ ಮೂತ್ರವು ಮಜ್ಜೆಯು ಮೇದಸ್ಸು ಮೇಲೆ ಚರ್ಮ ಹೊದ್ದಿಹೆವಣ್ಣಎಲುಬುಗಳಡಕಲಿ ನರಗಳ ಬಿಗಿವು ಎಡದೆರ ಅಪಿಲ್ಲದೆ ಇಹುದಣ್ಣ ಬಲು ಹೊಲಸಿನ ಮಡುವದು ಮತ್ತೆ ಬಗೆಬಗೆಯ ಕ್ರಿಮಿಗಳು ಮನೆಯೊಳಣ್ಣ ಹೊಲೆಮಯವಿರುವ ಸ್ತ್ರೀಯ ವರ್ಣಿಪೆನು ಹೇವ ಮಾರಿಯು ಕಾಣಣ್ಣ 1 ಕಳಸ ಕುಚವು ಎದೆಎಂಬನ ಬಾಯಲಿ ಕರಿಯ ಮಣ್ಣನೆ ಹಾಕಣ್ಣ ಹೊಳೆವ ಕಂಗಳು ಎಂಬನ ಮೋರೆಗೆ ಹುಡಿಯನೀಗಲೆ ಚೆಲ್ಲಣ್ಣಬಳಕು ನಡೆಯಂತೆಂದು ಬೊಗಳುವನ ನಿಲಿಸದೆ ಅಲ್ಲಿಂದಟ್ಟಣ್ಣಚೆಲುವಿನ ಸುಂದರ ಚೇಷ್ಟೆಗೆ ನಲಿವನ ಚಪ್ಪಲಿಯಿಂದಲಿ ಕುಟ್ಟಣ್ಣ 2 ಬ್ರಹ್ಮಧ್ಯಾನವ ಮಾಡುವುದಕ್ಕೆ ಬ್ರಹ್ಮರಾಕ್ಷಸವು ಇದು ಅಣ್ಣಹಮ್ಮಳಿದು ಯೋಗಾಭ್ಯಾಸದಲಿರೆ ಹೃದಯದಲಿ ಹರಿದಾಡುವುದಣ್ಣಬ್ರಹ್ಮೇತಿಯು ತಾನಿವನ ಸಂಗದಿ ಭವಭವತಿರುಗುವುದ ಬಿಡದಣ್ಣಸಮ್ಮತದಲಿ ಚಿದಾನಂದ ಹೊಂದಿಯೆ ಸೀಮಂತಿನಿಯ ಬಿಡಬೇಕಣ್ಣ 3
--------------
ಚಿದಾನಂದ ಅವಧೂತರು
ಗಣೇಶ ಪ್ರಾರ್ಥನೆ ನಮ್ಮಮ್ಮ ಶಾರದೆ ಉಮಾ ಮಹೇಶ್ವರಿನಿಮ್ಮೊಳಗಿಹನ್ಯಾರಮ್ಮ ಪ ಕಮ್ಮಗೋಲನ ವೈರಿಸುತನಾದ ಸೊಂಡಿಲಹೆಮ್ಮೈಯ್ಯ ಗಣನಾಥನೆ ಅಮ್ಮಯ್ಯ ಅ ಮೋರೆ ಕಪ್ಪಿನ ಭಾವ ಮೊರದಗಲ ಕಿವಿಯುಳ್ಳಕೋರೆ ದಾಡೆಯವನ್ಯಾರಮ್ಮಮೂರು ಕಣ್ಣನ ಸುತ ಮುರಿದಿಟ್ಟ ಚಂದ್ರನಧೀರ ತಾ ಗಣನಾಥನೆ ಅಮ್ಮಯ್ಯ 1 ಉಟ್ಟ ದಟ್ಟಿಯು ಮತ್ತೆ ಬಿಗಿದುಟ್ಟ ಚಲ್ಲಣದದಿಟ್ಟ ತಾನಿವನ್ಯಾರಮ್ಮಪಟ್ಟದ ರಾಣಿ ಪಾರ್ವತಿಯ ಕುಮಾರಹೊಟ್ಟೆಯ ಗಣನಾಥನೆ ಅಮ್ಮಯ್ಯ2 ರಾಶಿ ವಿದ್ಯೆಯ ಬಲ್ಲ ರಮಣಿ ಹಂಬಲನೊಲ್ಲಭಾಷಿಗನಿವನ್ಯಾರಮ್ಮಲೇಸಾಗಿ ಸುಜನರ ಸಲಹುವ ನೆಲೆಯಾದಿಕೇಶವನ ದಾಸ ಕಾಣೆ ಅಮ್ಮಯ್ಯ 3
--------------
ಕನಕದಾಸ
ಬಾರೆ ಸಖಿ ಪೋಗಿ ರಾಸ ಕ್ರೀಡೆಯಾಡುವ ಪ ಸಾರಸಾಕ್ಷ ಕೃಷ್ಣನು ತಾ ಕೊಳಲನೂದುವ ಅ.ಪ ಜಾರನೆಂದು ಸಣ್ಣಮಾತನಾಡಿದ್ದಾಯಿತು ಚೋರನೆಂದು ಬಹಳ ದೂರು ಮಾಡಿದ್ದಾಯಿತು ಮೂರು ನಿಮಿಷ ಅವನ ಮರೆಯಲಾಗದಾಯಿತು ಬೀರುತಿರುವ ಮೋಹಜಾಲ ಸಡಲದಾಯಿತು 1 ಯಾವನೀತನೆಂದು ಚಿಂತೆ ಮಾಡಿದ್ದಾಯಿತು ಗೋವಳನಿವನಲ್ಲವೆಂದು ನಿರ್ಧರಾಯಿತು ಯಾವನಾದರೇನು ಇವನ ಕ್ಷಣವು ಕಾಣದೆ ಜೀವನ ಕಳೆಯುವುದೆ ದೊಡ್ಡ ಭಾರವಾಯಿತು 2 ಮಂದಹಾಸದಿಂದ ಸಕಲ ಜಗವ ಬೆಳಗುವ ಚಂದ್ರನು ತಾನಿವನ ನೋಡಿ ಬಹಳ ನಾಚುವ ಸಾಂದ್ರವಾಯಿತಂತರಿಕ್ಷ ಮಧುರ ನಾದದಿ ಮಲಯ ಮಾರುತ ತಾ ತಲೆಯನಾಡುವ 3 ನಾದದ ಸುಧೆ ಸಾಗರದಲಿ ತೇಲುವಂತಿದೆ ಮಾಧವ ತಾ ಸುಧೆಯ ರಸವನೆರಚುವಂತಿದೆ ಬಾಧಿಸುತಿಹ ಭವದ ತಾಪವಡಗಿದಂತಿದೆ ಮಾದರಿಫಲ ರಾಸಕ್ರೀಡೆ ತೋರುವಂತಿದೆ 4 ಸಕಲ ಲೋಕನಾಥನೀತನೆಂದು ತಿಳಿಯಿತು ಸಕಲವನರ್ಪಿಸುವುದೊಂದೆ ಮಾರ್ಗ ಉಳಿಯಿತು ಲಕುಮಿ ಮುರುಳಿ ರೂಪದಲ್ಲಿ ಇಹುದು ಹೊಳೆಯಿತು ಭಕುತಿ ಹರಿದು ಎನ್ನ ವiನ ಪ್ರಸನ್ನವಾಯಿತು 5
--------------
ವಿದ್ಯಾಪ್ರಸನ್ನತೀರ್ಥರು