ಒಟ್ಟು 5 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾಯ ಮೋಹಿಗಳಿಗೆಲ್ಲ ಭವಬಂಧಳಿಯುವುದೇ ಕಾಯ ಶುದ್ಧಲ್ಲದವಗೆ ಕರ್ಮಬಂಧ್ಹರಿಯುವುದೇ ಪ ಮುಣುಗು ಕಲಿತಿರುವನು ದಣಿವಿನಿಂ ಮುಕ್ತಹನೆ ಕುಣಿತಕಲಿತಿರುವವ ಮನದಿ ನಾಚುವನೆ ಒನಪು ಕಲಿತಿರುವಗೆ ಮನಸಿಜ ದೂರನೆ ಮನೆಮನೆ ತಿರುಗುವನು ಘನತೆಗೆ ಬಹನೆ 1 ಪಾದ ತಾಡಣೆಯು ತಪ್ಪುವುದೆ ಕೇಡುಗಾರಿಗೆ ಸುಖದ ಜಾಡು ತಿಳಿಯುವುದೆ ಕಾಡಡವಿಲಿರುವವಗೆ ರೂಢಿಯ ಸುದ್ದಿಹುದೆ ನಾಡ ಮಾತಾಡುವಗೆ ಕೇಡು ತಪ್ಪುವುದೆ 2 ನಿಂದಕಗೆ ಮುಂದಿನ್ನು ಹಂದಿಜನ್ಮ ತಪ್ಪುವುದೆ ಛಂದಸ್ಸರಿಯದವಗೆ ಕವಿತದಂದ ತಿಳಿಯುವುದೆ ಮಂದಿಗೋಷ್ಠಿಗ್ಹೋಗುವಗೆ ಕುಂದೊದಗದಿರುತಿಹ್ಯದೆ ತಂದೆತಾಯನ್ಹಳಿಯುವಗೆ ಬಂಧ ತಪ್ಪುವುದೆ 3 ಮೋಸಕಾರಿಗೆಮಶಾಪವು ತಪ್ಪುವುದೆ ಆಶಕಾರಿಗೆ ಮಹನಾಶ ಬಿಡುತಿಹ್ಯದೆ ದೇಶದೇಶ ತಿರುಗುವಗೆ ಘಾಸಿಯು ತಪ್ಪುವುದೆ ದಾಸಜನ ದೂಷಕಗೆ ಈಶನೊಲಿಮಿಹ್ಯದೆ 4 ಸುಗುಡಿಗೆ ಪತಿಸರಸ ಸೊಗಸಾಗಿ ಕಾಣುವುದೆ ಜಗಳಗಂಟಿಗೆ ವ್ರತದ ಬಗೆಯುಶೋಭಿಪುದೆ ಸುಗುಣೆಯರೊಡನಾಟ ಷಂಡನಿಗೆ ಸಲ್ಲುವುದೆ ಸುಗುಣ ಸಂಗಿಲ್ಲದೆ ನರಕ ಭುಗಿಲು ತಪ್ಪುವುದೆ 5 ಕಪಟತ್ವ ನೀಗದೆ ತಪವೃದ್ದಿಯಾಗುವುದೆ ಕೃಪಣತ್ವ ಬಿಡದವಗೆ ತಾಪತ್ರಳಿಯುವುದೆ ಜಪವಿಲ್ಲದೆ ವಿನಾ ಸುಫಲದೊರಕುವುದೆ ಗುಪಿತವನು ತಿಳಿಯದವಗಪರೋಕ್ಷವಿಹ್ಯದೆ 6 ಮಾನವನ ಗುಣರಿಯದೆ ಜ್ಞಾನ ಸ್ಥಿರವಾಹುದೆ ಜ್ಞಾನವಿಲ್ಲದೆ ಬೇರೆ ಧ್ಯಾನ ಸಿದ್ದಿಪುದೆ ದೀನನಾಥ ಮಮ ಪ್ರಾಣೇಶ ಶ್ರೀರಾಮನಡಿ ಖೂನವರಿಯದೆ ಮುಕ್ತಿ ಜಾಣೆ ಸುಖಬಹುದೆ 7
--------------
ರಾಮದಾಸರು
ಹೆತ್ತ ತಾಯಿಗಿಂತ ಅತ್ಯಧಿಕ ಮಾಯವುಂಟೆಉತ್ತಮ ಅಶ್ವವ ಕತ್ತೆ ಹೋಲುವುದುಂಟೆ ಪ ವಿತ್ತವುಳ್ಳವನ ಕುಲ ಎಣಿಸುವುದುಂಟೆಸ್ವಾರ್ಥಕೆ ನ್ಯಾಯ ಎಂದಾದರೂ ಉಂಟೆ 1 ಅತ್ತೆಮನೆ ಸೇರುವಗೆ ಅಭಿಮಾನವುಂಟೆಬತ್ತಲೆ ತಿರುಗುವಗೆ ಭಯವು ಇನ್ನುಂಟೆ2 ಪೃಥ್ವಿಯೊಳಗೆ ಕಾಗಿನೆಲೆಯಾದಿಕೇಶವಗೆಮತ್ರ್ಯದೊಳನ್ಯ ದೇವರು ಸರಿಯುಂಟೆ 3
--------------
ಕನಕದಾಸ
ಇಂಥಾ ದೂರುವುದೊಳಿತಲ್ಲವರೆಮ್ಮ ರಂಗಯ್ಯನು, ಹಾವಳಿ |ಅಂಥಾದು ಏನು ಮಾಡಿದನಮ್ಮ ಎಂದೆಂದಿಗು ನಮ್ಮ ||ಸಂತತಿಯೊಳು ಗುಣವಂತರೇ ಕೃಷ್ಣ ನಿ-ರಂತರ ಬಡವರನೆಂತು ದಣಿಸುವ ಪಕಣ್ಣೇ ಬಿಡುವನು ಬೆದರಿಸೆ ಮಾತರಿಯ ವನದೊಳಗಡಗಿಹ |ಮಣ್ಣು ತಿಂಬುವ ಬಾಯ್ದೆರೆವನಾರ್ಯ ಹಿತಕರ್ಮಗಳರಿಯ ||ಅನ್ನ ತಿನ್ನಲರಿಯ ಬೆಣ್ಣೆ ಮೆಲುವ ಬಲು |ಹೆಣ್ಣು ನೆರೆದು ಮತ್ತನ್ಯರೊಳು ಕಲಹೆ 1ಎಲ್ಲ್ಯಾಡೊದು ದುರ್ಗಂಧವು ಕಠಿಣಾಂಗ ನೆಲಗೆದರುವ ಶ್ರಿಂಗ |ರಿಲ್ಲದೆ ರಹದೆರೆವರ್ಭಕ ರಂಗ ಪಾಪವರಿಯ, ಮಂಗ- ||ರೊಲ್ಲಭ ಅಹಿಫಣೆಯಲ್ಲಿ ಕುಣಿದು ವಸ- |ನಿಲ್ಲದೆ ತಿರುಗುವಗೆಲ್ಲಿದೊ ವಾಚಿ2ಮೀನ ಕೂರ್ಮದಂತ್ಯುದಕದೊಳಗೆ ಆಡುವ ಕೆಸರೊಳಗೆ |ಶ್ರೀನಾರಸಿಂಹ ಸಣ್ಣವರೊಳಗೆ ಆಡುವ ತನ್ನೊಳಗೆ ||ತಾನೇ ಅಗ್ನಿಯ ನುಂಗಿ ನಭಕೇಶಗೆಮಾನವಕೊಟ್ಟಾನೆ ಪ್ರಾಣೇಶ ವಿಠಲನ 3
--------------
ಪ್ರಾಣೇಶದಾಸರು
ಮಾನಹೀನರಿಗೆ ಅಭಿಮಾನವೇಕೆ - ಪ್ರಧಾನಿಯಿಲ್ಲದ ಅರಸುತನವೇಕೆ ಕೃಷ್ಣಾ ? ಪ.ಕಾಡಿನೊಳು ತಿರುಗುವಗೆಕನಕ ಭೂಷಣವೇಕೆ ?ಓಡಿನಲಿ ಉಂಬುವಗೆ ಹರಿವಾಣವೇಕೆ ?ಬೇಡಿದರೆ ಕೊಡದ ಲೋಭಿಗೆ ಬಿಂಕವೇಕೆ ?ಪಾಡಲರಿಯದೆ ಪ್ರೌಡತನವೇಕೆ ಕೃಷ್ಣಾ ? 1ಪತಿ ಮೀರಿ ನಡೆವಳ ವ್ರತ ನೇಮತನವೇಕೆ ?ಸತಿಗಳುಕಿ ನಡೆವವಗೆ ಸ್ವಾತಂತ್ತ್ಯವೇಕೆ ?ಮತಿಗೆಟ್ಟು ತಿರುಗುವಗೆ ಮಂತ್ರ - ತಂತ್ರಗಳೇಕೆ ?ಅತಿಯಾಸೆ ಬಿಡದ ಸಂನ್ಯಾಸಿ ತಾನೇಕೆ 2ಕಾಮವಿಲ್ಲದವರಿಗೆ ಕಾಂತಿಯರ ಗೊಡವೇಕೆ ?ಪ್ರೇಮವಿಲ್ಲದ ಬಂಧು - ಬಳಗವೇಕೆ ?ಸ್ವಾಮಿ - ಶ್ರೀ ಪುರಂದರವಿಠಲ ನೆನೆಯದತಾಮಸದ ಜನರಿಂಗೆ ಕೈವಲ್ಯವೇಕೆ ? 3
--------------
ಪುರಂದರದಾಸರು