ಒಟ್ಟು 5 ಕಡೆಗಳಲ್ಲಿ , 4 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದೇ ನೋಡಿರೋ ನಿಜನೋಡಿರೋ ಧ್ರುವ ನೋಡಿನೋಡಿ ನೋಡಿ ನೋಡುದರೊಳು ಕೂಡಿ ನೋಡುವದೇನೆಂದು ನೋಡಿ ನೋಡಿದ ಮ್ಯಾಲಿನ್ನು ಮೂಡಿಬಂದರ ಘನ ನೋಡುವದೇ ಖೂನ ಮಾಡಿ ಮಾಡಿದ ಮಾಟವು ಕೂಡಿಬಂದರೆ ಕೈಯ ನಾಡಗೂಡ ಹೇಳಬ್ಯಾಡಿ ಗೂಢ ಗುಹ್ಯದ ಮಾತು ಒಡೆದು ಹೇಳುವದಲ್ಲಾ ನೋಡಿ ನಿಮ್ಮೊಳು ಬೆರೆದಾಡಿ 1 ಓದಿದರೋದಬೇಕಿದೊಂದೇ ಅಕ್ಷರ ಭೇದಿಸುವಂತೆ ಬ್ರಹ್ಮಾಂಡ ಇದೇ ಸಾಧಿಸಿನ್ನು ಮೂಲವ ತಿಳಿಯದೆ ಓದುವದ್ಯಾಕೆ ಉದ್ದಂಡ ಹಾದಿ ತಿಳಿಯದಿದ್ದರೆ ಹೇಳಿಕೊಡುವನು ಸದ್ಗುರು ಘನಪ್ರಪಂಚ ಭೋದಿಸಿ ಬ್ರಹ್ಮಾನುಸಂಧಾನದ ಸುಖ ಉದಯ ಮಾಡುವ ಅಖಂಡ 2 ನಾನ್ಯ ಪಂಥವೆಂಬ ಮಂತ್ರದನುಭವ ಚನ್ನಾಗ್ಯಾಗಬೇಕು ಖೂನ ಇನ್ನೊಂದು ಬ್ಯಾರೆಂಬ ಭಿನ್ನವಳಿದ ಮ್ಯಾಲೆ ತನ್ನೊಳಾಯಿತು ಸಮ್ಯಕಙÁ್ಞನ ಧನ್ಯ ಧನ್ಯ ಧನ್ಯ ಧನ್ಯಗೈಸುವದಿದು ಕಣ್ಣಾರೆ ಕಾಂಬೊ ಸಾಧನ ಉನ್ಮತವಾಗದೆ ಸನ್ಮತದೋರದು ಇನ್ನೊಬ್ಬರ ಕೇಳುವದೇನ 3 ಸರ್ವಮಿದಂ ಖಲು ಬ್ರಹ್ಮವೆಂಬುವ ಮಾತು ದೋರ್ವಾಂಗೆ ನೆಲೆಗೊಳಬೇಕು ಸರ್ವ ಸಾಕ್ಷಿ ಸರ್ವಾಧಾರವು ತಿಳಿಯದೆ ಗರ್ವಿತಲ್ಯಾಡುವ ಮಾತು ಹೋತು ಗುರ್ವಿನಂಘ್ರಿಗಿನ್ನು ಗುರುತವ ಕೇಳದೆ ಮವ್ರ್ಹಿನೊಳೀಹುದು ಮುಸುಕು ನಿರ್ವಿಕಲ್ಪನ ನಿಜ ಸ್ಮರಿಸುವಾಂಗೆ ಕಣ್ಣ ದೆರ್ವದಿದೊಂದೇ ಸಾಕು 4 ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ಎಂದು ಗುರುವಿಗೆ ಕೇಳಿ ನಿಜ ವಂದ ದೇಹದ ಒಳಗಿಹ್ಯ ದ್ಯಾವರ ತಿಳಿದರ ಜನ್ಮಕೆ ಬಂದುದು ಚಂದ ಸೋಹ್ಯ ಸೊನ್ನೆಯ ಗುಹ್ಯವ ತಿಳಿದರ ಭವ ಮೂಲದಿಂದ ಬಾಹ್ಯಾಂತ್ರ ಪರಿಪೂರ್ಣ ಭಾಸುತಲ್ಯದೆ ಮಹಿಪತಿಗಿದೆ ಬ್ರಹ್ಮಾನಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೊಂಡಿರ್ಯಾ ನೀವು ಕೊಂಡಿರ್ಯಾ ಮಂಡಲದೊಳು ವಸ್ತು ಕೊಂಡಿರ್ಯಾ ಧ್ರುವ ಕೊಳಬೇಕಾದರ ನೀವು ತಿಳಿದುಕೊಂಡು ಬನ್ನಿ 1 ತಿಳಿಯದಿದ್ದರೆ ಖೂನ ಕೇಳಿ ಸದ್ಗುರುವಿನ 2 ಬೆಲೆಯು ಹೇಳುವದಲ್ಲ ನೆಲೆಯ ತಿಳಿಯುವದಲ್ಲ 3 ಕೊಳಗ ಎಣಿಸುವುದಲ್ಲ4 ತೂಕ ಮಾಡುವುದಲ್ಲ ಲೆಕ್ಕ ಇಡುವುದಲ್ಲ 5 ಇಟ್ಟು ಮಾರುವದಲ್ಲ ಕೊಟ್ಟರ್ಹೋಗುವುದಲ್ಲ 6 ಪಂಡಿತರಿಗೆ ಪ್ರಾಣ ಕೊಂಡವರಿಗೆ ತ್ರಾಣ 7 ಹೇಳಿದ ನಾ ನಿಮಗೊಂದು ಸುಲಭವಾಗಿಂದು 8 ಒಮ್ಮನವಾದರ ಸುಮ್ಮನೆಬಾಹುದು 9 ಸಾಧುಸಜ್ಜನರಿಗೆ ಸಾಧ್ಯವಾಗುದಿದು 10ಸಾರಿ ಚೆಲ್ಲೇದ ಮಹಿಪತಿ ವಸ್ತುಮಯಮಿದು11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಂಬಿ ಭಜಿಸು ಹರಿಯಾ| ಅಂಬುಜನಾಭನ ಹಂಬಲದಿಂದಾ ಪ ಶ್ರವಣ ಕೀರ್ತನ ಮೊದಲಾಗಿಹ ನವವಿಧ| ಹವಣದ ಭಕುತಿಯ ಸವಿಸವಿಯಿಂದಾ 1 ಏನೂ ಇಲ್ಲದ ಮೂರು ದಿನದ ಸಂಸಾರಕ| ನಾ ನನ್ನದು ಯಂದೆನುತಲಿ ಶ್ರಮಿಸದೆ 2 ಶರೀರಿಂದ್ರಯಗಳು ಸ್ಥಿರವಿದ್ದ ಕೈಯಲಿ| ಜರೆ ಬಂದೆರಗುತ ಮರೆಸದೆ ಮುನ್ನಾ 3 ಕೇಳೀಕೋ ಗುರುವಿನಾ ತಿಳಿಯದಿದ್ದರೆ ಕೀಲರಿ| ಹೇಳುವ ಸ್ಪಹಿತವ ಜಾಳಿಸಿ ಸಂಶಯ4 ಹೊಂದಿದವರ ಕೈಯ್ಯಾ ಎಂದೆಂದು ಬಿಡನೆಂದು| ತಂದೆ ಮಹಿಪತಿ ಕಂದಗ ಸಾರಿದ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಲಾವಣಿ ಪದ ದೂರ್ ದೂರಲ್ಲ ಕೋಲ್‍ಕಾರ ಕೃಷ್ಣ ಕೇಳು ಬಾಲೆ ದಾರಿಯೋಳ್ ಸುಂಕ ಶೋದಗಳುಂಟೂ ಇದು ಏನ್ ಗಂಟು 1 ಗಂಡನುಳ್ಳ ಬಾಲೆಯರ ದುಂಡಕುಚ ಮುಟ್ಟಲಿಕ್ಕೆ ಪುಂಡತನ ಬುದ್ಧಿಯಿದು ಥರವೇನೋ ಜೀವಯರವೇನೋ ಪುಂಡತನ ಬುದ್ದಿಯಿದು ಥರವೇನೆಂದರೆ ಹೆಂಡತೆಂತ ಮುಟ್ಟಿದಾಗ ಕುಚಯುಗವಾ ಕಾಣದೆ ನಗುವ 2 ಕಾಕು ಮಾತಾಡುತಿದ್ದಿ ಸಾಕು ನಿನ್ನ ಮಾತೀಗ ಸಲುಗೇನೆಂದರೆ ಬೇಕು ಬೇಡಿದ್ದು ನಾ ಕೊಡುತೇನೆ ನಿನ್ನಿಡುತೇನೇ 3 ಕೊಂಡು ಕೊಂಡು ನಡೆಸಲಿಕ್ಕೆ ಶೆಟ್ಟಿಗಾರ ನಾನಲ್ಲ ನೀನಿಟ್ಟುಕೊಂಡ ಸೂಳೆ ನಾನಲ್ಲ ಹೋಗೋ ನೀನಲ್ಲ ಸಾಗೋ ಇಟ್ಟುಕೊಂಡ ಸೂಳೆ ನಾನಲ್ಲ ಹೋಗೆಂದರೆ ಕಟ್ಟಿಕೊಂಡು ಹೋದೇನು ಒಳತನಕಾ ಬೆಳಬೆಳತನಕಾ 4 ಒಳತನಕ್ಯಾತಕೆ ಬೆಳತನಕ್ಯಾತಕೆ ತಾಳಿಯರಿಲ್ಲಾ ಮಾತಿನ ಬೆಡಗಾ ಅಹುದೆಲೊ ಹುಡುಗ ತಿಳಿಯದಿದ್ದರೆ ನಾ ತಿಳಿಯ ಹೇಳಿಕೊಡುವೆನೆಂದು ಸೆಳೆದಪ್ಪಿಕೊಂಡ ಶ್ರೀದವಿಠಲ ಬಹುಬಹು ಧಿಟಲಾ5
--------------
ಶ್ರೀದವಿಠಲರು
ವಾಯುದೇವರು ಆನಂದ ಸಾಧನ ತಿಳಿ ಕಂಡ್ಯಾ ಮನವೆ ಪ ಶಕುತಿಯು ಇದ್ದಷ್ಟು ತಿಳಿದು ಮತವು ಬಲು ಯುಕುತಿಯಿಂದಲಿ ನೀ ಒಲಿಸು ಕಂಡ್ಯ ಭಕುತಿಯು ಗುರುಗಳ ಪದದಲಿ ಮಾಡಲು ಮುಕುತಿಯು ಕರವಶವಾಗುವದೊ ಸಿದ್ಧ 1 ತಿಳಿಯದಿದ್ದರೆ ನೀನು ತಿಳಿದವರ ಬಳಿಯಲ್ಲಿ ಮಿಳಿತನಾಗಿ ಪೋಗಿ ತಿಳಿದುಕೊಳ್ಳೊ ಖಳಜನ ಸಹವಾಸ ಕುಮತಗಳಭ್ಯಾಸ ಒಳಿತಲ್ಲವೊ ನಿನಗೆಂದಿಗನ್ನ 2 ಪ್ರವಚನ ಮಾಡುವ ಬುಧಜನ ಪೇಳುವ ಸುವಚನ ಕೇಳಿ ನೀ ಬದುಕು ಕಂಡ್ಯಾ ಭವ ಛಳಿ ಬಾಧಿಗೆ ಪ್ರವಚನ ಬಾಹೋದೆಂದಿಗನ್ನ3 ಇದ್ದವರಿಗೆ ಕೊಟ್ಟು ಅವರ ಹಿಂದೆ ಇಷ್ಟು ಮೆದ್ದರೆ ಕೋಟಿ ಭೋಜನದ ಪುಣ್ಯ ಗೆದ್ದರು ಇವರನ್ನ ನಂಬಿದ ಜನರು ಬಿದ್ದರು ದೂಷಕ ಜನ ತಮದಿ 4 ಕಾಸುವೀಸಕೆ ನೀನು ಮೋಸಗೊಳಲು ಬ್ಯಾಡ ತಾಸು ಘಳಿಗೆ ನೆಚ್ಚಲು ಬೇಡ ಏಸೇಸು ಸುಕೃತದಿ ದೊರಕಿತು ಈ ಮತ ವಾಸುದೇವವಿಠಲನ್ನ ಪಾಡೊ 5
--------------
ವ್ಯಾಸತತ್ವಜ್ಞದಾಸರು