ಒಟ್ಟು 9 ಕಡೆಗಳಲ್ಲಿ , 2 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನಗೇನೊ ಭಕುತರ ಚಿಂತೀ ಘನಮಹಿಮ ಮಹÀದಾದಿ ಸುರವಂದ್ಯ ತಿಮ್ಮಾ ಪ ಪರಮೇಷ್ಟಿ ನಿನಪುತ್ರ ಕಿರಿಯ ಮಗನು ಜಗತ್ಪ್ರಾಣದೇವಾ ಹಿರಿಯ ಸೊಸೆಯು ವಾಣಿ ಕಿರಿಯು ಭಾರತೀ ದೇವಿ ಸುರರು ಪರಿವಾರ 1 ಸಕಲಲೋಕಕೆ ಅರಸು ಲಕುಮಿಕಾಂತನು ಎಂದು ನಿಖಿಳವೇದ ಸ್ಮøತಿಯು ಸಾರುತಿಹದೋ ಅಖಿಳವ್ಯಾಪಕನಾಗಿ ಸಕಲಸುರನರರಿಂದ ಭಕುತಿಪೂರ್ವಕÀ ಓಲಗವಕೈಕೊಂಬ ಸಮಯದಲಿ 2 ಸುರನಾಥ ನೀನಲ್ಲದಿತರ ದೇವತೆಯುಂಟೆ ಸರವೋತ್ತಮಾನೆಂಬನಾವನವನೋ ಸರಸಗುಣನಿಧಿಯೆ ಶ್ರೀ ಗುರುಜಗನ್ನಾಥವಿಠಲ ವರಭಾಗ್ಯ ಮಬ್ಬಿನಲಿ ಇರುವೊ ಸಮಯದಲಿ 3
--------------
ಗುರುಜಗನ್ನಾಥದಾಸರು
ನಿನ್ನ ಮಹಿಮೆ ಇದೇನೊ ಕನ್ನಗಾರರ ಗುರುವೆ ಅಳಗಿರಿ ತಿಮ್ಮರಾಯಾ ಪ ಕ್ಷೋಣಿಯೊಳಗುಳ್ಳವರು ಕ್ಷಿಪ್ರದಲ್ಲಿ ನಿನ್ನ ಕಾಣಿವೇನೆಂಬ ತವಕದಲಿ ಬರಲು ಮಾಣದಲೆ ಅವರ ವಸನ ಸುಲಿಸಿ ತಡೆಯದೆ ಮಾನವನು ಕೊಂಬ ಅಭಿಮಾನಗೇಡಿ 1 ಬ್ರಹ್ಮಾದಿಗಳು ಇಲ್ಲಿ ಸುಲಿಸಿಕೊಳಬೇಕೆಂದು ಹೆಮ್ಮೆಯಿಂದಲಿ ನೋಡಿ ಹಿಗ್ಗುವರೋ ಹಮ್ಮಿನದೇವ ನಿನ್ನ ಸೋಜಿಗವೆ ತಿಳಿಯದು ಈ ಮ್ಮಹಿಯೊಳಗೆ ಇಂಥ ಸುಮ್ಮಾನವೇನೊ2 ಹಲವು ಕೇಳಿದರೇನು ನೀಚೋಚ್ಚ ಎಣಿಸಲೆ ಒಲಿಸಿದವರಿಗೆ ನೀನು ಒಲಿದು ಎಲ್ಲಾ ಸುಲಿಗೆಯನು ಯಿತ್ತು ಸಂತತಲವರ ಪಾಲಿಪ ಬಲು ದೈವ ವಿಜಯವಿಠ್ಠಲ ಅಳಗಿರಿ ತಿಮ್ಮಾ3
--------------
ವಿಜಯದಾಸ
ನಿನ್ನ ಮೂರುತಿ ನಿಲ್ಲಿಸೊ ವೆಂಕಟಸ್ವಾಮಿ ಪ್ರ ಸನ್ನ ವದನ ಭುಜಗನ ಗಿರಿಯ ತಿಮ್ಮಾ ಪ ಪೊಳೆವ ಕಿರೀಟಕುಂಡಲ ಕರ್ಣ ಪಣೆಯಲ್ಲಿ ತಿಲಕ ಬಿಲ್ಲಿನ ಪುಬ್ಬು ಸುಳಿಗೂದಲಿಂದೊಲಿವ 1 ಕದಪು ಕೂರ್ಮನಂತೆ ಸುಧೆಯ ಸುರಿವ ವದನ ನಾಸಿಕ ಕಪೋಲ ಮುದ್ದುನಗೆಯಿಂದೊಲಿವ2 ಕೊರಳ ತ್ರಿರೇಖೆ ಉಂಗುರ ಕಟಿ ಅಭಯ ಕರ ಚತುಷ್ಟಯಿಂದೊಲಿವ3 ಕೌಸ್ತುಭ ನ್ಯಾವಳ ವೈಜಯಂತ ಆವಾವಾಸರ ಉದರ ತ್ರಿವಳಿಯಿಂದೊಲಿವಾ4 ಬಡ ನಡು ನಾಭಿಯು ಉಡುದಾರ ಪೊಂಬಟ್ಟೆ ಉಡಿಗೆ ಕಿಂಕಿಣಿಗಂಟಿ ನುಡಿ ತೊಡರಿಂದೊಲಿವಾ 5 ಊರು ಜಾನು ಜಂಘೆ ಚಾರುಪೆಂಡೆ ನೂಪುರ ಭೋರಗರೆವ ಗೆಜ್ಜೆ ತೋರುತ್ತ ನಲಿದೊಲಿವಾ 6 ಧ್ವಜ ವಜ್ರಾಂಕುಶ ಸರ ಸಿಜ ರೇಖಿಯ ಚರಣ ವ್ರಜನಂದ ಬಾಲಕ ವಿಜಯವಿಠ್ಠಲ ತಿಮ್ಮಾ 7
--------------
ವಿಜಯದಾಸ
ಭಕ್ತಜನ ಸಂರಕ್ಷಣ ಪ ಭಕ್ತಜನ ಸಂರಕ್ಷ ಭವದುರಿತ ಸಂಹಾರಿ ಭಕ್ತರಾ ಸುರಧೇನು - ತರುವೆ ಚಿಂತಾಮಣಿಯೆ ಪೊತ್ತ ತಿಮ್ಮಪ್ಪ ಏಳೊಅ.ಪ. ಅಂಬರವು ತಾಂಬ್ರಮಯವಾಗೆ ಗರುಡಾಗ್ರಜನು ಇಂಬಿನಲಿ ತಲೆದೋರೆ ಕಿರಣಗಳು ಹರಹಿದುವು ತಾರಾ ನಿಕರವಂಬರದಿ ರೂಹುಮಾಸೆ ಕುಂಭಿಣಿಯ ಮುಸುಕಿರ್ದ ಕತ್ತಲೆ ಪರಿದು ಪೋಗೆ ಅಂಬುಜದಳಕ್ಕೆ ಮರಿದುಂಬಿಗಳು ಎರಗಿದವು ಸರಸಿಜಾಂಬುಕ ಮಂಚದಿಂದೇಳೊ 1 ಉದಯ ಪರ್ವತಕೆ ರಥನೂಕಿದನು ಮಾರ್ತಾಂಡ ಉರಗ ಪೆಡೆಯೆತ್ತಿದನು ಭಯದಿಂದ ಅಡಗಿದರು ದಶದಿಕ್ಕಿನೊಳಗೆ ತ್ರಿದಶರಬ್ಬರಿಸಿ ಆನಕ ದುಂದುಭೀ ಶಂಖ ಧಂ ಧಂ ಧಣಾ ಸರಿಗಮಪದನೀ ಯೆಂದೆನುತ ತುರೆಸಿದರು ಸದಮಲಾನಂದ ತಿಮ್ಮಾ 2 ನಾರಿಯರು ಬಂದು ಅಂಗಳ ಬಳಿದು ಗಂಧದಾ ಸಾರಣಿಯದೆಳೆದು ಮುತ್ತಿನ ರಂಗವಾಲೆ ವಿ- ಮಕರ ಕನ್ನಡಿ ದ್ವಾರದಲಿ ಬಿಗಿದರ್ಥಿಯಲಿ ಗೊಲ್ಲ ಕಟ್ಟಿಗೇ- ಕಾರ ಪರಿವಾರದವರೆಲ್ಲ ವೊಪ್ಪುತಿದಾರೆ ಕಂಸಾರಿ ಕೋನೇರಿವಾಸ 3 ನೃತ್ಯಗಾರರು ಬಂದು ತತ್ಥಿಗಿಣಿ ತಕ್ಥೈಯ ತಿತ್ತಿರಿ ಮೃದಂಗ ಜೊತೆ ತಪ್ಪದಂದದಿ ತಾಳ ಬತ್ತೀಸರಾಗದಲಿ ಎತ್ತಿ ಧ್ವನಿತೋರುತ್ತ ನೃತ್ಯ ಪಾಡುತ್ತ ಕುಣಿಯೆ ಮುತ್ತೈದೆಯರು ಬಂದು ಮುತ್ತಿನಾರತಿ ಪಿಡಿದು ಮಿತ್ರಭಾವದಿ ನಿಮ್ಮ ಅಡಿಗಳಿಗೆ ಹರಿವಾಣ ನೋಡುತ್ತಿದಾರೆ ಸರ್ವೇಶ4 ಕಾದೋದಂ ವಿಮಲ ಕಮ್ಮೆಣ್ಣಿ ಕಸ್ತೂರಿ ಸ್ವಾದು ಜವ್ವಾಜಿ ಚಂದನ ಗಂಧ ದ್ರವ್ಯಗಳ ಹೇಮ ಪಾದುಕಾ ಪಟ್ಟುವಸನ ಈ ಧರೆಯ ಮೇಲಿರ್ದ ಉಡಿಗೆ ತೊಡಿಗೆಯು ಕರ್ಪು ರಾದಿ ತಾಂಬೂಲ ನಿರ್ಮಲ ದಾದಿಯರು ಪಿಡಿದು ಮುಂದೆ ಆದಿಹರಿ ಪರಮಪುರುಷ 5 ದಂಡಿಗೆ ಶಂಖತಾಳ ತಂಬೂರಿ ಜಾಂಗಟೆಯ ಗೊಂಡು ನಿನ್ನಯ ಪರಮ ಪ್ರೀತ್ಯರ್ಥ ದಾಸರು ಬೊಮ್ಮಾಂಡ ಕಟಹÀ ಬಿಚ್ಚುವಂತೆ ತಂಡ ತಂಡದಿ ಗೆಜ್ಜೆಕಟ್ಟಿ ಅಭಿನಯ ತಿರುಹಿ ಕೊಂಡಾಡೆ ಶಬ್ದ ಪ್ರತಿ ಶಬ್ದವಾಗುತಿದೆ ಭೂ- ಬಲ್ಲವರಾರು ಕುಂಡಲಗಿರಿವಾಸ ತಿಮ್ಮಾ 6 ಗೋತ್ರಾರಿ ಹರಿಧರ್ಮ ಪುಣ್ಯಜನಪನು ವರುಣ ವೀತಿಹೋತ್ರನ ಸಖನು ಯಕ್ಷೇಶ ಕೈಲಾಸ- ಸೂರ್ಯ ಚಿತ್ತದಲಿ ಮುಖ್ಯರಾದ ವಿಶ್ವ - ಮಿತ್ರ ಸನಕಾದಿಗಳು ನಾರದರೆ ಮೊದಲಾಗಿ ಸ್ತೋತ್ರವನು ಮಾಡುತಲಿದ್ದಾರೆ ಲಕ್ಷ್ಮೀಕಳತ್ರ ಜಗದ್ಭರ್ತ ತಿಮ್ಮಾ 7 ನಿಚ್ಚ ಏಳುವ ಸಮಯ ಮೀರಿತೋ ಇಂದೀಗ ಎಚ್ಚರಿಕೆ ಪುಟ್ಟದೇ ಎಲೋ ದೇವ ಶ್ರೀದೇವಿ ಮೆಚ್ಚಿಸಿದ ಮಹಸರಸವೆ ಮುಚ್ಚಟೆಯಿದೇಂ ತಿಳಿಯಲಾಗದೆ ಸ್ವಾಮಿ ಸೊಲ್ಲು ಕರ್ಣಕೆ ಬೀಳದಾಯಿತೆ ಕಾಣೆ ಸಚ್ಚಿದಾನಂದಾತ್ಮಕ 8 ನಿದ್ರೆಗೆವೆ ಹಾಕದಿರೊ ನೀರೊಳಗೆ ನೀನಿರೊ ಉ- ಪದ್ರ ಭೂಮಿಗೆ ಕಳೆಯೊ ಕಶ್ಯಪನ ಸುತನಳಿಯೊ ಸ- ಮುದ್ರ ರಾಣಿಯ ಪಡೆಯೊ ರಾಯರಾಯರ ತÀಡೆಯೊ ಮುದ್ರೆ ಭೂಮಿಜೆಗೆ ಕಳುಹೊ ಅದ್ರಿಯುದ್ಧರಿಸೊ ಮುಪ್ಪುರವ ಸಂಹರಿಸೊ ಕಲಿ- ಕ್ಷುದ್ರ ಕಳೆ ನಿದ್ರೆ ಸಾಕೆಂದು ಶುಕ್ತಿ ಸಾರುತಿದೆ ವೆಂಕಟಕಾದ್ರವೇಯ ಹಾಸಿಗೆಯಿಂದೇಳು 9
--------------
ವಿಜಯದಾಸ
ಶರಣು ಗಿರಿಯ ತಿಮ್ಮಾ | ಶರಣು ಪುರುಷೋತ್ತಮಾ | ಶರಣು ಮಹಾ ಮಹಿಮ | ಶರಣು ಪರಬೊಮ್ಮಾ | ಪರಿಹರಿಸುವದು ಹಮ್ಮಾ ಪ ವರೇಣ್ಯ | ಭಂಗ | ಹರಿಸಿದ ಶಿರಿ ರಂಗ | ವಿಹಂಗ | ತುರಗ ತುರಗ ವದನ | ಸದನ ಕರ ಮುಗಿವೆನೈಯಾ | ಕರದ ಮಾತಿಗೆ ಜೀಯಾ | ಭರದಿಂದ ಕೊಡು ಮತಿಯಾ 1 ಪಾದದಲಿ ಪೆಣ್ಣಾ | ಮೋದದಲಿ ಪೆತ್ತ ಚಿಣ್ಣಾ | ನಾದ ಬಲು ಪಾವನ್ನಾ | ಭೇದಾರ್ಥ ಜ್ಞಾನ | ಆದರಿಸೆ ಅನುದಿನಾ | ನೀ ದಯದಲಿ ಕೊಡು | ಈ ದೇಹ ನಿನ್ನ ಬೀಡು | ಯಾದುದೆ ಇತ್ತ ನೋಡು 2 ಜಲದೊಳಗಾಡಿದೆ | ಚಲಕೆ ಬೆನ್ನ ನೀಡಿದೆ | ನೆಲ ಬಂದು ನೆಗಹಿದೆ | ಖಳನನ್ನ ಕೆಡಹಿದೆ | ಇಳಿಯ ಮೂರಡಿ ಮಾಡಿದೆ | ಕುಲವ ಕೂಡಲಲಿ ಹಾರ | ಜಾರ ಚೋರ | ಅಳಿದೆ ಮುಪ್ಪುರು ಶೂರಾ | ವಿಜಯವಿಠ್ಠಲ ಪಾರಾ | ಫಲವೀವೆ ಧರಣೀಧರಾ 3
--------------
ವಿಜಯದಾಸ
ಸೌಂದರ್ಯ ಪುರುಷನ ಕಣ್ದೆರದು ನೋಡಿದೆನು | ಇಂದೆನ್ನ ಜನುಮ ಸಫಲ | ಹಿಂದೆ ಅನಂತೇಶನೆಂದೆಂಬ ನಾಮದಲಿ | ಕಂಬು | ಕಂದರದ | ತಿಮ್ಮನ ಪ ಮಕರ ಕುಂಡಲಧಾರ | ಮಕ್ಕಳಾ ಮಣಿಸು ಕಾಮದಾ | ಅಕಳಂಕ ತುಲಸಿ ಸರ | ಕಮಲ ಅಕುಟಿಲ ಹೃದಯಮಂದಿರ | ಸಕಲಕಾಲದಲಿ ನಿಜ | ಭಕುತರಿಗೆ ಒಲಿದಿಪ್ಪ | ಅಖಿಳ ಲೋಕಾಧೀಶ ಮುಕುತಾರ್ಥ ಮುರವೈರಿ1 ಕರ ಮುಂಗೈಯ ಕಡಗ ಕಂಕಣ ಬಾಹು ಭುಜಕೀರ್ತಿ | ಮುಂಗೈಯ ಫಣಿಯ ತಿಲಕಾ | ಬಂಗಾರದಂಬರ ಭವದೂರಾ ಪದದಲ್ಲಿ | ಪೊಂಗೆಜ್ಜೆ ಸರ್ವಾಭರಣದಿಂದ ಒಪ್ಪುವಾ 2 ಪಾಂಡೆ ದೇಶವಾಸಾ ಪಾಂಡವರ ಸಂರಕ್ಷಕ | ಚಂಡ ಪ್ರಚಂಡ ಮಹಿಮಾ | ಗಂಡುಗಲಿಗಳ ಗಂಡಾ | ಕೊಂಡಾಡಿದವರಿಗೆ ತಂಡ | ತಂಡದ ವರವೀವಾ | ಉದ್ದಂಡ ವಿಜಯವಿಠ್ಠಲ| ಅಂಡಜಗಮನ ಕೃಷ್ಣಾ ತಿಮ್ಮಾ3
--------------
ವಿಜಯದಾಸ