ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚೈತ್ರದುತ್ಸವ ಗೀತೆ ಚೈತ್ರಮಾಸದ ಕೃಷ್ಣಪಕ್ಷ ಷಷ್ಠಿಯಲಿ ಕಟ್ಟಿ[ದರು] ಕಂಕಣವನು ಸೃಷ್ಟಿಗೀಶ್ವರಗೆ ಪ. ಮೊದಲು ದಿವÀಸದಿ ಧ್ವಜಪಟವನೇರಿಸಿ ಸುರರು 1 ಯಾಗಶಾಲೆಯ ಪೊಕ್ಕು ಯಾತ್ರದಾನವ ಬೇಡಿ ಸೂತ್ರ ಧರಿಸಿದರು 2 ಸರ್ಪಮೊದಲಾದ ಅಲ್ಲಿರ್ಪ ವಾಹನವೇರಿ ಕಂ ದರ್ಪನಪಿತ ಬಂದ ಚಮತ್ಕಾರದಿಂದ 3 ಬೆಂಡಿನ ಚಪ್ಪರ ಬೆಳ್ಳಿಕುದುರೆಯನೇರಿ ಪುಂಡರೀಕಾಕ್ಷ 4 ರೇವತಿ ನಕ್ಷತ್ರದಲಿ ಏರಿ ರಥವನ್ನು [ತಾ] ವೈಯ್ಯಾರದಿಂದಲೆ ಬಂದ ವಾರಿಜನಾಭ 5 ಗೋವಿಂದ ಗೋವಿಂದಯೆಂದು ಪ್ರಜೆಗಳು [ತಾವಾ]ನಂದದಿಂದ ನೋಡಿ ಪಾಡುತ್ತ 6 ಗೋವುಗಾಣಿಕೆಯನ್ನು ಗೋಪಾಲರು ತಂದು ನೀ ಲಾವರ್ಣನಿಗಿತ್ತರು ನೇಮದಿಂ ಪೂಜೆಯ 7 ಧ್ವಜಮಂಟಪದಲ್ಲಿ ಹರಿಭಜನೆಗಳ ಮಾಡು[ತ್ತಿರೆ] ಭುಜಗಶಯನನು ವರವಿತ್ತು ಕಳುಹಿದನು 8 ಸಪ್ತಾವರಣವ ಸುತ್ತಿ ತೀರ್ಥವನಿತ್ತು ಅರ್ಥಿಯಿಂದಲೆ ಬಂದ ಭಕ್ತವತ್ಸಲನು 9 ಬೊಂಬೆ ಅಂದಣವೇರಿ[ದ] ಅಂಬುಜನಾಭ ಕುಂಭಿಣಿಗಧಿಕವೆಂತೆಂಬ ಶ್ರೀರಂಗ 10 ಚಿತ್ರರಥ[ದ] ವಿಚಿತ್ರಮೂರುತಿಯ ನೋಡಿ ಪ ವಿತ್ರರಾದರು ಧಾತ್ರಿ[ಯ] ಉತ್ತಮರೆಲ್ಲ 11 ಬಂದ ಪ್ರಜೆಗಳು ಎಲ್ಲ ಆನಂದದಿ ಪೋಗೆ ಬಂದು ಆಸ್ಥಾನದಿ ನಿಂದ ಶ್ರೀರಂಗ 12 ಸೃಷ್ಟಿಯಲಿ ಪುಟ್ಟಿದ ದುಷ್ಟಪ್ರಾಣಿಗಳ [ನೆಲ್ಲ] ಶ್ರೇಷ್ಠ ಮಾಡಲಿ [ನಮ್ಮ] ವೆಂಕಟರಂಗ 13
--------------
ಯದುಗಿರಿಯಮ್ಮ
ದಾಸರಿವರ ನೋಡಿರೊ | ಗುರು ವಿಜಯ |ದಾಸರಿವರ ಪಾಡಿರೋ ಪ ವ್ಯಾಸರಾಜ್ಞೆಯಲಿಂದ | ವ್ಯಾಸ ಕಾಶಿಗೆ ಪೋಗಿ |ಶ್ರೀಶಾನುಗ್ರಹದಲಿ | ಭಾಸಿಸೀ ಮೆರೆದಂಥ ಅ.ಪ. ಎರಡನೆ ಯುಗದೊಳಗೆ | ಸುರಲೀಲ | ವರಕಪಿ ಎಂದೆನೆಸಿ |ಶಿರಿ ರಾಮಚಂದ್ರನ್ನ | ಚರಣ ಸೇವಕರಾಗಿಸುರ ವಿರೋಧಿಗಳ ಬಹಳ ಸಂಹರಿಸಿದ 1 ಯಾದವರಲಿ ಜನಿಸಿ | ನಿಕಂಪಾಖ್ಯ | ಶ್ರೀದಕೃಷ್ಣನ ಭಜಿಸಿ |ಮಾಧವ ಗೆದುರಾಂತ | ದೈತ್ಯರ ಸದೆಬಡಿದುಯಾದವೇಶನ ಪದ | ಕರ್ಪಿಸಿ ಮೆರೆದಂಥ 2 ಪುರಂದರ ದಾಸರ | ವರ ಗೃಹದಲಿ ಇದ್ದುಹರಿಚರಿತೆ ಶ್ರವಣದಿ | ವಿಪ್ರನಾಗ್ಯುದೀಸಿದ 3 ಮಧ್ವಪತಿಯ ನಾಮದಿ | ಭೃಗ್ವಂಶದಿ | ಮುದ್ದು ಮಗನೆನಿಸಿಮಧ್ವೇಶ ಹರಿಪಾದ | ಶ್ರದ್ಧೆಯಿಂದಲಿ ಭಜಿಸಿಮಧ್ವರಾಯರ ಮತ | ತುತಿಸಿ ಮೋದಿಸಿದಂಥ 4 ಚೀಕನಪರಿ ಕ್ಷೇತ್ರದೀ | ದಾಸಪ್ಪನು | ಆ ಕೂಸಮ್ಮನ ಉದರದಿಬೇಕಾಗಿ ಜನಿಸುತ್ತ | ಪ್ರಾಕು ಪ್ರಾರಬ್ದವನೇಕ ಬಗೆಯಲಿ ಉಂಡ | ಮಾಕಳತ್ರನ ಕಂಡ 5 ಪುರಂದರ | ದಾಸರೂಪಿಯಲಿಂದ |ಸೂಸಿ ಶಾಸ್ತ್ರವ ಮಧ್ವ | ಭಾಷ್ಯಾನು ಸಾರದಿ |ಭಾಷೆ ಕನ್ನಡದಲ್ಲಿ | ಮೀಸಲೆನಿಸಿ ಪೇಳ್ದ 6 ಧ್ಯಾನೋಪಾಸನೆ ಕರ್ಮವ | ಯೋಗ್ಯರಿಗೆ | ಗಾನಗೈದಿಹ ಸುಜ್ಞಾನೀ | ಮಾನ್ಯ ಮಾನದ ದುಷ್ಟ | ಗಾನಕೆ ಮನ ಕೊಡದೆಮೌನಿಯಾಗುವ ಮಾರ್ಗ | ದಾನವ ಮಾಡೀದ 7 ಸ್ವಪ್ನದಲ್ಲೆನಗವರೂ | ದರ್ಶನದಿ | ಕೃಪ್ಪೆಯಲನುಗ್ರಹಿಸಿ |ಅಪ್ಪಾರ ಮಹಿಮರು | ತಪ್ಪದೆ ತ್ರಯ ಬಾರಿಒಪ್ಪಿ ತೀರ್ಥವನಿತ್ತು ಕಳುಹಿದ ಮಹಾಂತ 8 ವತ್ಸರ ಕಾರ್ತೀಕ | ಸಿತ ದಶಮಿ | ಆವಗುರುವಾಸರದಿಭಾವಜ ಪಿತ ಗುರು | ಗೋವಿಂದ ವಿಠಲನಭಾವದಿ ಕಂಡು ಸುಯೋಗದಿ ಪೊರಟಂಥ 9
--------------
ಗುರುಗೋವಿಂದವಿಠಲರು