ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೋಡಿರಿ ರಾಘವೇಂದ್ರರ ಮಾಡಿರಿ ನಮಸ್ಕಾರ ಬೇಡಿದ ಇಷ್ಟ ವರ ನೀಡುವರು ನಮ್ಮ ಯತಿವರ ಪ ಮಂತ್ರಾಲಯದಿ ನಿಂತಿಹ ಚಿಂತೆಗಳ ಪರಿಹರಿಸುವ ಕಂತುಪಿತನನಂತಗುಣ ತನ್ನಂತರಂಗದಿ ಸ್ತುತಿಸುವ ಇಂಥ ಯತಿಗಳ ಕಾಣೆ ಹರಿಯೇಕಾಂತ ಭಕ್ತರೆನಿಸಿಕೊಂಡು ಮಂತ್ರಾಕ್ಷತೆ ಫಲ ನೀಡಿ ತಾ ಸಂತಾನ ಸಂಪತ್ತು ಕೊಡುವರ 1 ವಾತ ಪಿತ್ತ ವ್ಯಾಧಿಗಳ ಸೇತು (ಶ್ವೇತ?) ಕುಷ್ಠರೋಗಗಳ ಪಾತಕಿಯರ ಪಾಪಗಳ ಪ್ರೀತಿಲಿಂದ ಕಳೆವರೊ ಪ್ರಖ್ಯಾತರಾಗಿ ಬೆಳೆವರೊ ಭೂತಳದಿ ಸನ್ನೀತ (ಸನ್ನಿಹಿತ?) ರಾದ ಸೀತಾಪತಿ ನಿಜದೂತರೆನಿಸೋರು 2 ಭಜಸÉ ಭಕ್ತರ ನೋಡುವ ಸದನಕೆ ಬಂದುಕೂಡುವ ಒದಗಿದಾಪತ್ತು ದೂಡುವ ಬಂದು ಮುದದಿ ತಾ ದಯಮಾಡುವ ಅಜನಯ್ಯನ ಕೊಂಡಾಡುತ ತುಂಗಾನದಿಯ ತೀರ ವಾಸವಾಗಿ ಹೃದಯದೊಳು ಭೀಮೇಶ ಕೃಷ್ಣನ ಪದವ ಭಜಿಸಿ ಪಡೆವರಾನಂದವ3
--------------
ಹರಪನಹಳ್ಳಿಭೀಮವ್ವ
ಯತಿವರ ನಿಮ್ಮನು ಸ್ತುತಿಪ ಜನರು ದಿವ್ಯ ಗತಿಯನು ಪೊಂದುವರು ರಾಘವೇಂದ್ರ ಪ ಕ್ಷಿತಿಯೊಳಗೆ ದಶಪ್ರಮತಿಗಳ ಸುಖಕರ ಮತದ ಪರಮ ಸಂಗತಿಗಳ ಹರಡಿದ ಅ.ಪ ಜಯ ಮುನಿಗಳವರ ಗ್ರಂಥಗಳಿಗೆ ಸುಖಮಯ ಟಿಪ್ಪಣಿಗಳನು ರಚಿಸಿ ಚಿನ್ ಮಯ ರಾಮರ ಸೇವೆಯ ಸಂತಸದಲಿ ಗೈದು ಸುಮಂತ್ರಾಲಯದಲಿ ನೆಲೆಸಿದ 1 ಮಂಗಳಕರವಾದ ತುಂಗಾನದಿಯ ತರಂಗಗಳಲಿ ಮಿಂದು ನಿಮ್ಮನು ನಿಸ್ಸಂಗರಾದ ಸಾಧು ಸಂಘವ ಪೊರೆಯುವ 2 ಪರಿಪರಿಯಲಿ ನಿಮ್ಮ ನಮಿಪ ಸೇವಕರಿಗೆ ಸುರಧೇನುವಿನಂತೆ ಸಂತತ ಹರುಷದಿಂದಲಿ ನಿಮ್ಮ ಭಜಿಪ ಸುಜನರಿಗೆ ಸುರತರುವಂತೆ ಪ್ರಸನ್ನರಾಗುವಂಥ 3
--------------
ವಿದ್ಯಾಪ್ರಸನ್ನತೀರ್ಥರು