ಒಟ್ಟು 5 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಒಂದು ಕೊಟ್ಟರೆ ಶಿವ ಮತ್ತೊಂದು ಕೊಡನಯ್ಯ ಆನಂದ ವಸ್ತುವಿಗೊಂದು ಲೀಲೆ ಇದಯ್ಯ ಪ ರೊಕ್ಕವಿದ್ದವರಿಗೆ ಮಕ್ಕಳೆಂಬವರಿಲ್ಲ ಮಕ್ಕಳಿದ್ದರೆ ತಕ್ಕವನಿತೆಯಿಲ್ಲ ಚೊಕ್ಕಸತಿಯು ಸಿಕ್ಕಿತಾನುರೂಪದೊಳಿರೆ ಪಕ್ಕನೆ ಅಗಲಿ ಪೋಗುವರಯ್ಯ 1 ಚೆಲುವ ಹೆಣ್ಣೆಗೆ ತಕ್ಕ ಚೆಲುವ ಪುರುಷನಿಲ್ಲ ಚೆಲುವ ನಾದವ ಗೊಳ್ಳೆಲಲನೆಯಿಲ್ಲ ಹಲವು ಜನ್ಮದ ಪುಣ್ಯ ಫಲದಿಂದ ಸೇರಲು ಹೊಳೆದು ಹೋಗುವರಿದರೊಳಗೊಬ್ಬರಯ್ಯ 2 ಸತಿ ಸುತರು ಇರುತಿರಲು ದಾರಿದ್ರ ತಿಂಬುವುದಕಿಲ್ಲ ಗತಿಯಿಲ್ಲದವನಿಗೆ ನರಕವಿಲ್ಲ ಅತಿಶಯವಾಗಿ ತಿಂಬುದಕ್ಕಿದ್ದ ನರರಿಗೆ ಸತತ ಶಾರೀರ ಸುಖವಿಲ್ಲವಯ್ಯ 3 ಉಂಬಲೂಡಲು ಸರ್ವಸಕಲ ಸಂಪತ್ತೆಲ್ಲ ತುಂಬಿರಲು ತನ್ನ ಗೃಹದೊಳೆಲ್ಲ ಬೆಂಬಿಡದೆ ರೋಗವು ಪುಟ್ಟಿತನುವಿನೊಳ್ ತಿಂಬುದಕವಗೆ ಬಾಯಿಗಳಿಲ್ಲವಯ್ಯ 4 ಸಕಲ ಜೀವರಿಗು ಚಿಂತೆಗಳಿಲ್ಲದವರಿಲ್ಲ ಸುಖವು ಸ್ವಪ್ನದೊಳು ಕಾಣುವುದಿಲ್ಲವಯ್ಯ ಬಕನ ವೈರಿಯ ಕೋಣೆಯ ಲಕ್ಷ್ಮೀಪತಿ ಪ್ರಿಯ ಮಕರ ಕೇತನ ವೈರಿಯಾಟವಿದಯ್ಯ 5
--------------
ಕವಿ ಪರಮದೇವದಾಸರು
ಕಂಡದಿಲ್ಲದ ಚಿತ್ರ ನಾ ಕಂಡೆ ಪ ಕೋತಿ ಸತ್ತುದ ಕಂಡೆ ಕೋಣನಳಿದುದ ಕಂಡೆಮಾತಿಗೆ ಬಾರದ ನಾಯ ಹರಿ ತಿಂಬುದ ಕಂಡೆ 1 ಕಾಗೆ ಕಣ್ಣು ಹೋದುದ ಕಂಡೆ ಕಳ್ಳರ ತಲೆ ಬಿದ್ದುದ ಕಂಡೆಕೋಗಿಲೆ ಕೊನೆಯಲಿ ಕೂಗಿದುದ ಕಂಡೆ 2 ಮರವ ಕಡಿದುದ ಕಂಡೆ ನೆರಳಲಿ ನಿಂತುದ ಕಂಡೆಬರಿಯ ವೋಡಲಿ ಹಾಲ ಕರೆದುಂಬುದ ಕಂಡೆ 3 ನೀರ ಮೇಲೆ ಒಲೆ ಉರಿವುದ ಕಂಡೆಮೇರುವಿನ ಶಿಖರದಿ ಜ್ಯೋತಿಯ ಕಂಡೆ 4 ಇರುಳು ಹಗಲು ಒಂದಾಗಿ ಇರುವುದ ಕಂಡೆಗುರು ಚಿದಾನಂದ ಬ್ರಹ್ಮವ ಗುರುತಿಲ್ಲದ ಕಂಡೆ5
--------------
ಚಿದಾನಂದ ಅವಧೂತರು
ತಿಳಿಯದು ಅಟಾ ಶ್ರೀಹರಿ ನಿನ್ನಾ| ನಳಿನ ಸಂಭವ ಮೊದಲಾದ ನಿರ್ಜರರಿಗೆ ಪ ಮೊತ್ತವೆನಿಪ ಕ್ಷೀರ ಸಾಗರ ಮಧ್ಯಲಿ| ಉತ್ತಂಗವಾದ ಶೇಷನ ಮಂಚದ ಮ್ಯಾಲೆ| ಸುತ್ತಸನಕಾದಿ ಭಾಗವತರ ಸಂಗ| ನಿತ್ಯವೆರಸಿ ಕ್ರೀಡಿಸುವದ ಬಿಟ್ಟು| ಮತ್ತೆ ವನದೊಳಾಡುವರೇ ತೃಣಗಳ| ಕಿತ್ತಿ ಹಾಸಿಕೆ ಮಾಡುವರೇ ಕಪಿಸಂಗ ಅತ್ಯಂತ ದಲ್ಹಿಡುರೇ ಕುಬ್ಸಿಯಾ| ವತ್ತಿನೀ ಅಳುವರೇ1 ಗಂಭೀರವಾದ ಸುರವರದಿಂದ ನಾರದ| ತುಂಬುರ ಮಾಳ ಗೀತವ ಕೈಕೊಂಡು| ಕೌಸ್ತುಭ ಮಾಲೆಯ ಹಾಕಿ| ವಾಹನ ಬಿಟ್ಟು| ಕೊಂಬು ಕೊಳನ ನೂದುರೇ ಗುಂಜಿಯಾ ವಣಿ ಬಿಂಬಸರವ ಹಾಕುತೀ ಕಲಿಯಾದಾ| ಕಂಬಳಿ ಯನುರೆ ಪೊದ್ದು ವಸ್ತ್ರದಿ ಮರ| ಸಂಭ್ರಮ ವೇಸರೇ 2 ಸುಜನ ಸಮರ್ಪಿಪ ಊಟವ| ದಯದಿಂದ ಕೈಕೊಂಡು ತೃಪ್ತನಾಗಿ| ಶ್ರೀಯಾ ಕುಚ ಕೊಡಮ್ಯಾಲ ಕರವನಿಟ್ಟು| ಜಯವಿಜಯ ವೆಂಬದ್ವಾರ ಪಾಲರಿರೆ| ಗೋವಲ್ಲರೆಂಜಲ ತಿಂಬುದೇ ಸರಗಹಗ| ಕೈಯ್ಯಲಿಂದ ತೊಳೆವರೇ ಮುದದಿ| ಬಲಿಯ ಬಾಗಿಲ ಕಾವುರೇ ಮಹಿಪತಿ ನಂದನ ಜೀವನ-ನೋ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಕಲವೆಲ್ಲವು ಹರಿಸೇವೆ ಎನ್ನಿ ಯಕುತಿವಂತರು ಹರಿಭಕುತಿ ಯೆನ್ನಿ ಧ್ರುವ ಹುಟ್ಟಿ ಬಂದಿಹ್ಯದೆ ವಿಠ್ಠಲನ ಸುಸೇವೆಗೆನ್ನಿ ಸೃಷ್ಟಿಯೊಳಿಹ್ಯದೆ ಶ್ರೀ ವಿಷ್ಣು ಸಹವಾಸವೆನ್ನಿ 1 ಬದುಕಿ ಬಾಳುದೇ ಇದು ಶ್ರೀಧರ ಉದ್ದೇಶವೆನ್ನಿ ಸಾಧನ ಸಂಪತ್ತು ಶ್ರೀ ಮಾಧವನದು ಎನ್ನಿ 2 ಉಂಬುಂತಿಂಬುದೆಲ್ಲ ಅಂಬುಜಾಕ್ಷನ ನೈವೇದ್ಯವೆನ್ನಿ ಕೊಂಬುಕೊಡುವ ಹಂಬಲ ಶ್ರೀ ಹರಿಯದೆನ್ನಿ 3 ಇಡುವ ತೊಡುವದೆಲ್ಲ ಪೊಡವಿಧರನಾಭರಣವೆನ್ನಿ ಉಡುವ ಮುಡಿವದೆಲ್ಲ ಹರಿಯ ಸಡಗರವೆನ್ನಿ 4 ನುಡಿವ ನುಡಿಗಳೇ ಹರಿಬಿಡದೆ ಕೊಂಡಾಡುದೆನ್ನಿ ಬಡುವ ಹರುಷವೆಲ್ಲ ವಸ್ತುದೇ ಎನ್ನಿ 5 ನಡೆವ ನಡಿಗೆಯಿಲ್ಲ ಹರಿಯ ಪ್ರದಕ್ಷಿಣಿ ಎನ್ನಿ ಎಡವಿ ಬೀಳುದು ಹರಿನಮವೆನ್ನಿ 6 ಏಳುವ ಕೂಡುವದೆಲ್ಲ ಹರಿಯ ಊಳಿಗವೆನ್ನಿ ಹೇಳಿ ಕೇಳುದೆಲ್ಲ ಹರಿಪುರಾಣವೆನ್ನಿ 7 ನೋಡುವ ನೋಟಗಳೆಲ್ಲ ಹರಿ ಸುಲಕ್ಷಣವೆನ್ನಿ ಮಾಡುವ ಮಾಟಗಳೆಲ್ಲ ಹರಿಯದೆನ್ನಿ 8 ಮಲಗಿ ನಿದ್ರೆಗೈವದೇ ಹರಿಯ ಕಾಲಿಗೆರಗುದೆನ್ನಿ ಬಲಕ ಎಡಕ ಹೊರಳುದೇ ಲೋಟಾಂಗಣ(?) ವೆನ್ನಿ 9 ವನಿತೇರ ಸಂಗವೇ ತಾ ಹರಿಯ ಲೀಲೆಯು ಎನ್ನಿ ತನುಮನವೆಲ್ಲಾ ಹರಿಸ್ಥಾನವೆ ಎನ್ನಿ 10 ಸತಿಸುತ ಮಿತ್ರರೆಲ್ಲ ಹರಿಸೇವೆ ದೂತರೆನ್ನಿ ಮತ್ತೆ ಬಂಧುಬಳಗೆಲ್ಲ ಹರಿಯದೆನ್ನಿ11 ಸುಖದು:ಖವೆಂಬುದೇ ಶ್ರೀಹರಿಯ ಸಂಕಲ್ಪವೆನ್ನಿ ನಕ್ಕು ನುಡುವುದೆಲ್ಲ ಹರಿ ಆಖರವೆನ್ನಿ 12 ಹೆಣ್ಣು ಹೊನ್ನಾರ್ಜಿತವೆಲ್ಲ ಹರಿಯ ಕಾಣಿಕೆ ಎನ್ನಿ ನಾನೀನೆಂಬುದೆಲ್ಲ ಹರಿಚೇತನವೆನ್ನಿ 13 ಸ್ವಾರ್ಥ ಹಿಡಿವದೆಲ್ಲ ಪಾರ್ಥನ ಸ್ವಾಮಿಗೆ ಎನ್ನಿ ಅರ್ತು ಮರ್ತು ನಡೆವ ಹರಿಕರ್ತೃತ್ವವೆನ್ನಿ 14 ಅಂತ್ರಬಾಹ್ಯವೆಲ್ಲ ಹರಿಗುರು ಮಾತೃಪಿತೃವೆನ್ನಿ ಗುರ್ತುವಾದದ್ದೆಲ್ಲ ತೀರ್ಥಕ್ಷೇತ್ರವೆನ್ನಿ 15 ಲಾಭಾಲಾಭವೆಲ್ಲ ಹರಿಪಾದಕರ್ಪಿತವೆನ್ನಿ ಶುಭಾ ಶುಭವೆಲ್ಲ ಹರಿಶೋಭೆಯು ಎನ್ನಿ 16 ಕನಸು ಮನಸುಗಳೆಲ್ಲ ಹರಿಯ ನೆನೆವ ಸೇವೆನ್ನಿ ಧೇನಿಸಿ ಬಯಸುದೇ ಹರಿಧ್ಯಾನವೆನ್ನಿ 17 ನಿತ್ಯಕರ್ಮವೆಲ್ಲ ಹರಿಪಾದಕ ಸಮರ್ಪಣವೆನ್ನಿ ಸತ್ಯಾಸತ್ಯವೆಲ್ಲ ಹರಿ ಅಗತ್ಯವೆನ್ನಿ 18 ಹೆಜ್ಜೆಗೊಮ್ಮೆ ಬೆಜ್ಜರ್ಹಿಡಿದು ರಾಜೀವನಯನನೆನ್ನಿ ಸಜ್ಜನರೊಡೆಯ ಗಜವರದ ಎನ್ನಿ 19 ಸೋಹ್ಯ ಸೂತ್ರವೆಲ್ಲ ಹರಿಯ ಮಹಾಮಹಿಮೆ ಎನ್ನಿ ಗುಹ್ಯಗೂಢವೆಲ್ಲ ಹರಿಯಗುರುತ ಎನ್ನಿ 20 ಇಹಪವೆಲ್ಲ ಹರಿಸೇವೆಗನುಕೂಲ ವೆನ್ನಿ ಸೋಹ್ಯ ಮಾಡುದೆಲ್ಲ ಹರಿಯ ದಯವೆನ್ನಿ 21 ಸಕಲ ಧರ್ಮಗಳೆಲ್ಲ ಹರಿಯ ಶಿಖಾಮಣಿಯೆನ್ನಿ ಪ್ರಕಟವಾಗಿ ದೋರುದೇ ಪ್ರತ್ಯಕ್ಷವೆನ್ನಿ 22 ನೇಮನಿತ್ಯ ಇದೇ ಮಹಿಪತಿಯ ಸ್ವಾಮಿಯದೆನ್ನಿ ಪ್ರೇಮದಿಂದ ಒಪ್ಪಿಸಿಕೊಂಬ ದಯಾಳುವೆನ್ನಿ 23
--------------
ಕಾಖಂಡಕಿ ಶ್ರೀ ಮಹಿಪತಿರಾಯರು