ಒಟ್ಟು 9 ಕಡೆಗಳಲ್ಲಿ , 3 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂದಿಗಾದರು ಒಮ್ಮೆ ಕೊಡು ಕಂಡ್ಯ ಹರಿಯೆ ಪ ಬೃಂದಾವನಪತಿ ದಯದಿಂದಲೆನಗೆ ಅ ಫಲಭಾರಗಳಿಂದ ತಲೆವಾಗಿ ಶುಕಪಿಕಕಲಕಲದೊಳು ನಿನ್ನ ತುತಿಸಿ ತುಂಬೆಗಳಗಳರವದಿಂ ಪಾಡಿ ಅಪ್ಸರರಂತೆ ಪೂ-ಮಳೆಯಗರೆವ ತರುಲತೆಯ ಜನ್ಮವನು1 ಕೊಳಲ ಶೃತಿಯ ಕೇಳಿ ಸುಖದ ಸಂಭ್ರಮದಲಿಹೊಲಬು ತಪ್ಪಿ ತಾವು ಅರೆಗಣ್ಣು ಮುಚ್ಚಿನಳಿನಾಸನದಿ ಮೌನಗೊಂಡು ಪರಮ ಹಂಸಕುಲದಂತೆ ಧ್ಯಾನಿಪ ಹಂಸ ಜನ್ಮವನು 2 ಚಕೋರ ಜನ್ಮವನು3 ಭಾವಜನೈಯನ ಕಡುಚಲ್ವಿಕೆಯನ್ನುಭಾವಿಸಿ ನಿಡುಗಂಗಳಿಂದ ದಣಿದುಂಡುಗೋವಳೇರಂತೆ ಮನೆ ಮಕ್ಕಳ ಹಿಂಗಿ ನಿನ್ನ ಆವಾಗ ಈಕ್ಷಿಸುವ ಗೋವ್ಗಳ ಜನ್ಮವನ್ನು 4 ತೋಳದಂಡಿಗೆಮಾಡಿ ಹೀಲಿಯ ಚಾಮರವಮೇಲೆ ಎತ್ತಿದ ತಾವರೆ ಗೊಂಡೆಯಿಂದಓಲೈಸಿ ನಿನ್ನನು ಒಲಿಸಿ ಮುಕುತರಂತೆನಾಲೋಕ್ಯ ಸುಖವುಂಬ ಗೋಪರ ಜನ್ಮವನು5 ಕೊಳಲ ಧ್ವನಿಯ ಕೇಳಿ ಎದುರುಗೊಳ್ಳುತ ನಿನ್ನನಳಿನನಾಭಾ ಅವಧಾರೆಂದು ಪೊಗಳೇತಳಿಗೆ ಆರತಿಯೆತ್ತಿ ಲಕ್ಷ್ಮಿಯಂತೆ ನಿನ್ನಚೆಲುವ ಸವಿವಂಥ ಗೋಪೇರ ಜನ್ಮವನು 6 ಇಂದಿರೆಯರಸ ಬ್ರಹ್ಮೇಂದ್ರಾದಿ ವಂದಿತಎಂದು ಮೊಸರ ಕಡೆಯುತ್ತಲಿ ನಿನ್ನಅಂದಿನ ಶ್ರುತಿಯೋ ಉಪ್ಪವಡಿಪ ವ್ರಜ-ದಿಂದುಮುಖಿಯರ ಜನ್ಮವ ಸಿರಿಕೃಷ್ಣ7
--------------
ವ್ಯಾಸರಾಯರು
ಜನುಮ ಜನುಮದಲ್ಲಿ ಕೊಡು ಕಂಡ್ಯ ಹರಿಯೆ ಪ ಅನಿಮಿತ್ತ ಬಂಧು ಕೃಷ್ಣ ದಯದಿಂದಲೆನಗೆ ಅ.ಪ ಮೆರೆವ ಊಧ್ರ್ವ ಪುಂಡ್ರ ಎರಡಾರು ನಾಮವುಕೊರಳೊಳು ತುಲಸಿಯ ವನಮಾಲೆಯುಮೆರೆವ ಶಂಖಚಕ್ರ ಭುಜದೊಳೊಪ್ಪುತ ನಿಮ್ಮಸ್ಮರಿಸುತ್ತ ಹಿಗ್ಗುವ ವೈಷ್ಣವ ಜನುಮವ 1 ಹರಿಯೆ ಸರ್ವೋತ್ತಮ ರಾಣಿ ಲಕುಮಿ ಬೊಮ್ಮಹರ ಇಂದ್ರಾದ್ಯಖಿಳರು ತವ ಸೇವಕರುವರ ತಾರತಮ್ಯ ಪಂಚ ಭೇದ ಸತ್ಯವೆಂದುನೆರೆ ಪೇಳುವ ವಾಯುಮತದ ಸುಜ್ಞಾನವ 2 ಸಿರಿ ಕೃಷ್ಣ ನಿನ್ನಲ್ಲಿಅಕಳಂಳವಾದ ನವವಿಧ ಭಕುತಿಯನು 3
--------------
ವ್ಯಾಸರಾಯರು
ವಾರಿಧಿ ಈರೇಳು ಲೋಕನಾಯಿಕೆ ಪ ದೂರ ನೋಡದಲೆ ಅಪ ನಿತ್ಯ ಕಲ್ಯಾಣಿ ವೇದವತಿಯೆ ರುಕ್ಮಿಣಿ ವೇದ ವೇದಾಂತದಭಿಮಾನಿ ವಾರಿಜ ಪಾಣಿ ಆದಿ ಮಧ್ಯಾಂತ ಗುಣಮಣಿ ಭೇದಗೊಳಿಪ ಕಾಮಕ್ರೋಧಗಳೋಡಿಸಿ ನೀ ದಯದಿಂದಲೆ ಮುಂದೆ ಗತಿಗೆ ಪಂಚ ಮಾಧವ ಪ್ರಿಯಳೆ 1 ಮಾಯಾ ಕೃತಿ ನಾಮದೊಳಪ್ಪ ಗುಣವಂತೆ ಕೋಮಲವಾದ ವೈಜಯಂತೆ ಧರಿಸಿದ ಶಾಂತೆ ಸೋಮಾರ್ಕ ಕೋಟಿ ಮಿಗೆ ಕಾಂತೆ ತಾಮರಸಾಂಬಕೆ ರಮೆ ಲಕುಮಿ ಸತ್ಯ ಭಾಮೆ ಭವಾರಣ್ಯ ಧೂಮಕೇತಳೆ ಯಾಮ ಯಾಮಕೆ ಹರಿ ನಾಮವ ನುಡಿಸಿ ಉತ್ತಮರೊಡನೆ ಪರಿ ಣಾಮವನೀಯುತ 2 ಅನೇಕಾಭರಣ ಭೂಷಿತೆ ಧರಣಿಜಾತೆ ಜ್ಞಾನಿಗಳ ಮನೋಪ್ರೀತೆ ಆನಂದಲೀಲೆ ವಿಖ್ಯಾತೆ ಆದಿದೇವತೆ ಕಾಣೆನೆ ದಾನಿ ಇಂದಿರಾದೇವಿ ನಾನಾ ಪರಿಯಲಿ ಶ್ರೀನಿಧಿ ವಿಜಯವಿಠ್ಠಲನ ಮೂರುತಿಯಧ್ಯಾನದೊಳಿಡುವಂಥ ಜ್ಞಾನ ಭಕುತಿ ಕೊಡು3
--------------
ವಿಜಯದಾಸ
ಇನ್ನು ಪುಟ್ಟಿಸದಿರಯ್ಯ ಪುಟ್ಟಿಸಿದಕೆ ಪಾಲಿಸಯ್ಯಎನ್ನ ದಯದಿ ಪಾಲಿಸಯ್ಯ ಪನಿನ್ನ ಚರಣಾಂಬುಜವ ನಂಬಿದೆನೊ ಶ್ರೀ ಹರಿಯೆಬನ್ನು ಬಿದ್ದೆನು ಭವಬಂಧನವ ಬಿಡಿಸಯ್ಯ ಅ.ಪಅಮರೇಂದ್ರವಂದಿತನೆ ಅನಂತಮಹಿಮನೆಕಮಲಸಖಾನಂತಕರನೆ ||ಕಮಲಾಯತಾಂಬಕನೆ ಕಾಮಿತದಾಯಕನೆವಿಮಲಗುಣ ವಿಭೀಷಣಗೆ ಒಲಿದ ದಯದಿಂದಲೆನ್ನ1ಅಜಮಿಳ ಅಂಬರೀಷ ಅಕ್ರೂರ ವಿದುರಗೆಗಜರಾಜ ಗಿರಿಜೇಶಗೆ ||ನಿಜಭಕ್ತ ಪ್ರಹ್ಲಾದಅಜ ಧ್ರುವ ಅರ್ಜುನಗೆದ್ವಿಜ ಸುತ ರುಕ್ಮಾಂಗದರಿಗೊಲಿದ ದಯದಿಂದಲೆನ್ನ2ಅವರಂತೆ ನಾನಲ್ಲಅವರ ದಾಸರ ದಾಸಸವರಿ ಬಿಸುಟೆನ್ನ ದೋಷ ||ಪವಿತ್ರನ್ನ ಮಾಡಯ್ಯ ಪುಂಡಲೀಕ ವರದನೆಅವಸರಕೆ ದ್ರೌಪದಿಗೆ ಒಲಿದ ದಯದಿಂದಲೆನ್ನ 3ಎಂದೆಂದು ನಿನ್ನ ಪಾದವೆನಗೆ ನೆಲೆಯಾಯಿತುಎಂದೆಂದು ನಿನ್ನ ನಾಮಭಜನೆ ||ಎಂದೆಂದು ನೀಯೆನ್ನ ಬಿಡದೆ ಪಾಲಿಸೊ ಸ್ವಾಮಿಅಂದು ಅಂಜನೆಕಂದನಿಗೆ ಒಲಿದ ದಯದಿಂದಲೆನ್ನ 4ಅಂತರಂಗದುಬ್ಬಸವ ಅಯ್ಯೋ ನಿನಗುಸಿರುವೆನುಚಿಂತೆಗಳ ಪರಿಹರಿಸೊ ||ಸಂತತ ಪಾಲಿಸೊಪುರಂದರ ವಿಠಲನೆಚಿಂತಿಪ ಗೌತಮನ ಸತಿಗೆ ಒಲಿದ ದಯದಿಂದಲೆನ್ನ 5
--------------
ಪುರಂದರದಾಸರು
ಕೊಡು ಕಂಡೆಯಾ ಹರಿಯೆ-ನಿನ್ನ ನಾಮ-|ಕೊಡು ಕಂಡೆಯಾ ಹರಿಯೆ ಪಬಡವ ನಾನೆಂದು ಕಾಡಲಿಲ್ಲ ಹರಿಯೆ ಅ.ಪಒಡಲುತುಂಬದು ಎಂದು ಬಳಲಿಸೆ ಬರಲಿಲ್ಲ |ಸಡಗರದಿಂ ಭಾಗ್ಯ ಬೇಡಲಿಲ್ಲ ||ಮಡದಿ-ಮಕ್ಕಳಿಗಾಗಿ ಕಡು ಮೋಹವೆನಗಿಲ್ಲ |ಬಿಡದೆ ನಾಮಸ್ಮರಣೆ ಕೊಡು ಒಂದೇ ಸಾಕೊ 1ಸ್ನಾನ-ಮೌನ ಜಪ-ತಪಗಳು ಎನಗಿಲ್ಲ |ನಾನಾಯೋನಿಗಳಲ್ಲಿ ಬಳಲಿ ಬಂದೆ ||ದೀನರಕ್ಷಕ ನೀನೆ ದಯದಿಂದಲೆನಗಿನ್ನು |ಧ್ಯಾನಸುಧೆಯನಿತ್ತು ಸಲಹಯ್ಯ ಹರಿಯೆ 2ಬಲೆಗೆ ಸಿಲುಕಿದ ಮೃಗದಂತೆ ಬಾಯ್ಬಿಡುತಲಿ |ಅಲಸಿ ಕೋಟಲೆಯ ಸಂಸಾರದಿಂದ |ತಲೆಹುಳಿತ ನಾಯಂತೆ ಬಯಲಾಸೆಗೆ ಸಿಲುಕಿದೆ |ಸಲಹೊ ದೇವರ ದೇವಪುರಂದರವಿಠಲ3
--------------
ಪುರಂದರದಾಸರು